1984ರಿಂದ 2018: ಭಾರತ ಮತ್ತು ಪಾಕ್ ನಡುವೆ ನಡೆದಿರುವ ಎಲ್ಲಾ ಏಷ್ಯಾಕಪ್ ಪಂದ್ಯಗಳ ಫಲಿತಾಂಶಗಳ ಪಟ್ಟಿ

ಕಳೆದ ಬಾರಿಗೆ 2018ರಲ್ಲಿ ನಡೆದಿದ್ದ ಪ್ರತಿಷ್ಠಿತ ಏಷ್ಯಾಕಪ್ ನಂತರ ಇದೀಗ ಟೂರ್ನಿ ಮರಳಿ ಬಂದಿದ್ದು, ಇದೇ 27ರಂದು ನಡೆಯಲಿರುವ ಶ್ರೀಲಂಕಾ ವಿರುದ್ಧ ಅಫ್ಘಾನಿಸ್ತಾನ ತಂಡಗಳ ನಡುವಿನ ಪಂದ್ಯದ ಮೂಲಕ ಈ ಹದಿನೈದನೇ ಆವೃತ್ತಿಯ ಏಷ್ಯಾಕಪ್ ಟೂರ್ನಿ ಆರಂಭಗೊಳ್ಳಲಿದೆ. ಇನ್ನು ಐಸಿಸಿ ಟೂರ್ನಿಗಳನ್ನು ಹೊರತುಪಡಿಸಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಪರಸ್ಪರ ಮುಖಾಮುಖಿಯಾಗಲಿರುವ ಏಕೈಕ ಟೂರ್ನಿ ಎಂಬ ವಿಶೇಷತೆಯನ್ನು ಹೊಂದಿರುವ ಈ ಏಷ್ಯಾ ಕಪ್‌ನ ಈ ಬಾರಿಯ ಆವೃತ್ತಿಯ ಎರಡನೇ ಪಂದ್ಯದಲ್ಲಿ ಭಾರತ ಮತ್ತು ಪಾಕ್ ಪರಸ್ಪರ ಮುಖಾಮುಖಿಯಾಗಲಿದ್ದು, ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ಜರುಗಲಿದೆ.
ಈ ಪಂದ್ಯ ಆಗಸ್ಟ್ 28ರ ಭಾನುವಾರದಂದು ನಡೆಯಲಿದ್ದು, ಪಂದ್ಯ ದೊಡ್ಡ ಮಟ್ಟದ ಕುತೂಹಲವನ್ನು ಹುಟ್ಟುಹಾಕಿದೆ. ಇನ್ನು ಉಭಯ ತಂಡಗಳು ಕಳೆದ ವರ್ಷ ಇದೇ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಕೊನೆಯದಾಗಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಮಣಿಸಿದ ಪಾಕ್ ಅದೇ ಮೊದಲ ಬಾರಿಗೆ ವಿಶ್ವಕಪ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ನಿರ್ಮಿಸಿತ್ತು. ಇನ್ನು ಈ ಬಾರಿ ಏಷ್ಯಾಕಪ್ ಮುಖಾಮುಖಿಯಲ್ಲಿ ಭಾರತ ಗೆದ್ದು ಪ್ರತೀಕಾರ ತೀರಿಸಿಕೊಳ್ಳುವ ಯೋಜನೆಯಲ್ಲಿದೆ.
ಇನ್ನು ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಇಲ್ಲಿಯರೆಗೂ ಏಷ್ಯಾಕಪ್‌ನಲ್ಲಿ ಒಟ್ಟು 14 ಮುಖಾಮುಖಿ ಪಂದ್ಯಗಳು ಜರುಗಿದ್ದು, ಆ ಎಲ್ಲಾ ಪಂದ್ಯಗಳ ಫಲಿತಾಂಶದ ಮಾಹಿತಿ ಈ ಕೆಳಕಂಡಂತಿದೆ.

1984ರಿಂದ 2018ರ ಏಷ್ಯಾಕಪ್‌ನಲ್ಲಿ ಭಾರತ ಮತ್ತು ಪಾಕ್ ಮುಖಾಮುಖಿಯ ಫಲಿತಾಂಶ
1. 1984: ಭಾರತವು ಪಾಕಿಸ್ತಾನವನ್ನು 54 ರನ್‌ಗಳಿಂದ ಸೋಲಿಸಿತು
2. 1988: ಭಾರತವು ಪಾಕಿಸ್ತಾನವನ್ನು 4 ವಿಕೆಟ್‌ಗಳಿಂದ ಸೋಲಿಸಿತು
3. 1995: ಪಾಕಿಸ್ತಾನವು ಭಾರತವನ್ನು 97 ರನ್‌ಗಳಿಂದ ಸೋಲಿಸಿತು
4. 1997: ಯಾವುದೇ ಫಲಿತಾಂಶವಿಲ್ಲ
5. 2000: ಪಾಕಿಸ್ತಾನವು ಭಾರತವನ್ನು 44 ರನ್‌ಗಳಿಂದ ಸೋಲಿಸಿತು
6. 2004: ಮತ್ತೆ ಪಾಕಿಸ್ತಾನವು ಭಾರತವನ್ನು 59 ರನ್‌ಗಳಿಂದ ಸೋಲಿಸಿತು
7. 2008: ಭಾರತವು ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಸೋಲಿಸಿತು
8. 2008: ಪಾಕಿಸ್ತಾನವು ಭಾರತವನ್ನು 8 ವಿಕೆಟ್‌ಗಳಿಂದ ಸೋಲಿಸಿತು
9. 2010: ಭಾರತವು ಪಾಕಿಸ್ತಾನವನ್ನು 3 ವಿಕೆಟ್‌ಗಳಿಂದ ಸೋಲಿಸಿತು
10. 2012: ಭಾರತವು ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಸೋಲಿಸಿತು
11. 2014: ಪಾಕಿಸ್ತಾನವು ಭಾರತವನ್ನು 1 ವಿಕೆಟ್‌ನಿಂದ ಸೋಲಿಸಿತು
12. 2016: ಭಾರತವು ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಸೋಲಿಸಿತು
13. 2018: ಭಾರತವು ಪಾಕಿಸ್ತಾನವನ್ನು 8 ವಿಕೆಟ್‌ಗಳಿಂದ ಸೋಲಿಸಿತು
14. 2018: ಭಾರತವು ಪಾಕಿಸ್ತಾನವನ್ನು 9 ವಿಕೆಟ್‌ಗಳಿಂದ ಸೋಲಿಸಿತು

ಮುಖಾಮುಖಿಯಲ್ಲಿ ಭಾರತದ ಮೇಲುಗೈ
ಇನ್ನು ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಇಲ್ಲಿಯವರೆಗೂ ಒಟ್ಟು 14 ಮುಖಾಮುಖಿ ಪಂದ್ಯಗಳು ನಡೆದಿದ್ದು ಈ ಪೈಕಿ ಭಾರತ 8 ಪಂದ್ಯಗಳಲ್ಲಿ ಗೆದ್ದಿದ್ದು, ಪಾಕಿಸ್ತಾನ 5 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಉಳಿದೊಂದು ಪಂದ್ಯ ಯಾವುದೇ ಫಲಿತಾಂಶವಿಲ್ಲದೇ ಅಂತ್ಯಗೊಂಡಿತ್ತು.

ಈ ಬಾರಿ ಕಣಕ್ಕಿಳಿಯಲಿರುವ ತಂಡಗಳು
ಭಾರತ:ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್.ಅಶ್ವಿನ್, ಯುಜ್ವೇಂದ್ರ ಚಹಾಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್.
ಪಾಕಿಸ್ತಾನ: ಬಾಬರ್ ಆಜಮ್ (ನಾಯಕ), ಶಾದಾಬ್ ಖಾನ್ (ಉಪನಾಯಕ), ಆಸಿಫ್ ಅಲಿ, ಫಖರ್ ಜಮಾನ್, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ವಾಸಿಂ ಜೂನಿಯರ್, ನಸೀಮ್ ಶಾ, ಶಹನವಾಜ್ ಖಾದ್ ದಹಾನಿ ಮತ್ತು ಉಸ್ಮಾನ್ .
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications