ಭಾರತ vs ಪಾಕಿಸ್ತಾನ: ಟಾಸ್ ಗೆದ್ದ ಭಾರತ: ಆಡುವ ಬಳಗದಲ್ಲಿ ಯಾರಿಗೆ ಸ್ಥಾನ? Live ಸ್ಕೋರ್

ಏಷ್ಯಾ ಕಪ್‌ನ ಎರಡನೇ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದೆ. ಈ ರೋಮಾಂಚಕಾರಿ ಪಂದ್ಯದಲ್ಲಿ ಭಾರತ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಪಾಕಿಸ್ತಾನ ತಂಡ ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.
ಇನ್ನು ಈ ಪಂದ್ಯದಲ್ಲಿ ಯಾವೆಲ್ಲಾ ಆಟಗಾರರಿಗೆ ಭಾರತ ತಂಡದಲ್ಲಿ ಸ್ಥಾನ ದೊರೆಯಲಿದೆ ಎಂಬ ಕುತೂಹಲ ಎಲ್ಲರಲ್ಲಿತ್ತು. ಈ ವಿಚಾರವೂ ಈಗ ಸ್ಪಷ್ಟವಾಗಿದೆ. ವಿಕೆಟ್ ಕೀಪರ್‌ಗಳ ಪೈಕಿ ರಿಷಭ್ ಪಂತ್ ಹಾಗೂ ದಿನೇಶ್ ಕಾರ್ತಿಕ್ ಮಧ್ಯೆ ಅನುಭವಿ ದಿನೇಶ್ ಕಾರ್ತಿಕ್‌ಗೆ ಅವಕಾಶ ದೊರೆತಿದ್ದು ಬೌಲಿಂಗ್‌ನಲ್ಲಿ ಆವೇಶ್ ಖಾನ್ ಕೂಡ ಸ್ಥಾನವನ್ನು ಪಡೆದುಕೊಂಡಿದ್ದಾರೆ.
Live ಸ್ಕೋರ್‌ಕಾರ್ಡ್ ಹೀಗಿದೆ

ಬಲಿಷ್ಠವಾಗಿದೆ ಭಾರತದ ಲೈನ್‌ಅಪ್
ಭಾರತ ಪಾಕಿಸ್ತಾನದ ವಿರುದ್ಧ ಬಲಿಷ್ಠ ಪಡೆಯೊಂದಿಗೆ ಕಣಕ್ಕಿಳಿದಿದೆ. ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಕಣಕ್ಕಿಳಿಯುತ್ತಿದ್ದು ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದಿನೇಶ್ ಕಾರ್ತಿಕ್ ಇದ್ದಾರೆ. ಆಲ್‌ರೌಂಡರ್‌ಗಳಾಗಿ ತಂಡದಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಸ್ಥಾನ ಪಡೆದುಕೊಂಡಿದ್ದಾರೆ. ಮೂವರು ವೇಗಿಗಳು ಕಣಕ್ಕಿಳಿಯುತ್ತಿದ್ದು ಭುವನೇಶ್ವರ್ ಕುಮಾರ್ ಅರ್ಷದೀಪ್ ಸಿಂಗ್‌ಗೆ ಮೂರನೇ ವೇಗಿಯಾಗಿ ಆವೇಶ್ ಖಾನ್ ಸಾಥ್ ನೀಡಲಿದ್ದಾರೆ. ಯುಜುವೇಂದ್ರ ಚಾಹಲ್ ಸ್ಪಿನ್ನರ್ ಆಗಿ ತಂಡದಲ್ಲಿದ್ದಾರೆ.

ಭಾರತದ ಸ್ಕ್ವಾಡ್
ಭಾರತ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದಿನೇಶ್ ಕಾರ್ತಿಕ್ (ವಿಕೆ), ಹಾರ್ದಿಕ್ ಪಾಂಡ್ಯ,
ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್
ಬೆಂಚ್: ರಿಷಬ್ ಪಂತ್, ರವಿಚಂದ್ರನ್ ಅಶ್ವಿನ್, ದೀಪಕ್ ಹೂಡಾ, ರವಿ ಬಿಷ್ಣೋಯ್

ಪಾಕಿಸ್ತಾನ ಸ್ಕ್ವಾಡ್
ಪಾಕಿಸ್ತಾನ ಆಡುವ ಬಳಗ: ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಫಖರ್ ಜಮಾನ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಆಸಿಫ್ ಅಲಿ, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ನಸೀಮ್ ಶಾ, ಹ್ಯಾರಿಸ್ ರೌಫ್, ಶಹನವಾಜ್ ದಹಾನಿ
ಬೆಂಚ್: ಮೊಹಮ್ಮದ್ ಹಸನೈನ್, ಉಸ್ಮಾನ್ ಖಾದಿರ್, ಹಸನ್ ಅಲಿ, ಹೈದರ್ ಅಲಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications