
ಪಂದ್ಯದ ಮಾಹಿತಿ
ಅಫ್ಘಾನಿಸ್ತಾನ ಹಾಗೂ ಪಾಕಿಸ್ತಾನ ತಂಡಗಳು ಸೆಪ್ಟೆಂಬರ್ 7 ಬುಧವಾರದಂದು ಶಾರ್ಜಾ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಮುಖಾಮುಕಿಯಾಗಲಿದೆ. ಭಾರತೀಯ ಕಾಲಮಾನ ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸ್ಟಾರ್‌ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪಂದ್ಯ ನೇರಪ್ರಸಾರವಾಗಲಿದ್ದು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

ಹವಾಮಾನ ವರದಿ ಹಾಗೂ ಪಿಚ್ ರಿಪೋರ್ಟ್
ಪಂದ್ಯದ ದಿನ ಶಾರ್ಜಾ ಕ್ರೀಡಾಂಗಣದ ವಾತಾವರಣದ ಉಷ್ಣಾಂಶ 36ಡಿಗ್ರಿ ಸೆಲ್ಸಿಯಸ್‌ನಷ್ಟಿರುತ್ತದೆ. ಈ ಪಂದ್ಯಕ್ಕೂ ಮಳೆಯಿಂದ ಅಡ್ಡಿ ಉಂಟಾಗುವ ಯಾವುದೇ ಆತಂಕವಿಲ್ಲ. ಹೀಗಾಗಿ ಪಂದ್ಯ ಸಂಪೂರ್ಣವಾಗಿ ನಡೆಯುವ ಅವಕಾಶವಿದೆ.
ಪಿಚ್ ರಿಪೋರ್ಟ್: ಶಾರ್ಜಾ ಕ್ರೀಡಾಂಗಣದ ಪಿಚ್‌ಗಳು ಬಹಳ ದೊಡ್ಡದಾಗಿಲ್ಲ. ಪೊಚ್ ನಿಧಾನವಾಗಿರಲಿದೆ. ಇಲ್ಲಿ ಬ್ಯಾಟಿಂಗ್ ನಡೆಸುವುದನ್ನು ಬ್ಯಾಟರ್‌ಗಳು ಆನಂದಿಸುತ್ತಾರೆ. ಟಾಸ್ ಗೆದ್ದ ತಂಡ ಮೊದಲಿಗೆ ಬ್ಯಾಟಿಂಗ್ ನಡೆಸುವುದನ್ನು ಬಯಸುತ್ತದೆ.
ನಿರ್ಣಾಯಕ ಪಂದ್ಯದಲ್ಲಿ ರವಿ ಬಿಷ್ಣೋಯ್‌ನನ್ನು ಕೈಬಿಟ್ಟ ಭಾರತ: ಭಾರೀ ಟೀಕೆಗೆ ಗುರಿ

ಸಂಭಾವ್ಯ ಆಡುವ ಬಳಗ ಹೀಗಿದೆ
ಪಾಕಿಸ್ತಾನ: ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಫಖರ್ ಜಮಾನ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಶಾದಾಬ್ ಖಾನ್, ಆಸಿಫ್ ಅಲಿ, ಮೊಹಮ್ಮದ್ ನವಾಜ್, ಹಾರಿಸ್ ರೌಫ್, ಮೊಹಮ್ಮದ್ ಹಸ್ನೈನ್, ನಸೀಮ್ ಶಾ
ಅಫ್ಘಾನಿಸ್ತಾನ: ಹಜರತುಲ್ಲಾ ಝಜೈ, ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಜದ್ರಾನ್, ಮೊಹಮ್ಮದ್ ನಬಿ (ನಾಯಕ), ನಜೀಬುಲ್ಲಾ ಜದ್ರಾನ್, ಕರೀಂ ಜನತ್, ರಶೀದ್ ಖಾನ್, ಸಮೀವುಲ್ಲಾ ಶಿನ್ವಾರಿ, ನವೀನ್-ಉಲ್-ಹಕ್, ಮುಜೀಬ್ ಉರ್ ರೆಹಮಾನ್, ಫಝಲ್ಹಕ್ ಫಾರೂಕಿ

ಸಂಪೂರ್ಣ ಸ್ಕ್ವಾಡ್ ಹೀಗಿದೆ
ಪಾಕಿಸ್ತಾನ ತಂಡ: ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಫಖರ್ ಜಮಾನ್, ಖುಶ್ದಿಲ್ ಶಾ, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಆಸಿಫ್ ಅಲಿ, ಮೊಹಮ್ಮದ್ ನವಾಜ್, ಹ್ಯಾರಿಸ್ ರೌಫ್, ಮೊಹಮ್ಮದ್ ಹಸ್ನೇನ್, ನಸೀಮ್ ಶಾ, ಉಸ್ಮಾನ್ ಖಾದಿರ್, ಹೈದರ್ ಅಲಿ, ಹಸನ್ ಅಲಿ, ಶಹನವಾಜ್ ದಹಾನಿ
ಅಫ್ಘಾನಿಸ್ತಾನ ತಂಡ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಮೊಹಮ್ಮದ್ ನಬಿ (ನಾಯಕ), ಹಜರತುಲ್ಲಾ ಝಜೈ, ಇಬ್ರಾಹಿಂ ಝದ್ರಾನ್, ನಜೀಬುಲ್ಲಾ ಜದ್ರಾನ್, ಕರೀಂ ಜನತ್, ಸಮೀವುಲ್ಲಾ ಶಿನ್ವಾರಿ, ರಶೀದ್ ಖಾನ್, ನವೀನ್-ಉಲ್-ಹಕ್, ಮುಜೀಬ್ ಉರ್ ರೆಹಮಾನ್, ಫಜಲ್ಹಕ್ ಫಾರೂಕಿ, ಹಶ್ಮತುಲ್ಲಾ ಶಾಹಿದಿ, ಅಫ್ಸರ್ ಝಜೈ, ಫರೀದ್ ಅಹ್ಮದ್ ಮಲಿಕ್, ಉಸ್ಮಾನ್ ಘನಿ, ಅಜ್ಮತುಲ್ಲಾ ಒಮರ್ಜಾಯ್, ನೂರ್ ಅಹ್ಮದ್


Click it and Unblock the Notifications












