ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಪಂತ್ ಬದಲಾಗಿ ದಿನೇಶ್ ಕಾರ್ತಿಕ್‌ಗೆ ಅವಕಾಶ ನೀಡಿದ್ದು ಉತ್ತಮ ನಿರ್ಧಾರ ಎಂದ ಹರ್ಭಜನ್ ಸಿಂಗ್

Asia Cup 2022: Harbhajan Singh said playing Dinesh Karthik against Pakistan good decision

ಏಷ್ಯಾ ಕಪ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಕದನಕ್ಕೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಲ್ಲಿ ಕುತೂಹಲ ಹುಟ್ಟಿಸಿದ್ದ ಸಂಗತಿಯೆಂದರೆ ವಿಕೆಟ್ ಕೀಪರ್ ಬ್ಯಾಟರ್ ಜವಾಬ್ಧಾರಿಯನ್ನು ಯಾರು ಹೊತ್ತುಕೊಳ್ಳಲಿದ್ದಾರೆ ಎಂಬುದಾಗಿತ್ತು. ದಿನೇಶ್ ಕಾರ್ತಿಕ್ ಹಾಗೂ ರಿಷಬ್ ಪಂತ್ ಮಧ್ಯೆ ಈ ಸ್ಥಾನಕ್ಕಾಗಿ ಸಾಕಷ್ಟು ಪೈಪೋಟಿಯಿತ್ತು. ಆದರೆ ಅಂತಿಮವಾಗಿ ದಿನೇಶ್ ಕಾರ್ತಿಕ್‌ಗೆ ಆಡುವ ಬಳಗದಲ್ಲಿ ಸ್ಥಾನ ನೀಡುವ ಮೂಲಕ ಪಂತ್ ಬೆಂಚ್ ಕಾಯಬೇಕಾಯಿತು.

ಭಾರತ ತಂಡದ ಮ್ಯಾನೇಜ್‌ಮೆಂಟ್‌ನ ಈ ನಿರ್ಧಾರದ ಬಗ್ಗೆ ಸಾಕಷ್ಟು ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. ತಮ್ಮದೇ ಆದ ಕಾರಣಗಳನ್ನು ನೀಡಿ ಅನೇಕರಿ ಈ ನಿರ್ಧಾರದ ಪರವಾಗಿ ಹಾಗೂ ವಿರುದ್ಧವಾಗಿ ಅಭಿಪ್ರಾಯವನ್ನು ತೆಗೆದುಕೊಂಡಿದ್ದಾರೆ. ಇದೀಗ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಕೂಡ ಈ ವಿಚಾರವಾಗಿ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದು ದಿನೇಶ್ ಕಾರ್ತಿಕ್‌ಗೆ ಅವಕಾಶ ನೀಡಿದ ನಿರ್ಧಾರ ಸೂಕ್ತವಾಗಿದೆ ಎಂದಿದ್ದಾರೆ.

ಬಾಬರ್ ಅಜಂ ಅಲ್ಲ: ಈ ಪಾಕ್ ಆಟಗಾರ ಐಪಿಎಲ್‌ನಲ್ಲಿ ಇದ್ದರೆ 14-15 ಕೋಟಿಗೆ ಹರಾಜಾಗುತ್ತಿದ್ದ ಎಂದ ಆರ್ ಅಶ್ವಿನ್ಬಾಬರ್ ಅಜಂ ಅಲ್ಲ: ಈ ಪಾಕ್ ಆಟಗಾರ ಐಪಿಎಲ್‌ನಲ್ಲಿ ಇದ್ದರೆ 14-15 ಕೋಟಿಗೆ ಹರಾಜಾಗುತ್ತಿದ್ದ ಎಂದ ಆರ್ ಅಶ್ವಿನ್

"ರಿಷಭ್ ಪಂತ್ ಟೆಸ್ಟ್ ಕ್ರಿಕೆಟ್ ಹಾಗೂ ಎಕದಿನ ಮಾದರಿಯಲ್ಲಿ ಅದ್ಭುತವಾದ ಆಟಗಾರ ಎಂಬುದರಲ್ಲಿ ಅನುಮಾನವೇ ಇಲ್ಲ. ಅವರು ಮತ್ತಷ್ಟು ಉತ್ತಮವಾಗುತ್ತಿದ್ದಾರೆ. ಆದರೆ ಚುಟುಕು ಕ್ರಿಕೆಟ್ ಮಾದರಿಯಲ್ಲಿ ಆತ ಇನ್ನೂ ಪರಿಪೂರ್ಣ ಆಟಗಾರ ಎನಿಸಿಕೊಂಡಿಲ್ಲ. ಆದರೆ ದಿನೇಶ್ ಕಾರ್ತಿಕ್ ಅವರ ಆಟವನ್ನು ನೋಡಿದರೆ ಸಾಕಷ್ಟು ಅದ್ಭುತವಾದ ಪ್ರದರ್ಶನ ನೀಡಿಕೊಮಡು ಬಂದಿದ್ದಾರೆ. ಈ ಮಾದರಿಯಲ್ಲಿ ಇದು ನಿಜಕ್ಕೂ ಉತ್ತಮವಾದ ನಿರ್ಧಾರವಾಗಿದೆ. ಆತನನ್ನು ಬೆಂಚ್‌ನಲ್ಲಿ ಕುಳ್ಳಿರಿಸುವುದರಲ್ಲಿ ಅರ್ಥವೇ ಇಲ್ಲ. ಇದು ಆತ ಆಡಬೇಕಾದ ಸಮಯ ಆತನಿಗೆ ಅವಕಾಶ ನೀಡಲೇಬೇಕು" ಎಂದಿದ್ದಾರೆ ಹರ್ಭಜನ್ ಸಿಂಗ್.

"ರಿಷಬ್ ಪಂತ್ ಇನ್ನೂ ಯುವ ಆಟಗಾರ. ಆತನ ಬಳಿ ಸಾಕಷ್ಟು ಸಮಯವಿದೆ. ಆದರೆ ದಿನೇಶ್ ಕಾರ್ತಿಕ್‌ಗೆ ಹಾಗಲ್ಲ. ಅವರಲ್ಲಿ ಇನ್ನು ಕೇವಲ ಒಂದೆರಡು ವರ್ಷ ಆಟದ ಸಮಯವಿರಬಹುದು. ಇದನ್ನು ಅವರು ಅದ್ಭುತವಾಗಿ ಬಳಸಿಕೊಳ್ಳಬೇಕಿದೆ. ಕೆಳ ಕ್ರಮಾಂಕದಲ್ಲಿ ಕಣಕ್ಕಿಳಿದು ಆತ ಸಾಕಷ್ಟು ಪಂದ್ಯಗಳನ್ನು ಗೆಲ್ಲಿಸಬಲ್ಲರು" ಎಂದಿದ್ದಾರೆ ಹರ್ಭಜನ್ ಸಿಂಗ್.

ಇತ್ತಂಡಗಳ ಸ್ಕ್ವಾಡ್ ಹೀಗಿತ್ತು: ಭಾರತ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದಿನೇಶ್ ಕಾರ್ತಿಕ್ (ವಿಕೆ), ಹಾರ್ದಿಕ್ ಪಾಂಡ್ಯ,
ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್
ಬೆಂಚ್: ರಿಷಬ್ ಪಂತ್, ರವಿಚಂದ್ರನ್ ಅಶ್ವಿನ್, ದೀಪಕ್ ಹೂಡಾ, ರವಿ ಬಿಷ್ಣೋಯ್

ಪಾಕಿಸ್ತಾನ ಆಡುವ ಬಳಗ: ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಫಖರ್ ಜಮಾನ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಆಸಿಫ್ ಅಲಿ, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ನಸೀಮ್ ಶಾ, ಹ್ಯಾರಿಸ್ ರೌಫ್, ಶಹನವಾಜ್ ದಹಾನಿ
ಬೆಂಚ್: ಮೊಹಮ್ಮದ್ ಹಸನೈನ್, ಉಸ್ಮಾನ್ ಖಾದಿರ್, ಹಸನ್ ಅಲಿ, ಹೈದರ್ ಅಲಿ

Story first published: Monday, August 29, 2022, 22:21 [IST]
Other articles published on Aug 29, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X