ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Asia Cup 2022: ಭಾರತ vs ಪಾಕ್ ಸೂಪರ್‌ 4 ಪಂದ್ಯದ ಟಾಸ್ ವರದಿ; ಭಾರತ ಆಡುವ ಬಳಗದಲ್ಲಿ ಬದಲಾವಣೆ

Asia Cup 2022: India vs Pakistan Super 4 toss report, playing 11 and live score

ಇಂದು ( ಸೆಪ್ಟೆಂಬರ್ 4 ) ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಬಾರಿಯ ಏಷ್ಯಾಕಪ್ ಟೂರ್ನಿಯ ಸೂಪರ್ 4 ಸುತ್ತಿನ ದ್ವಿತೀಯ ಪಂದ್ಯ ಜರುಗುತ್ತಿದೆ. ಈ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದು, ಟಾಸ್ ಗೆದ್ದಿರುವ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಫೀಲ್ಡಿಂಗ್ ಆಯ್ದುಕೊಂಡಿದ್ದು ರೋಹಿತ್ ಶರ್ಮಾ ಬಳಗವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.

 Asia Cup: ಅಂದು ಅರ್ಧಕ್ಕೆ ಬಿಟ್ಟಿದ್ದ ಕೆಲಸ ಪೂರ್ತಿ ಮಾಡ್ತೇನೆ ಎಂದು ಭಾರತಕ್ಕೆ ಎಚ್ಚರಿಕೆ ನೀಡಿದ ಪಾಕ್ ಬೌಲರ್! Asia Cup: ಅಂದು ಅರ್ಧಕ್ಕೆ ಬಿಟ್ಟಿದ್ದ ಕೆಲಸ ಪೂರ್ತಿ ಮಾಡ್ತೇನೆ ಎಂದು ಭಾರತಕ್ಕೆ ಎಚ್ಚರಿಕೆ ನೀಡಿದ ಪಾಕ್ ಬೌಲರ್!

ಇನ್ನು ಈ ಪಂದ್ಯದಲ್ಲಿ ಕಣಕ್ಕಿಳಿದಿರುವ ಟೀಂ ಇಂಡಿಯಾದಲ್ಲಿ ಭಾರಿ ಬದಲಾವಣೆಯಾಗಿದ್ದು, ಏಷ್ಯಾ ಕಪ್ ಟೂರ್ನಿಯಿಂದ ರವೀಂದ್ರ ಜಡೇಜಾ ಹೊರಬಿದ್ದಿರುವ ಕಾರಣ ಜಡೇಜಾ ಸ್ಥಾನಕ್ಕೆ ದೀಪಕ್ ಹೂಡಾ ಆಲ್ ರೌಂಡರ್ ಆಟಗಾರನಾಗಿ ಆಯ್ಕೆಯಾಗಿದ್ದರೆ, ದಿನೇಶ್ ಕಾರ್ತಿಕ್ ಹಾಗೂ ಅವೇಶ್ ಖಾನ್ ಈ ಪಂದ್ಯದಿಂದ ಹೊರ ಬಿದ್ದಿದ್ದು, ರವಿ ಬಿಷ್ಣೋಯಿ ಹಾಗೂ ಹಾರ್ದಿಕ್ ಪಾಂಡ್ಯ ತಂಡದ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ದಿನೇಶ್ ಕಾರ್ತಿಕ್ ಅವರನ್ನು ಈ ಪಂದ್ಯದಿಂದ ಹೊರಗಿಟ್ಟಿರುವುದು ಸದ್ಯ ಅಭಿಮಾನಿಗಳಲ್ಲಿ ಬೇಸರವನ್ನುಂಟು ಮಾಡಿದೆ

ಆಡುವ ಬಳಗಗಳು

ಭಾರತ ಆಡುವ ಬಳಗ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಾಹಲ್, ಅರ್ಷ್ದೀಪ್ ಸಿಂಗ್

ಬೆಂಚ್: ದಿನೇಶ್ ಕಾರ್ತಿಕ್, ಅವೇಶ್ ಖಾನ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್

ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಫಖರ್ ಜಮಾನ್, ಖುಶ್ದಿಲ್ ಶಾ, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಆಸಿಫ್ ಅಲಿ, ಮೊಹಮ್ಮದ್ ನವಾಜ್, ಹಾರಿಸ್ ರೌಫ್, ಮೊಹಮ್ಮದ್ ಹಸ್ನೇನ್, ನಸೀಮ್ ಶಾ

ಬೆಂಚ್: ಉಸ್ಮಾನ್ ಖಾದಿರ್, ಹೈದರ್ ಅಲಿ, ಹಸನ್ ಅಲಿ

ಭಾರತ ಮತ್ತು ಪಾಕಿಸ್ತಾನ ನಡುವಿನ ಸೂಪರ್ ಫೋರ್ ಹಂತದ ಪಂದ್ಯದ ಲೈವ್ ಸ್ಕೋರ್ ಅಪ್‌ಡೇಟ್ ಇಲ್ಲಿದೆ:

1
54721

Story first published: Sunday, September 4, 2022, 19:21 [IST]
Other articles published on Sep 4, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X