ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಏಷ್ಯಾ ಕಪ್: ಶ್ರೀಲಂಕಾ ವಿರುದ್ಧದ ಮಹತ್ವದ ಕದನಕ್ಕೆ ರೋಹಿತ್ ಪಡೆ ಸಜ್ಜು: ತಪ್ಪು ತಿದ್ದಿಕೊಳ್ಳುತ್ತಾ ಭಾರತ!

Asia Cup 2022: India vs Sri Lanka super 4 match Preview, Rohit led team eye on victory

ಏಷ್ಯಾ ಕಪ್ ಟೂರ್ನಿ ನಿರ್ಣಾಯಕ ಘಟ್ಟಕ್ಕೆ ತಲುಪಿದ್ದು ಫೈನಲ್ ಹಂತಕ್ಕೇರಲು ನಾಲ್ಕು ತಂಡಗಳು ತೀವ್ರ ಪೈಪೋಟಿಯಲ್ಲಿ ಹೋರಾಟ ನಡೆಸುತ್ತಿದೆ. ಪಾಕಿಸ್ತಾನದ ವಿರುದ್ಧ ಸೋಲು ಅನುಭವಿಸಿರುವ ಭಾರತ ಹಿನ್ನಡೆ ಅನುಭವಿಸಿದ್ದರೂ ಲೀಗ್ ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನದ ವಿರುದ್ಧ ಭರ್ಜರಿಯಾಗಿ ಗೆದ್ದು ಫೈನಲ್‌ಗೆ ಪ್ರವೇಶ ಪಡೆದುಕೊಳ್ಳಲು ಹವಣಿಸುತ್ತಿದೆ.

ಈ ನಿಒಟ್ಟಿನಲ್ಲಿ ಭಾರತ ತಂಡಕ್ಕೆ ಇಂದು(ಮಂಗಳವಾರ) ನಡೆಯುವ ಶ್ರೀಲಂಕಾ ವಿರುದ್ಧದ ಪಂದ್ತ ಬಹಳ ಮಹತ್ವದ್ದಾಗಿದೆ. ಸೂಪರ್ 4 ಹಂತದ ಮೊದಲ ಪಂದ್ಯದಲ್ಲಿ ಸೋಲು ಅನುಭವಿಸಿರುವ ಹಿನ್ನೆಲೆಯಲ್ಲಿ ಭಾರತ ಇನ್ನುಳಿದ ಎರಡು ಪಂದ್ಯಗಳಲ್ಲಿಯೂ ಗೆದ್ದರೆ ಮಾತ್ರವೇ ಫೈನಲ್‌ಗೇರುವ ಅವಕಾಶವಿದೆ. ಇಂಥಾ ಒತ್ತಡದ ಸಂದರ್ಭದಲ್ಲಿ ಭಾರತ ತಂಡದ ಪ್ರದರ್ಶನ ಹೇಗಿರಲಿದೆ. ಆಡುವ ಬಳಗದಲ್ಲಿ ಯಾವೆಲ್ಲಾ ಬದಲಾವಣೆ ಮಾಡಿಕೊಳ್ಳಬಹುದು? ಪಾಕಿಸ್ತಾನದ ವಿರುದ್ಧ ಮಾಡಿದ ಕೆಲ ಎಡವಟ್ಟುಗಳನ್ನು ಹೇಗೆ ಭಾರತ ಸರಿಪಡಿಸಿಕೊಳ್ಳಬಹುದು ಎಂಬುದು ಕುತೂಹಲ ಮೂಡಿಸಿದೆ.

ಅಫ್ಘಾನ್ ವಿರುದ್ಧ ಗೆದ್ದ ಹಿಮ್ಮಸ್ಸಿನಲ್ಲಿ ಶ್ರೀಲಂಕಾ

ಅಫ್ಘಾನ್ ವಿರುದ್ಧ ಗೆದ್ದ ಹಿಮ್ಮಸ್ಸಿನಲ್ಲಿ ಶ್ರೀಲಂಕಾ

ಇತ್ತ ಶ್ರೀಲಂಕಾ ತಂಡ ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡದ ವಿರುದ್ಧ ಹೀನಾಯ ಸೋಲು ಅನುಭವಿಸು ಮೂಲಕ ಮುಖಭಂಗಕ್ಕೆ ಒಳಗಾಗಿತ್ತು. ಆದರೆ ಸೂಪರ್4 ಹಂತದಲ್ಲಿ ಈ ಸೋಲಿಗೆ ಸೇಡು ತೀರಿಸಿಕೊಳ್ಳಲು ಲಂಕಾ ಪಡೆ ಯಶಸ್ವಿಯಾಗಿದೆ. ಈ ಹಂತದ ಮೊದಲ ಮುಖಾಮುಖಿಯಲ್ಲಿ ಶ್ರೀಲಂಕಾ ಅಫ್ಘಾನಿಸ್ತಾನ ತಂಡವನ್ನು ಎರಡು ವಿಕೆಟ್‌ಗಳ ಅಂತರದ ರೋಚಕ ಗೆಲುವು ಸಾಧಿಸುವ ಮೂಲಕ ಪಂದ್ಯವನ್ನು ಗೆದ್ದುಕೊಂಡಿದೆ. ಈ ಉತ್ಸಾಹದಲ್ಲಿ ಈಗ ಭಾರತ ತಂಡವನ್ನು ಮಣಿಸುವ ಯೋಜನೆಯಲ್ಲಿದೆ ಲಂಕಾ ಪಡೆ.

ಭಾರತ vs ಶ್ರೀಲಂಕಾ ಪಂದ್ಯದ ಸಮಯ ಹಾಗೂ ನೇರಪ್ರಸಾರ

ಭಾರತ vs ಶ್ರೀಲಂಕಾ ಪಂದ್ಯದ ಸಮಯ ಹಾಗೂ ನೇರಪ್ರಸಾರ

ಭಾರತ ಹಾಗೂ ಶ್ರೀಲಂಕಾ ನಡುವಿನ ಈ ಪಂದ್ಯ ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿದ್ದು ಈ ಪಂದ್ಯ ಭಾರತೀಯ ಕಾಲಮಾನ ಸಂಜೆ 7:30ಕ್ಕೆ ಆರಂಭವಾಗಲಿದೆ. 7 ಗಂಟೆಗೆ ಪಂದ್ಯದ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಪಂದ್ಯದ ನೇರಪ್ರಸಾರವಿರಲಿದ್ದು ಹಾರ್ಟ್‌ಸ್ಟಾರ್‌ನಲ್ಲಿ ಲೈವ್‌ಸ್ಟ್ರೀಮಿಂಗ್ ಇರಲಿದೆ

ಸಂಪೂರ್ಣ ಸ್ಕ್ವಾಡ್

ಸಂಪೂರ್ಣ ಸ್ಕ್ವಾಡ್

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ರಿಷಬ್ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯ್, ಯುಜುವೇಂದ್ರ ಚಾಹಲ್, ಅರ್ಷ್‌ದೀಪ್ ಸಿಂಗ್, ದಿನೇಶ್ ಕಾರ್ತಿಕ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್ , ಆವೇಶ್ ಖಾನ್

ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್), ದಸುನ್ ಶನಕ (ನಾಯಕ), ಪಾತುಮ್ ನಿಸ್ಸಾಂಕ, ಚರಿತ್ ಅಸಲಂಕಾ, ದನುಷ್ಕ ಗುಣತಿಲಕ, ಭಾನುಕ ರಾಜಪಕ್ಷೆ, ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ಮಹೇಶ್ ತೀಕ್ಷಣ, ಅಸಿತ ಫೆರ್ನಾಂಡೊ, ದಿಲ್ಶನ್ ಮಧುಶಂಕ, ದಿನೇಶ್ ಚಂಡಿಮಲ್, ಧನಂಜಯ ಡಿ ಸಿಲ್ವಾ, ಜೆಫ್ರಿ ವಾಂಡರ್ಸೆ, ಅಶೇನ್ ಬಂಡಾರ, ಪ್ರವೀಣ್ ಜಯವಿಕ್ರಮ, ನುವಾನಿಡು ಫೆರ್ನಾಂಡೋ, ಪ್ರಮೋದ್ ಮದುಶನ್, ನುವಾನ್ ತುಷಾರ, ಮತೀಶ ಪತಿರಣ

Story first published: Tuesday, September 6, 2022, 9:11 [IST]
Other articles published on Sep 6, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X