Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಪಾಕಿಸ್ತಾನ vs ಹಾಂಕಾಂಗ್: ಸೂಪರ್ 4ಗೆ ಏರುವ ನಾಲ್ಕನೇ ತಂಡ ಯಾವುದು?: ಸಂಭಾವ್ಯ ಆಡುವ ಬಳಗ

Asia cup 2022: Pakistan vs Hong Kong match 6, Preview, Probable XI, pitch report

ಏಷ್ಯಾ ಕಪ್ 2022ರ ಆವೃತ್ತಿಯ ಲೀಗ್ ಹಂತದ ಕೊನೆಯ ಪಂದ್ಯ ಇಂದು ಪಾಕಿಸ್ತಾನ ಹಾಗೂ ಹಾಂಕಾಂಗ್ ವಿರುದ್ಧ ನಡೆಯಲಿದೆ. ಪಾಕಿಸ್ತಾನ ಹಾಗೂ ಹಾಂಕಾಂಗ್ ಎರಡು ಪಂದ್ಯಗಳು ಕೂಡ ಲೀಗ್ ಹಂತದ ಮೊದಲ ಪಂದ್ಯದಲ್ಲಿ ಭಾರತದ ವಿರುದ್ಧ ಸೋಲು ಅನುಭವಿಸಿದೆ. ಈ ಕಾರಣದಿಂದಾಗಿ ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸುವುದು ಎರಡು ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದೆ.

ಹಾಂಕಾಂಗ್‌ಗೆ ಹೋಲಿಸಿದರೆ ಪಾಕಿಸ್ತಾನ ಸಹಜವಾಗಿಯೇ ಬಲಿಷ್ಠ ತಂಡ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಭಾರತದ ವಿರುದ್ಧ ಹಾಂಕಾಂಗ್ ನೀಡಿರುವ ಪ್ರದರ್ಶನ ನೋಡಿದರೆ ಪಾಕಿಸ್ತಾನಕ್ಕೆ ಸುಲಭ ಸವಾಲಂತು ಅಲ್ಲಾ ಎಂಬುದು ಸ್ಪಷ್ಟವಾಗಿದೆ. ಹೀಗಾಗಿ ಈ ಪಂದ್ಯದಲ್ಲಿ ಪಾಕಿಸ್ತಾನದ ಸವಾಲನ್ನು ಹಾಂಕಾಂಗ್ ಯಾವ ರೀತಿಯಾಗಿ ಎದುರಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.

ಒತ್ತಡದಲ್ಲಿರುವ ರೋಹಿತ್ ಗೆ ಉತ್ತಮವಾಗಿ ಆಡಲು ಸಾಧ್ಯವಾಗುತ್ತಿಲ್ಲ | *Cricket | OneIndia Kannada
ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ

ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು ಇಲ್ಲಿ ಬೌಂಡರಿಗಳು ದೊಡ್ಡದಾಗಿಲ್ಲ. ವೇಗಿಗಳಿಗೆ ಪಿಚ್‌ನಿಂದ ಉತ್ತಮ ಬೆಂಬಲ ದೊರೆಯಲಿದ್ದು ಸ್ಪಿನ್ ಬೌಲಿಂಗ್‌ಗೆ ಹೆಚ್ಚಿನ ನೆರವ ದೊರೆಯಲಾರದು. ಇಲ್ಲಿ ಸಾಮಾನ್ಯವಾಗಿ ಬ್ಯಾಟಿಂಗ್ ನಡೆಸುವುದನ್ನು ಆಟಗಾರರು ಆನಂದಿಸುತ್ತಾರೆ. ಟಾಸ್ ಗೆದ್ದ ತಂಡ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಳ್ಳುವುದು ಸಾಮಾನ್ಯ.
ಹವಾಮಾನ ವರದಿ: ಮಳೆಯಾಗುವ ಯಾವುದೇ ಸಾಧ್ಯತೆಯಿಲ್ಲ. ಪಂದ್ಯದ ಅವಧಿಯಲ್ಲಿ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್‌ನ ಸನಿಹದಲ್ಲಿರಲಿದೆ. 45 ಶೇಕಡಾದಷ್ಟು ಶುಷ್ಕತೆಯಿರಲಿದ್ದು ಗಂಟೆಗೆ 13 ಕಿ. ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಸಂಭಾವ್ಯ ಆಡುವ ಬಳಗ

ಸಂಭಾವ್ಯ ಆಡುವ ಬಳಗ

ಪಾಕಿಸ್ತಾನ: ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಫಖರ್ ಜಮಾನ್, ಆಸಿಫ್ ಅಲಿ, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ನಸೀಮ್ ಶಾ, ಹ್ಯಾರಿಸ್ ರೌಫ್, ಶಾನವಾಜ್ ದಹಾನಿ

ಹಾಂಗ್ ಕಾಂಗ್: ನಿಜಾಕತ್ ಖಾನ್ (ನಾಯಕ), ಯಾಸಿಮ್ ಮುರ್ತಾಜಾ, ಬಾಬರ್ ಹಯಾತ್, ಕಿಂಚಿತ್ ಶಾ, ಐಜಾಜ್ ಖಾನ್, ಸ್ಕಾಟ್ ಮೆಕೆಚ್ನಿ (ವಿಕೆಟ್ ಕೀಪರ್), ಜೀಶನ್ ಅಲಿ, ಹರೂನ್ ಅರ್ಷದ್, ಎಹ್ಸಾನ್ ಖಾನ್, ಆಯುಷ್ ಶುಕ್ಲಾ, ಮೊಹಮ್ಮದ್ ಗಜನ್ಫರ್

ಸಂಪೂರ್ಣ ಸ್ಕ್ವಾಡ್ ಹೀಗಿದೆ

ಸಂಪೂರ್ಣ ಸ್ಕ್ವಾಡ್ ಹೀಗಿದೆ

ಪಾಕಿಸ್ತಾನ ತಂಡ: ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಫಖರ್ ಜಮಾನ್, ಇಫ್ತಿಕರ್ ಅಹ್ಮದ್, ಖುಶ್ದಿಲ್ ಶಾ, ಶಾದಾಬ್ ಖಾನ್, ಆಸಿಫ್ ಅಲಿ, ಮೊಹಮ್ಮದ್ ನವಾಜ್, ಹ್ಯಾರಿಸ್ ರೌಫ್, ನಸೀಮ್ ಶಾ, ಶಹನವಾಜ್ ದಹಾನಿ, ಉಸ್ಮಾನ್ ಖಾದಿರ್, ಹಸನ್ ಅಲಿ, ಮೊಹಮ್ಮದ್ ಹಸ್ನೈನ್, ಹೈದರ್ ಅಲಿ

ಹಾಂಗ್ ಕಾಂಗ್ ಸ್ಕ್ವಾಡ್: ನಿಜಾಕತ್ ಖಾನ್ (ನಾಯಕ), ಸ್ಕಾಟ್ ಮೆಕೆಚ್ನಿ (ವಿಕೆಟ್ ಕೀಪರ್), ಯಾಸಿಮ್ ಮುರ್ತಾಜಾ, ಬಾಬರ್ ಹಯಾತ್, ಕಿಂಚಿತ್ ಶಾ, ಐಜಾಜ್ ಖಾನ್, ಜೀಶನ್ ಅಲಿ, ಹರೂನ್ ಅರ್ಷದ್, ಎಹ್ಸಾನ್ ಖಾನ್, ಆಯುಷ್ ಶುಕ್ಲಾ, ಮೊಹಮ್ಮದ್ ಘಜನ್ಫರ್, ವಾಜಿದ್ ಶಾ, ಅಫ್ತಾಬ್ ಹುಸೇನ್, ಧನಂಜಯ್ ರಾವ್, ಮೊಹಮ್ಮದ್ ವಹೀದ್, ಅಹಾನ್ ತ್ರಿವೇದಿ, ಅತೀಕ್ ಇಕ್ಬಾಲ್

Story first published: Friday, September 2, 2022, 12:15 [IST]
Other articles published on Sep 2, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+