ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

'ಕಿಂಗ್ ಈಸ್ ಬ್ಯಾಕ್‌' : ಸಾವಿರ ದಿನಗಳ ಕಾಯವಿಕೆ ಅಂತ್ಯ, ಶತಕ ದಾಖಲಿಸಿದ ವಿರಾಟ್ ಕೊಹ್ಲಿ

1021 ದಿನಗಳ ಕಾಯುವಿಕೆ ಕೊನೆಗೂ ಅಂತ್ಯವಾಗಿದೆ. ಸಾವಿರ ದಿನಗಳ ಸುದೀರ್ಘ ಅವಧಿಯ ನಂತರ ವಿರಾಟ್ ಕೊಹ್ಲಿ ಶತಕ ದಾಖಲಿಸಿದ್ದಾರೆ. 71ನೇ ಶತಕ ಗಳಿಸುವ ಮೂಲಕ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ. ಏಷ್ಯಾಕಪ್ ಸೂಪರ್ 4 ಹಂತದ ಅಫ್ಘಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಅಬ್ಬರಿಸಿದರು.

ನಿಧಾನ ಗತಿಯಿಂದಲೇ ಇನ್ನಿಂಗ್ಸ್ ಆರಂಭಿಸಿದ ಕೊಹ್ಲಿ ನಂತರ ಭರ್ಜರಿ ಬೌಂಡರಿ, ಸಿಕ್ಸರ್ ಬಾರಿಸಿದರು. 61 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 12 ಬೌಂಡರಿ, 6 ಭರ್ಜರಿ ಸಿಕ್ಸರ್ ಸಹಿತ 122 ರನ್ ಗಳಿಸಿದರು. 200 ಸ್ಟ್ರೈಕ್‌ ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿದ್ದು, ವಿಶ್ವಕಪ್‌ ಸನಿಹವಾಗುತ್ತಿರುವ ಸಂದರ್ಭದಲ್ಲಿ ಅವರ ಶತಕ ಟೀಂ ಇಂಡಿಯಾ ಪಾಲಿಗೆ ಭಾರಿ ಮಹತ್ವದ್ದಾಗಿದೆ.

ಆಸಿಸ್‌ ವಿರುದ್ಧ ನ್ಯೂಜಿಲೆಂಡ್‌ಗೆ ಹೀನಾಯ ಸೋಲು: ಏಕದಿನ ಕ್ರಿಕೆಟ್‌ನಲ್ಲಿ ನಂ. 1 ಪಟ್ಟಕ್ಕೇರಿದ ಇಂಗ್ಲೆಂಡ್ಆಸಿಸ್‌ ವಿರುದ್ಧ ನ್ಯೂಜಿಲೆಂಡ್‌ಗೆ ಹೀನಾಯ ಸೋಲು: ಏಕದಿನ ಕ್ರಿಕೆಟ್‌ನಲ್ಲಿ ನಂ. 1 ಪಟ್ಟಕ್ಕೇರಿದ ಇಂಗ್ಲೆಂಡ್

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 71ನೇ ಶತಕ ದಾಖಲಿಸುವ ಮೂಲಕ ರಿಕಿ ಪಾಂಟಿಂಗ್ ದಾಖಲೆಯನ್ನು ವಿರಾಟ್ ಕೊಹ್ಲಿ ಸರಿಗಟ್ಟಿದ್ದಾರೆ. 104ನೇ ಅಂತಾರಾಷ್ಟ್ರೀಯ ಟಿ20 ಪಂದ್ಯವನ್ನಾಡಿರುವ ವಿರಾಟ್ ಕೊಹ್ಲಿ 3584 ರನ್ ಗಳಿಸಿದ್ದಾರೆ. ಅಫ್ಘಾನಿಸ್ತಾನದ ವಿರುದ್ಧ ಗಳಿಸಿದ ಶತಕ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ ಗಳಿಸಿದ ಮೊದಲ ಶತಕವಾಗಿದೆ.

ಭಾರತದ ಪರ ಅತ್ಯಧಿಕ ವೈಯಕ್ತಿಕ ರನ್ ಗಳಿಸಿದ ಕೊಹ್ಲಿ

ಭಾರತದ ಪರ ಅತ್ಯಧಿಕ ವೈಯಕ್ತಿಕ ರನ್ ಗಳಿಸಿದ ಕೊಹ್ಲಿ

61 ಎಸೆತಗಳಲ್ಲಿ 122 ರನ್ ಗಳಿಸುವ ಮೂಲಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತದ ಪರವಾಗಿ ಅತ್ಯಧಿಕ ರನ್ ಗಳಿಸಿದ ಆಟಗಾರ ಎನಿಸಿಕೊಂಡರು. ಈ ಮೊದಲು 2017ರಲ್ಲಿ ರೋಹಿತ್ ಶರ್ಮಾ ಶ್ರೀಲಂಕಾ ವಿರುದ್ಧ 118 ರನ್ ಗಳಿಸಿದ್ದ ಭಾರತದ ಆಟಗಾರನೊಬ್ಬ ಟಿ 20 ಪಂದ್ಯದಲ್ಲಿ ಗಳಿಸಿದ್ದು ಆಟಗಾರನೊಬ್ಬರ ಅತ್ಯಧಿಕ ವೈಯಕ್ತಿಕ ಸ್ಕೋರ್ ಆಗಿತ್ತು.

ನಂತರ ಸ್ಥಾನದಲ್ಲಿ 2022ರಲ್ಲಿ ಇಂಗ್ಲೆಂಡ್ ವಿರುದ್ಧ ನಾಟಿಂಗ್‌ಹ್ಯಾಮ್‌ನಲ್ಲಿ 117 ರನ್ ಗಳಿಸಿದ್ದ ಸೂರ್ಯಕುಮಾರ್ ಯಾದವ್ 3ನೇ ಸ್ಥಾನದಲ್ಲಿದ್ದಾರೆ. ಇದು ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ದಾಖಲಿಸಿದ ಮೊದಲನೇ ಶತಕ ಎನ್ನುವುದು ವಿಶೇಷ.

ಶತಕದ ಬರ ನೀಗಿಸಿಕೊಂಡ ಕೊಹ್ಲಿ

ಶತಕದ ಬರ ನೀಗಿಸಿಕೊಂಡ ಕೊಹ್ಲಿ

ವಿರಾಟ್ ಕೊಹ್ಲಿ ಕೊನೆಯ ಬಾರಿ ಶತಕ ಗಳಿಸಿದ್ದು 1021 ದಿನಗಳ ಹಿಂದೆ. 2019ರ ನವೆಂಬರ್ 22ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಬಾಂಗ್ಲಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಗಳಿಸಿದ್ದರು. ಅದಾದ ನಂತರ ಫಾರ್ಮ್ ಕಳೆದುಕೊಂಡಿದ್ದ ವಿರಾಟ್ ಕೊಹ್ಲಿ ಶತಕ ದಾಖಲಿಸಲು ಸಾವಿರ ದಿನಗಳನ್ನು ತೆಗೆದುಕೊಂಡರು.

ಅದಾದ ನಂತರ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 84 ಇನ್ನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ ಶತಕ ಬಾರಿಸಲು ವಿಫಲರಾಗಿದ್ದರು. ಆದರೆ, ಸೆಪ್ಟೆಂಬರ್ 8ರಂದು ಗುರುವಾರ ರಾತ್ರಿ ಸುದೀರ್ಘ ಕಾಯುವಿಕೆಯನ್ನು ಅಂತ್ಯಗೊಳಿಸಿದ್ದಾರೆ.

ಏಷ್ಯಾಕಪ್‌ನಲ್ಲಿ ಮಿಂಚಿದ ಕೊಹ್ಲಿ

ಏಷ್ಯಾಕಪ್‌ನಲ್ಲಿ ಮಿಂಚಿದ ಕೊಹ್ಲಿ

2022ರ ಏಷ್ಯಾಕಪ್‌ ಆರಂಭವಾದಾಗಿನಿಂದ ವಿರಾಟ್ ಕೊಹ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಮೊದಲನೇ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ 35 ರನ್ ಗಳಿಸಿದ್ದ ಅವರು, 2ನೇ ಪಂದ್ಯದಲ್ಲಿ ಹಾಂಗ್‌ ಕಾಂಗ್‌ ವಿರುದ್ಧ 59 ರನ್ ಗಳಿಸಿದ್ದರು, ನಂತರ ಶ್ರೀಲಂಕಾ ವಿರುದ್ಧ ಸೂಪರ್ 4 ಪಂದ್ಯದಲ್ಲಿ 60 ರನ್ ಕಲೆ ಹಾಕಿದ್ದರು.

ಸೂಪರ್ 4 ಹಂತದ ಪಾಕಿಸ್ತಾನ ವಿರುದ್ಧದ ಎರಡನೇ ಪಂದ್ಯದಲ್ಲಿ ಮಾತ್ರ ವಿಫಲವಾಗಿದ್ದ ವಿರಾಟ್ ಕೊಹ್ಲಿ, ಶೂನ್ಯಕ್ಕೆ ಔಟಾಗಿದ್ದರು. ಆದರೆ, ಅಫ್ಘಾನಿಸ್ತಾನ ವಿರುದ್ಧ ಏಷ್ಯಾಕಪ್‌ನ ಭಾರತದ ಕೊನೆಯ ಪಂದ್ಯದಲ್ಲಿ ಮಿಂಚಿದ ಕೊಹ್ಲಿ ತಮ್ಮ 71ನೇ ಶತಕ ದಾಖಲಸಿದರು. ವಿರಾಟ್ ಕೊಹ್ಲಿ, ಒಟ್ಟಾರೆಯಾಗಿ ಐದು ಪಂದ್ಯಗಳಲ್ಲಿ 92 ಸರಾಸರಿ ಮತ್ತು 147.59 ಸ್ಟ್ರೈಕ್ ರೇಟ್‌ನಲ್ಲಿ 276 ರನ್ ಗಳಿಸಿದ್ದಾರೆ.

Asia cup 2022 :ಕೊಹ್ಲಿ ರನ್ ಗಳಿಸಿದ್ದು ನಮಗೆ ದೊಡ್ಡ ಬೋನಸ್ | *Cricket | OneIndia Kannada
 ಟೀಕಾಕಾರರ ಬಾಯಿಗೆ ಬಿತ್ತು ಬೀಗ!

ಟೀಕಾಕಾರರ ಬಾಯಿಗೆ ಬಿತ್ತು ಬೀಗ!

ವಿರಾಟ್ ಕೊಹ್ಲಿ ಫಾರ್ಮ್ ಬಗ್ಗೆ ಹಲವು ಮಾಜಿ ಕ್ರಿಕೆಟಿಗರು, ಕ್ರಿಕೆಟ್ ಅಭಿಮಾನಿಗಳು ಸಾಕಷ್ಟು ದಿನದಿಂದ ಟೀಕೆ ಮಾಡುತ್ತಿದ್ದರು. ಕೊಹ್ಲಿ ಕ್ರಿಕಟ್ ಜೀವನ ಅಂತ್ಯವಾಗುತ್ತಿದೆ ಎನ್ನುವಂತ ಮಾತುಗಳು ಸಹ ಕೇಳಿಬಂದಿತ್ತು. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಭಾರತ ತಂಡದಲ್ಲಿ ಸ್ಥಾನ ಸಿಗಲ್ಲ ಎಂದೂ ಹಲವರು ಹೇಳಿದ್ದರು. ಆದರೆ ಎಲ್ಲರಿಗೂ ವಿರಾಟ್ ಕೊಹ್ಲಿ ಉತ್ತರ ನೀಡಿದ್ದಾರೆ, ಅದು ತಮ್ಮ ಬ್ಯಾಟ್‌ ಮೂಲಕ.

ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ವಿಫಲವಾಗಿದ್ದ ವಿರಾಟ್ ಕೊಹ್ಲಿ ನಂತರ ವಿಶ್ರಾಂತಿ ತೆಗೆದುಕೊಂಡಿದ್ದರು. ಕುಟುಂಬದ ಜೊತೆ ಸ್ವಲ್ಪ ಸಮಯ ಕಳೆದಿದ್ದ ವಿರಾಟ್ ಕೊಹ್ಲಿ ಏಷ್ಯಾಕಪ್‌ನಲ್ಲಿ ಫಾರ್ಮ್ ಕಂಡುಕೊಂಡಿದ್ದಾರೆ. ಅವರ ಈ ಒಂದು ಶತಕಕ್ಕಾಗಿಯೇ ಕೋಟ್ಯಂತರ ಅಭಿಮಾನಿಗಳು 3 ವರ್ಷದಿಂದ ಕಾದು ಕುಳಿತಿದ್ದರು.

Story first published: Thursday, September 8, 2022, 22:19 [IST]
Other articles published on Sep 8, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X