IND vs PAK: ಸೂಪರ್ 4ನಲ್ಲಿ ಈ ಇಬ್ಬರಲ್ಲಿ ಯಾರಿಗೆ ಸ್ಥಾನ? ದ್ರಾವಿಡ್, ರೋಹಿತ್‌ಗಿದು ತಲೆನೋವು!

ಇಂದಿನಿಂದ ( ಸೆಪ್ಟೆಂಬರ್ 3 ) ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದ ಪಂದ್ಯಗಳು ಆರಂಭವಾಗಿದ್ದು, ಟೀಮ್ ಇಂಡಿಯಾ ನಾಳೆ ( ಸೆಪ್ಟೆಂಬರ್ 4 ) ತನ್ನ ಪ್ರಥಮ ಪಂದ್ಯವನ್ನು ಆಡಲಿದೆ.
ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಪರಸ್ಪರ ಮುಖಾಮುಖಿಯಾಗಲಿದ್ದು, ಪಂದ್ಯ ಸಂಜೆ 7.30ಕ್ಕೆ ಆರಂಭಗೊಳ್ಳಲಿದೆ. ಇನ್ನು ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಈ ಪಂದ್ಯ ಈ ಬಾರಿಯ ಏಷ್ಯಾಕಪ್ ಟೂರ್ನಿಯಲ್ಲಿ ನಡೆಯಲಿರುವ ಎರಡನೇ ಮುಖಾಮುಖಿ ಪಂದ್ಯವಾಗಿದೆ.
ಇನ್ನು ಭಾರತ ಮತ್ತು ಪಾಕ್ ನಡುವಿನ ಈ ಪಂದ್ಯ ಆರಂಭಕ್ಕೂ ಮುನ್ನ ಪಾಕಿಸ್ತಾನದ ಬೌಲರ್ ಶಹನವಾಜ್ ದಹಾನಿ ಪಂದ್ಯದಿಂದ ಔಟ್ ಆಗಿದ್ದರೆ, ಭಾರತದ ಪ್ರಮುಖ ಆಲ್ ರೌಂಡರ್ ಆಟಗಾರ ರವೀಂದ್ರ ಜಡೇಜಾ ಇಡೀ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಹೌದು, ಗಾಯದ ಸಮಸ್ಯೆಗೆ ಒಳಗಾಗಿರುವ ರವೀಂದ್ರ ಜಡೇಜಾ ಏಷ್ಯಾ ಕಪ್ ಟೂರ್ನಿಯಿಂದ ಹೊರಬಿದ್ದಿದ್ದು, ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದ ಆಲ್ ರೌಂಡರ್ ಆಟಗಾರ ಅಕ್ಷರ್ ಪಟೇಲ್ ರವೀಂದ್ರ ಜಡೇಜಾ ಬದಲಿ ಆಟಗಾರನಾಗಿ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಇನ್ನು ರವೀಂದ್ರ ಜಡೇಜಾ ತಂಡದಿಂದ ಹೊರ ಬೀಳುತ್ತಿದ್ದಂತೆಯೇ ಪಾಕಿಸ್ತಾನ ವಿರುದ್ಧದ ಸೂಪರ್ 4 ಪಂದ್ಯದಲ್ಲಿ ಭಾರತ ಕಣಕ್ಕಿಳಿಯಲಿರುವ ಆಡುವ ಬಳಗ ಹೇಗಿರಲಿದೆ, ಪಾಕ್ ವಿರುದ್ಧದ ಪ್ರಥಮ ಪಂದ್ಯದಲ್ಲಿ ಕಣಕ್ಕಿಳಿದಿದ್ದ ರವೀಂದ್ರ ಜಡೇಜಾ ಬದಲು ಈ ಪಂದ್ಯದಲ್ಲಿ ಯಾರಿಗೆ ಸ್ಥಾನ ನೀಡಲಿದ್ದಾರೆ ಎಂಬ ಪ್ರಶ್ನೆ ಹಾಗೂ ಕುತೂಹಲ ಮೂಡಿದ್ದು, ಈ ಆಯ್ಕೆ ಇದೀಗ ರಾಹುಲ್ ದ್ರಾವಿಡ್ ಮತ್ತು ನಾಯಕ ರೋಹಿತ್ ಶರ್ಮಾ ಇಬ್ಬರಿಗೂ ಸಹ ತಲೆನೋವಾಗಿ ಪರಿಣಮಿಸಿದೆ.

ಇಬ್ಬರಲ್ಲಿ ಯಾರಿಗೆ ಸ್ಥಾನ?
ರವೀಂದ್ರ ಜಡೇಜಾ ಅವರ ಬದಲಿ ಆಟಗಾರನಾಗಿ ತಂಡಕ್ಕೆ ಸೇರ್ಪಡೆಗೊಂಡಿರುವ ಅಕ್ಷರ್ ಪಟೇಲ್ ಕೂಡಾ ರವೀಂದ್ರ ಜಡೇಜಾ ರೀತಿಯೇ ಎಡಗೈ ಬ್ಯಾಟ್ಸ್‌ಮನ್ ಹಾಗೂ ಸ್ಪಿನ್ನರ್ ಆಗಿದ್ದು, ರವೀಂದ್ರ ಜಡೇಜಾ ಬದಲು ಕಣಕ್ಕಿಳಿಯಲು ಸರಿಯಾದ ಆಯ್ಕೆಯಾಗಿದ್ದಾರೆ. ಹೀಗಾಗಿ ರವೀಂದ್ರ ಜಡೇಜಾ ಅನುಪಸ್ಥಿತಿಯಲ್ಲಿ ಅಕ್ಷರ್ ಪಟೇಲ್ ಅವರಿಗೆ ಪಾಕ್ ವಿರುದ್ಧದ ಈ ಪಂದ್ಯದಲ್ಲಿ ಆಡುವ ಅವಕಾಶ ನೀಡಬೇಕಾ ಅಥವಾ ಹಾಂಕಾಂಗ್ ವಿರುದ್ಧದ ಪಂದ್ಯದಲ್ಲಿ ವಿಕೆಟ್ ಕೀಪರ್ ಆಗಿ ಕಣಕ್ಕಿಳಿದಿದ್ದ ರಿಷಭ್ ಪಂತ್ ಅವರಿಗೆ ಆಡುವ ಬಳಗದಲ್ಲಿ ಸ್ಥಾನ ನೀಡಬೇಕಾ ಎಂಬ ತಲೆನೋವು ಇದೀಗ ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ರಾಹುಲ್ ದ್ರಾವಿಡ್ ಅವರಲ್ಲಿ ಶುರುವಾಗಿದೆ.

ಟೂರ್ನಿಯಿಂದ ಹೊರಬಿದ್ದ ಜಡೇಜಾ ಟಿ ಟ್ವೆಂಟಿ ವಿಶ್ವಕಪ್‌ನಿಂದಲೂ ಹೊರಕ್ಕೆ!
ಇನ್ನು ಏಷ್ಯಾ ಕಪ್ ಟೂರ್ನಿಯಿಂದ ಹೊರಬಿದ್ದಿರುವ ರವೀಂದ್ರ ಜಡೇಜಾ ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಟಿ ಟ್ವೆಂಟಿ ಸರಣಿ ಹಾಗೂ ಅಕ್ಟೋಬರ್ ತಿಂಗಳಿನಲ್ಲಿ ಆಸ್ಟ್ರೇಲಿಯಾ ನೆಲದಲ್ಲಿ ಆರಂಭವಾಗಲಿರುವ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೂ ಸಹ ಅಲಭ್ಯರಾಗಲಿದ್ದಾರೆ ಎಂಬ ಬೇಸರದ ಸುದ್ದಿ ಇದೀಗ ಹೊರಬಿದ್ದಿದೆ. ಹೀಗಾಗಿ ಜಡೇಜಾ ಬದಲು ಯಾವ ಆಟಗಾರನನ್ನು ಭಾರತದ ಆಡುವ ಬಳಗದಲ್ಲಿ ಸೇರಿಸಿಕೊಳ್ಳಬೇಕು ಎಂಬ ತಲೆನೋವು ಈ ಬಾರಿಯ ಏಷ್ಯಾಕಪ್ ಮಾತ್ರವಲ್ಲದೆ ಮುಂದಿನ ಸರಣಿ ಹಾಗೂ ಟೂರ್ನಿಗಳಲ್ಲಿಯೂ ಸಹ ಮುಂದುವರಿಯಲಿದೆ.

ಭಾರತ ಮತ್ತು ಪಾಕಿಸ್ತಾನ ಸ್ಕ್ವಾಡ್
ಭಾರತ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಶ್ದೀಪ್ ಸಿಂಗ್, ಅವೇಶ್ ಖಾನ್.
ಮೀಸಲು ಆಟಗಾರರು: ಶ್ರೇಯಸ್ ಅಯ್ಯರ್, ದೀಪಕ್ ಚಹಾರ್.
ರವೀಂದ್ರ ಜಡೇಜಾ ಗಾಯದ ಸಮಸ್ಯೆಯಿಂದಾಗಿ ಏಷ್ಯಾಕಪ್‌ನಿಂದ ಹೊರಬಿದ್ದಿದ್ದು ಅಕ್ಷರ್ ಪಟೇಲ್ ಬದಲಿ ಆಟಗಾರನಾಗಿ ಆಯ್ಕೆಯಾಗಿದ್ದಾರೆ.
ಪಾಕಿಸ್ತಾನ: ಬಾಬರ್ ಆಜಮ್ (ನಾಯಕ), ಶಾದಾಬ್ ಖಾನ್, ಆಸಿಫ್ ಅಲಿ, ಫಖರ್ ಜಮಾನ್, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ನಸೀಮ್ ಶಾ, ಶಹನವಾಜ್ ದಹಾನಿ, ಉಸ್ಮಾನ್ ಖಾದಿರ್, ಮೊಹಮ್ಮದ್ ಹಸನೈನ್, ಹಸನ್ ಅಲಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications