Asia Cup 2022: ಭಾರತ vs ಹಾಂಗ್‌ಕಾಂಗ್ ಟಾಸ್, ಆಡುವ ಬಳಗ; ಪಾಂಡ್ಯಾ ಹೊರಕ್ಕೆ!

ಸದ್ಯ ಯುಎಇಯಲ್ಲಿ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಏಷ್ಯಾಕಪ್ ಟೂರ್ನಿಯ ಗ್ರೂಪ್ ಹಂತದ ನಾಲ್ಕನೇ ಪಂದ್ಯದಲ್ಲಿ ಇಂದು ( ಆಗಸ್ಟ್ 31 ) ಭಾರತ ಮತ್ತು ಹಾಂಗ್ ಕಾಂಗ್ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ.
ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಹಾಂಗ್ ಕಾಂಗ್ ಫೀಲ್ಡಿಂಗ್ ಮಾಡುವ ಆಯ್ಕೆಯನ್ನು ಮಾಡಿಕೊಂಡಿದ್ದು, ತನ್ನ ಎದುರಾಳಿ ಟೀಮ್ ಇಂಡಿಯಾವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.
ಇತ್ತ ಈ ಬಾರಿಯ ಏಷ್ಯಾಕಪ್ ಟೂರ್ನಿಯಲ್ಲಿನ ತನ್ನ ಚೊಚ್ಚಲ ಪಂದ್ಯದಲ್ಲಿ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ರೋಚಕ ಜಯ ಸಾಧಿಸುವುದರ ಮೂಲಕ ಎ ಗುಂಪಿನ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಟೀಮ್ ಇಂಡಿಯಾ ಹಾಂಗ್ ಕಾಂಗ್ ವಿರುದ್ಧದ ಈ ಪಂದ್ಯವನ್ನು ಸಹ ಗೆಲ್ಲುವುದರ ಮೂಲಕ ಸೂಪರ್ 4 ಸುತ್ತಿಗೆ ನೇರವಾಗಿ ಪ್ರವೇಶ ಪಡೆದುಕೊಳ್ಳುವ ಯೋಜನೆಯೊಂದಿಗೆ ಕಣಕ್ಕಿಳಿದಿದೆ.
ಇನ್ನು ಈ ಪಂದ್ಯದಲ್ಲಿ ಕಣಕ್ಕಿಳಿದಿರುವ ಟೀಂ ಇಂಡಿಯಾದ ಆಡುವ ಬಳಗದಲ್ಲಿ ಒಂದು ಪ್ರಮುಖ ಬದಲಾವಣೆಯಾಗಿದ್ದು, ಕಳೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಲಾಗಿದ್ದು, ಪಾಂಡ್ಯ ಬದಲಿಗೆ ರಿಷಭ್ ಪಂತ್ ತಂಡ ಸೇರಿದ್ದಾರೆ.

ಪಾಂಡ್ಯ ಏಕೆ ಆಡುತ್ತಿಲ್ಲ?
ಕಳೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡೂ ವಿಭಾಗಗಳಲ್ಲಿಯೂ ಅಬ್ಬರಿಸಿದ್ದ ಹಾರ್ದಿಕ್ ಪಾಂಡ್ಯ ಹಾಂಗ್ ಕಾಂಗ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದಾರೆ. ಟಾಸ್ ಮುಕ್ತಾಯದ ನಂತರ ಹಾರ್ದಿಕ್ ಪಾಂಡ್ಯ ಏಕೆ ಆಡುತ್ತಿಲ್ಲ ಎಂಬುದರ ಕುರಿತಾಗಿ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾರ್ದಿಕ್ ಪಾಂಡ್ಯ ತಂಡಕ್ಕೆ ಎಷ್ಟು ಮುಖ್ಯ ಎಂಬುದನ್ನು ಅರಿತು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ. ಈ ಮೂಲಕ ಮುಂದಿನ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯರ ಸೇವೆಯನ್ನು ಪಡೆದುಕೊಳ್ಳುವ ಕಾರಣದಿಂದಾಗಿ ಈ ಹಾಂಕಾಂಗ್ ವಿರುದ್ಧದ ಪಂದ್ಯದಿಂದ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಲಾಗಿದೆ.

ಆಡುವ ಬಳಗಗಳು
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ದಿನೇಶ್ ಕಾರ್ತಿಕ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್ ಮತ್ತು ಅರ್ಷದೀಪ್ ಸಿಂಗ್
ಬೆಂಚ್ ದೀಪಕ್ ಹೂಡಾ, ರವಿಚಂದ್ರನ್ ಅಶ್ವಿನ್, ರವಿ ಬಿಷ್ಣೋಯ್, ಹಾರ್ದಿಕ್ ಪಾಂಡ್ಯ
ಹಾಂಗ್ ಕಾಂಗ್ ಆಡುವ ಬಳಗ: ನಿಜಾಕತ್ ಖಾನ್ ( ನಾಯಕ ) ಯಾಸಿಮ್ ಮುರ್ತಾಜಾ, ಬಾಬರ್ ಹಯಾತ್, ಕಿಂಚಿತ್ ಷಾ, ಐಜಾಜ್ ಖಾನ್, ಸ್ಕಾಟ್ ಮೆಕೆಚ್ನಿ (ವಿಕೆಟ್ ಕೀಪರ್), ಜೀಶನ್ ಅಲಿ, ಹರೂನ್ ಅರ್ಷದ್, ಎಹ್ಸಾನ್ ಖಾನ್, ಆಯುಷ್ ಶುಕ್ಲಾ, ಮೊಹಮ್ಮದ್ ಘಜನ್ಫರ್
ಬೆಂಚ್ ಅತೀಕ್ ಇಕ್ಬಾಲ್, ಮೊಹಮ್ಮದ್ ಹುಹ್ಸಾಯ್ ಅಫ್ತಾನಾ ವಹೀದ್, ರಾವ್, ಅಹಾನ್ ತ್ರಿವೇದಿ

ಉಭಯ ತಂಡಗಳ ಏಷ್ಯಾಕಪ್ ಮುಖಾಮುಖಿ
ಭಾರತ ಮತ್ತು ಹಾಂಗ್ ಕಾಂಗ್ ತಂಡಗಳು ಏಷ್ಯಾ ಕಪ್ ಇತಿಹಾಸದಲ್ಲಿ ಕೇವಲ ಒಂದೇ ಒಂದು ಪಂದ್ಯದಲ್ಲಿ ಮಾತ್ರ ಮುಖಾಮುಖಿಯಾಗಿವೆ. ಹೌದು, 2008ರ ಏಷ್ಯಾಕಪ್ ಟೂರ್ನಿಯಲ್ಲಿ ಕ್ವಾಲಿಫೈಯರ್ ಗೆದ್ದು ಅರ್ಹತೆ ಗಿಟ್ಟಿಸಿಕೊಂಡಿದ್ದ ಹಾಂಗ್ ಕಾಂಗ್ ಟೀಮ್ ಇಂಡಿಯಾ ವಿರುದ್ಧ ಸೆಣಸಾಟ ನಡೆಸಿತ್ತು. ಇದು ಉಭಯ ತಂಡಗಳ ನಡುವೆ ನಡೆದಿರುವ ಏಕೈಕ ಏಷ್ಯಾಕಪ್ ಮುಖಾಮುಖಿಯಾಗಿದೆ. 2008ರ ಜೂನ್ 25ರಂದು ಕರಾಚಿಯ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಮ್ ಇಂಡಿಯಾ ಎಂಎಸ್ ಧೋನಿ ಹಾಗೂ ಸುರೇಶ್ ರೈನಾ ಅವರ ಆಕರ್ಷಕ ಶತಕಗಳ ನೆರವಿನಿಂದ 50 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 374 ರನ್ ಕಲೆ ಹಾಕಿ ಎದುರಾಳಿ ಹಾಂಗ್ ಕಾಂಗ್ ತಂಡಕ್ಕೆ ಗೆಲ್ಲಲು ಬರೋಬ್ಬರಿ 375 ರನ್‌ಗಳ ಕಠಿಣ ಗುರಿಯನ್ನು ನೀಡಿತ್ತು. ಅತ್ತ ಈ ಗುರಿಯನ್ನು ಬೆನ್ನಟ್ಟಲು ಮುಂದಾದ ಹಾಂಗ್ ಕಾಂಗ್ ತಂಡವನ್ನು ಪಿಯೂಷ್ ಚಾವ್ಲಾ ಹಾಗೂ ವಿರೇಂದ್ರ ಸೆಹ್ವಾಗ್ ಸ್ಪಿನ್ ದಾಳಿ ಕಟ್ಟಿಹಾಕಿತ್ತು. 36.5 ಓವರ್‌ಗಳಲ್ಲಿ 118 ರನ್ ಕಲೆಹಾಕಿ ಆಲ್ ಔಟ್ ಆಗಿದ್ದ ಹಾಂಗ್ ಕಾಂಗ್ 256 ರನ್‌ಗಳ ಅಂತರದ ಹೀನಾಯ ಸೋಲನ್ನು ಕಂಡಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications