Asia Cup 2022: 25 ದಿನ ಮುಂಚಿತವಾಗಿಯೇ ಏಷ್ಯಾಕಪ್‌ಗೆ ಬಲಿಷ್ಠ ತಂಡ ಪ್ರಕಟಿಸಿದ ಪಾಕಿಸ್ತಾನ!

ಇದೇ ತಿಂಗಳ ಅಂತಿಮ ವಾರದಲ್ಲಿ ಬಹುನಿರೀಕ್ಷಿತ ಏಷ್ಯಾ ಕಪ್ ಕ್ರಿಕೆಟ್ ಟೂರ್ನಮೆಂಟ್ ಆರಂಭವಾಗಲಿದ್ದು, 4 ವರ್ಷಗಳ ಬಳಿಕ ಮರಳಿ ಬಂದಿರುವ ಈ ಕ್ರಿಕೆಟ್ ಟೂರ್ನಮೆಂಟ್ ವೀಕ್ಷಿಸಲು ಕ್ರಿಕೆಟ್ ಪ್ರೇಮಿಗಳು ಕಾತರರಾಗಿದ್ದಾರೆ. ಎಲ್ಲ ಅಂದುಕೊಂಡಂತೆ ಆಗಿದ್ದರೆ ಈ ಬಾರಿಯ ಏಷ್ಯಾಕಪ್ ಟೂರ್ನಿ ಶ್ರೀಲಂಕಾ ನೆಲದಲ್ಲಿ ನಡೆಯಬೇಕಿತ್ತು. ಆದರೆ ಅಲ್ಲಿನ ಆಂತರಿಕ ಕಾರಣಗಳಿಂದಾಗಿ ಟೂರ್ನಿಯನ್ನು ಯುಎಇಗೆ ಸ್ಥಳಾಂತರಿಸಲಾಗಿದ್ದು, ಪಂದ್ಯಗಳು ಕಳೆದ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಹಾಗೆ ಯು ಎ ಇ ಕ್ರೀಡಾಂಗಣಗಳಲ್ಲಿ ನಡೆಯಲಿವೆ.
ಇನ್ನು ಈ ಬಾರಿಯ ಏಷ್ಯಾಕಪ್ ಟೂರ್ನಿ ಆಗಸ್ಟ್ 27ರಂದು ನಡೆಯಲಿರುವ ಪ್ರಥಮ ಪಂದ್ಯದ ಮೂಲಕ ಆರಂಭವಾಗಲಿದ್ದು, ಸೆಪ್ಟೆಂಬರ್ 11ರಂದು ನಡೆಯಲಿರುವ ಫೈನಲ್ ಪಂದ್ಯದ ಮೂಲಕ ಮುಕ್ತಾಯಗೊಳ್ಳಲಿದೆ. ನಿನ್ನೆಯಷ್ಟೇ ( ಆಗಸ್ಟ್ 2 ) ಈ ಬಾರಿಯ ಏಷ್ಯಾಕಪ್ ಟೂರ್ನಿಯ ವೇಳಾಪಟ್ಟಿ ಪ್ರಕಟಗೊಂಡಿದ್ದು, ಟೂರ್ನಿ ಕುರಿತಾದ ಕಾತುರತೆ ಅಭಿಮಾನಿಗಳಲ್ಲಿ ಹೆಚ್ಚಾಗಿತ್ತು. ಇದೀಗ ವೇಳಾಪಟ್ಟಿ ಪ್ರಕಟಗೊಂಡ ಬೆನ್ನಲ್ಲೇ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಮುಂಬರುವ ಏಷ್ಯಾ ಕಪ್ ಟೂರ್ನಿಗೆ 15 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟಿಸಿದೆ ಹಾಗೂ ತನ್ನ ಮುದ್ದಿನ ನೆದರ್ಲೆಂಡ್ಸ್ ವಿರುದ್ಧದ ಏಕದಿನ ಸರಣಿಗೂ ಕೂಡ ತಂಡವನ್ನು ಪ್ರಕಟಿಸಿದೆ.
ಇನ್ನು ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಪರಸ್ಪರ ಮುಖಾಮುಖಿ ಆಗಲಿರುವ ಕಾರಣ ಪಾಕಿಸ್ತಾನ ಪ್ರಕಟಿಸಿರುವ ತಂಡದಲ್ಲಿ ಯಾವ ಯಾವ ಆಟಗಾರರು ಸ್ಥಾನ ಪಡೆದುಕೊಂಡಿದ್ದಾರೆ ಎಂಬ ಕುತೂಹಲ ಭಾರತೀಯ ಕ್ರಿಕೆಟ್ ಅಭಿಮಾನಿಗಳಲ್ಲಿಯೂ ಕೂಡ ಇದೆ. ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಏಷ್ಯಾಕಪ್ ಟೂರ್ನಿಗಾಗಿ ಪ್ರಕಟಿಸಿರುವ ಪಾಕ್ ತಂಡ ಈ ಕೆಳಕಂಡಂತಿದೆ.

ಏಷ್ಯಾಕಪ್ ಟೂರ್ನಿಗಾಗಿ ಪಾಕಿಸ್ತಾನ ಪ್ರಕಟಿಸಿರುವ ತಂಡ
ಬಾಬರ್ ಆಜಮ್ (ನಾಯಕ), ಶಾದಾಬ್ ಖಾನ್, ಆಸಿಫ್ ಅಲಿ, ಫಖರ್ ಜಮಾನ್, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ವಾಸಿಂ ಜೂನಿಯರ್, ನಸೀಮ್ ಶಾ, ಶಾಹೀನ್ ಶಾ ಅಫ್ರಿದಿ, ಶಹನವಾಜ್ ದಹಾನಿ ಮತ್ತು ಉಸ್ಮಾನ್ ದಹಾನಿ

ಏಷ್ಯಾ ಕಪ್‌ನಲ್ಲಿ ಭಾರತ ಮತ್ತು ಪಾಕ್ ಮುಖಾಮುಖಿ ಯಾವಾಗ?
ಇನ್ನು ಭಾರತ ಮತ್ತು ಪಾಕಿಸ್ತಾನ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ ಎಂಬ ಕಾರಣಕ್ಕಾಗಿಯೇ ತುಸು ಹೆಚ್ಚಿನ ಕ್ರೇಜ್ ಪಡೆದುಕೊಂಡಿರುವ ಏಷ್ಯಾಕಪ್ ಟೂರ್ನಿಯ ಈ ಬಾರಿಯ ಆವೃತ್ತಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಆಗಸ್ಟ್ 28ರಂದು ನಡೆಯಲಿರುವ ಪಂದ್ಯದಲ್ಲಿ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ.
ಕಳೆದ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವನ್ನು ಯಾವುದೇ ವಿಕೆಟ್ ಕಳೆದುಕೊಳ್ಳದೇ ಸೋಲಿಸಿರುವ ಹುಮ್ಮಸ್ಸಿನಲ್ಲಿ ಪಾಕಿಸ್ತಾನ ತಂಡವಿದ್ದರೆ, ಪಾಕ್ ವಿರುದ್ಧದ ಏಷ್ಯಾಕಪ್ ಮುಖಾಮುಖಿಯಲ್ಲಿ ಬೃಹತ್ ಮೇಲುಗೈಯನ್ನು ಸಾಧಿಸಿರುವ ಭಾರತ ಈ ಬಾರಿಯ ಏಷ್ಯಾಕಪ್ ಮುಖಾಮುಖಿಯಲ್ಲಿ ಪಾಕ್ ತಂಡವನ್ನು ಸೋಲಿಸಿ ಟಿ ಟ್ವೆಂಟಿ ವಿಶ್ವಕಪ್ ಸೋಲಿನ ಸೇಡನ್ನು ತೀರಿಸಿಕೊಳ್ಳುವತ್ತ ಕಣ್ಣಿಟ್ಟಿದೆ.

ನೆದರ್ಲೆಂಡ್ಸ್ ಪ್ರವಾಸಕ್ಕೆ ಪಾಕ್ ತಂಡ ಪ್ರಕಟ
ಇನ್ನು ಏಷ್ಯಾಕಪ್ ಟೂರ್ನಿಗಾಗಿ ತಂಡವನ್ನು ಪ್ರಕಟಿಸುವ ವೇಳೆಯಲ್ಲಿಯೇ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಮುಂಬರುವ ನೆದರ್ಲೆಂಡ್ಸ್ ವಿರುದ್ಧದ ಏಕದಿನ ಸರಣಿಗೂ ಸಹ ತಂಡವನ್ನು ಪ್ರಕಟಿಸಿದೆ. ನೆದರ್ಲೆಂಡ್ಸ್ ಪ್ರವಾಸ ಕೈಗೊಳ್ಳಲಿರುವ ಪಾಕಿಸ್ತಾನ ಆಗಸ್ಟ್ 16ರಿಂದ 21ರವರೆಗೆ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಸೆಣಸಾಡಲಿದೆ.
ನೆದರ್ಲೆಂಡ್ಸ್ ವಿರುದ್ಧದ ಸರಣಿಗೆ ಪ್ರಕಟವಾದ ತಂಡ: ಬಾಬರ್ ಆಜಮ್ (ನಾಯಕ), ಶಾದಾಬ್ ಖಾನ್, ಅಬ್ದುಲ್ಲಾ ಶಫೀಕ್, ಫಖರ್ ಜಮಾನ್, ಹಾರಿಸ್ ರೌಫ್, ಇಮಾಮ್-ಉಲ್-ಹಕ್, ಖುಶ್ದಿಲ್ ಶಾ, ಮೊಹಮ್ಮದ್ ಹ್ಯಾರಿಸ್, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ವಾಸಿಂ ಜೂನಿಯರ್, ನಸೀಮ್ ಶಾ, ಸಲ್ಮಾನ್ ಅಲಿ ಅಘಾ, ಶಾಹೀನ್ ಶಾ ಅಫ್ರಿ , ಶಹನವಾಜ್ ದಹಾನಿ, ಜಾಹಿದ್ ಮೆಹಮೂದ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications