Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಏಷ್ಯಾ ಕಪ್ 2022: ಬಲಿಷ್ಠ ಭಾರತಕ್ಕೆ ಇಂದು ಹಾಂಕಾಂಗ್ ಸವಾಲು

Asia cup 2022: India will face Hongkong, eye on super four spot

ಏಷ್ಯಾ ಕಪ್ ಟೂರ್ನಿಯಲ್ಲಿ ಇಂದು ನಾಲ್ಕನೇ ಮುಖಾಮುಖಿ ನಡೆಯುತ್ತಿದ್ದು ಈ ಪಂದ್ಯದಲ್ಲಿ ಟೂರ್ನಿ ಗೆಲ್ಲುವ ನೆಚ್ಚಿನ ತಂಡವಾಗಿರುವ ಹಾಲಿ ಚಾಂಪಿಯನ್ ಭಾರತ ತಂಡಕ್ಕೆ ಹಾಂಕಾಂಗ್ ತಂಡ ಸವಾಲೊಡ್ಡಲಿದೆ. ಅರ್ಹತಾ ಸುತ್ತಿನಲ್ಲಿ ಮೂರಕ್ಕೆ ಮೂರು ಪಂದ್ಯಗಳನ್ನು ಗೆದ್ದುಕೊಂಡು ಈ ಟೂರ್ನಿಗೆ ಅರ್ಹತೆ ಸಂಪಾದಿಸಿರುವ ಹಾಂಕಾಂಗ್ ಭಾರತಕ್ಕೆ ಯಾವ ರೀತಿಯ ಸವಾಲೊಡ್ಡಲಿದೆ ಎಂಬುದು ಕುತೂಹಲ ಮೂಡಿಸಿದೆ.

ಇನ್ನು ಈ ಟೂರ್ನಿ ಮೊದಲ ಪಂದ್ಯದಲ್ಲಿ ಬದ್ಧ ಎದುರಾಳಿ ಪಾಕಿಸ್ತಾನ ತಂಡವನ್ನು ಮಣಿಸಿರುವ ಭಾರತ ತಂಡ ಹಾಂಕಾಂಗ್ ವಿರುದ್ಧದ ಪಂದ್ಯ ಗೆದ್ದು ಮುಂದಿನ ಸುತ್ತಿಗೇರುವ ಉತ್ಸುಕತೆಯಲ್ಲಿದೆ. ಇತ್ತ ಹಾಂಕಾಂಗ್ ಭಾರತಕ್ಕೆ ಕಠಿಣ ಪೈಪೋಟಿ ನೀಡುವ ಆತ್ಮವಿಶ್ವಾಸದಲ್ಲಿದ್ದು ಭಾರತದ ಬಲಿಷ್ಠ ಆಟಗಾರರ ಪಡೆಯ ಸವಾಲಿಗೆ ಯಾವ ರೀತಿಯ ಉತ್ತರ ನೀಡಲಿದೆ ಎಂಬುದು ಪ್ರಶ್ನೆಯಾಗಿದೆ.

ಬದಲಾವಣೆ ಮಾಡಿಕೊಳ್ಳಲಿದೆಯಾ ಭಾರತ

ಬದಲಾವಣೆ ಮಾಡಿಕೊಳ್ಳಲಿದೆಯಾ ಭಾರತ

ಇನ್ನು ಹಾಂಕಾಂಗ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಬದಲಾವನೆ ಮಾಡಿಕೊಳ್ಳಲಿದೆಯಾ ಎಂಬುದು ಕುತೂಹಲ ಮೂಡಿಸಿದೆ. ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಬೆಂಚ್ ಕಾದಿದ್ದ ರಿಷಬ್ ಪಂತ್ ಈ ಪಂದ್ಯದಲ್ಲಿ ಆಡುವ ಬಳಗದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲಿದ್ದಾರೆಯೇ ಎಂಬುದು ಕೂಡ ಪ್ರಶ್ನೆಯಾಗಿದೆ.

ಪಿಚ್ ರಿಪೋರ್ಟ್

ಪಿಚ್ ರಿಪೋರ್ಟ್

ಈ ಪಂದ್ಯ ದುಬೈನಲ್ಲಿ ನಡೆಯಲಿದ್ದು ಮೊದಲ ಎರಡು ಪಂದ್ಯಗಳಂತೆಯೇ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗಕ್ಕೆ ಪೂರಕವಾದ ನೆರವು ನೀಡುವ ಸಾಧ್ಯತೆಯಿದೆ. ಅದರಲ್ಲೂ ವೇಗಿಗಳು ಹೆಚ್ಚು ಪರಿಣಾಮಕಾರಿಯಾಗುವ ಸಾಧ್ಯತೆ ಹೆಚ್ಚಿದೆ. ಈ ಮೈದಾನದಲ್ಲಿ ಮೊದಲ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 146 ಆಗಿದ್ದು ಟಾಸ್ ಗೆದ್ದ ತಂಡ ಬೌಲಿಂಗ್ ಮಾಡುವ ಸಾಧ್ಯತೆಯಿದೆ.

Asia Cup 2022: ರೋಹಿತ್ ಕೊಹ್ಲಿಗಿಂತ ಬೆಸ್ಟ್ ಕ್ಯಾಪ್ಟನ್ ಆಗಲು ಇನ್ನೊಂದು ಪಂದ್ಯ ಸಾಕು!

ಸಂಭಾವ್ಯ ಪ್ಲೇಯಿಂಗ್ XI

ಸಂಭಾವ್ಯ ಪ್ಲೇಯಿಂಗ್ XI

ಭಾರತ: ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಎಸ್‌ಎ ಯಾದವ್, ಎಚ್‌ಎಚ್ ಪಾಂಡ್ಯ, ಆರ್‌ಎ ಜಡೇಜಾ, ದಿನೇಶ್ ಕಾರ್ತಿಕ್, ಬಿ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಯುಜ್ವೇಂದ್ರ ಚಹಾಲ್
ಹಾಂಕಾಂಗ್: ನಿಜಾಕತ್ ಖಾನ್, ಬಾಬರ್ ಹಯಾತ್, ಯಾಸ್ಮಿನ್ ಮುರ್ತಾಜಾ, ಕಿಂಚಿತ್ ಶಾ, ಸ್ಕಾಟ್ ಮೆಕೆಚ್ನಿ (ವಿಕೆಟ್ ಕೀಪರ್), ಹರೂನ್ ಅರ್ಷದ್, ಐಜಾಜ್ ಖಾನ್, ಜೀಶನ್ ಅಲಿ, ಎಹ್ಸಾನ್ ಖಾನ್, ಆಯುಷ್ ಶುಕ್ಲಾ, ಮೊಹಮ್ಮದ್ ಘಜನ್ಫರ್

ಇತ್ತಂಡಗಳ ಸಂಪೂರ್ಣ ಸ್ಕ್ವಾಡ್

ಇತ್ತಂಡಗಳ ಸಂಪೂರ್ಣ ಸ್ಕ್ವಾಡ್

ಭಾರತದ ಸ್ಕ್ವಾಡ್: ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಭುವನೇಶ್ವರ್ ಕುಮಾರ್, ಆವೇಶ್ ಖಾನ್, ಯುಜ್ವೇಂದ್ರ ಚಹಾಲ್, ಅರ್ಶ್ದೀಪ್ ಸಿಂಗ್, ದೀಪಕ್ ಹೂಡಾ, ರಿಷಬ್ ಪಂತ್, ರವಿಚಂದ್ರನ್ ಅಶ್ವಿನ್, ರವಿ ಬಿಷ್ಣೋಯ್

ಹಾಂಕಾಂಗ್ ಸ್ಕ್ವಾಡ್: ನಿಜಾಕತ್ ಖಾನ್(ನಾಯಕ), ಯಾಸಿಮ್ ಮುರ್ತಾಜಾ, ಬಾಬರ್ ಹಯಾತ್, ಕಿಂಚಿತ್ ಶಾ, ಐಜಾಜ್ ಖಾನ್, ಸ್ಕಾಟ್ ಮೆಕೆಚ್ನಿ(ವಿಕೆಟ್ ಕೀಪರ್), ಜೀಶನ್ ಅಲಿ, ಹರೂನ್ ಅರ್ಷದ್, ಎಹ್ಸಾನ್ ಖಾನ್, ಮೊಹಮ್ಮದ್ ಘಜನ್ಫರ್, ಆಯುಷ್ ಶುಕ್ಲಾ, ಅತೀಕ್ ಇಕ್ಬಾಲ್, ಮೊಹಮ್ಮದ್ ವಹೀದ್, ವಾಜಿದ್ ಶಾ, ಅಫ್ತಾಬ್ ಹುಸೇನ್, ಧನಂಜಯ್ ರಾವ್, ಅಹಾನ್ ತ್ರಿವೇದಿ

Story first published: Wednesday, August 31, 2022, 10:35 [IST]
Other articles published on Aug 31, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+