ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಏಷ್ಯಾ ಕಪ್ 2022: ಭಾರತ vs ಪಾಕಿಸ್ತಾನ ಪಂದ್ಯ ಸೇರಿದಂತೆ ಪಂದ್ಯಗಳ ಟಿಕೆಟ್ ಮಾರಾಟಕ್ಕೆ ಮುಹೂರ್ತ ನಿಗದಿ

Asia Cup 2022: all matches tickets will be available from August 15 include India vs Pakistan clash

ಏಷ್ಯಾ ಕಪ್ ಟೂರ್ನಿಯ ಮೇಲೆ ಇದೀಗ ಎಲ್ಲರ ಚಿತ್ತ ನೆಟ್ಟಿದೆ. ಅದರಲ್ಲೂ ಭಾರತ ಹಾಗೂ ಪಾಕಿಸ್ತಾನ ತಂಡಗಳು ಈ ಟೂರ್ನಿಯಲ್ಲಿ ಮುಖಾಮುಖಿಯಾಗುತ್ತಿರುವುದು ಟೂರ್ನಿಯ ಕುತೂಹಲ ಮತ್ತಷ್ಟು ಹೆಚ್ಚಿಸಿದೆ. ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆಗಸ್ಟ್ 27ರಿಂದ ಆರಂಭವಾಗಲಿರುವ ಈ ಟೂರ್ನಿಯ ಟಿಕೆಟ್‌ಗಳನ್ನು ಆಗಸ್ಟ್ 1ರಿಂದ ಮಾರಾಟ ಮಾಡಲಾಗುತ್ತದೆ ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಟ್ವೀಟ್ ಮೂಲಕ ಮಾಹಿತಿ ನೀಡಿದೆ.

ಆಗಸ್ಟ್ 27ರಂದು ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ ತಂಡಗಳ ನಡುವಿನ ಮುಖಾಮುಖಿಯೊಂದಿಗೆ ಈ ಟೂರ್ನಿಗೆ ಚಾಲನೆ ದೊರೆಯಲಿದೆ. ಅದಾದ ಬಳಿಕ ಅತ್ಯಂತ ಕುತೂಹಲ ಮೂಡಿಸಿರುವ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ಆಗಸ್ಟ್ 28ರಂದು ನಡೆಯಲಿದೆ. ಭಾರತ, ಪಾಕಿಸ್ತಾನ, ಶ್ರೀಲಂಕಾ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶ ತಂಡಗಳು ಈ ಟೂರ್ನಿಗೆ ಈಗಾಗಲೇ ಅರ್ಹತೆ ಪಡೆದಿದ್ದು ಯುಎಇ, ಕುವೈಟ್, ಸಿಂಗಪೂರ್ ಹಾಗೂ ಹಾಂಕಾಂಗ್ ತಂಡಗಳು ಅರ್ಹತಾ ಸುತ್ತಿನಲ್ಲಿ ಆಡಿ ಒಂದು ತಂಡ ಅರ್ಹತೆ ಸಂಪಾದಿಸಲಿದೆ.

ಕೋಟಿ ಕೊಟ್ರೂ ಡಕ್ಔಟ್ ಆಗಿದ್ದೀಯಾ ಎಂದು ಐಪಿಎಲ್ ತಂಡದ ಮಾಲೀಕ ಕೆನ್ನೆಗೆ ಹೊಡೆದಿದ್ರು: ರಾಸ್ ಟೇಲರ್!ಕೋಟಿ ಕೊಟ್ರೂ ಡಕ್ಔಟ್ ಆಗಿದ್ದೀಯಾ ಎಂದು ಐಪಿಎಲ್ ತಂಡದ ಮಾಲೀಕ ಕೆನ್ನೆಗೆ ಹೊಡೆದಿದ್ರು: ರಾಸ್ ಟೇಲರ್!

ಟಿಕೆಟ್ ಮಾರಾಟದ ಬಗ್ಗೆ ಎಸಿಸಿ ಟ್ವೀಟ್

ಏಷ್ಯಾ ಕಪ್‌ನ ಪಂದ್ಯಗಳನ್ನು ಕ್ರೀಡಾಂಗಣದಲ್ಲಿ ವೀಕ್ಷಿಸಲು ಬಯಸುವ ಪ್ರೇಕ್ಷಕರಿಗೆ ಟಿಕೆಟ್‌ಗಳ ಮಾರಾಟವನ್ನು ಆಗಸ್ಟ್ 1ರಿಂದ ಆರಂಭಿಸಲಾಗುತ್ತದೆ ಎಂದು ಏಷ್ಉನ್ ಕ್ರಿಕೆಟ್ ಕೌನ್ಸಿಲ್ ಟ್ವೀಟ್ ಮಾಡಿದೆ. "ಏಷ್ಯಾ ಕಪ್ 2022ರ ಟಿಕೆಟ್‌ಗಳ ಮಾರಾಟ ಆಗಸ್ಟ್ 1ರಿಂದ ಆರಂಭವಾಗಲಿದೆ. ಈ ಕೆಳಗಿನ ಲಿಂಕ್‌ಅನ್ನು ಕ್ಲಿಕ್‌ ಮಾಡುವ ಮೂಲಕ ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸಬಹುದು" ಎಂದು ತಿಳಿಸಿದ್ದಿ ಲಿಂಕ್‌ ಅನ್ನು ಟ್ವೀಟ್‌ನೊಂದಿಗೆ ಹಂಚಿಕೊಂಡಿದೆ ಎಸಿಸಿ.

ಏಕದಿನ ಸರಣಿಯಲ್ಲಿ ಬ್ಯುಸಿಯಾಗಿದೆ ಭಾರತ ಹಾಗೂ ಪಾಕ್ ತಂಡಗಳು

ಏಕದಿನ ಸರಣಿಯಲ್ಲಿ ಬ್ಯುಸಿಯಾಗಿದೆ ಭಾರತ ಹಾಗೂ ಪಾಕ್ ತಂಡಗಳು

ಈ ತಿಂಗಳಾಂತ್ಯದಲ್ಲಿ ಏಷ್ಯಾ ಕಪ್ ಟೂರ್ನಿ ಪ್ರೇಕ್ಷಕರಿಗೆ ಕುತೂಹಲ ಕೆರಳಿಸಿದೆ. ಪ್ರಸ್ತಿಯ ಪಾಕಿಸ್ತಾನ ತಂಡ ನೆದರ್ಲೆಂಡ್ಸ್ ತಂಡದ ವಿರುದ್ಧ ಏಕದಿನ ಸರಣಿಯನ್ನಾಡಲು ಸಜ್ಜಾಗುತ್ತಿದ್ದು ಶೀಘ್ರದಲ್ಲೇ ಸರಣಿ ಆರಂಭವಾಗಲಿದೆ. ಮತ್ತೊಂದೆಡೆ ಭಾರತ ತಂಡ ಕೂಡ ಜಿಂಬಾಬ್ವೆ ಪ್ರವಾಸವನ್ನು ಕೈಗೊಂಡಿದ್ದು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಡಲಿದೆ. ಈ ಸರಣಿಯ ಮೂಲಕ ಅನುಭವಿ ಆಟಗಾರ ಕೆಎಲ್ ರಾಹುಲ್ ಹಾಗೂ ಪ್ರಮುಖ ಆಲ್‌ರೌಂಡರ್ ದೀಪಕ್ ಚಾಹರ್ ಭಾರತ ತಂಡಕ್ಕೆ ಕಮ್‌ಬ್ಯಾಕ್ ಮಾಡುತ್ತಿದ್ದಾರೆ. ಗಾಯದ ಕಾರಣದಿಂದಾಗಿ ಈ ಇಬ್ಬರು ಆಟಗಾರರು ಕೂಡ ಸುದೀರ್ಘ ಕಾಲದಿಂದ ವಿಶ್ರಾಂತಿಯಲ್ಲಿದ್ದರು.

ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಟೂರ್ನಿ

ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಟೂರ್ನಿ

ಇನ್ನು ಈ ಬಾರಿಯ ಏಷ್ಯಾಕಪ್ ಟೂರ್ನಿ ಶ್ರೀಲಂಕಾದಲ್ಲಿ ಆಯೋಜನೆಯಾಗಬೇಕಾಗಿತ್ತು. ಆದರೆ ಶ್ರೀಲಂಕಾ ಪ್ರಸ್ತುತ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು ರಾಜಕೀಯವಾಗಿಯೂ ಅಸ್ಥಿರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಹೀಗಾಗಿ ಶ್ರೀಲಂಕಾದ ಬದಲಾಗಿ ಯುಎಇಗೆ ಸ್ಥಳಾಂತರಿಸಲಾಗಿದೆ. ಆದರೆ ಆಯೋಜನೆಯ ಹಕ್ಕು ಮಾತ್ರ ಶ್ರೀಲಂಕಾ ಕ್ರಿಕೆಟ್ ಮಂಡಳಿಯಲ್ಲೇ ಇದೆ. ಇನ್ನು ಅಕ್ಟೋಬರ್ ತಿಂಗಳಿನಲ್ಲಿ ಆಸ್ಟ್ರೇಲಿಯಾದಲ್ಲಿ ವಿಶ್ವಕಪ್ ಟೂರ್ನಿ ನಡೆಯಲಿದ್ದು ಅದಕ್ಕೂ ಮುನ್ನ ಏಷ್ಯಾದ ರಾಷ್ಟ್ರಗಳಿಗೆ ಉತ್ತಮ ಅಭ್ಯಾಸ ದೊರೆತಂತಾಗುತ್ತದೆ.

ಭಾರತದ ಸ್ಕ್ವಾಡ್ ಹೀಗಿದೆ

ಭಾರತದ ಸ್ಕ್ವಾಡ್ ಹೀಗಿದೆ

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಯುಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್

Story first published: Sunday, August 14, 2022, 12:15 [IST]
Other articles published on Aug 14, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X