ಕಳೆದ ಬಾರಿಯಂತಿಲ್ಲ ಭಾರತ ತಂಡ: ಏಷ್ಯಾ ಕಪ್‌ಗೆ ಮುನ್ನ ಎಚ್ಚರಿಕೆ ಸಂದೇಶ ನೀಡಿದ ನಾಯಕ ರೋಹಿತ್

ಏಷ್ಯಾ ಕಪ್‌ಗೆ ದಿನಗಣನೆ ಆರಂಭವಾಗಿದ್ದು ಈ ಸಂದರ್ಭದಲ್ಲಿ ಟೀಮ್ ಇಂಡಿಯಾದ ಕಾಯಂ ನಾಯಕ ರೋಹಿತ್ ಶರ್ಮಾ ಪ್ರತಿಕ್ರಿಯೆ ನೀಡಿದ್ದಾರೆ. ಮುಂಬೈನಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ರೋಹಿತ್ ಶರ್ಮಾ ಈ ಬಾರಿ ಟೀಮ್ ಇಂಡಿಯಾ ಟಿ20 ಮಾದರಿಯಲ್ಲಿ ಭಿನ್ನ ರೀತಿಯ ಆಟವನ್ನು ಅಳವಡಿಸಿಕೊಂಡಿದೆ ಎಂದಿದ್ದಾರೆ.

ಕಳೆದ ವರ್ಷ ಯುಎಇನಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಭಾರತ ಲೀಗ್ ಹಂತದಲ್ಲಿ ಪಾಕಿಸ್ತಾನದ ವಿರುದ್ಧ ಸೋಲು ಅನುಭವಿಸಿತ್ತು. ಈ ಸೋಲಿನ ಕಾರಣದಿಂದಾಗಿ ಭಾರತ ತಂಡ ಲೀಗ್ ಹಂತದಿಂದಲೇ ಹೊರಬಿದ್ದಿತ್ತು. ಮುಂಬೈನಲ್ಲಿ ಮಾತನಾಡಿದ ರೋಹಿತ್ ಶರ್ಮಾ ಕಳೆದ ವರ್ಷ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಫಲಿತಾಂಶ ನಮ್ಮ ಪರವಾಗಿ ಬಂದಿರಲಿಲ್ಲ. ಆದರೆ ಈ ಬಾರಿ ನಾವು ಭಿನ್ನ ರೀತಿ ಕ್ರಿಕೆಟ್ ಆಡಲಿದ್ದೇವೆ ಎಂದಿದ್ದಾರೆ ರೋಹಿತ್ ಶರ್ಮಾ.

PAK vs NED: ನೆದರ್ಲೆಂಡ್ಸ್‌ ವಿರುದ್ಧ ವಿಶ್ವದಾಖಲೆ ಮಾಡಿದ ಬಾಬರ್ ಅಜಮ್ಳೆದ ಬಾರಿಯಂತಿಲ್ಲ ಭಾರತ ತಂಡPAK vs NED: ನೆದರ್ಲೆಂಡ್ಸ್‌ ವಿರುದ್ಧ ವಿಶ್ವದಾಖಲೆ ಮಾಡಿದ ಬಾಬರ್ ಅಜಮ್ಳೆದ ಬಾರಿಯಂತಿಲ್ಲ ಭಾರತ ತಂಡ

10 ವಿಕೆಟ್‌ಗಳ ಅಂತರದಿಂದ ಸೋತಿದ್ದ ಭಾರತ

10 ವಿಕೆಟ್‌ಗಳ ಅಂತರದಿಂದ ಸೋತಿದ್ದ ಭಾರತ

ಟೀಮ್ ಇಂಡಿಯಾ ಕಳೆದ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭಾರೀ ಅಂತರದ ಸೋಲು ಅನುಭವಿಸಿತ್ತು. ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡವನ್ನು ಪಾಕಿಸ್ತಾನ 10 ವಿಕೆಟ್‌ಗಳ ಅಂತರದಿಂದ ಮಣಿಸಿತ್ತು. ಭಾರತದ ಅಗ್ರ ಕ್ರಮಾಂಕ ವೈಫಲ್ಯ ಅನುಭವಿಸಿದ ಕಾರಣದಿಂದಾಗಿ 151 ರನ್‌ಗಳನ್ನಷ್ಟೇ ಗಳಿಸಲು ಸಾಧ್ಯವಾಗಿತ್ತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧ ಶತಕಗಳಿಸಿದ್ದರೂ ಪಾಕಿಸ್ತಾನದ ವಿರುದ್ಧ ಈ ಸ್ಕೋರ್ ಸಾಕಾಗಿರಲಿಲ್ಲ. ಬಾಬರ್ ಅಜಂ ಹಾಗೂ ಮೊಹಮ್ಮದ್ ರಿಜ್ವಾನ್ 17.5 ಓವರ್‌ಗಳಲ್ಲಿ ಈ ಗುರಿ ಬೆನ್ನಟ್ಟುವಲ್ಲಿ ಯಶಸ್ವಿಯಾಗಿದ್ದರು.

ಸಾಕಷ್ಟು ಬದಲಾವಣೆಯಾಗಿದೆ ಎಂದ ರೋಹಿತ್

ಸಾಕಷ್ಟು ಬದಲಾವಣೆಯಾಗಿದೆ ಎಂದ ರೋಹಿತ್

ಮುಂಬೈನಲ್ಲಿ ಖಾಸಗಿ ಪ್ರಚಾರ ಕಾರ್ಯಕ್ರಮವೊಂದರಲ್ಲಿ ರೋಹಿತ್ ಶರ್ಮಾ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಅವರು "ಏಷ್ಯಾ ಕಪ್ ಸುದೀರ್ಘ ಸಮಯದ ಬಳಿಕ ನಡೆಯುತ್ತಿದೆ. ಆದರೆ ನಾವು ಪಾಕಿಸ್ತಾನ ತಂಡವನ್ನು ಕಲೆದ ವರ್ಷ ದುಬೈನಲ್ಲಿ ಎದುರಿಸಿದ್ದೆವು. ಆದರೆ ಅಂದು ಫಲಿತಾಂಶ ನಮ್ಮ ಪರವಾಗಿ ಬಂದಿರಲಿಲ್ಲ. ಆದರೆ ಏಷ್ಯಾ ಕಪ್ ಈಗ ಭಿನ್ನವಾಗಿದೆ. ತಮಡ ಈಗ ಭಿನ್ನವಾಗಿ ಆಡುತ್ತಿದ್ದು ವಿಭಿನ್ನವಾದ ಸಿದ್ಧತೆಯನ್ನು ನಡೆಸಿದೆ. ಅದಾದ ಬಳಿಕ ಸಾಕಷ್ಟು ಬದಲಾವಣೆಗಳು ಆಗಿದೆ" ಎಂದಿದ್ದಾರೆ ರೋಹಿತ್ ಶರ್ಮಾ.

ಕಳೆದ ವಿಶ್ವಕಪ್ ಬಳಿಕ ಭರ್ಜರಿ ಪ್ರದರ್ಶನ

ಕಳೆದ ವಿಶ್ವಕಪ್ ಬಳಿಕ ಭರ್ಜರಿ ಪ್ರದರ್ಶನ

ಭಾರತ ತಂಡ ಕಳೆದ ವಿಶ್ವಕಪ್‌ನಲ್ಲಿ ಆಘಾತಕಾರಿ ಸೋಲು ಅನುಭವಿಸಿದ ಬಳಿಕ ಅದ್ಭುತ ಪ್ರದರ್ಶನ ನೀಡುತ್ತಾ ಬಂದಿದೆ. ಈ ಅವಧಿಯಲ್ಲಿ ಭಾರತ 7 ಟಿ20 ವಿಶ್ವಕಪ್‌ಗಳನ್ನು ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಆದರೆ ಕೇವಲ ನಾಲ್ಕು ಪಂದ್ಯಗಳಲ್ಲಿ ಮಾತ್ರವೇ ಭಾರತ ಸೋಲು ಅನುಭವಿಸಿದೆ. ಹೀಗಾಗಿ ಭಾರತ ತಂಡ ಸದ್ಯ ಸಾಕಷ್ಟು ಆತ್ಮವಿಶ್ವಾಸದಿಂದ ಇದ್ದು ಏಷ್ಯಾ ಕಪ್‌ಗೆ ಸರ್ವ ಸನ್ನಧವಾಗಿದೆ.

ಏಷ್ಯಾ ಕಪ್‌ಗೆ ಘೋಷಣೆಯಾಗಿದೆ ಭಾರತ ತಂಡ

ಏಷ್ಯಾ ಕಪ್‌ಗೆ ಘೋಷಣೆಯಾಗಿದೆ ಭಾರತ ತಂಡ

ಇನ್ನು ಈ ಬಾರಿಯ ಏಷ್ಯಾ ಕಪ್‌ಗೆ ಭಾರತ ತಂಡವನ್ನು ಈಗಾಗಲೇ ಘೋಷಣೆ ಮಾಡಲಾಗಿದೆ. ಗಾಯದ ಕಾರಣದಿಂದಾಗಿ ಜಸ್ಪ್ರೀತ್ ಬೂಮ್ರಾ ಹಾಗೂ ಹರ್ಷಲ್ ಪಟೇಲ್ ಈ ಪ್ರಮುಖ ಟೂರ್ನಿಯಿಂದ ಹೊರಗುಳಿಯಲಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಈ ಟೂರ್ನಿಯ ಮೂಲಕ ಕಮ್‌ಬ್ಯಾಕ್ ಮಾಡಿದ್ದಾರೆ.

ಸ್ಕ್ವಾಡ್ ಹೀಗಿದೆ: ಏಷ್ಯಾಕಪ್ ಟೂರ್ನಿಗೆ ಪ್ರಕಟವಾದ ಭಾರತ ತಂಡ ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಯುಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Wednesday, August 17, 2022, 22:05 [IST]
Other articles published on Aug 17, 2022

Latest Videos

  + More
  POLLS
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Yes No
  Settings X