ಭಾರತ vs ಪಾಕಿಸ್ತಾನ: ಏಷ್ಯಾ ಕಪ್‌ನಲ್ಲಿ H2H: 1984-2018ರ ಅವಧಿಯ 14 ಪಂದ್ಯಗಳ ಫಲಿತಾಂಶ

ವಿಶ್ವ ಕ್ರಿಕೆಟ್‌ನಲ್ಲಿ ಬದ್ಧ ಎದುರಾಳಿಗಳು ಎನಿಸಿಕೊಂಡಿರುವ ಭಾರತ ಹಾಗೂ ಪಾಕಿಸ್ತಾನ ತಂಡಗಳ ಕದನ ಎಂದರೆ ಕ್ರಿಕೆಟ್ ಅಭಿಮಾನಿಗಳಿಗೆ ಇನ್ನಿಲ್ಲದ ಕುತೂಹಲ. ಭಾರತ ಹಾಗೂ ಪಾಕಿಸ್ತಾನ ತಂಡಗಳ ಅಭಿಮಾನಿಗಳಿಗೆ ಮಾತ್ರವಲ್ಲ ಇತರ ದೇಶಗಳ ಕ್ರಿಕೆಟ್ ಅಭಿಮಾನಿಗಳು ಕೂಡ ಈ ಮುಖಾಮುಖಿಯನ್ನು ಕುತೂಹಲದಿಂದ ಕಾಯುವುದು ಸಾಮಾನ್ಯ. ಇದೀಗ ಈ ಬಾರಿಯ ಏಷ್ಯಾ ಕಪ್‌ನಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಲಿದ್ದು ಕ್ರಿಕೆಟ್ ಅಭಿಮಾನಿಗಳು ಈ ಹಣಾಹಣಿಗಾಗಿ ಎದುರು ನೋಡುತ್ತಿದ್ದಾರೆ.
1984ರಿಂದ ಆರಂಭವಾದ ಏಷ್ಯಾ ಕಪ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಈ ಬಾರಿ 15ನೇ ಸಲ ಮುಖಾಮುಖಿಯಾಗುತ್ತಿದೆ. ಈವರೆಗೆ ಈ ಎರಡು ತಂಡಗಳು ಮುಖಾಮುಖಿಯಾಗಿರುವ 14 ಪಂದ್ಯಗಳ ಫಲಿತಾಂಶದ ಕುತೂಹಲಕಾರಿ ಮಾಹಿತಿ ಹಾಗೂ ಹೆಡ್ ಟು ಹೆಡ್ ಮಾಹಿತಿ ಇಲ್ಲಿದೆ.

ಏಷ್ಯಾಕಪ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳ ಹೆಡ್ ಟು ಹೆಡ್ ಮಾಹಿತಿ
ಭಾರತ ಹಾಗೂ ಪಾಕಿಸ್ತಾನ ತಂಡಗಳು ಏಷ್ಯಾ ಕಪ್‌ನಲ್ಲಿ 1984ರಿಂದ 2018ರ ವರೆಗೆ ಒಟ್ಟು 14 ಬಾರಿ ಮುಖಾಮುಖಿಯಾಗಿದೆ. ಈ ಪೈಕಿ ಒಂದು ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಕಂಡಿದೆ. ಉಳಿದ 13 ಪಂದ್ಯಗಳಲ್ಲಿ ಭಾರತ ತಂಡ ಸ್ಪಷ್ಟ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದ್ದು 8 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಪಾಕಿಸ್ತಾನ ಪಂದ್ಯಗಳಲ್ಲಿ ಮಾತ್ರವೇ ಗೆದ್ದುಕೊಂಡಿದೆ.

14 ಪಂದ್ಯಗಳ ಫಲಿತಾಂಶ ಹೀಗಿದೆ
1. 1984: ಪಾಕಿಸ್ತಾನದ ವಿರುದ್ಧ ಭಾರತಕ್ಕೆ 54 ರನ್‌ಗಳ ಅಂತರದ ಗೆಲುವು
2. 1988: 4 ವಿಕೆಟ್‌ಗಳ ಅಂತರದಿಂದ ಪಾಕಿಸ್ತಾನವನ್ನು ಮಣಿಸಿದ ಭಾರತ
3. 1995: 97 ರನ್‌ಗಳ ಅಂತರದಿಂದ ಭಾರತಕ್ಕೆ ಸೋಲುಣಿಸಿದ ಪಾಕಿಸ್ತಾನ
4. 1997: ಫಲಿತಾಂಶವಿಲ್ಲ
5. 2000: 44 ರನ್‌ಗಳ ಅಂತರದಿಂದ ಭಾರತವನ್ನು ಮಣಿಸಿದ ಪಾಕಿಸ್ತಾನ
6. 2004: 59 ರನ್‌ಗಳ ಅಂತರದಿಂದ ಭಾರತಕ್ಕೆ ಪಾಕಿಸ್ತಾನದ ವಿರುದ್ಧ ಸೋಲು
7. 2008: ಪಾಕಿಸ್ತಾನವನ್ನು 6 ವಿಕೆಟ್‌ಗಳ ಅಂತರದಿಂದ ಸೋಲಿಸಿದ ಭಾರತ
8. 2008: ಭಾರತವನ್ನು 8 ವಿಕೆಟ್‌ಗಳ ಅಂತರದಿಂದ ಸೋಲಿಸಿದ ಪಾಕಿಸ್ತಾನ
9. 2010: ಪಾಕಿಸ್ತಾನವನ್ನು 3 ವಿಕೆಟ್‌ಗಳ ಅಂತರದಿಂದ ಸೋಲಿಸಿದ ಭಾರತ
10. 2012: ಪಾಕಿಸ್ತಾನವನ್ನು 6 ವಿಕೆಟ್‌ಗಳ ಅಂತರದಿಂದ ಸೋಲಿಸಿದ ಭಾರತ
11. 2014: ಭಾರತವನ್ನು 1 ವಿಕೆಟ್ ಅಂತರದಿಂದ ಸೋಲಿಸಿದ ಪಾಕಿಸ್ತಾನ
12. 2016: ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಸೋಲಿಸಿದ ಭಾರತ
13. 2018: ಪಾಕಿಸ್ತಾನವನ್ನು 8 ವಿಕೆಟ್‌ಗಳಿಂದ ಸೋಲಿಸಿದ ಭಾರತ
14. 2018: ಪಾಕಿಸ್ತಾನವನ್ನು 9 ವಿಕೆಟ್‌ಗಳ ಅಂತರದಿಂದ ಸೋಲಿಸಿದ ಭಾರತ

ಭಾರತ ಹಾಗೂ ಪಾಕಿಸ್ತಾನದ ಸ್ಕ್ವಾಡ್‌ಗಳು ಹೀಗಿದೆ
ಭಾರತ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್.ಅಶ್ವಿನ್, ಯುಜ್ವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಆವೇಶ್ ಖಾನ್
ಸ್ಟ್ಯಾಂಡ್‌ಬೈಸ್: ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್ ಮತ್ತು ದೀಪಕ್ ಚಹಾರ್.
ಪಾಕಿಸ್ತಾನ: ಬಾಬರ್ ಅಜಮ್ (ನಾಯಕ), ಶಾದಾಬ್ ಖಾನ್ (ಉಪನಾಯಕ), ಫಖರ್ ಜಮಾನ್, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ವಾಸಿಂ ಜೂನಿಯರ್, ನಸೀಮ್ ಶಾ, ಶಾಹೀನ್ ಅಫ್ರಿದಿ, ಶಹನವಾಜ್ ದಹಾನಿ, ಉಸ್ಮಾನ್ ಖಾದಿರ್.

ನೇರಪ್ರಸಾರದ ಮಾಹಿತಿ
ಏಷ್ಯಾ ಕಪ್ 2022 ಟೂರ್ನಿಯ ಸಂಪೂರ್ಣ ಪ್ರಸಾರದ ಹಕ್ಕನ್ನು ಸ್ಟಾರ್‌ಸ್ಪೋರ್ಟ್ಸ್ ನೆಟ್‌ವರ್ಕ್ ಹೊಂದಿದೆ. ಹೀಗಾಗಿ ಭಾರತ ಹಾಗೂ ಪಾಕಿಸ್ತಾನ ತಂಡಗಳ ಮುಖಾಮುಖಿ ಕೂಡ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಪ್ರಸಾರವಾಗಲಿದೆ. ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ಲೈವ್‌ಸ್ಟ್ರೀಮಿಂಗ್ ಆಗಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications