Ind vs Afg: ಕೊಹ್ಲಿ ಚೊಚ್ಚಲ ಟಿ20 ಶತಕ, 212 ರನ್ ಕಲೆಹಾಕಿದ ಟೀಂ ಇಂಡಿಯಾ

ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ- ಅಫ್ಘಾನಿಸ್ತಾನ ಏಷ್ಯಾಕಪ್ ಸೂಪರ್ 4 ಪಂದ್ಯದಲ್ಲಿ ಟೀಂ ಇಂಡಿಯಾ ವಿರಾಟ್ ಕೊಹ್ಲಿಯ ಭರ್ಜರಿ ಶತಕದ ನೆರವಿನಿಂದ 212 ರನ್ ಕಲೆಹಾಕಿದ್ದು, ಅಫ್ಘಾನಿಸ್ತಾಕ್ಕೆ 213ರನ್‌ಗಳ ಬೃಹತ್ ಗುರಿ ನೀಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಭರ್ಜರಿ ಆರಂಭ ಪಡೆಯಿತು. ಟೀಂ ಇಂಡಿಯಾ ಪರ ಕೆ.ಎಲ್ ರಾಹುಲ್ ಜೊತೆಗೆ ಓಪನರ್ ಆಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಮೈದಾನದ ಮೂಲೆ ಮೂಲೆಗೆ ಚೆಂಡನ್ನು ಮುಟ್ಟಿಸಿದ್ರು.
ಮೊಹಮ್ಮದ್ ನಬಿ ಬೌಲಿಂಗ್‌ನಲ್ಲಿ 34 ರನ್‌ಗಳಿಸಿದ್ದಾಗ ವಿರಾಟ್ ಕೊಹ್ಲಿಯ ಕ್ಯಾಚ್ ಡ್ರಾಪ್ ಆಗಿದ್ದು ಅಫ್ಘಾನ್ ಪರ ದೊಡ್ಡ ಪ್ರಮಾದವಾಯಿತು. ಇಬ್ರಾಹಿಂ ಜರ್ದಾನ್ ಕ್ಯಾಚ್ ಕೈ ಚೆಲ್ಲಿದ ಪರಿಣಾಮ ವಿರಾಟ್ ಕೊಹ್ಲಿ ಬರೋಬ್ಬರಿ ಎರಡೂವರೆ ವರ್ಷದ ಬಳಿಕ ಅಂತರಾಷ್ಟ್ರೀಯ ಶತಕ ದಾಖಲಿಸಿದರು.
11.2 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 100 ರನ್ ಕಲೆಹಾಕಿದ ಟೀಂ ಇಂಡಿಯಾ, ಈ ಟೂರ್ನಿಯಲ್ಲಿ ಮೊದಲ ಆರಂಭಿಕ ಶತಕದ ಜೊತೆಯಾಟವಾಡಿತು. 36 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ KL ರಾಹುಲ್, ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 17ನೇ ಫಿಫ್ಟಿ ದಾಖಲಿಸಿದರು.
ಕೆ.ಎಲ್ ರಾಹುಲ್ 41 ಎಸೆತಗಳಲ್ಲಿ 62 ರನ್‌ಗಳಿಸಿ ಔಟಾದ ಬಳಿಕ, ಮೊದಲ ಎಸೆತದಲ್ಲಿ ಸಿಕ್ಸರ್ ಸಿಡಿಸಿ, ಎರಡನೇ ಎಸೆತದಲ್ಲಿ ಇನ್‌ಸೈಡ್ ಎಡ್ಜ್ ಆಗಿ ಬೌಲ್ಡ್ ಆದ ಸೂರ್ಯಕುಮಾರ್ ಯಾದವ್ 6 ರನ್‌ಗೆ ಔಟಾದರು.
ಆದ್ರೆ ಪಂದ್ಯದ ಕೊನೆಯವರೆಗೂ ಭಾರತವನ್ನ ಮುನ್ನಡೆಸಿದ ವಿರಾಟ್ ಕೊಹ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಟಿ20 ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಸಿಡಿಸಿದ ವಿರಾಟ್ ಕೊಹ್ಲಿ 53 ಎಸೆತಗಳಲ್ಲಿ ಮೂರಂಕಿ ಗಡಿ ಮುಟ್ಟಿದರು. ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 71ನೇ ಶತಕ ದಾಖಲಿಸಿದ ವಿರಾಟ್ ಕೊಹ್ಲಿ ಚೊಚ್ಚಲ ಟಿ20 ಅಂತರಾಷ್ಟ್ರೀಯ ಶತಕ ನೋಡಿ ಅಭಿಮಾನಿಗಳು ಕುಣಿದು ಕುಪ್ಪಳಿಸಿದರು.
ಅಂತಿಮವಾಗಿ ಭಾರತ ನಿಗದಿತ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 212 ರನ್ ಕಲೆಹಾಕಿದೆ. ಅಫ್ಘಾನಿಸ್ತಾನಕ್ಕೆ 213ರನ್ ಗುರಿ ನೀಡಿದೆ. ವಿರಾಟ್ ಕೊಹ್ಲಿ 61 ಎಸೆತಗಳಲ್ಲಿ ಅಜೇಯ 122 ರನ್ ಕಲೆಹಾಕಿದ್ದಾರೆ. ರಿಷಭ್ ಪಂತ್ 16 ಎಸೆತಗಳಲ್ಲಿ ಅಜೇಯ 20 ರನ್ ಸಿಡಿಸಿದ್ದಾರೆ.
ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್
ಅಫ್ಘಾನಿಸ್ತಾನ ಪ್ಲೇಯಿಂಗ್ ಇಲೆವೆನ್:
ಹಜರತುಲ್ಲಾ ಝಜೈ, ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ (ನಾಯಕ), ಕರೀಮ್ ಜನತ್, ರಶೀದ್ ಖಾನ್, ಅಜ್ಮತುಲ್ಲಾ ಒಮರ್ಜಾಯ್, ಮುಜೀಬ್ ಉರ್ ರಹಮಾನ್, ಫರೀದ್ ಅಹ್ಮದ್ ಮಲಿಕ್, ಫಜಲ್ಹಕ್ ಫಾರೂಕಿ
ಬೆಂಚ್: ಸಮೀವುಲ್ಲಾ ಶಿನ್ವಾರಿ, ಹಶ್ಮತುಲ್ಲಾ ಶಾಹಿದಿ, ಅಫ್ಸರ್ ಝಜೈ, ಉಸ್ಮಾನ್ ಘನಿ, ನವೀನ್-ಉಲ್-ಹಕ್, ನೂರ್ ಅಹ್ಮದ್
ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್:
ಕೆಎಲ್ ರಾಹುಲ್(ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿಕೆಟ್ ಕೀಪರ್), ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ದೀಪಕ್ ಚಾಹರ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್
ಬೆಂಚ್: ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ, ಯುಜವೇಂದ್ರ ಚಹಾಲ್, ರವಿ ಬಿಷ್ಣೋಯಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications