
ಸದ್ಯ ಯುಎಇ ನೆಲದಲ್ಲಿ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಏಷ್ಯಾಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯಗಳು ಮುಕ್ತಾಯವಾಗಿದ್ದು ಇಂದಿನಿಂದ ( ಸೆಪ್ಟೆಂಬರ್ 3 ) ಸೂಪರ್ 4 ಹಂತದ ಪಂದ್ಯಗಳು ಆರಂಭವಾಗಿವೆ. ಈ ಸುತ್ತಿಗೆ ಗ್ರೂಪ್ ಹಂತದಲ್ಲಿ ಹೆಚ್ಚು ಪಂದ್ಯಗಳನ್ನು ಗೆದ್ದ ಅಫ್ಘಾನಿಸ್ತಾನ, ಭಾರತ ಶ್ರೀಲಂಕಾ ಹಾಗೂ ಪಾಕಿಸ್ತಾನ ತಂಡಗಳು ಪ್ರವೇಶಿಸಿದ್ದು, ಎಲ್ಲಾ ತಂಡಗಳು ತಲಾ 3 ಪಂದ್ಯಗಳಲ್ಲಿ ಕಣಕ್ಕಿಳಿಯಲಿವೆ.
ಈ ಹಂತದ ಮೊದಲ ಪಂದ್ಯ ಇಂದು ( ಸೆಪ್ಟೆಂಬರ್ 3 ) ಶಾರ್ಜಾ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆರಂಭವಾಗಿದ್ದು, ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ಹಾಗೂ ಶ್ರೀಲಂಕಾ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ.
ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ತಂಡದ ನಾಯಕ ದಸುನ್ ಶನಕ ಫೀಲ್ಡಿಂಗ್ ಆಯ್ದುಕೊಂಡಿದ್ದು ಎದುರಾಳಿ ಅಫ್ಘಾನಿಸ್ತಾನ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ. ಇನ್ನು ಉಭಯ ತಂಡಗಳ ನಡುವಿನ ಈ ಪಂದ್ಯ ಈ ಬಾರಿಯ ಏಷ್ಯಾಕಪ್ ಟೂರ್ನಿಯ ಎರಡನೇ ಮುಖಾಮುಖಿಯಾಗಿದ್ದು, ಗ್ರೂಪ್ ಹಂತದಲ್ಲಿನ ಉದ್ಘಾಟನಾ ಪಂದ್ಯದಲ್ಲಿ ಇತ್ತಂಡಗಳು ಮುಖಾಮುಖಿಯಾಗಿದ್ದಾಗ ಶ್ರೀಲಂಕಾ ವಿರುದ್ಧ ಅಫ್ಘಾನಿಸ್ತಾನ 8 ವಿಕೆಟ್‍ಗಳ ಭರ್ಜರಿ ಜಯವನ್ನು ಸಾಧಿಸಿತ್ತು.
ಆಡುವ ಬಳಗಗಳು:
ಶ್ರೀಲಂಕಾ ಆಡುವ ಬಳಗ: ಪಾತುಮ್ ನಿಸ್ಸಾಂಕ, ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್), ಚರಿತ್ ಅಸಲಂಕ, ದನುಷ್ಕ ಗುಣತಿಲಕ, ಭಾನುಕ ರಾಜಪಕ್ಸೆ, ದಸುನ್ ಶನಕ (ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನ, ಮಹೇಶ್ ತೀಕ್ಷಣ, ಅಸಿತ ಫೆರ್ನಾಂಡೋ, ದಿಲ್ಶನ್ ಮಧುಶಂಕ
ಬೆಂಚ್: ದಿನೇಶ್ ಬಂಡಂವ ಡಿ, ಧನನರ ಜೆಫ್ ಡಿ ಪ್ರವೀಣ್ ಜಯವಿಕ್ರಮ, ನುವಾನಿಡು ಫೆರ್ನಾಂಡೋ, ಪ್ರಮೋದ್ ಮದುಶನ್, ಮತೀಶ ಪತಿರಣ, ನುವಾನ್ ತುಷಾರ
ಅಫ್ಘಾನಿಸ್ತಾನ ಆಡುವ ಬಳಗ: ಹಜರತುಲ್ಲಾ ಝಜೈ, ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ಮೊಹಮ್ಮದ್ ನಬಿ (ನಾಯಕ), ನಜೀಬುಲ್ಲಾ ಝದ್ರಾನ್, ಕರೀಂ ಜನತ್, ಸಮೀವುಲ್ಲಾ ಶಿನ್ವಾರಿ, ರಶೀದ್ ಖಾನ್, ನವೀನ್-ಉಲ್-ಹಕ್, ಮುಜೀಬ್ ಉರ್ ರಹಮಾನ್, ಫಜಲ್ಹಕ್ ಫಾರೂಖಿ, ಫಝಲ್ಹಕ್ ಫಾರೂಖಿ,
ಬೆಂಚ್: ಹಶ್ಮತಲ್ಲಾ ಶಾಹಿದಿ, ಅಫ್ಸಿರ್ ಜಾಝಾ, ಫರೀದ್ ಅಹ್ಮದ್ ಮಲಿಕ್, ಒತ್ಮಾನ್ ಘನಿ, ನೂರ್ ಅಹ್ಮದ್, ಅಜ್ಮತುಲ್ಲಾ ಮಿರ್ಜಾ
ಶ್ರೀಲಂಕಾ ಮತ್ತು ಅಫ್ಗಾನಿಸ್ತಾನ ತಂಡಗಳ ನಡುವಿನ ಸೂಪರ್ 4 ಪಂದ್ಯದ ಲೈವ್ ಸ್ಕೋರ್ ಅಪ್ ಡೇಟ್ ಕೆಳಕಂಡಂತಿದೆ: