Asia Cup 2022 IND vs SL : ಭಾರತ vs ಶ್ರೀಲಂಕಾ: ಪಂದ್ಯದ ಸಮಯ, ಪಿಚ್ ರಿಪೋರ್ಟ್, ಸಂಭಾವ್ಯ ಆಡುವ ಬಳಗ

ಏಷ್ಯಾ ಕಪ್‌ನ ಸೂಪರ್ 4 ಹಂತದ ಪಂದ್ಯಗಳು ನಡೆಯುತ್ತಿದ್ದು ಭಾರತ ಮೊದಲ ಪಂದ್ಯದಲ್ಲಿ ಸೋಲು ಅನುಭವಿಸಿದೆ. ಪಾಕಿಸ್ತಾನದ ವಿರುದ್ಧ ನಡೆದ ಪಂದ್ಯದಲ್ಲಿ ಹಿನ್ನಡೆ ಅನುಭವಿಸಿರುವ ಭಾರತ ಮುಂದಿನ ಎರಡು ಪಂದ್ಯಗಳಲ್ಲಿಯೂ ಗೆಲುವು ಸಾಧಿಸಿದರೆ ಮಾತ್ರವೇ ಫೈನಲ್ ಸ್ಥಾನದ ಮೇಲೆ ಕಣ್ಣಿಡಲು ಸಾಧ್ಯ. ಶ್ರೀಲಂಕಾ ವಿರುದ್ಧ ಮಂಗಳವಾರ ಭಾರತ ಸೆಣೆಸಾಡಲಿದ್ದು ಈ ಕಾರಣದಿಂದಾಗಿ ಹೆಚ್ಚು ಕುತೂಹಲ ಮೂಡಿಸಿದೆ.
ಶ್ರೀಲಂಕಾ ಸೂಪರ್ 4 ಹಂತದ ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡದ ವಿರುದ್ಧ ಭರ್ಜರಿ ಗೆಲುವು ಸಾಧಿಸಲು ಯಶಸ್ವಿಯಾಗಿತ್ತು. ಈ ಮೂಲಕ ಲೀಗ್ ಹಂತದ ಹೀನಾಯ ಸೋಲಿಗೆ ಶ್ರೀಲಂಕಾ ತಿರುಗೇಟು ನೀಡಿದೆ. ಇದೀಗ ಭಾರತಕ್ಕೂ ಕಠಿಣ ಪೈಪೋಟಿ ನೀಡುವ ಹುಮ್ಮಸ್ಸಿನಲ್ಲಿರುವ ಶ್ರೀಲಂಕಾ ಫೈನಲ್ ಹಂತಕ್ಕೇರಲು ಸರ್ವ ಪ್ರಯತ್ನ ನಡೆಸಲಿದೆ.

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ
ದುಬೈ ಕ್ರಿಕೆಟ್ ಸ್ಟೇಡಿಯಮ್‌ನಲ್ಲಿ ಸಾಮಾನ್ಯವಾಗಿ 160-170ರಷ್ಟು ರನ್‌ಗಳಿಸಿದೆ ಸ್ಪರ್ಧಾತ್ಮಕ ಸ್ಕೋರ್ ಗಳಿಸಿದಂತಾಗುತ್ತದೆ. ಆದರೆ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭಾರತ 182 ರನ್‌ಗಳ ಗುರಿ ನೀಡಿಯೂ ಅದನ್ನು ರಕ್ಷಿಸಲು ವಿಫಲವಾಗಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಇನ್ನು ನೇರ ಬೌಂಡರಿಗಳು ಚಿಕ್ಕದಾಗಿದ್ದು ಅದರ ಲಾಭವನ್ನು ಬ್ಯಾಟರ್‌ಗಳು ಪಡೆದುಕೊಳ್ಳಬಹುದು. ಇನ್ನು ಸೀಮ್ ಹಾಗೂ ಬೌನ್ಸ್‌ಗೆ ಅನುಕೂಲವಾಗಲಿದ್ದು ಸ್ಪಿನ್ನರ್‌ಗಳಿಗೆ ಕಡಿಮೆ ನೆರವು ದೊರೆಯಲಿದೆ.
ಹವಾಮಾನ ವರದಿ: ಇನ್ನು ಪಂದ್ಯದ ಸಮಯದಲ್ಲಿ ಮಳೆಯಾಗುವ ಯಾವುದೇ ಸಂಭವವಿಲ್ಲ. 35 ಡಿಗ್ರಿ ಉಷ್ಣಾಂಶವಿರಲಿದ್ದು ಬೌಲಿಂಗ್ ನಡೆಸುವ ಸಂದರ್ಭದಲ್ಲಿ ಸವಾಲೆನಿಸಲಿದೆ.

ಪಂದ್ಯದ ಸಮಯ ಹಾಗೂ ನೇರಪ್ರಸಾರ
ಭಾರತ ಹಾಗೂ ಶ್ರೀಲಂಕಾ ನಡುವಿನ ಈ ಪಂದ್ಯ ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿದ್ದು ಈ ಪಂದ್ಯ ಭಾರತೀಯ ಕಾಲಮಾನ ಸಂಜೆ 7:30ಕ್ಕೆ ಆರಂಭವಾಗಲಿದೆ. 7 ಗಂಟೆಗೆ ಪಂದ್ಯದ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಪಂದ್ಯದ ನೇರಪ್ರಸಾರವಿರಲಿದ್ದು ಹಾರ್ಟ್‌ಸ್ಟಾರ್‌ನಲ್ಲಿ ಲೈವ್‌ಸ್ಟ್ರೀಮಿಂಗ್ ಇರಲಿದೆ.

ಸಂಭಾವ್ಯ ಆಡುವ ಬಳಗ
ಭಾರತ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಾಹಲ್, ಅರ್ಶ್ದೀಪ್ ಸಿಂಗ್
ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಚರಿತ್ ಅಸಲಂಕ, ದನುಷ್ಕ ಗುಣತಿಲಕ, ಭಾನುಕ ರಾಜಪಕ್ಸೆ, ದಸುನ್ ಶನಕ (ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೇಶ್ ತೀಕ್ಷಣ, ಅಸಿತ ಫೆರ್ನಾಂಡೋ, ದಿಲ್ಶನ್ ಮಧುಶಂಕ

ಸಂಪೂರ್ಣ ಸ್ಕ್ವಾಡ್
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ರಿಷಬ್ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯ್, ಯುಜುವೇಂದ್ರ ಚಾಹಲ್, ಅರ್ಷ್‌ದೀಪ್ ಸಿಂಗ್, ದಿನೇಶ್ ಕಾರ್ತಿಕ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್ , ಆವೇಶ್ ಖಾನ್
ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್), ದಸುನ್ ಶನಕ (ನಾಯಕ), ಪಾತುಮ್ ನಿಸ್ಸಾಂಕ, ಚರಿತ್ ಅಸಲಂಕಾ, ದನುಷ್ಕ ಗುಣತಿಲಕ, ಭಾನುಕ ರಾಜಪಕ್ಷೆ, ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ಮಹೇಶ್ ತೀಕ್ಷಣ, ಅಸಿತ ಫೆರ್ನಾಂಡೊ, ದಿಲ್ಶನ್ ಮಧುಶಂಕ, ದಿನೇಶ್ ಚಂಡಿಮಲ್, ಧನಂಜಯ ಡಿ ಸಿಲ್ವಾ, ಜೆಫ್ರಿ ವಾಂಡರ್ಸೆ, ಅಶೇನ್ ಬಂಡಾರ, ಪ್ರವೀಣ್ ಜಯವಿಕ್ರಮ, ನುವಾನಿಡು ಫೆರ್ನಾಂಡೋ, ಪ್ರಮೋದ್ ಮದುಶನ್, ನುವಾನ್ ತುಷಾರ, ಮತೀಶ ಪತಿರಣ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications