Asia Cup 2022 Final: ಪಾಕಿಸ್ತಾನಕ್ಕೆ ಸವಾಲಿನ ಗುರಿ ನೀಡಿದ ಶ್ರೀಲಂಕಾ; ಯಾರಾಗ್ತಾರೆ ಚಾಂಪಿಯನ್?

ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದು (ಸೆಪ್ಟೆಂಬರ್ 11) ಭಾನುವಾರ ನಡೆಯುತ್ತಿರುವ 2022ರ ಏಷ್ಯಾ ಕಪ್ ಫೈನಲ್ ಹಾಗೂ ಅಂತಿಮ ಪಂದ್ಯದಲ್ಲಿ ಶ್ರೀಲಂಕಾ ಮತ್ತು ಪಾಕಿಸ್ತಾನ ತಂಡಗಳು ಚಾಂಪಿಯನ್ ಪಟ್ಟಕ್ಕಾಗಿ ಪರಸ್ಪರ ಸೆಣಸಾಡುತ್ತಿದ್ದು, ಪಾಕಿಸ್ತಾನ ತಂಡಕ್ಕೆ ಶ್ರೀಲಂಕಾ ಸವಾಲಿನ ಗುರಿ ನೀಡಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ಫೀಲ್ಡಿಂಗ್ ಆಯ್ದುಕೊಳ್ಳುವುದರ ಮೂಲಕ ಶ್ರೀಲಂಕಾ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 170 ರನ್ ಕಲೆ ಹಾಕಿದ್ದು, ಎದುರಾಳಿ ಪಾಕಿಸ್ತಾನ ತಂಡಕ್ಕೆ ಗೆಲ್ಲಲು 171 ರನ್‌ಗಳ ಗುರಿಯನ್ನು ನೀಡಿದೆ.
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ಪರ ಆರಂಭಿಕರಾಗಿ ಪಾತುಮ್ ನಿಸ್ಸಾಂಕ ಮತ್ತು ಕುಸಲ್ ಮೆಂಡಿಸ್ ಕಣಕ್ಕಿಳಿದರು. ಆದರೆ ತಂಡದ ಮೊತ್ತ 2 ರನ್‌ಗಳಾಗಿದ್ದಾಗ ಕುಸಲ್ ಮೆಂಡಿಸ್ ಡಕ್‌ಗೆ ಔಟಾದರು. ಇವರ ಬೆನ್ನಲ್ಲೇ 8 ರನ್ ಗಳಿಸಿ ಆಡುತ್ತಿದ್ದ ಪಾತುಮ್ ನಿಸ್ಸಾಂಕ ವಿಕೆಟ್ ಒಪ್ಪಿಸಿದರು. ನಂತರ ಬಂದ ಧನಂಜಯ ಡಿ ಸಿಲ್ವಾ 28 ರನ್ ಗಳಿಸಿ ತಂಡದ ಮೊತ್ತ ಹೆಚ್ಚಾಗಲು ಪ್ರಯತ್ನಿಸಿದರು.

ಇನ್ನು ದನುಷ್ಕ ಗುಣತಿಲಕ 1 ರನ್ ಗಳಿಸಿ ಪೆವಿಲಿಯನ್ ದಾರಿ ಹಿಡಿದರು. ನಾಯಕ ದಸುನ್ ಶನಕ ಕೂಡ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಇರದೆ ಹೊರನಡೆದರು. ನಂತರ ಕ್ರೀಸ್‌ಗೆ ಭಾನುಕ ರಾಜಪಕ್ಸೆ ಅವರು ವನಿಂದು ಹಸರಂಗಾ ಜೊತೆ ಉತ್ತಮ ಮೊತ್ತ ಕಲೆ ಹಾಕಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು.
36 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ ವನಿಂದು ಹಸರಂಗಾ ಕ್ಯಾಚ್ ನೀಡಿ ಪೆವಿಲಿಯನ್‌ಗೆ ಮರಳಿದರು. ಆಗ ತಂಡದ ಮೊತ್ತ 14.5 ಓವರ್‌ಗಳಲ್ಲಿ 116 ರನ್‌ಗಳು. ಮಧ್ಯಮ ಕ್ರಮಾಂಕದಲ್ಲಿ ಭಾನುಕ ರಾಜಪಕ್ಸೆ 45 ಎಸೆತಗಳಲ್ಲಿ ಅಜೇಯ 71 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 6 ಬೌಂಡರಿ ಮತ್ತು 3 ಸಿಕ್ಸರ್‌ಗಳಿದ್ದವು. ಕೊನೆಯಲ್ಲಿ ಚಮಿಕಾ ಕರುಣಾರತ್ನೆ 14 ರನ್ ಗಳಿಸಿ ಅಜೇಯರಾಗುಳಿದರು.

ಇನ್ನು ಬೌಲಿಂಗ್‌ನಲ್ಲಿ ಪಾಕಿಸ್ತಾನ ಪರ ಹ್ಯಾರಿಸ್ ರೌಫ್ 4 ಓವರ್‌ಗಳಲ್ಲಿ 29 ರನ್ ನೀಡಿ 3 ವಿಕೆಟ್ ಪಡೆದರು. ನಸೀಮ್ ಶಾ 4 ಓವರ್‌ಗಳಲ್ಲಿ 40 ರನ್ ನೀಡಿ 1 ವಿಕೆಟ್ ಪಡೆದರು. ಶಾದಾಬ್ ಖಾನ್ 4 ಓವರ್‌ಗಳಲ್ಲಿ 28 ರನ್ ನೀಡಿ 1 ವಿಕೆಟ್ ಪಡೆದರು. ಉಳಿದಂತೆ ಇಫ್ತಿಕರ್ ಅಹ್ಮದ್ ಒಂದು ವಿಕೆಟ್ ಪಡೆದರು.
ಪಾಕಿಸ್ತಾನದ ಆಡುವ ಹನ್ನೊಂದರ ಬಳಗ:
ಮೊಹಮ್ಮದ್ ರಿಜ್ವಾನ್(ವಿಕೆಟ್ ಕೀಪರ್), ಬಾಬರ್ ಅಜಮ್(ನಾಯಕ), ಫಖರ್ ಜಮಾನ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಶಾದಾಬ್ ಖಾನ್, ಆಸಿಫ್ ಅಲಿ, ಹ್ಯಾರಿಸ್ ರೌಫ್, ನಸೀಮ್ ಶಾ, ಮೊಹಮ್ಮದ್ ಹಸ್ನೇನ್
ಶ್ರೀಲಂಕಾದ ಆಡುವ ಹನ್ನೊಂದರ ಬಳಗ:
ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್(ವಿಕೆಟ್ ಕೀಪರ್), ಧನಂಜಯ ಡಿ ಸಿಲ್ವಾ, ದನುಷ್ಕ ಗುಣತಿಲಕ, ಭಾನುಕ ರಾಜಪಕ್ಸೆ, ದಸುನ್ ಶನಕ(ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಪ್ರಮೋದ್ ಮದುಶನ್, ಮಹೀಶ್ ತೀಕ್ಷಣ, ದಿಲ್ಶನ್ ಮಧುಶಂಕ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications