ಏಷ್ಯಾ ಕಪ್ 2022, ಭಾರತ vs ಹಾಂಕಾಂಗ್: ಮಹತ್ವದ ಮೈಲಿಗಲ್ಲಿನ ಮೇಲೆ ಕಣ್ಣಿಟ್ಟಿದ್ದಾರೆ ಭಾರತದ ಆಟಗಾರರು!

ಈ ಬಾರಿಯ ಏಷ್ಯಾ ಕಪ್‌ನಲ್ಲಿ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ವಿಕೆಟ್‌ಗಳ ಅಂತರದಿಂದ ಗೆಲುವು ಸಾಧಿಸಿರುವ ಭಾರತ ತಂಡ ಇಂದು ಬುಧವಾರ ಹಾಂಕಾಂಗ್ ವಿರುದ್ಧ ಸೆಣೆಸಾಟ ನಡೆಸಲಿದೆ. ದುಬೈನ ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಚುಟಕು ಮಾದರಿಯಲ್ಲಿ ಭಾರತ ಹಾಗೂ ಹಾಂಕಾಂಗ್ ತಂಡಗಳು ಇದೇ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿರುವುದು ಈ ಪಂದ್ಯದ ವಿಶೇಷ.
ಭಾರತ ಮೊದಲ ಪಂದ್ಯವನ್ನು ಭರ್ಜರಿಯಾಗಿ ಗೆದ್ದುಕೊಂಡಿದ್ದು ಸೂಪರ್ 4 ಹಂತದಲ್ಲಿ ಸ್ಥಾನ ಪಡೆಯುವುದು ಖಚಿತವಾಗಿದೆ. ಈ ಪಂದ್ಯದಲ್ಲಿ ಗೆದ್ದು ಅದನ್ನು ದೃಢಪಡಿಸಿಕೊಳ್ಳಬೇಕಿದೆ. ಇನ್ನು ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತದ ಪರವಾಗಿ ಹಾರ್ದಿಕ್ ಪಾಂಡ್ಯ ಆಲ್‌ರೌಂಡರ್ ಪ್ರದರ್ಶನ ನೀಡಿದ್ದು ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರೆ ಭುವನೇಶ್ವರ್ ಕುಮಾರ್ ಬೌಲಿಂಗ್‌ನಲ್ಲಿ ಮಿಂಚಿದ್ದರು. ಇನ್ನು ಆಲ್‌ರೌಂಡರ್ ರವೀಂದ್ರ ಜಡೇಜಾ ಬ್ಯಾಟಿಂಗ್‌ನಲ್ಲಿ ನಿಡಿದ ಪ್ರದರ್ಶನ ಕೂಡ ಪಾಕ್ ವಿರುದ್ಧದ ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸಿತ್ತು.
ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಹಾಂಕಾಂಗ್ ವಿರುದ್ಧವೂ ಇದೇ ಫಾರ್ಮ್ ಮುಂದುವರಿಸುವ ವಿಶ್ವಾಸದಲ್ಲಿದೆ. ಮತ್ತೊಂದೆಡೆ ಅರ್ಹತಾ ಸುತ್ತಿನಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಹಾಂಕಾಂಗ್ ಭಾರತದ ವಿರುದ್ಧದ ಈ ಪಂದ್ಯದಲ್ಲಿ ಕಠಿಣ ಪೈಪೋಟಿ ನೀಡುವ ವಿಶ್ವಾಸದಲ್ಲಿದೆ.
ಇನ್ನು ಈ ಪಂದ್ಯದಲ್ಲಿ ಭಾರತ ಹಾಗೂ ಹಾಂಕಾಂಗ್‌ನ ಕೆಲೆ ಆಟಗಾರರು ಪ್ರಮುಖ ಮೈಲಿಗಲ್ಲುಗಳ ಮೇಲೆ ಕಣ್ಣಿಟ್ಟಿದ್ದಾರೆ. ಆ ಬಗ್ಗೆ ಮಾಹಿತಿಗಳನ್ನು ನೋಡೋಣ.. ಮುಂದೆ ಓದಿ..

ರೋಹಿತ್, ರಾಹುಲ್ ಭುವಿ ಮೈಲಿಗಲ್ಲು
*ಭಾರತದ ನಾಯಕ ರೋಹಿತ್ ಶರ್ಮಾ ಇಂದಿನ ಪಂದ್ಯದಲ್ಲಿ ಕೇವಲ ಒಂದು ರನ್‌ಗಳಿಸಿದರೆ ಅಂತಾರಾಷ್ಟ್ರೀಯ ಟಿ20 ಮಾದರಿಯಲ್ಲಿ ಬೃಹತ್ ಮೈಲಿಗಲ್ಲೊಂದನ್ನು ಸಾಧಿಸಲಿದ್ದಾರೆ. ಈ ಪಂದ್ಯದಲ್ಲಿ ಕೇವಲ ಒಂದು ರನ್‌ಗಳಿಸಿದರೆ ರೋಹಿತ್ ಶರ್ಮಾ 3500 ಅಂತಾರಾಷ್ಟ್ರೀಯ ಟಿ20 ರನ್‌ಗಳನ್ನು ಗಳಿಸಿದಂತಾಗುತ್ತದೆ. ಚುಟುಕು ಮಾದರಿಯಲ್ಲಿ ಈ ಸಾಧನೆ ಮಾಡಿದ ಪ್ರಪ್ರಥಮ ಆಟಗಾರ ಎನಿಸಿಕೊಳ್ಳಲಿದ್ದಾರೆ ರೋಹಿತ್ ಶರ್ಮಾ.
*ಇನ್ನು ಆರಂಭಿಕ ಆಟಗಾರ ಕೆಎಲ್ ರಾಹುಲ್ ಈ ಪಂದ್ಯದಲ್ಲಿ ಕೇವಲ ಒಂದು ಬೌಂಡರಿ ಗಳಿಸಿದರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 600 ಬೌಂಡರಿ ಗಳಿಸಿದಂತಾಗುತ್ತದೆ.
*ಭಾರತದ ವೇಗಿ ಭುವನೇಶ್ವರ್ ಕುಮಾರ್ ಈ ಪಂದ್ಯದಲ್ಲಿ ಎರಡು ಕ್ಯಾಚ್ ಪಡೆದರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 50 ಕ್ಯಾಚ್‌ಗಳನ್ನು ಪೂರ್ಣಗೊಳಿಸಿದಂತಾಗುತ್ತದೆ.

50ನೇ ಸಿಕ್ಸರ್ ಮೇಲೆ ಹಾರ್ದಿಕ್ ಕಣ್ಣು
* ಅಂತಾರಾಷ್ಟ್ರೀಯ ಟಿ20 ಮಾದರಿಯಲ್ಲಿ 50 ಸಿಕ್ಸರ್‌ಗಳ ಮೈಲಿಗಲ್ಲು ತಲುಪಲು ಹಾರ್ದಿಕ್ ಪಾಂಡ್ಯಗೆ ಮೂರು ಸಿಕ್ಸರ್‌ಗಳ ಅಗತ್ಯವಿದೆ.
* ಭಾರತದ ಅನುಭವಿ ಸ್ಪಿನ್ನರ್ ಯುಜುವೇಂದ್ರ ಚಾಹಲ್‌ಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 200 ವಿಕೆಟ್‌ಗಳ ಮೈಲಿಗಲ್ಲು ತಲುಪಲು ಯುಜುವೇಂದ್ರ ಚಹಾಲ್‌ಗೆ ಇನ್ನೂ ಮೂರು ವಿಕೆಟ್‌ಗಳ ಅಗತ್ಯವಿದೆ.
* ಐಜಾಜ್ ಖಾನ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 50 ಬೌಂಡರಿಗಳ ಮೈಲಿಗಲ್ಲು ತಲುಪಲು ನಾಲ್ಕು ಬೌಂಡರಿಗಳನ್ನು ಸಿಡಿಸಬೇಕಿದೆ.

50ನೇ ಪಂದ್ಯದಲ್ಲಿ ಆಡಲಿದ್ದಾರೆ ಇಬ್ಬರು ಆಟಗಾರರು
* ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಅಂತಾರಾಷ್ಟ್ರೀಯ ಟಿ20ಯಲ್ಲಿ 50ನೇ ಇನ್ನಿಂಗ್ಸ್‌ನಲ್ಲಿ ಹಾರ್ದಿಕ್ ಪಾಂಡ್ಯ ಕಣಕ್ಕಿಳಿಯುವಂತಾಗುತ್ತದೆ.
* T20ಐನಲ್ಲಿ ಹಾಂಕಾಂಗ್ ಪರವಾಗಿ 1000 ರನ್ ಗಳಿಸಿದ ಮೊದಲ ಆಟಗಾರ ಎನಿಸಿದಲು ನಿಜಾಕತ್ ಖಾನ್ ಇನ್ನು ಕೇವಲ 22 ರನ್ ಗಳಿಸಬೇಕಾಗಿದೆ.
* 50ನೇ T20I ಇನ್ನಿಂಗ್ಸ್‌ನಲ್ಲಿ ಕಾಣಿಸಿಕೊಳ್ಳಲು ನಿಜಾಕತ್ ಖಾನ್‌ಗೆ ಒಂದು ಇನ್ನಿಂಗ್ಸ್‌ನ ಅಗತ್ಯವಿದೆ.

ಇತ್ತಂಡಗಳ ಸಂಪೂರ್ಣ ಸ್ಕ್ವಾಡ್
ಭಾರತದ ಸ್ಕ್ವಾಡ್: ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಭುವನೇಶ್ವರ್ ಕುಮಾರ್, ಆವೇಶ್ ಖಾನ್, ಯುಜ್ವೇಂದ್ರ ಚಹಾಲ್, ಅರ್ಶ್ದೀಪ್ ಸಿಂಗ್, ದೀಪಕ್ ಹೂಡಾ, ರಿಷಬ್ ಪಂತ್, ರವಿಚಂದ್ರನ್ ಅಶ್ವಿನ್, ರವಿ ಬಿಷ್ಣೋಯ್
ಹಾಂಕಾಂಗ್ ಸ್ಕ್ವಾಡ್: ನಿಜಾಕತ್ ಖಾನ್(ನಾಯಕ), ಯಾಸಿಮ್ ಮುರ್ತಾಜಾ, ಬಾಬರ್ ಹಯಾತ್, ಕಿಂಚಿತ್ ಶಾ, ಐಜಾಜ್ ಖಾನ್, ಸ್ಕಾಟ್ ಮೆಕೆಚ್ನಿ(ವಿಕೆಟ್ ಕೀಪರ್), ಜೀಶನ್ ಅಲಿ, ಹರೂನ್ ಅರ್ಷದ್, ಎಹ್ಸಾನ್ ಖಾನ್, ಮೊಹಮ್ಮದ್ ಘಜನ್ಫರ್, ಆಯುಷ್ ಶುಕ್ಲಾ, ಅತೀಕ್ ಇಕ್ಬಾಲ್, ಮೊಹಮ್ಮದ್ ವಹೀದ್, ವಾಜಿದ್ ಶಾ, ಅಫ್ತಾಬ್ ಹುಸೇನ್, ಧನಂಜಯ್ ರಾವ್, ಅಹಾನ್ ತ್ರಿವೇದಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications