Asia Cup 2022: 26 ಎಸೆತಕ್ಕೆ 68 ರನ್ ಚಚ್ಚಿದ SKY; ಹಾಂಕಾಂಗ್ ಸೋಲಿಸಿ ಸೂಪರ್ 4 ಪ್ರವೇಶಿಸಿದ ಭಾರತ

ಇಂದು ( ಆಗಸ್ಟ್ 31 ) ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಹಾಂಕಾಂಗ್ ತಂಡಗಳ ನಡುವಿನ ಪಂದ್ಯದಲ್ಲಿ ಟೀಮ್ ಇಂಡಿಯಾ 40 ರನ್‌ಗಳ ಬೃಹತ್ ಜಯವನ್ನು ಸಾಧಿಸುವುದರ ಮೂಲಕ ಈ ಬಾರಿಯ ಏಷ್ಯಾಕಪ್ ಟೂರ್ನಿಯಲ್ಲಿ ತನ್ನ ಗ್ರೂಪ್ ಹಂತದ ಪಂದ್ಯಗಳ ಪಯಣವನ್ನು ಮುಗಿಸಿದೆ. ಹಾಂಕಾಂಗ್ ವಿರುದ್ಧದ ಈ ಗೆಲುವಿನ ಮೂಲಕ ಗ್ರೂಪ್ ಹಂತದಲ್ಲಿನ ತನ್ನ ಎಲ್ಲಾ 2 ಪಂದ್ಯಗಳಲ್ಲಿಯೂ ಜಯ ಸಾಧಿಸಿರುವ ಟೀಮ್ ಇಂಡಿಯಾ ಎ ಗುಂಪಿನ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿದ್ದು, ಸೂಪರ್ 4 ಸುತ್ತಿಗೆ ಲಗ್ಗೆ ಇಟ್ಟಿದೆ.
ನಿನ್ನೆಯಷ್ಟೇ ಬಾಂಗ್ಲಾದೇಶದ ವಿರುದ್ಧ ಅಬ್ಬರದ ಜಯ ಸಾಧಿಸಿದ್ದ ಅಫ್ಘಾನಿಸ್ತಾನ ಬಿ ಗುಂಪಿನಿಂದ ಸೂಪರ್ 4 ಪ್ರವೇಶ ಪಡೆದುಕೊಂಡಿತ್ತು. ಇದೀಗ ಟೀಮ್ ಇಂಡಿಯಾ ಅರ್ಹತೆ ಪಡೆದುಕೊಳ್ಳುವುದರ ಮೂಲಕ ಈ ಬಾರಿಯ ಏಷ್ಯಾಕಪ್ ಟೂರ್ನಿಯಲ್ಲಿ ಅಧಿಕೃತವಾಗಿ ಸೂಪರ್ 4 ಸುತ್ತಿಗೆ ಪ್ರವೇಶಿಸಿದ ಎರಡನೇ ತಂಡವೆನಿಸಿಕೊಂಡಿದೆ.
ಇನ್ನು ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 92 ರನ್ ಕಲೆಹಾಕಿ ಹಾಂಕಾಂಗ್ ತಂಡಕ್ಕೆ ಗೆಲ್ಲಲು 193 ರನ್‌ಗಳ ಕಠಿಣ ಗುರಿ ನೀಡಿತ್ತು. ಅತ್ತ ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾದ ಹಾಂಕಾಂಗ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 152 ರನ್ ಕಲೆ ಹಾಕಿ 40 ರನ್‌ಗಳ ಸೋಲನ್ನು ಕಂಡಿದೆ.

ಭಾರತ ಇನ್ನಿಂಗ್ಸ್, ಅಬ್ಬರಿಸಿದ SKY
ಟೀಮ್ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮ 21 ರನ್ ಕಲೆಹಾಕಿದರೆ, ಕೆಎಲ್ ರಾಹುಲ್ 36 ರನ್ ಬಾರಿಸಿದರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ನಿಧಾನಗತಿಯಲ್ಲಿ ಬ್ಯಾಟ್ ಬೀಸಿದ ವಿರಾಟ್ ಕೊಹ್ಲಿ 44 ಎಸೆತಗಳಲ್ಲಿ ಅಜೇಯ 59 ರನ್ ಬಾರಿಸಿದರು ಹಾಗೂ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಬೌಂಡರಿ ಮೇಲೆ ಬೌಂಡರಿ ಚಚ್ಚಿ ಅಬ್ಬರಿಸಿದ ಸೂರ್ಯಕುಮಾರ್ ಯಾದವ್ 26 ಎಸೆತಗಳಲ್ಲಿ ಅಜೇಯ 68 ರನ್ ಬಾರಿಸಿದರು. ಸೂರ್ಯಕುಮಾರ್ ಯಾದವ್ 6 ಬೌಂಡರಿ ಮತ್ತು 6 ಸಿಕ್ಸರ್ ಸಿಡಿಸಿ ಅಬ್ಬರಿಸಿ ನಿಧಾನಗತಿಯಲ್ಲಿ ಸಾಗುತ್ತಿದ್ದ ಟೀಮ್ ಇಂಡಿಯಾದ ರನ್ ವೇಗವನ್ನು ಹೆಚ್ಚಿಸಿ ಬೃಹತ್ ಮೊತ್ತ ಕಲೆಹಾಕುವಲ್ಲಿ ನೆರವಾದರು.

ಗುರಿ ಬೆನ್ನತ್ತುವಲ್ಲಿ ವಿಫಲವಾದ ಹಾಂಗ್ ಕಾಂಗ್
ಇನ್ನು ಟೀಮ್ ಇಂಡಿಯಾ ನೀಡಿದ್ದ 193 ರನ್‌ಗಳ ಗುರಿಯನ್ನು ಬೆನ್ನಟ್ಟಲು ಯತ್ನಿಸಿದ ಹಾಂಗ್ ಕಾಂಗ್ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ನಿಜಾಕತ್ ಖಾನ್ 10 ರನ್ ಮತ್ತು ಯಸಿಮ್ ಮುರ್ತಾಜಾ 9 ರನ್ ಕಲೆ ಹಾಕಿದರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬಾಬರ್ ಹಯಾತ್ 41 ರನ್, ಕೆ ಡಿ ಶಾ 30 ರನ್, ಐಜಜ್ ಖಾನ್ 14 ರನ್, ಜೀಶನ್ ಅಲಿ ಅಜೇಯ 26 ಮತ್ತು ಸ್ಕಾಟ್ ಮೆಕ್ ಕೆಚ್ನಿ ಅಜೇಯ 16 ರನ್ ಕಲೆ ಹಾಕಿದರು.
ಟೀಮ್ ಇಂಡಿಯಾ ಪರ ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್ ಹಾಗೂ ರವೀಂದ್ರ ಜಡೇಜಾ ತಲಾ ಒಂದೊಂದು ವಿಕೆಟ್ ಪಡೆದರು. ಈ ಪೈಕಿ ಅರ್ಷದೀಪ್ ಸಿಂಗ್ ಮತ್ತು ಅವೇಶ್ ಖಾನ್ ತಮ್ಮ ಪಾಲಿನ ಎಲ್ಲ ಓವರ್ ಬೌಲಿಂಗ್ ಮಾಡಿ ಹೆಚ್ಚು ರನ್ ಬಿಟ್ಟುಕೊಟ್ಟು ಕೆಟ್ಟ ಪ್ರದರ್ಶನ ನೀಡಿದರು. ಅರ್ಷದೀಪ್ ಸಿಂಗ್ 4 ಓವರ್ ಬೌಲಿಂಗ್ ಮಾಡಿ 44 ರನ್ ನೀಡಿದರೆ, ಅವೇಶ್ ಖಾನ್ 4 ಓವರ್ ಬೌಲಿಂಗ್ ಮಾಡಿ 53 ರನ್ ನೀಡಿ ದುಬಾರಿಯಾದರು.

ಆಡುವ ಬಳಗಗಳು
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ದಿನೇಶ್ ಕಾರ್ತಿಕ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್ ಮತ್ತು ಅರ್ಷದೀಪ್ ಸಿಂಗ್
ಬೆಂಚ್ ದೀಪಕ್ ಹೂಡಾ, ರವಿಚಂದ್ರನ್ ಅಶ್ವಿನ್, ರವಿ ಬಿಷ್ಣೋಯ್, ಹಾರ್ದಿಕ್ ಪಾಂಡ್ಯ
ಹಾಂಗ್ ಕಾಂಗ್ ಆಡುವ ಬಳಗ: ನಿಜಾಕತ್ ಖಾನ್ ( ನಾಯಕ ) ಯಾಸಿಮ್ ಮುರ್ತಾಜಾ, ಬಾಬರ್ ಹಯಾತ್, ಕಿಂಚಿತ್ ಷಾ, ಐಜಾಜ್ ಖಾನ್, ಸ್ಕಾಟ್ ಮೆಕೆಚ್ನಿ (ವಿಕೆಟ್ ಕೀಪರ್), ಜೀಶನ್ ಅಲಿ, ಹರೂನ್ ಅರ್ಷದ್, ಎಹ್ಸಾನ್ ಖಾನ್, ಆಯುಷ್ ಶುಕ್ಲಾ, ಮೊಹಮ್ಮದ್ ಘಜನ್ಫರ್
ಬೆಂಚ್ ಅತೀಕ್ ಇಕ್ಬಾಲ್, ಮೊಹಮ್ಮದ್ ಹುಹ್ಸಾಯ್ ಅಫ್ತಾನಾ ವಹೀದ್, ರಾವ್, ಅಹಾನ್ ತ್ರಿವೇದಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications