ಏಷ್ಯಾ ಕಪ್ 2022: ಬಾಬರ್ ಅಜಂ ಹಿಂದಿಕ್ಕಿ ನಂಬರ್ 1 ಸ್ಥಾನದ ಮೇಲೆ ಸೂರ್ಯಕುಮಾರ್ ಕಣ್ಣು

ಏಷ್ಯಾ ಕಪ್ ಟೂರ್ನಿಯ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಕ್ರಿಕೆಟ್‌ನಲ್ಲಿ ಏಷ್ಯಾ ರಾಷ್ಟ್ರಗಳ ಪೈಕಿ ಪ್ರಭುತ್ವ ಸಾಧಿಸಲು ಈ ಟೂರ್ನಿಯಲ್ಲಿ ಎಲ್ಲಾ ತಂಡಗಳು ಸರ್ವ ಪ್ರಯತ್ನವನ್ನು ನಡೆಸಲಿದೆ. ಈ ಸಂದರ್ಭದಲ್ಲಿ ಚುಟುಕು ಕ್ರಿಕೆಟ್‌ನ ಬ್ಯಾಟಿಂಗ್ ಶ್ರೇಯಾಂಕಪಟ್ಟಿಯಲ್ಲಿ ದೊಡ್ಡ ಮೈಲಿಗಲ್ಲು ಸಾಧಿಸುವ ಅವಕಾಶ ಭಾರತೀಯ ಆಟಗಾರನಿಗೆ ಇದೆ.
ಇತ್ತೀಚಿನ ದಿನಗಳಲ್ಲಿ ಅದ್ಭುತ ಪ್ರದರ್ಶನ ನೀಡುತ್ತಾ ಮಿಂಚುತ್ತಿರುವ ಸೂರ್ಯಕುಮಾರ್ ಯಾದವ್ ಏಷ್ಯಾ ಕಪ್‌ನಲ್ಲಿಯೂ ಭಾರತದ ಪರವಾಗಿ ಮಿಂಚುವ ವಿಶ್ವಾಸ ಹೊಂದಿದ್ದಾರೆ. ಇದೇ ಸಂದರ್ಭದಲ್ಲಿ ಸೂರ್ಯಕುಮಾರ್ ಯಾದವ್‌ಗೆ ಐಸಿಸಿ ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆಯುವ ಅವಕಾಶವೂ ಇದೆ. ಸದ್ಯ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ಮೊದಲ ಸ್ಥಾನದಲ್ಲಿದ್ದು ಎರಡನೇ ಸ್ಥಾನದಲ್ಲಿ ಸೂರ್ಯಕುಮಾರ್ ಇದ್ದಾರೆ.

ಚುಟುಕು ಕ್ರಿಕೆಟ್‌ನಲ್ಲಿ ಶತಕ ಬಾರಿಸಿರುವ ಆಟಗಾರ
ಈ ವರ್ಷಾರಂಭದಲ್ಲಿ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್‌ನಲ್ಲಿ ಶತಕವನ್ನು ಸಿಡಿಸಿದ ಐದನೇ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ರೋಹಿತ್ ಶರ್ಮಾ, ಕೆಎಲ್ ರಾಹುಲ್, ಸುರೇಶ್ ರೈನಾ, ದೀಪಕ್ ಹೂಡಾ ಹಾಗೂ ಹರ್ಮನ್‌ಪ್ರೀತ್ ಕೌರ್ ಈ ಸಾಧನೆ ಮಾಡಿದ್ದಾರೆ. ಕಳೆದ ಇಂಗ್ಲೆಂಡ್ ಪ್ರವಾಸದಲ್ಲಿ ನಾಟಿಂಗ್‌ಹ್ಯಾಮ್‌ನಲ್ಲಿ ನಡೆದ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಸೂರ್ಯಕುಮಾರ್ ಯಾದವ್ ಈ ಸಾಧನೆ ಮಾಡಿದ್ದಾರೆ.

ಏಷ್ಯಾ ಕಪ್‌ನಲ್ಲಿಯೇ ನಂಬರ್ 1 ಪಟ್ಟಕ್ಕೇರಲಿದ್ದಾರಾ ಸೂರ್ಯ
2021ರಲ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಸೂರ್ಯಕುಮಾರ್ ಯಾದವ್ ನಿರಂತರವಾಗಿ ಅದ್ಭುತ ಪ್ರದರ್ಶನ ನೀಡಿಕೊಂಡು ಬಂದಿದ್ದಾರೆ. ಕಳೆದ ವರ್ಷ ಯುಎಇನಲ್ಲಿ ನಡೆ ವಿಶ್ವಕಪ್‌ನಲ್ಲಿಯೂ ಭಾರತ ತಂಡದ ಪರವಾಗಿ ಕಣಕ್ಕಿಳಿದಿದ್ದರು ಸೂರ್ಯಕುಮಾರ್ ಯಾದವ್. ಇದೀಗ ಏಷ್ಯಾ ಕಪ್‌ನಲ್ಲಿಯೂ ಆಡುವ ಅವಕಾಶ ಗಿಟ್ಟಿಸಿಕೊಂಡಿದ್ದು ಐಸಿಸಿ ಶ್ರೇಯಾಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರುವ ಅವಕಾಶ ಪಡೆದುಕೊಂಡಿದ್ದಾರೆ. ಅಗ್ರಸ್ಥಾನದಲ್ಲಿರುವ ಪಾಕಿಸ್ತಾನದ ನಾಯಕ ಬಾಬರ್ ಅಜಂಗಿಂತ ಕೆಲವೇ ಅಂಕಗಳಷ್ಟು ಹಿಂದಿರುವ ಸೂರ್ಯಕುಮಾರ್ ಯಾದವ್ ಅತ್ಯುತ್ತಮ ಪ್ರದರ್ಶನವನ್ನು ನೀಡಿದರೆ ಪ್ರತಿಷ್ಠಿತ ಟೂರ್ನಿಯಲ್ಲಿಯೇ ಮಹತ್ವದ ಮೈಲಿಗಲ್ಲು ಸಾಧಿಸುವ ಅವಕಾಶವಿದೆ.

ಭಾನುವಾರ ನಡೆಯಲಿದೆ ಭಾರತ ಪಾಕ್ ಕದನ
ಇನ್ನು ಏಷ್ಯಾ ಕಪ್ ಟೂರ್ನಿ ಶನಿವಾರ ಆರಂಭವಾಗಲಿದ್ದು ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ ತಂಡಗಳ ಮುಖಾಮುಖಿಯೊಂದಿಗೆ ಸರಣಿಗೆ ಚಾಲನೆ ದೊರೆಯಲಿದೆ. ಭಾನುವಾರ ಈ ಟೂರ್ನಿಯ ಬಹುನಿರೀಕ್ಷಿತ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಪಂದ್ಯ ನಡೆಯಲಿದ್ದು ಈ ಮುಖಾಮುಖಿ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಕಳೆದ ವರ್ಷ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ಭಾರತವನ್ನು ಸೋಲಿಸಿದ್ದು ಈ ಬಾರಿಯ ಏಷ್ಯಾ ಕಪ್‌ನಲ್ಲಿ ಆ ಸೋಲಿಗೆ ಸೇಡು ತೀರಿಸಿಕೊಳ್ಳುತ್ತಾ ಎಂಬುದು ಕುತೂಹಲ ಮೂಡಿಸಿದೆ.

ಆಡುವ ಬಳಗಗಳು ಹೀಗಿದೆ
ಭಾರತ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್,
ಪಾಕಿಸ್ತಾನ್: ಬಾಬರ್ ಅಜಮ್ (ನಾಯಕ), ಶಾದಾಬ್ ಖಾನ್, ಆಸಿಫ್ ಅಲಿ, ಫಖರ್ ಜಮಾನ್, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ಶಹನವಾಜ್ ದಹಾನಿ, ಉಸ್ಮಾನ್ ಖಾದಿರ್, ಮೊಹಮ್ಮದ್ ಹಸ್ನೈನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications