India vs Pakistan Asia Cup 2022: ಹಾರ್ದಿಕ್ ಪಾಂಡ್ಯ ಆರ್ಭಟ: ರೋಚಕ ಸೆಣೆಸಾಟದಲ್ಲಿ ಪಾಕ್ ವಿರುದ್ಧ ಸೇಡು ತೀರಿಸಿಕೊಂಡ ಭಾರತ

ಭಾರತ ಹಾಗೂ ಪಾಕಿಸ್ತಾನ ವಿರುದ್ಧದ ರೋಚಕ ಸೆಣೆಸಾಟದಲ್ಲಿ ಭಾರತ ಅಮೋಘ ಗೆಲುವು ಸಾಧಿಸಿದೆ. ರೋಚಕವಾಗಿ ನಡೆದ ಈ ಕಾದಾಟ ಅಂತಿಮ ಓವರ್ ತನಕವೂ ನಡೆದಿದ್ದು ಅಂತಿಮ ಹಂತದಲ್ಲಿ ಭಾರತ ತಂಡ ಗೆಲುವಿನ ನಗೆ ಬೀರಿದೆ. ವಿಕೆಟ್‌ಗಳ ಅಂತರದಿಂದ ಭಾರತ ತಂಡ ಪಾಕಿಸ್ತಾನಕ್ಕೆ ಸೋಲಿನ ರುಚಿ ತೋರಿಸುವಲ್ಲಿ ಯಶಸ್ವಿಯಾಗಿದೆ.
ಈ ರೋಚಕ ಪಂದ್ಯದಲ್ಲಿ ಭಾರತದ ಪರವಾಗಿ ಹೀರೋ ಆಗಿ ಮೆರೆದಿದ್ದು ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ. ಮೊದಲಿಗೆ ಬೌಲಿಂಗ್‌ನಲ್ಲಿ ಮೂರು ವಿಕೆಟ್ ಪಡೆದು ಪಾಕಿಸ್ತಾನ ತಂಡವನ್ನು ಬ್ಯಾಟಿಂಗ್‌ನಲ್ಲಿ ನಿಯಂತ್ರಿಸಲು ಯಶಸ್ವಿಯಾಗಿದ್ದ ಹಾರ್ದಿಕ್ ಪಾಂಡ್ಯ ನಂತರ ಬ್ಯಾಟಿಂಗ್‌ನಲ್ಲಿಯೂ ಅಮೋಘ ಪ್ರದರ್ಶನ ನೀಡಿ ತಂಡವನ್ನು ಗೆಲುವಿನ ದಡವನ್ನು ತಲುಪಿಸುವಲ್ಲಿ ಯಶಸ್ವಿಯಾದರು. ಅಂತಿಮ ಮೂರು ಎಸೆತಗಳಲ್ಲಿ ಆರು ರನ್‌ಗಳಿಸುವ ಒತ್ತಡದ ಸಂದರ್ಭದಲ್ಲಿ ಸಿಕ್ಸರ್ ಸಿಡಿಸಿದ ಹಾರ್ದಿಕ್ ಪಾಂಡ್ಯ ಗೆಲುವು ಸಾರಿದರು.

ಪಾಕ್ ಬೌಲರ್‌ಗಳ ಹೋರಾಟ
ಪಾಕಿಸ್ತಾನ ನೀಡಿದ 148 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಭಾರತ ತಂಡಕ್ಕೆ ಆರಂಭದಲ್ಲಿಯೇ ಆಘಾತ ನಿಡುವ ಮೂಲಕ ಪಾಕಿಸ್ತಾನ ತಂಡ ಕಠಿಣ ಹೋರಾಟ ನೀಡುವ ಸೂಚನೆಯನ್ನು ಆರಂಭದಲ್ಲಿಯೇ ನೀಡಿತ್ತು. ಕೆಎಲ್ ರಾಹುಲ್ ಇನ್ನಿಂಗ್ಸ್‌ನ ಎರಡನೇ ಎಸೆತದಲ್ಲಿಯೇ ಚೊಚ್ಚಲ ಟಿ20 ಪಂದ್ಯವನ್ನು ಆಡುತ್ತಿರುವ ನಸೀಮ್ ಶಾಗೆ ವಿಕೆಟ್ ಒಪ್ಪಿಸಿದರು. ನಂತರ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾರಿಂದ 49 ರನ್‌ಗಳ ಜೊತೆಯಾಟ ಬಂತು. ಈ ಜೋಡಿಯನ್ನು ನವಾಜ್ ಬೇರ್ಪಡಿಸಿದರು. ಇಬ್ಬರು ದಾಂಡಿಗರು ಕೂಡ ನವಾಜ್‌ಗೆ ವಿಕೆಟ್ ಒಪ್ಪಿಸಿ ಫೆವಿಲಿಯನ್‌ಗೆ ಸೇರಿಕೊಂಡರು. ನಂತರ ಬಂದ ಸೂರ್ಯಕುಮಾರ್ ಯಾದವ್ 18 ರನ್‌ಗಳಿಗೆ ಔಟಾದರು.

ಹಾರ್ದಿಕ್- ಜಡೇಜಾ ಅಮೋಘ ಜೊತೆಯಾಟ
ಇನ್ನು 89 ರನ್‌ಗಳಿಗೆ ನಾಲ್ಕು ವಿಕೆಟ್ ಕಳೆದುಕೊಂಡಿದ್ದಾಗ ಜೊತೆಯಾಗಿದ್ದು ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ. ಮತ್ತೊಂದು ಕುತೂಹಲಕಾರಿ ಸಂಗತಿಯೆಂದರೆ ರವೀಂದ್ರ ಜಡೇಜಾ ಈ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದರು. ಈ ಜೋಡಿ ಅರ್ಧ ಶತಕದ ಜೊತೆಯಾಡಿದ್ದಲ್ಲದೆ ತಂಡವನ್ನು ಗೆಲುವಿನ ಸನಿಹಕ್ಕೆ ತಲುಪಿಸಿದರು. ಬಳಿಕ ಅಂತಿಮ ಹಂತದಲ್ಲಿ ಜಡೇಜಾ ವಿಕೆಟ್ ಕಳೆದುಕೊಂಡರಾದರೂ ಕೊನೆಯ ಓವರ್‌ನಲ್ಲಿ ಹಾರ್ದಿಕ್ ಪಾಂಡ್ಯ ಭಾರತಕ್ಕೆ ಗೆಲುವು ತಂದಿತ್ತರು. ಹಾರ್ದಿಕ್ ಪಾಂಡ್ಯ ಕೇವಲ 17 ಎಸೆತಗಳಲ್ಲಿ 33 ರನ್ ಬಾರಿಸುವ ಮೂಲಕ ಭಾರತದ ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸಿದ್ದಾರೆ.

ಬೌಲಿಂಗ್‌ನಲ್ಲಿ ಭುವಿ, ಪಾಂಡ್ಯ ಮಿಂಚು
ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದ ಪಾಕಿಸ್ತಾನ ತಂಡದ ಮೇಲೆ ಭುವನೇಶ್ವರ್ ಕುಮಾರ್ ನೇತೃತ್ವದ ಬೌಲಿಂಗ್ ವಿಭಾಗ ಆರಂಭದಿಂದಲೇ ಯಶಸ್ಸು ಸಾಧಿಸುತ್ತಾ ಸಾಗಿತು. ಭುವಿ ಮೊದಲಿಗೆ ಬಾಬರ್ ಅಜಂ ವಿಕೆಟ್ ಪಡೆಯುವ ಮೂಲಕ ಆಘಾತ ನೀಡಿದರೆ ನಂತರ ಹಾರ್ದಿಕ್ ಪಾಂಡ್ಯ ಮಧ್ಯಮ ಕ್ರಮಾಂಕದ ಮೇಲೆ ಆಘಾತ ನೀಡಿದರು. ಶಾರ್ಟ್ ಎಸೆತಗಳ ಮೂಲಕ ಪಾಕ್ ದಾಂಡಿಗರ ಮೇಲೆ ನಿಯಂತ್ರಣ ಸಾಧಿಸಿದರು. ಈ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ ನಾಲ್ಕು ವಿಕೆಟ್ ಪಡೆದು ಮಿಂಚಿದರೆ ಹಾರ್ದಿಕ್ ಪಾಂಡ್ಯ ಮೂರು ವಿಕೆಟ್ ಪಡೆದುಕೊಂಡಿದ್ದಾರೆ. ಇನ್ನು ಅರ್ಶದೀಪ್ ಸಿಂಗ್ ಎರಡು ವಿಕೆಟ್ ಹಾಗೂ ಆವೇಶ್ ಖಾನ್ ಒಂದು ವಿಕೆಟ್ ಸಂಪಾದಿಸಿದರು

ಇತ್ತಂಡಗಳ ಆಡುವ ಬಳಗ
ಭಾರತ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದಿನೇಶ್ ಕಾರ್ತಿಕ್ (ವಿಕೆ), ಹಾರ್ದಿಕ್ ಪಾಂಡ್ಯ,
ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್
ಬೆಂಚ್: ರಿಷಬ್ ಪಂತ್, ರವಿಚಂದ್ರನ್ ಅಶ್ವಿನ್, ದೀಪಕ್ ಹೂಡಾ, ರವಿ ಬಿಷ್ಣೋಯ್
ಪಾಕಿಸ್ತಾನ ಆಡುವ ಬಳಗ: ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಫಖರ್ ಜಮಾನ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಆಸಿಫ್ ಅಲಿ, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ನಸೀಮ್ ಶಾ, ಹ್ಯಾರಿಸ್ ರೌಫ್, ಶಹನವಾಜ್ ದಹಾನಿ
ಬೆಂಚ್: ಮೊಹಮ್ಮದ್ ಹಸನೈನ್, ಉಸ್ಮಾನ್ ಖಾದಿರ್, ಹಸನ್ ಅಲಿ, ಹೈದರ್ ಅಲಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications