ಭಾರತ ತಂಡದ ಹೊಸ ರಣತಂತ್ರ ತಂಡಕ್ಕೆ ನೆರವಾಗಲಿದೆ ಎಂದ ರವಿ ಶಾಸ್ತ್ರಿ

ಟೀಮ್ ಇಂಡಿಯಾ ಮಾಜಿ ಕೋಚ್ ರವಿ ಶಾಸ್ತ್ರಿ ತಂಡದ ಹೊಸ ರಣತಂತ್ರಕ್ಕೆ ಮೆಚ್ಚುಗೆ ಸೂಚಿಸಿದ್ದು ಈ ರಣತಂತ್ರ ಈ ಬಾರಿ ಭಾರತಕ್ಕೆ ನೆರವಾಗಲಿದೆ ಎಂದಿದ್ದಾರೆ. ಈ ಹಿಂದೆ ಭಾರತದ ಅಗ್ರ ಕ್ರಮಾಂಕ ಸ್ವಲ್ಪ ಅಂಜಿಕೆಯಿಂದ ಕೂಡಿದಂತೆ ಕಂಡು ಬಂದಿತ್ತು. ಆದರೆ ಈಗ ಆಕ್ರಮಣಕಾರಿ ಆಟವನ್ನು ಆಡುತ್ತಿದ್ದು ಮುಂದಿನ ಟೂರ್ನಿಗಳಲ್ಲಿಯೂ ಅದನ್ನೇ ಮುಂದುವರಿಸುವುದು ಉತ್ತಮ ಎಂದಿದ್ದಾರೆ ಮಾಜಿ ಕೋಚ್ ರವಿ ಶಾಸ್ತ್ರಿ.
ಇನ್ನು ಇದೇ ಸಂದರ್ಭದಲ್ಲಿ ರವಿ ಶಾಸ್ತ್ರಿ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಬಗ್ಗೆಯೂ ಮಾತನಾಡಿದ್ದು ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ. ಏಷ್ಯಾ ಕಪ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಅರ್ಧ ಶತಕ ಸಿಡಿಸುವ ಮೂಲಕ ಟೀಕಾಕಾರರ ಬಾಯಿ ಮುಚ್ಚಿಸುತ್ತಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಆಗಸ್ಟ್ 27ರಿಂದ ಏಷ್ಯಾ ಕಪ್ ಟೂರ್ನಿ ಆರಂಭವಾಗಲಿದ್ದು ಭಾರತ 28ರಂದು ಪಾಕಿಸ್ತಾನದ ವಿರುದ್ಧ ಪಂದ್ಯವನ್ನು ಆಡುವ ಮೂಲಕ ಅಭಿಯಾನ ಆರಂಭಿಸಲಿದೆ.
ಆಕ್ರಮಣಕಾರಿಯಾಗಿ ಆಡುತ್ತಿದೆ ಟೀಮ್ ಇಂಡಿಯಾ: ಕಳೆದ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡ ಲೀಗ್ ಹಂತದಿಂದಲೇ ನಿರ್ಗಮಿಸಿದ ಬಳಿಕ ತಂಡ ತನ್ನ ರಣತಂತ್ರದಲ್ಲಿ ಬದಲಾವಣೆ ಮಾಡಿಕೊಂಡಿತು. ಆರಂಭಿಕ ಹಂತದಿಂದಲೇ ಆಕ್ರಮಣಕಾರಿ ಆಟಕ್ಕೆ ಮುಂದಾಗುವ ಮೂಲಕ ಭಾರತ ತಂಡ ಉತ್ತಮ ಯಶಸ್ಸು ಸಾಧಿಸುತ್ತಾ ಸಾಗಿತು. ಇದೀಗ ಚುಟುಕು ವಿಶ್ವಕಪ್‌ನಲ್ಲಿಯೂ ಅದೇ ಯೋಜನೆಯೊಂದಿಗೆ ಭಾರತ ಕಣಕ್ಕಿಳಿಯಲಿದೆ. ತಮಡದ ಈ ಯೋಜನೆ ನೆರವಾಗಲಿದೆ ಎಂಬುದು ಮಾಜಿ ಕೋಚ್ ರವಿ ಶಾಸ್ತ್ರಿ ಅಭಿಪ್ರಾಯ.
ಇನ್ನು ಇದೇ ಸಂದರ್ಭದಲ್ಲಿ ರವಿ ಶಾಸ್ತ್ರಿ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಬಗ್ಗೆಯೂ ಮಾತನಾಡಿದ್ದು ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ. ಏಷ್ಯಾ ಕಪ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಅರ್ಧ ಶತಕ ಸಿಡಿಸುವ ಮೂಲಕ ಟೀಕಾಕಾರರ ಬಾಯಿ ಮುಚ್ಚಿಸುತ್ತಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಆಗಸ್ಟ್ 27ರಿಂದ ಏಷ್ಯಾ ಕಪ್ ಟೂರ್ನಿ ಆರಂಭವಾಗಲಿದ್ದು ಭಾರತ 28ರಂದು ಪಾಖಿಸ್ತಾನದ ವಿರುದ್ಧ ಪಂದ್ಯವನ್ನು ಆಡುವ ಮೂಲಕ ಅಭಿಯಾನ ಆರಂಭಿಸಲಿದೆ.
ಇದುವೇ ಸರಿಯಾದ ಕ್ರಮ: ಮುಂದುವರಿದು ಮಾತನಾಡಿದ ರವಿ ಶಾಸ್ತ್ರಿ "ಈಗ ಆಡುತ್ತಿರುವ ರೀತಿ ಸರಿಯಾಗಿದೆ. ಈ ರೀತಿಯ ಆಟದಿಂದಾಗಿ ನೀವು ಮಧ್ಯೆ ಕೆಲ ಪಂದ್ಯಗಳನ್ನು ಸೋಲಲೂ ಬಹುದು. ಆದರೆ ಆರಂಭದಲ್ಲಿ ಈ ರಣತಂತ್ರದೊಂದಿಗೆ ಆಡಿ ಗೆಲುವು ಸಾಧಿಸಿದರೆ ಮಹತ್ವದ ಪಂದ್ಯಗಳಿಗೆ ನೀವು ಆತ್ಮವಿಶ್ವಾಸದೊಂದಿಗೆ ತೆರಳುವ ಅವಕಾಶವಿದೆ" ಎಂದಿದ್ದಾರೆ ಮಾಜಿ ಕೋಚ್ ರವಿ ಶಾಸ್ತ್ರಿ.
ಆರು ತಂಡಗಳು ಭಾಗಿಯಾಗುತ್ತಿರುವ ಈ ಏಷ್ಯಾ ಕಪ್ ಟೂರ್ನಿ ಈ ಬಾರಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಉತ್ತಮ ತಯಾರಿಯಾಗಲಿದ್ದಾರೆ. ಕಳೆದ ವರ್ಷ ಟಿ20 ವಿಶ್ವಕಪ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿ ಮುಖಭಂಗಕ್ಕೆ ಒಳಗಾಗಿದ್ದ ಭಾರತ ಈ ಬಾರಿಯ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನಿಡುವ ನಿಟ್ಟಿನಲ್ಲಿ ಸಂಪೂರ್ಣ ಸಿದ್ಧತೆ ಮಾಡಿಕೊಳ್ಳುತ್ತಿದ್ದು ಏಷ್ಯಾ ಕಪ್ ಮೂಲಕ ತನ್ನ ಸಿದ್ಧತೆಯನ್ನು ಪರೀಕ್ಷಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ.
ಏಷ್ಯಾಕಪ್ ಟೂರ್ನಿಗೆ ಪ್ರಕಟವಾದ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಯುಜುವೇಂದ್ರ ಚಾಹಲ್, ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಆವೇಶ್ ಖಾನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications