For Quick Alerts
ALLOW NOTIFICATIONS  
For Daily Alerts
 

ಭಾರತ vs ಪಾಕಿಸ್ತಾನ: ಪಂದ್ಯದ ಸಮಯ, ಪಿಚ್ ರಿಪೋರ್ಟ್, ಸಂಭಾವ್ಯ ಆಡುವ ಬಳಗ

Asia cup 2022: India vs Pakistan, match time, probable XI and pitch Report

ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಸೂಪರ್ 4 ಹಂತದ ಸೆಣೆಸಾಟದ ಆರಂಭಕ್ಕೆ ಕೆಲವೇ ಕ್ಷಣಗಳು ಮಾತ್ರವೇ ಬಾಕಿಯಿದೆ. ಕಳೆದ ವಾರವಷ್ಟೇ ಮುಖಾಮುಖಿಯಾಗಿದ್ದ ಈ ಎರಡು ತಂಡಗಳು ಮತ್ತೆ ಮುಖಾಮುಖಿಯಾಗುತ್ತಿವೆ. ಹೀಗಾಗಿ ಅಭಿಮಾನಿಗಳ ಕಾತುರತೆ ಮತ್ತಷ್ಟು ಹೆಚ್ಚಾಗಿದೆ. ಕಳೆದ ಪಂದ್ಯದಲ್ಲಿ ಪಾಕಿಸ್ತಾನವನ್ನು ಐದು ವಿಕೆಟ್‌ಗಳ ಅಂತರದಿಂದ ಮಣಿಸಿದ್ದ ಭಾರತ ಈ ಪಂದ್ಯದಲ್ಲಿ ಯಾವ ರೀತಿಯ ಪ್ರದರ್ಶನ ನೀಡಲಿದೆ ಎಂಬುದು ಕುತೂಹಲ ಮೂಡಿಸಿದೆ.

ಭಾರತ ಲೀಗ್ ಹಂತದ ಎರಡು ಪಂದ್ಯಗಳಲ್ಲಿಯೂ ಗೆದ್ದು ಸೂಪರ್ 4 ಹಂತಕ್ಕೆ ಕಾಲಿಟ್ಟಿದೆ. ಪಾಕಿಸ್ತಾನ ಹಾಗೂ ಹಾಂಕಾಂಗ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿತ್ತು ಭಾರತ. ಆದರೆ ಪಾಕಿಸ್ತಾನ ಭಾರತದ ವಿರುದ್ಧ ಸೋಲು ಅನುಭವಿಸಿದ್ದರೆ ಹಾಂಕಾಂಗ್ ವಿರುದ್ಧ ಅಮೋಘ ಬೌಲಿಂಗ್ ಪ್ರದರ್ಶನ ನೀಡಿ ದಾಖಲೆಯ ಗೆಲುವು ಸಾಧಿಸುವ ಮೂಲಕ ಸೂಪರ್ 4 ಹಂತದಲ್ಲಿ ಸ್ಥಾನವನ್ನು ಗಿಟ್ಟಿಸಿಕೊಂಡಿದೆ.

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ

ದುಬೈ ಕ್ರಿಕೆಟ್ ಸ್ಟೇಡಿಯಮ್‌ನಲ್ಲಿ ಸಾಮಾನ್ಯವಾಗಿ 160-170ರಷ್ಟು ರನ್‌ಗಳಿಸಿದೆ ಸ್ಪರ್ಧಾತ್ಮಕ ಸ್ಕೋರ್ ಗಳಿಸಿದಂತಾಗುತ್ತದೆ. ಸ್ಪೋಟಕ ಬ್ಯಾಟಿಂಗ್‌ಗೆ ಹೆಚ್ಚು ಅನುಕೂವನ್ನು ಒದಗಿಸುವುದಿಲ್ಲ ಇಲ್ಲಿನ ಪಿಚ್. ಇನ್ನು ನೇರ ಬೌಂಡರಿಗಳು ಚಿಕ್ಕದಾಗಿದ್ದು ಅದರ ಲಾಭವನ್ನು ಬ್ಯಾಟರ್‌ಗಳು ಪಡೆದುಕೊಳ್ಳಬಹುದು. ಇನ್ನು ಸೀಮ್ ಹಾಗೂ ಬೌನ್ಸ್‌ಗೆ ಅನುಕೂಲವಾಗಲಿದ್ದು ಸ್ಪಿನ್ನರ್‌ಗಳಿಗೆ ಕಡಿಮೆ ನೆರವು ದೊರೆಯಲಿದೆ.
ಹವಾಮಾನ ವರದಿ: ಇನ್ನು ಪಂದ್ಯದ ಸಮಯದಲ್ಲಿ ಮಳೆಯಾಗುವ ಯಾವುದೇ ಸಂಭವವಿಲ್ಲ. 35 ಡಿಗ್ರಿ ಉಷ್ಣಾಂಶವಿರಲಿದ್ದು ಬೌಲಿಂಗ್ ನಡೆಸುವ ಸಂದರ್ಭದಲ್ಲಿ ಸವಾಲೆನಿಸಲಿದೆ.

ಪಂದ್ಯದ ಸಮಯ ಹಾಗೂ ನೇರಪ್ರಸಾರ

ಪಂದ್ಯದ ಸಮಯ ಹಾಗೂ ನೇರಪ್ರಸಾರ

ಭಾರತ ಹಾಗೂ ಪಾಕಿಸ್ತಾನ ನಡುವಿನ ಈ ಪಂದ್ಯ ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿದ್ದು ಈ ಪಂದ್ಯ ಭಾರತೀಯ ಕಾಲಮಾನ ಸಂಜೆ 7:30ಕ್ಕೆ ಆರಂಬವಾಗಲಿದೆ. 7 ಗಂಟೆಗೆ ಪಂದ್ಯದ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಟಪೋರ್ಟ್ಸ್‌ನಲ್ಲಿ ಪಂದ್ಯದ ನೇರಪ್ರಸಾರವಿರಲಿದ್ದು ಹಾರ್ಟ್‌ಸ್ಟಾರ್‌ನಲ್ಲಿ ಲೈವ್‌ಸ್ಟ್ರೀಮಿಂಗ್ ಇರಲಿದೆ.

ಸಂಭಾವ್ಯ ಆಡುವ ಬಳಗ ಹೀಗಿದೆ

ಸಂಭಾವ್ಯ ಆಡುವ ಬಳಗ ಹೀಗಿದೆ

ಭಾರತ ಸಂಭಾವ್ಯ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಆವೇಶ್ ಖಾನ್, ಯುಜ್ವೇಂದ್ರ ಚಾಹಲ್, ಅರ್ಶ್ದೀಪ್ ಸಿಂಗ್

ಪಾಕಿಸ್ತಾನ: ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ ©, ಫಖರ್ ಜಮಾನ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಶಾದಾಬ್ ಖಾನ್, ಆಸಿಫ್ ಅಲಿ, ಮೊಹಮ್ಮದ್ ನವಾಜ್, ಹಾರಿಸ್ ರೌಫ್, ಶಾನವಾಜ್ ದಹಾನಿ, ನಸೀಮ್ ಶಾ

ಎರಡು ತಂಡಗಳ ಸ್ಕ್ವಾಡ್ ಹೀಗಿದೆ

ಎರಡು ತಂಡಗಳ ಸ್ಕ್ವಾಡ್ ಹೀಗಿದೆ

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ರಿಷಬ್ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅರ್ಶ್ದೀಪ್ ಸಿಂಗ್, ರವಿ ಬಿಷ್ಣೋಯ್, ದಿನೇಶ್ ಕಾರ್ತಿಕ್, ಅವೇಶ್ ಖಾನ್, ದೀಪಕ್ ಹೂಡಾ
ಪಾಕಿಸ್ತಾನ ತಂಡ: ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಫಖರ್ ಜಮಾನ್, ಖುಷ್ದಿಲ್ ಶಾ, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಆಸಿಫ್ ಅಲಿ, ಮೊಹಮ್ಮದ್ ನವಾಜ್, ಹಾರಿಸ್ ರೌಫ್, ನಸೀಮ್ ಶಾ, ಹಸನ್ ಅಲಿ, ಉಸ್ಮಾನ್ ಖಾದಿರ್, ಮೊಹಮ್ಮದ್ ಹಸ್ನೈನ್, ಹೈದರ್ ಅಲಿ

Story first published: Sunday, September 4, 2022, 10:33 [IST]
Other articles published on Sep 4, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+