ಭಾರತ vs ಅಫ್ಘಾನಿಸ್ತಾನ ಪಂದ್ಯದ ಆರಂಭಕ್ಕೂ ಮುನ್ನ ದುಬೈ ಸ್ಟೇಡಿಯಂ ಪಕ್ಕದಲ್ಲೇ ಅಗ್ನಿ ದುರಂತ

ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಟಿ20 ಪಂದ್ಯದ ಆರಂಭಕ್ಕೆ ಕೆಲವೇ ಕ್ಷಣಗಳ ಮುನ್ನ ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂ ಸನಿಹದಲ್ಲಿ ಅಗ್ನಿ ದುರಂತ ಸಂಭವಿಸಿದೆ. ಸ್ಟೇಡಿಯಂನ ಪ್ರವೇಶ ದ್ವಾರದ ಪಕ್ಕದಲ್ಲೇ ಇರುವ ಕಟ್ಟಡಕ್ಕೆ ಬೆಂಕಿ ತಗುಲಿದ್ದು ದೊಡ್ಡ ಪ್ರಮಾಣದಲ್ಲಿ ಹೊಗೆ ಏಳಲು ಆರಂಭಿಸಿದ್ದು ಸ್ಟೇಡಿಯಂನ ಒಳಗೂ ಹೊಗೆ ಕಾಣಿಸಿಕೊಂಡಿದೆ.
ಜನಪ್ರಿಯ ಕ್ರಿಕೆಟ್ ಕ್ರೀಡಾಂಗಣದ ಹೊರಗಿನ ಕಟ್ಟದ ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡಿತು. ಆದರೆ ಕೆಲವೇ ನಿಮಿಷಗಳಲ್ಲಿ ಅದನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಸಾರಕರು ಮತ್ತು ತಂಡಗಳು ಅದಾಗಲೇ ಸ್ಟೇಡಿಯಂನ ಒಳಗಿದ್ದ ಕಾರಣ ಪಂದ್ಯ ನಿಗದಿತ ಸಮಯದಲ್ಲಿಯೇ ಆರಂಭವಾಗಿದೆ.
ಭಾರತ ಮತ್ತು ಅಫ್ಘಾನಿಸ್ತಾನ ಎರಡೂ ತಂಡಗಳು ಕೂಡ ಈಗಾಗಲೇ ಏಷ್ಯಾ ಕಪ್ 2022 ರ ಫೈನಲ್ ಹಂತಕ್ಕೇರುವ ಸ್ಪರ್ಧೆಯಿಂದ ಹೊರಬಿದ್ದಿವೆ. ಗುರುವಾರದ ಪಂದ್ಯ ಸೂಪರ್ 4 ಹಂತದಲ್ಲಿ 3 ನೇ ಮತ್ತು 4 ನೇ ಸ್ಥಾನದಲ್ಲಿರುವ ತಂಡಗಳನ್ನು ನಿರ್ಧರಿಸುತ್ತದೆ. ಸೆಪ್ಟೆಂಬರ್ 11 ಭಾನುವಾರದಂದು ದುಬೈನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ಶ್ರೀಲಂಕಾ ಸೆಣೆಸಾಡಲಿದ್ದು ಚಾಂಪಿಯನ್ ಪಟ್ಟಕ್ಕೇರಲು ಪೈಪೋಟಿ ನಡೆಸಲಿದೆ.
ಲೀಗ್ ಹಂತದಲ್ಲಿ ಹಾಂಕಾಂಗ್ ಮತ್ತು ಪಾಕಿಸ್ತಾನ ತಂಡವನ್ನು ಸೋಲಿಸಿದ್ದ ಭಾರತ ಎ ಗುಂಪಿನಲ್ಲಿ ಅಗ್ರಸ್ಥಾನವನ್ನು ಪಡೆದು ಸೂಪರ್ 4 ಹಂತಕ್ಕೇರಿತ್ತು. ಆದರೆ ಸೂಪರ್ 4 ಹಂತದಲ್ಲಿ ಪಾಕಿಸ್ತಾನದ ವಿರುದ್ಧ 5 ವಿಕೆಟ್‌ಗಳಿಂದ ಮತ್ತು ಶ್ರೀಲಂಕಾ ವಿರುದ್ಧ 6 ವಿಕೆಟ್‌ಗಳಿಂದ ಸೋಲು ಅನುಭವಿಸುವ ಮೂಲಕ ಫೈನಲ್ ಹಂತಕ್ಕೇರುವ ಸ್ಪರ್ಧೆಯಿಂದ ಹೊರಬಿದ್ದಿದೆ.
ಇನ್ನು ಅಫ್ಘಾನಿಸ್ತಾನ ಹಾಗೂ ಭಾರತ ವಿರುದ್ಧದ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಟೀಮ್ ಇಂಡಿಯಾ ಮೊದಲಿಗೆ ಬ್ಯಾಟಿಂಗ್
ನಡೆಸುವ ಸವಾಲು ಸ್ವೀಕರಿಸಿದೆ.
ಆಡುವ ಬಳಗ
ಅಫ್ಘಾನಿಸ್ತಾನ ಆಡುವ ಬಳಗ: ಹಜರತುಲ್ಲಾ ಝಜೈ, ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ (ನಾಯಕ), ಕರೀಮ್ ಜನತ್, ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ಫರೀದ್ ಅಹ್ಮದ್ ಮಲಿಕ್, ಫಜಲ್ಹಕ್ ಫಾರೂಕಿ
ಬೆಂಚ್: ಸಮೀವುಲ್ಲಾ ಶಿನ್ವಾರಿ, ಹಶ್ಮತುಲ್ಲಾ ಶಾಹಿದಿ, ಅಫ್ಸರ್ ಝಜೈ, ಉಸ್ಮಾನ್ ಘನಿ, ನವೀನ್-ಉಲ್-ಹಕ್, ನೂರ್ ಅಹ್ಮದ್
ಭಾರತ ಆಡುವ ಬಳಗ: ಕೆಎಲ್ ರಾಹುಲ್ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ದೀಪಕ್ ಚಾಹರ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications