Asia Cup 2022: ನಾಯಕತ್ವದಲ್ಲಿ ಬಾಬರ್ ಗಿಂತ ರೋಹಿತ್ ಶರ್ಮಾ ಬೆಸ್ಟ್ ಎಂದ ಪಾಕ್ ಕ್ರಿಕೆಟಿಗ!

ನಾಳೆ ( ಆಗಸ್ಟ್ 27 ) ಬಹುನಿರೀಕ್ಷಿತ ಏಷ್ಯಾಕಪ್ ಟೂರ್ನಿಯ ಚೊಚ್ಚಲ ಪಂದ್ಯ ನಡೆಯುತ್ತಿದ್ದರೂ ಸಹ ಬಹುತೇಕ ಕ್ರೀಡಾಭಿಮಾನಿಗಳ ಚಿತ್ತ ಭಾರತ ಮತ್ತು ಪಾಕ್ ನಡುವಿನ ಪಂದ್ಯದತ್ತ ಇದೆ. ಇನ್ನು ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಏಷ್ಯಾಕಪ್ ಹಣಾಹಣಿಗೆ ಆಗಸ್ಟ್ 28ರ ಭಾನುವಾರದಂದು ವೇದಿಕೆಯಾಗಲಿದ್ದು ಪಂದ್ಯದ ಕುರಿತಾದ ಚರ್ಚೆಗಳು ದೊಡ್ಡ ಮಟ್ಟದಲ್ಲಿ ನಡೆಯುತ್ತಿವೆ.
ಉಭಯ ತಂಡಗಳೆರಡೂ ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡುವತ್ತ ಚಿತ್ತ ನೆಟ್ಟಿದ್ದು, ಕಳೆದ ಬಾರಿಯ ಟ್ವೆಂಟಿ ವಿಶ್ವಕಪ್ ಸೋಲಿನ ಪ್ರತೀಕಾರವನ್ನು ತೀರಿಸಿಕೊಳ್ಳಲು ಟೀಮ್ ಇಂಡಿಯಾಗೆ ಇದೊಂದು ವೇದಿಕೆ ಎಂದೇ ಹೇಳಬಹುದು. ಇನ್ನು ಪ್ರಮುಖ ಬೌಲರ್‌ಗಳಾದ ಶಾಹಿನ್ ಅಫ್ರಿದಿ ಇಲ್ಲದೇ ಪಾಕಿಸ್ತಾನ ಹಾಗೂ ಜಸ್ಪ್ರೀತ್ ಬುಮ್ರಾ ಇಲ್ಲದೇ ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಸೆಣಸಾಟ ನಡೆಸಲಿದ್ದು, ಪಂದ್ಯದಲ್ಲಿ ಯಾವ ತಂಡ ಜಯ ಸಾಧಿಸಬಹುದು ಹಾಗೂ ಏಷ್ಯಾ ಕಪ್ ಟ್ರೋಫಿಯನ್ನು ಈ ಬಾರಿ ಯಾವ ತಂಡ ಗೆಲ್ಲಬಹುದು ಎಂಬುದರ ಕುರಿತಾಗಿ ಈಗಾಗಲೇ ಹಲವಾರು ಮಾಜಿ ಕ್ರಿಕೆಟಿಗರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.
ಈ ಸಾಲಿಗೆ ಇದೀಗ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಯೂನಿಸ್ ಖಾನ್ ಸೇರಿಕೊಂಡಿದ್ದು ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯದ ಕುರಿತಾಗಿ ಮಾತನಾಡಿದ್ದಾರೆ.

ರೋಹಿತ್ ಶರ್ಮಾ ಹಾಗೂ ಬಾಬರ್ ಅಜಮ್ ಇಬ್ಬರು ಸಹ ಬಿಗ್ ಹಿಟ್ಟರ್ಸ್ ಎಂದ ಯೂನಿಸ್ ಖಾನ್
ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಏಷ್ಯಾಕಪ್ ಮುಖಾಮುಖಿ ಕುರಿತು ಮಾತನಾಡಿರುವ ಯೂನಿಸ್ ಖಾನ್ ಉಭಯ ತಂಡಗಳ ನಾಯಕರಾದ ರೋಹಿತ್ ಶರ್ಮಾ ಹಾಗೂ ಬಾಬರ್ ಅಜಮ್ ಅವರ ಬ್ಯಾಟಿಂಗ್ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಬ್ಬರೂ ಸಹ ತಮ್ಮ ತಂಡಗಳಿಗೆ ರನ್ ಬೇಕಾದಾಗ ದೊಡ್ಡ ಮೊತ್ತ ಕಲೆಹಾಕುವ ಸಾಮರ್ಥ್ಯ ಹಾಗೂ ಪ್ರಾಮುಖ್ಯತೆಯನ್ನು ಹೊಂದಿದ್ದಾರೆ ಎಂದು ಯೂನಿಸ್ ಖಾನ್ ಹೇಳಿಕೆ ನೀಡಿದ್ದಾರೆ.

ನಾಯಕತ್ವದಲ್ಲಿ ರೋಹಿತ್ ಬೆಸ್ಟ್
ಇನ್ನೂ ಮುಂದುವರಿದು ಮಾತನಾಡಿರುವ ಯೂನಿಸ್ ಖಾನ್ ನಾಯಕತ್ವದ ವಿಚಾರಕ್ಕೆ ಬಂದರೆ ಬಾಬರ್ ಅಜಮ್ ಅವರಿಗಿಂತ ರೋಹಿತ್ ಶರ್ಮಾ ಒಂದು ಹೆಜ್ಜೆ ಮುಂದು ಎಂದಿದ್ದಾರೆ. ರೋಹಿತ್ ಶರ್ಮಾ ದೀರ್ಘಾವಧಿಯಿಂದ ಟೀಮ್ ಇಂಡಿಯಾದ ಸದಸ್ಯನಾಗಿದ್ದು, ಉತ್ತಮ ನಾಯಕರ ಅಡಿಯಲ್ಲಿ ಆಡಿರುವ ಅನುಭವವನ್ನು ಹೊಂದಿದ್ದಾರೆ ಹಾಗೂ ಇದು ರೋಹಿತ್ ಶರ್ಮಾಗೆ ಇರುವ ದೊಡ್ಡ ಪ್ಲಸ್ ಪಾಯಿಂಟ್ ಎಂದು ಯೂನಿಸ್ ಖಾನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಟೂರ್ನಿಗೆ ಪ್ರಕಟವಾಗಿರುವ ಉಭಯ ತಂಡಗಳು
ಭಾರತ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್.ಅಶ್ವಿನ್, ಯುಜ್ವೇಂದ್ರ ಚಹಾಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್.
ಪಾಕಿಸ್ತಾನ: ಬಾಬರ್ ಆಜಮ್ (ನಾಯಕ), ಶಾದಾಬ್ ಖಾನ್ (ಉಪನಾಯಕ), ಆಸಿಫ್ ಅಲಿ, ಫಖರ್ ಜಮಾನ್, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ವಾಸಿಂ ಜೂನಿಯರ್, ನಸೀಮ್ ಶಾ, ಶಹನವಾಜ್ ಖಾದ್ ದಹಾನಿ ಮತ್ತು ಉಸ್ಮಾನ್ .
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications