Asia Cup 2022: ಪಂದ್ಯಗಳ ನೇರಪ್ರಸಾರ ಯಾವೆಲ್ಲಾ ಚಾನೆಲ್‌ಗಳಲ್ಲಿ ಲಭ್ಯ? ಮೊಬೈಲ್‌ನಲ್ಲಿ ವೀಕ್ಷಿಸುವುದು ಹೇಗೆ?

ನಾಳೆಯಿಂದ ( ಆಗಸ್ಟ್ 27 ) ಬಹುನಿರೀಕ್ಷಿತ ಏಷ್ಯಾಕಪ್ ಟೂರ್ನಮೆಂಟ್ ಆರಂಭಗೊಳ್ಳುತ್ತಿದೆ. ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ತಂಡಗಳ ನಡುವೆ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸಂಜೆ 7.30ಕ್ಕೆ ಟೂರ್ನಿಯ ಚೊಚ್ಚಲ ಪಂದ್ಯ ನಡೆಯಲಿದೆ.
ಇದು ಗ್ರೂಪ್ 'ಬಿ'ನ ಪ್ರಥಮ ಪಂದ್ಯವಾದರೆ, ಎ ಗುಂಪಿನ ಚೊಚ್ಚಲ ಪಂದ್ಯ ಆಗಸ್ಟ್ 28ರ ಭಾನುವಾರದಂದು ಇದೇ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಜರುಗಲಿದೆ. ಇನ್ನು ಟೂರ್ನಿಯಲ್ಲಿ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ, ಅಫ್ಘಾನಿಸ್ತಾನ ಹಾಗೂ ಇತ್ತೀಚೆಗಷ್ಟೆ ಅರ್ಹತೆ ಪಡೆದುಕೊಂಡ ಹಾಂಗ್‌ಕಾಂಗ್ ಈ 6 ತಂಡಗಳು ಕಣಕ್ಕಿಳಿಯಲಿದ್ದು, ಆಗಸ್ಟ್ 27ರಿಂದ ಸೆಪ್ಟೆಂಬರ್ 11ರವರೆಗೆ ಪಂದ್ಯಗಳು ಜರುಗಲಿವೆ.
ಮುಂದಿನ ಅಕ್ಟೋಬರ್ ತಿಂಗಳಿನಲ್ಲಿ ಪ್ರತಿಷ್ಠಿತ ಐಸಿಸಿ ಟ್ವೆಂಟಿ ವಿಶ್ವಕಪ್ ಟೂರ್ನಿ ನಡೆಯಲಿದ್ದು, ಇದಕ್ಕೂ ಮುನ್ನ ನಡೆಯುತ್ತಿರುವ ಈ ಏಷ್ಯಾಕಪ್ ಸದ್ಯ ಮಿನಿ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಎಂದು ಬಿಂಬಿತವಾಗಿದೆ. ಟೂರ್ನಿಯ ಗ್ರೂಪ್ ಹಂತದ ಪಂದ್ಯಗಳಲ್ಲಿ ಉಭಯ ಗುಂಪುಗಳಲ್ಲಿ ಟಾಪ್ 2 ಸ್ಥಾನಗಳನ್ನು ಪಡೆದುಕೊಳ್ಳಲಿರುವ ತಂಡಗಳು ಸೂಪರ್ 4 ಸುತ್ತಿಗೆ ಪ್ರವೇಶಿಸಲಿದ್ದು, ಇಲ್ಲಿ ಅತಿ ಹೆಚ್ಚು ಪಂದ್ಯ ಗೆಲ್ಲುವ 2 ತಂಡಗಳು ಫೈನಲ್ ಪಂದ್ಯಕ್ಕೆ ಲಗ್ಗೆ ಇಡಲಿವೆ. ಇನ್ನು ಈ ಎಲ್ಲಾ ಪಂದ್ಯಗಳ ನೇರ ಪ್ರಸಾರವನ್ನು ದೂರದರ್ಶನದ ಮೂಲಕ ಹಾಗೂ ಮೊಬೈಲ್ ಮೂಲಕ ವೀಕ್ಷಿಸುವುದು ಹೇಗೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.

ದೂರದರ್ಶನದ ನೇರಪ್ರಸಾರದ ಮಾಹಿತಿ
ಏಷ್ಯಾಕಪ್ ಟೂರ್ನಿಯ ಎಲ್ಲಾ ಪಂದ್ಯಗಳ ನೇರ ಪ್ರಸಾರ ಭಾರತದಲ್ಲಿ ಸ್ಟಾರ್ ಸ್ಪೋರ್ಟ್ ನೆಟ್‌ವರ್ಕ್ ಚಾನೆಲ್‌ನಲ್ಲಿ ಲಭ್ಯವಿರಲಿದೆ. ಸ್ಟಾರ್ ಸ್ಪೋರ್ಟ್ಸ್ 1, ಸ್ಟಾರ್ ಸ್ಪೋರ್ಟ್ಸ್ 1 ಎಚ್‌ಡಿ (ಇಂಗ್ಲಿಷ್), ಸ್ಟಾರ್ ಸ್ಪೋರ್ಟ್ಸ್ 1 ಹಿಂದಿ ಮತ್ತು ಸ್ಟಾರ್ ಸ್ಪೋರ್ಟ್ಸ್ 1 ಹಿಂದಿ ಎಚ್‌ಡಿ (ಹಿಂದಿ) ಈ ಚಾನೆಲ್‌ಗಳಲ್ಲಿ ಏಷ್ಯಾ ಕಪ್ ಪಂದ್ಯಗಳ ನೇರಪ್ರಸಾರ ಲಭ್ಯವಿರಲಿದೆ.

ಒಟಿಟಿ ನೇರಪ್ರಸಾರದ ಮಾಹಿತಿ
ಇನ್ನು ಡಿಸ್ನೆ ಪ್ಲಸ್ ಹಾಟ್‌ಸ್ಟಾರ್ ಒಟಿಟಿ ಅಪ್ಲಿಕೇಶನ್‌ನಲ್ಲಿ ಪಂದ್ಯಗಳ ನೇರಪ್ರಸಾರ ಲಭ್ಯವಿರಲಿದೆ. ಹೀಗಾಗಿ ನಿಮ್ಮ ಮೊಬೈಲ್‌ನಲ್ಲಿ ಹಾಟ್‌ಸ್ಟಾರ್ ಅಪ್ಲಿಕೇಷನ್ ಮೂಲಕ ಪಂದ್ಯಗಳ ನೇರ ಪ್ರಸಾರವನ್ನು ನೋಡಬಹುದಾಗಿದೆ.

ಪಂದ್ಯಗಳ ವೇಳಾಪಟ್ಟಿ
27 ಆಗಸ್ಟ್: ಶ್ರೀಲಂಕಾ vs ಅಫ್ಘಾನಿಸ್ತಾನ (ದುಬೈ)
28 ಆಗಸ್ಟ್: ಭಾರತ vs ಪಾಕಿಸ್ತಾನ (ದುಬೈ)
30 ಆಗಸ್ಟ್: ಬಾಂಗ್ಲಾದೇಶ vs ಅಫ್ಘಾನಿಸ್ತಾನ (ದುಬೈ)
31 ಆಗಸ್ಟ್: ಭಾರತ vs ಹಾಂಗ್‌ಕಾಂಗ್ (ದುಬೈ)
1 ಸೆಪ್ಟೆಂಬರ್: ಶ್ರೀಲಂಕಾ vs ಬಾಂಗ್ಲಾದೇಶ (ದುಬೈ)
2 ಸೆಪ್ಟೆಂಬರ್: ಪಾಕಿಸ್ತಾನ vs ಹಾಂಗ್‌ಕಾಂಗ್ (ಶಾರ್ಜಾ)
3 ಸೆಪ್ಟೆಂಬರ್: B1 vs B2 (ಶಾರ್ಜಾ)
4 ಸೆಪ್ಟೆಂಬರ್: A1 vs A2 (ದುಬೈ)
6 ಸೆಪ್ಟೆಂಬರ್: A1 vs B1 (ದುಬೈ)
7 ಸೆಪ್ಟೆಂಬರ್: A2 vs B2 (ದುಬೈ)
8 ಸೆಪ್ಟೆಂಬರ್: A1 vs B2 (ದುಬೈ)
9 ಸೆಪ್ಟೆಂಬರ್: B1 vs A2 (ದುಬೈ)
11 ಸೆಪ್ಟೆಂಬರ್: ಫೈನಲ್ (ದುಬೈ)
ಟೀಮ್ ಇಂಡಿಯಾ ಏಷ್ಯಾಕಪ್ ಸ್ಕ್ವಾಡ್: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್.ಅಶ್ವಿನ್, ಯುಜ್ವೇಂದ್ರ ಚಹಾಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್ ಮತ್ತು ಅವೇಶ್ ಖಾನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications