Asia Cup 2022 Final: ಪಾಕಿಸ್ತಾನ vs ಶ್ರೀಲಂಕಾ ಟಾಸ್ ವರದಿ; ಆಡುವ 11ರ ಬಳಗ & ಲೈವ್ ಸ್ಕೋರ್

ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಭಾನುವಾರ ನಡೆಯಲಿರುವ 2022ರ ಏಷ್ಯಾ ಕಪ್ ಫೈನಲ್ ಹಾಗೂ ಅಂತಿಮ ಪಂದ್ಯದಲ್ಲಿ ಶ್ರೀಲಂಕಾ ಮತ್ತು ಪಾಕಿಸ್ತಾನ ತಂಡಗಳು ಪರಸ್ಪರ ಸೆಣಸಲಿವೆ.

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡರು. ಹೀಗಾಗಿ ದಸುನ್ ಶನಕ ನಾಯಕತ್ವದ ಶ್ರೀಲಂಕಾ ತಂಡ ಮೊದಲು ಬ್ಯಾಟಿಂಗ್‌ಗೆ ಇಳಿಯಲಿದೆ.

ಏಷ್ಯಾ ಕಪ್ ಪಂದ್ಯಾವಳಿಯ ಗುಂಪು ಹಂತದಲ್ಲಿ, ಎರಡೂ ತಂಡಗಳು ಮೂರರಲ್ಲಿ ಒಂದು ಪಂದ್ಯವನ್ನು ಸೋತಿವೆ ಮತ್ತು ಸೂಪರ್ 4ರ ಹಂತದಲ್ಲಿ ಎರಡು ತಂಡಗಳು ಭಾರತ ಮತ್ತು ಅಫ್ಘಾನಿಸ್ತಾನವನ್ನು ಸೋಲಿಸಿ ಫೈನಲ್‌ಗೆ ಪ್ರವೇಶಿಸಿದರು.

ಇತ್ತೀಚೆಗೆ ಉಭಯ ತಂಡಗಳ ನಡುವೆ ಫೈನಲ್‌ಗೂ ಮುನ್ನ ಶುಕ್ರವಾರ ನಡೆದ ಸೂಪರ್ 4ರ ಹಣಾಹಣಿಯಲ್ಲಿ ಪಾಕಿಸ್ತಾನ ವಿರುದ್ಧ ಐದು ವಿಕೆಟ್‌ಗಳಿಂದ ಶ್ರೀಲಂಕಾ ಜಯ ಸಾಧಿಸಿತ್ತು. ಏಷ್ಯಾ ಕಪ್ 2022ರ ಪ್ರತಿಷ್ಠಿತ ಪ್ರಶಸ್ತಿಯನ್ನು ಗೆಲ್ಲಲು ಪಾಕಿಸ್ತಾನ ಮತ್ತು ಶ್ರೀಲಂಕಾ ತಂಡಗಳ ನಡುವಿನ ಹೋರಾಟವು ಮುಂದಿನ ಟಿ20 ವಿಶ್ವಕಪ್‌ಗೂ ಮುನ್ನ ಆತ್ಮವಿಶ್ವಾಸ ತುಂಬಲಿದೆ.

1984ರಲ್ಲಿ ಏಷ್ಯಾ ಕಪ್ ಪ್ರಾರಂಭವಾದ ನಂತರ, ಶ್ರೀಲಂಕಾ ತಂಡ ಐದು ಬಾರಿ ಪ್ರಶಸ್ತಿಯನ್ನು ಗೆದ್ದಿದ್ದರೆ, ಪಾಕಿಸ್ತಾನ ಎರಡು ಬಾರಿ ಪ್ರಶಸ್ತಿಯನ್ನು ಗೆದ್ದಿದೆ. ಈ ಬಾರಿಯ ಟ್ರೋಫಿಯನ್ನು ಪಡೆಯಲು ಯಾವ ತಂಡವು ಇನ್ನೊಂದು ತಂಡದ ಮೇಲೆ ಮೇಲುಗೈ ಸಾಧಿಸುತ್ತದೆ ಎಂಬುದನ್ನು ನೋಡಲು ಕುತೂಹಲಕಾರಿಯಾಗಿದೆ.

ಶ್ರೀಲಂಕಾದ ಆಡುವ ಹನ್ನೊಂದರ ಬಳಗ
ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್(ವಿಕೆಟ್ ಕೀಪರ್), ಧನಂಜಯ ಡಿ ಸಿಲ್ವಾ, ದನುಷ್ಕ ಗುಣತಿಲಕ, ಭಾನುಕ ರಾಜಪಕ್ಸೆ, ದಸುನ್ ಶನಕ(ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಪ್ರಮೋದ್ ಮದುಶನ್, ಮಹೀಶ್ ತೀಕ್ಷಣ, ದಿಲ್ಶನ್ ಮಧುಶಂಕ

ಪಾಕಿಸ್ತಾನದ ಆಡುವ ಹನ್ನೊಂದರ ಬಳಗ:
ಮೊಹಮ್ಮದ್ ರಿಜ್ವಾನ್(ವಿಕೆಟ್ ಕೀಪರ್), ಬಾಬರ್ ಅಜಮ್(ನಾಯಕ), ಫಖರ್ ಜಮಾನ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಶಾದಾಬ್ ಖಾನ್, ಆಸಿಫ್ ಅಲಿ, ಹ್ಯಾರಿಸ್ ರೌಫ್, ನಸೀಮ್ ಶಾ, ಮೊಹಮ್ಮದ್ ಹಸ್ನೇನ್

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Sunday, September 11, 2022, 19:04 [IST]
Other articles published on Sep 11, 2022

Latest Videos

  + More
  POLLS
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Yes No
  Settings X