ಈ ಬಾರಿ ಏಷ್ಯಾಕಪ್‌ನಲ್ಲಿ ಆಡಲಿರುವ 5 ತಂಡಗಳ ವಿರುದ್ಧ ಹೆಚ್ಚು ರನ್ ಗಳಿಸಿದವರಲ್ಲಿ ಕೊಹ್ಲಿಗಿಂತ ರೋಹಿತ್ ಮುಂದು!

ನಾಳೆ ( ಆಗಸ್ಟ್ 27 ) ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಆಫ್ಘಾನಿಸ್ತಾನ ಮತ್ತು ಶ್ರೀಲಂಕಾ ತಂಡಗಳ ನಡುವಿನ ಪಂದ್ಯದ ಮೂಲಕ ಹದಿನೈದನೇ ಆವೃತ್ತಿಯ ಏಷ್ಯಾಕಪ್ ಟೂರ್ನಿಗೆ ಚಾಲನೆ ದೊರೆಯಲಿದೆ. ಇತ್ತೀಚೆಗಷ್ಟೇ ಮುಕ್ತಾಯಗೊಂಡ ಕ್ವಾಲಿಫೈಯರ್ ಸುತ್ತಿನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆಲ್ಲುವುದರ ಮೂಲಕ ಹಾಂಗ್ ಕಾಂಗ್ ತಂಡ ಈ ಭಾರಿಯ ಏಷ್ಯಾಕಪ್ ಟೂರ್ನಿಗೆ ಅರ್ಹತೆಯನ್ನು ಗಿಟ್ಟಿಸಿಕೊಂಡಿದ್ದು ಭಾರತ ಮತ್ತು ಪಾಕಿಸ್ತಾನ ತಂಡಗಳಿದ್ದ ಎ ಗುಂಪಿಗೆ ಸೇರ್ಪಡೆಗೊಂಡಿದೆ.
ಈ ಮೂಲಕ ಈ ಬಾರಿಯ ಏಷ್ಯಾಕಪ್ ಟೂರ್ನಿಯಲ್ಲಿ ಭಾಗವಹಿಸಲಿರುವ ಎಲ್ಲಾ ತಂಡಗಳ ಪಟ್ಟಿ ಸಿಕ್ಕಿದ್ದು, ಎ ಗುಂಪಿನಲ್ಲಿ ಭಾರತ, ಪಾಕಿಸ್ತಾನ ಮತ್ತು ಹಾಂಗ್ ಕಾಂಗ್ ಇರಲಿವೆ ಹಾಗೂ ಬಿ ಗುಂಪಿನಲ್ಲಿ ಬಾಂಗ್ಲಾದೇಶ, ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ತಂಡಗಳಿವೆ. ಇನ್ನು ಗ್ರೂಪ್ ಹಂತದಲ್ಲಿ ಹೆಚ್ಚು ಪಂದ್ಯಗಳನ್ನು ಗೆದ್ದು ಎರಡೂ ಗುಂಪುಗಳಲ್ಲಿ ಟಾಪ್ 2 ಸ್ಥಾನಗಳನ್ನು ಪಡೆದುಕೊಳ್ಳಲಿರುವ ತಂಡಗಳು ಮುಂದಿನ ಸುತ್ತಿಗೆ ಆಯ್ಕೆಯಾಗಲಿವೆ. ಭಾರತ ಗ್ರೂಪ್ ಹಂತದಲ್ಲಿ ಪಾಕಿಸ್ತಾನ ಮತ್ತು ಹಾಂಗ್ ಕಾಂಗ್ ತಂಡಗಳ ವಿರುದ್ಧ ಸೆಣಸಾಟ ನಡೆಸಲಿದೆ.
ಇನ್ನು ಈ ಬಾರಿ ಟೂರ್ನಿಯಲ್ಲಿ ಆಡಲಿರುವ ಶ್ರೀಲಂಕಾ, ಆಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಹಾಂಗ್ ಕಾಂಗ್ ತಂಡಗಳ ವಿರುದ್ಧದ ಟಿ ಟ್ವೆಂಟಿ ಪಂದ್ಯಗಳಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿರುವ ಆಟಗಾರರ ಟಾಪ್ 5 ಪಟ್ಟಿ ಈ ಕೆಳಕಂಡಂತಿದ್ದು, ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ರೋಹಿತ್ ಶರ್ಮಾ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

ಹೆಚ್ಚು ರನ್ ಗಳಿಸಿರುವ ಆಟಗಾರರ ಟಾಪ್ 5 ಪಟ್ಟಿ
ಈ ಬಾರಿಯ ಏಷ್ಯಾಕಪ್ ಟೂರ್ನಿಯಲ್ಲಿ ಕಣಕ್ಕಿಳಿಯಲಿರುವ 5 ತಂಡಗಳ ವಿರುದ್ಧ ನಡೆದಿರುವ ಒಟ್ಟಾರೆ ಟಿ ಟ್ವೆಂಟಿ ಪಂದ್ಯಗಳಲ್ಲಿ ಹೆಚ್ಚು ರನ್ ಗಳಿಸಿರುವ ಭಾರತೀಯರ ಟಾಪ್ 5 ಪಟ್ಟಿ
1. ರೋಹಿತ್ ಶರ್ಮಾ - 936 ರನ್‌ಗಳು
2. ವಿರಾಟ್ ಕೊಹ್ಲಿ - 829 ರನ್‌ಗಳು
3. ಶಿಖರ್ ಧವನ್ - 688 ರನ್‌ಗಳು
4. ಸುರೇಶ್ ರೈನಾ - 496 ರನ್‌ಗಳು
5. ಕೆಎಲ್ ರಾಹುಲ್ - 466 ರನ್‌ಗಳು

ಟೂರ್ನಿಯ ವೇಳಾಪಟ್ಟಿ
27 ಆಗಸ್ಟ್: ಶ್ರೀಲಂಕಾ vs ಅಫ್ಘಾನಿಸ್ತಾನ (ದುಬೈ)
28 ಆಗಸ್ಟ್: ಭಾರತ vs ಪಾಕಿಸ್ತಾನ (ದುಬೈ)
30 ಆಗಸ್ಟ್: ಬಾಂಗ್ಲಾದೇಶ vs ಅಫ್ಘಾನಿಸ್ತಾನ (ದುಬೈ)
31 ಆಗಸ್ಟ್: ಭಾರತ vs ಹಾಂಗ್‌ಕಾಂಗ್ (ದುಬೈ)
1 ಸೆಪ್ಟೆಂಬರ್: ಶ್ರೀಲಂಕಾ vs ಬಾಂಗ್ಲಾದೇಶ (ದುಬೈ)
2 ಸೆಪ್ಟೆಂಬರ್: ಪಾಕಿಸ್ತಾನ vs ಹಾಂಗ್‌ಕಾಂಗ್ (ಶಾರ್ಜಾ)
3 ಸೆಪ್ಟೆಂಬರ್: B1 vs B2 (ಶಾರ್ಜಾ)
4 ಸೆಪ್ಟೆಂಬರ್: A1 vs A2 (ದುಬೈ)
6 ಸೆಪ್ಟೆಂಬರ್: A1 vs B1 (ದುಬೈ)
7 ಸೆಪ್ಟೆಂಬರ್: A2 vs B2 (ದುಬೈ)
8 ಸೆಪ್ಟೆಂಬರ್: A1 vs B2 (ದುಬೈ)
9 ಸೆಪ್ಟೆಂಬರ್: B1 vs A2 (ದುಬೈ)
11 ಸೆಪ್ಟೆಂಬರ್: ಫೈನಲ್ (ದುಬೈ)

ಟೂರ್ನಿಗೆ ಪ್ರಕಟಗೊಂಡಿರುವ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್.ಅಶ್ವಿನ್, ಯುಜ್ವೇಂದ್ರ ಚಹಾಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್ ಮತ್ತು ಅವೇಶ್ ಖಾನ್.
ಮೀಸಲು ಆಟಗಾರರು: ಶ್ರೇಯಸ್ ಅಯ್ಯರ್, ದೀಪಕ್ ಚಹಾರ್, ಅಕ್ಷರ್ ಪಟೇಲ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications