ಏಷ್ಯಾ ಕಪ್‌ಗೆ ಸಿದ್ಧತೆ: ಜಿಮ್‌ನಲ್ಲಿ ಬೆವರಿಳಿಸುತ್ತಿದ್ದಾರೆ ವಿರಾಟ್ ಕೊಹ್ಲಿ: ವಿಡಿಯೋ

ಒಂದೆಡೆ ಭಾರತ ಏಕದಿನ ತಂಡ ಜಿಂಬಾಬ್ವೆ ಪ್ರವಾಸಕ್ಕೆ ತೆರಳಿದ್ದು ಏಕದಿನ ಸರಣಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಮತ್ತೊಂದೆಡೆ ಈ ಪ್ರವಾಸದಿಂದ ವಿಶ್ರಾಂತಿ ಪಡೆದುಕೊಂಡಿರುವ ಟೀಮ್ ಇಂಡಿಯಾ ಅನುಭವಿ ಆಟಗಾರ ಮಾಜಿ ನಾಯಕ ವಿರಾಟ್ ಕೊಹ್ಲಿ ಏಷ್ಯಾ ಕಪ್‌ಗೆ ಸಿದ್ಧತೆ ನಡೆಸುತ್ತಿದ್ದಾರೆ. ತಮ್ಮ ಅಭ್ಯಾಸದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಇಂಗ್ಲೆಂಡ್ ವಿರುದ್ಧ ನಡೆದ ಸರಣಿಯಲ್ಲಿ ಭಾಗಿಯಾಗಿದ್ದ ವಿರಾಟ್ ಕೊಹ್ಲಿ ಆ ಪ್ರವಾಸದಲ್ಲಿಯೂ ವೈಫಲ್ಯವನ್ನು ಅನುಭವಿಸಿದ್ದರು. ಅದಾದ ಬಳಿಕ ಭಾರತ ತಂಡ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡಾಗ ಅದರಿಂದ ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದುಕೊಂಡಿದ್ದಾರೆ. ಜುಲೈ-ಆಗಸ್ಟ್ ಅವಧಿಯಲ್ಲಿ ಭಾರತ ತಂಡ ವೆಸ್ಟ್ ಇಂಡಿಸ್ ಪ್ರವಾಸ ಕೈಗೊಂಡು 3 ಏಕದಿನ ಹಾಗೂ ಟಿ20 ಪಂದ್ಯಗಳ ಸರಣಿಯಲ್ಲಿ ಕಣಕ್ಕಿಳಿದಿತ್ತು. ಈ ಪ್ರವಾಸದಿಂದ ಹೊರಗುಳಿದ ಕೊಹ್ಲಿ ತಮ್ಮ ಫಾರ್ಮ್‌ಗೆ ಮರಳುವ ಹಿನ್ನೆಲೆಯಲ್ಲಿ ಸುಮಾರು ಒಂದು ತಿಂಗಳ ಕಾಲ ವಿಶ್ರಾಂತಿಯ ಮೊರೆ ಹೋಗಿದ್ದರು.
ಟೀಕೆಗೆ ಗುರಿಯಾಗಿರುವ ಕೊಹ್ಲಿ
ಇನ್ನು ಸತತವಾಗಿ ಫಾರ್ಮ್ ಕೊರತೆಯಿಂದ ಬಳಲುತ್ತಿರುವ ವಿರಾಟ್ ಕೊಹ್ಲಿ ಬಗ್ಗೆ ಇತ್ತೀಚೆಗೆ ಸಾಕಷ್ಟು ಟೀಕೆಗಳನ್ನು ಎದುರಿಸಿದ್ದಾರೆ. ಅದರಲ್ಲೂ ಟಿ20 ತಂಡದಲ್ಲಿ ವಿರಾಟ್ ಕೊಹ್ಲಿಯ ಸ್ಥಾನದ ಬಗ್ಗೆಯೂ ಪ್ರಶ್ನೆಗಳು ಉಂಟಾಗಿತ್ತು. ಆದರೆ ಬಿಸಿಸಿಐನ ಆಯ್ಕೆ ಸಮಿತಿ ಅನುಭವಿ ಆಟಗಾರನ ಮೇಲೆ ಭರವಸೆ ಇಟ್ಟಿದ್ದು ಏಷ್ಯಾ ಕಪ್‌ಗೆ ಆಯ್ಕೆ ಮಾಡಿರುವ 15 ಆಟಗಾರರ ಬಳಗದಲ್ಲಿ ಅವಕಾಶ ನೀಡಲಾಗಿದೆ. ಶ್ರೇಯಸ್ ಐಯ್ಯರ್, ಅಕ್ಷರ್ ಪಟೇಲ್ ಹಾಗೂ ದೀಪಕ್ ಚಾಹರ್ ಅವರನ್ನು ಮೀಸಲು ಆಟಗಾರರನ್ನಾಗಿ ಆಯ್ಕೆ ಮಾಡಲಾಗಿದೆ.

ಏಷ್ಯಾ ಕಪ್ ಹಾಗೂ ವಿಶ್ವಕಪ್ ಗೆಲ್ಲುವುದು ನನ್ನ ಗುರಿ
ಇನ್ನು ಈ ವರ್ಷಾರಂಭದಲ್ಲಿ ನಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಗುರಿಯನ್ನು ಹೇಳಿಕೊಂಡಿದ್ದರು. ಏಷ್ಯಾ ಕಪ್ ಹಾಗೂ ವಿಶ್ವಕಪ್‌ನಲ್ಲಿ ಭಾರತ ತಂಡಕ್ಕೆ ಗೆಲ್ಲಲು ಸಹಾಯ ಮಾಡುವುದೇ ನನ್ನ ಪ್ರಮುಖ ಗುರಿ ಎಂದಿದ್ದರು ಮಾಜಿ ನಾಯಕ ಕೊಹ್ಲಿ. ತಂಡದ ಗೆಲುವಿಗಾಗಿ ತಾನು ಏನು ಮಾಡಲು ಕೂಡ ಸಿದ್ಧ ಎಂದಿದ್ದರು ವಿರಾಟ್ ಕೊಹ್ಲಿ. ಪ್ರಸ್ತುತ ವಿರಾಟ್ ಕೊಹ್ಲಿ ಫಾರ್ಮ್ ಸಮಸ್ಯೆಯಿಂದ ಬಳಲುತ್ತಿದ್ದರೂ ಏಷ್ಯಾ ಕಪ್‌ನ ತಂಡದಲ್ಲಿ ಕೊಹ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈ ಪ್ರತಿಷ್ಠಿತ ಟೂರ್ನಿಯಲ್ಲಿ ಕೊಹ್ಲಿ ಫಾರ್ಮ್‌ಗೆ ಮರಳುವ ವಿಶ್ವಾಸದಲ್ಲಿದ್ದಾರೆ.
ಅದೊಂದು ತಂಡ ಮಾತ್ರ ಆಸ್ಟ್ರೇಲಿಯಾಕ್ಕಿರುವ ಅಂತಿಮ ಸವಾಲು: ಗ್ಲೆನ್ ಮೆಗ್ರಾಥ್

ಗಾಯದಿಂದ ಹೊರಗುಳಿದಿದ್ದಾರೆ ಪ್ರಮುಖ ಬೌಲರ್‌ಗಳು
ಯುಎಇನಲ್ಲಿ ಆಗಸ್ಟ್ 28ರಿಂದ ಆರಂಭವಾಗಲಿರುವ ಏಷ್ಯಾ ಕಪ್ ಟೂರ್ನಿಗೆ ಆಯ್ಕೆ ಮಾಡಿರುವ ಭಾರತೀಯ ಆಟಗಾರರ ತಂಡದಲ್ಲಿ ಇಬ್ಬರು ಆಟಗಾರರು ಗಾಯದ ಕಾರಣದಿಂದಾಗಿ ಹೊರಗುಳಿಯುವ ಅನಿವಾರ್ಯತೆಗೆ ಸಿಲುಕಿದ್ದಾರೆ. ಜಸ್ಪ್ರೀತ್ ಬೂಮ್ರಾ ಹಾಗೂ ಮತ್ತೋರ್ವ ವೇಗಿ ಹರ್ಷಲ್ ಪಟೇಲ್ ಗಾಯಗೊಂಡಿದ್ದು ಬೆಂಗಳೂರಿನ ಎನ್‌ಸಿಎನಲ್ಲಿ ರಿಹ್ಯಾಹ್ಯಾಬ್‌ನಲ್ಲಿ ಭಾಗಿಯಾಗಿದ್ದಾರೆ ಎಂದು ಸ್ವತಃ ಬಿಸಿಸಿಐ ಸ್ಪಷ್ಟಪಡಿಸಿದೆ. ಹೀಗಾಗಿ ಭುವನೇಶ್ವರ್ ಕುಮಾರ್ ವೇಗದ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದು ಅರ್ಷ್‌ದೀಪ್ ಸಿಂಗ್ ಹಾಗೂ ಅವೇಶ್ ಖಾನ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಏಷ್ಯಾಕಪ್‌ಗೆ ಆಯ್ಕೆಯಾಗಿರುವ ಭಾರತ ಸ್ಕ್ವಾಡ್
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಯುಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications