ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಏಷ್ಯಾಕಪ್ 2022: ಕೊಹ್ಲಿ, ಅನುಷ್ಕಾ ಜತೆ ದುಬೈಗೆ ಹಾರಿದ ರೋಹಿತ್ ಶರ್ಮಾ; ಇಲ್ಲ ದ್ರಾವಿಡ್!

Asia Cup 2022: Rohit Sharma leaves for Dubai with Virat Kohli and Anushka Sharma ahead of Asia Cup

ಇದೇ ತಿಂಗಳ 27ರಂದು ನಡೆಯಲಿರುವ ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ತಂಡಗಳ ನಡುವಿನ ಪಂದ್ಯದ ಮೂಲಕ ಹದಿನೈದನೇ ಆವೃತ್ತಿಯ ಏಷ್ಯಾಕಪ್ ಟೂರ್ನಿ ಆರಂಭಗೊಳ್ಳಲಿದ್ದು ಟೂರ್ನಿಗೆ ಕ್ಷಣಗಣನೆ ಆರಂಭಗೊಂಡಿದೆ. ಇನ್ನು ಕಳೆದ ಬಾರಿಯ ಏಷ್ಯಾಕಪ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಟೀಮ್ ಇಂಡಿಯಾ ಈ ಬಾರಿಯೂ ಸಹ ಟ್ರೋಫಿ ಗೆದ್ದು ಹಾಲಿ ಚಾಂಪಿಯನ್ ಪಟ್ಟವನ್ನು ತನ್ನಲ್ಲಿಯೇ ಉಳಿಸಿಕೊಳ್ಳುವತ್ತ ಕಣ್ಣಿಟ್ಟಿದೆ.

ಮಹಾರಾಜ ಟ್ರೋಫಿ: ಪ್ಲೇಆಫ್ ಪ್ರವೇಶಿಸಿದ 4 ತಂಡಗಳು; ಪಂದ್ಯ ಯಾವಾಗ, ಮೊಬೈಲ್‌ನಲ್ಲಿ ವೀಕ್ಷಿಸುವುದು ಹೇಗೆ?ಮಹಾರಾಜ ಟ್ರೋಫಿ: ಪ್ಲೇಆಫ್ ಪ್ರವೇಶಿಸಿದ 4 ತಂಡಗಳು; ಪಂದ್ಯ ಯಾವಾಗ, ಮೊಬೈಲ್‌ನಲ್ಲಿ ವೀಕ್ಷಿಸುವುದು ಹೇಗೆ?

ರೋಹಿತ್ ಶರ್ಮಾ ಪಡೆ ಆಗಸ್ಟ್ 28ರ ಭಾನುವಾರದಂದು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಾಕಿಸ್ತಾನದ ವಿರುದ್ಧದ ಪಂದ್ಯದ ಮೂಲಕ ತನ್ನ ಪಯಣವನ್ನು ಆರಂಭಿಸಲಿದೆ. ಹೀಗೆ ಭಾರತ ಮತ್ತು ಪಾಕಿಸ್ತಾನ ನಡುವಿನ ಈ ಪಂದ್ಯ ಸಾಕಷ್ಟು ದೊಡ್ಡ ಮಟ್ಟದ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಹೌದು, ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಹಣಾಹಣಿಯೆಂದರೆ ವೀಕ್ಷಕರ ಸಂಖ್ಯೆ ಅತಿ ದೊಡ್ಡ ಮಟ್ಟದಲ್ಲಿರಲಿದ್ದು, ಹಲವು ವರ್ಷಗಳ ನಂತರ ಐಸಿಸಿ ಟೂರ್ನಿಗಳನ್ನು ಹೊರತುಪಡಿಸಿ ಇತೆರೆ ಟೂರ್ನಿಯೊಂದರಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ.

1984ರಿಂದ 2018: ಭಾರತ ಮತ್ತು ಲಂಕಾ ನಡುವಿನ ಎಲ್ಲಾ ಏಷ್ಯಾಕಪ್ ಪಂದ್ಯಗಳ ಫಲಿತಾಂಶಗಳ ಪಟ್ಟಿ1984ರಿಂದ 2018: ಭಾರತ ಮತ್ತು ಲಂಕಾ ನಡುವಿನ ಎಲ್ಲಾ ಏಷ್ಯಾಕಪ್ ಪಂದ್ಯಗಳ ಫಲಿತಾಂಶಗಳ ಪಟ್ಟಿ

ಇನ್ನು ಈ ಪಂದ್ಯಕ್ಕಾಗಿ ಸಿದ್ಧತೆ ಮಾಡಿಕೊಳ್ಳಲು ಈಗಾಗಲೇ ಪಾಕಿಸ್ತಾನದ ಆಟಗಾರರು ದುಬೈ ತಲುಪಿದ್ದು, ಇದೀಗ ಟೀಮ್ ಇಂಡಿಯಾದ ಆಟಗಾರರೂ ಸಹ ದುಬೈ ಪ್ರಯಾಣವನ್ನು ಆರಂಭಿಸಿದ್ದಾರೆ. ದುಬೈ ಪ್ರಯಾಣವನ್ನು ಕೈಗೊಳ್ಳಲು ಟೀಂ ಇಂಡಿಯಾ ಆಟಗಾರರು ವಿಮಾನ ನಿಲ್ದಾಣದಲ್ಲಿ ತೆರಳುತ್ತಿರುವ ಚಿತ್ರಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ರವಿಚಂದ್ರನ್ ಅಶ್ವಿನ್ ಸೇರಿದಂತೆ ಇನ್ನೂ ಮುಂತಾದ ಆಟಗಾರರು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇವರ ಜತೆ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಹಾಗೂ ಕೊಹ್ಲಿ ದಂಪತಿ ಪುತ್ರಿ ವಾಮಿಕಾ ಕೊಹ್ಲಿ ಕೂಡ ದುಬೈ ಪ್ರಯಾಣ ಬೆಳೆಸಿದ್ದಾರೆ. ಇನ್ನು ರಾಹುಲ್ ದ್ರಾವಿಡ್ ಕೊರೊನಾ ಸೋಂಕಿಗೆ ಒಳಗಾಗಿರುವ ಕಾರಣ ಈ ಪ್ರಯಾಣವನ್ನು ಕೈಗೊಂಡಿಲ್ಲ.

ಟೂರ್ನಿಗೆ ಪ್ರಕಟವಾದ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್.ಅಶ್ವಿನ್, ಯುಜ್ವೇಂದ್ರ ಚಹಾಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್.

ಮೀಸಲು ಆಟಗಾರರು: ದೀಪಕ್ ಚಹರ್, ಅಕ್ಷರ್ ಪಟೇಲ್ ಹಾಗೂ ಶ್ರೇಯಸ್ ಐಯ್ಯರ್

ವೇಳಾಪಟ್ಟಿ

ವೇಳಾಪಟ್ಟಿ

27 ಆಗಸ್ಟ್‌: ಶ್ರೀಲಂಕಾ ವರ್ಸಸ್ ಅಫ್ಘಾನಿಸ್ತಾನ (ದುಬೈ)

28 ಆಗಸ್ಟ್‌: ಭಾರತ ವರ್ಸಸ್ ಪಾಕಿಸ್ತಾನ (ದುಬೈ)

30 ಆಗಸ್ಟ್‌: ಬಾಂಗ್ಲಾದೇಶ ವರ್ಸಸ್ ಅಫ್ಘಾನಿಸ್ತಾನ (ದುಬೈ)

31 ಆಗಸ್ಟ್‌: ಭಾರತ ವರ್ಸಸ್ ಕ್ವಾಲಿಫೈಯರ್ (ದುಬೈ)

1 ಸೆಪ್ಟೆಂಬರ್: ಶ್ರೀಲಂಕಾ ವರ್ಸಸ್ ಬಾಂಗ್ಲಾದೇಶ (ದುಬೈ)

2 ಸೆಪ್ಟೆಂಬರ್: ಪಾಕಿಸ್ತಾನ ವರ್ಸಸ್ ಕ್ವಾಲಿಫೈಯರ್ (ಶಾರ್ಜಾ)

3 ಸೆಪ್ಟೆಂಬರ್: B1 vs B2 (ಶಾರ್ಜಾ)

4 ಸೆಪ್ಟೆಂಬರ್: A1 vs A2 (ದುಬೈ)

6 ಸೆಪ್ಟೆಂಬರ್: A1 vs B1 (ದುಬೈ)

7 ಸೆಪ್ಟೆಂಬರ್: A2 vs B2 (ದುಬೈ)

8 ಸೆಪ್ಟೆಂಬರ್: A1 vs B2 (ದುಬೈ)

9 ಸೆಪ್ಟೆಂಬರ್: B1 vs A2 (ದುಬೈ)

11 ಸೆಪ್ಟೆಂಬರ್: ಫೈನಲ್‌ (ದುಬೈ)

ಪಾಕ್ ತಂಡ ಕೂಡ ದುಬೈಗೆ ತಲುಪಿದೆ

ಪಾಕ್ ತಂಡ ಕೂಡ ದುಬೈಗೆ ತಲುಪಿದೆ

ಅತ್ತ ಟೀಂ ಇಂಡಿಯಾಗೂ ಮುನ್ನ ಪಾಕಿಸ್ತಾನ ತಂಡ ದುಬೈ ತಲುಪಿದೆ. ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಸೇರಿದಂತೆ ಪ್ರಕಟವಾಗಿರುವ ತಂಡದ ಬಹುತೇಕ ಆಟಗಾರರು ದುಬೈಗೆ ಬಂದಿಳಿದಿದ್ದಾರೆ.

ಏಷ್ಯಾಕಪ್‌ಗೆ ಪ್ರಕಟವಾದ ಪಾಕಿಸ್ತಾನ ತಂಡ: ಬಾಬರ್ ಆಜಮ್ (ನಾಯಕ), ಶಾದಾಬ್ ಖಾನ್, ಆಸಿಫ್ ಅಲಿ, ಫಖರ್ ಜಮಾನ್, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ವಾಸಿಂ ಜೂನಿಯರ್, ನಸೀಮ್ ಶಾ, ಶಾಹೀನ್ ಶಾ ಅಫ್ರಿದಿ, ಶಹನವಾಜ್ ದಹಾನಿ ಮತ್ತು ಉಸ್ಮಾನ್ ದಹಾನಿ

* ಗಾಯದ ಸಮಸ್ಯೆಯಿಂದಾಗಿ ತಂಡದ ಪ್ರಮುಖ ಬೌಲರ್ ಶಾಹಿನ್ ಅಫ್ರಿದಿ ಅಲಭ್ಯರಾಗಿದ್ದು, ಬದಲಿಗೆ ಮೊಹಮ್ಮದ್ ಹಸ್ನೈನ್ ಅವರನ್ನು ಆಯ್ಕೆ ಮಾಡಲಾಗಿದೆ.

Story first published: Tuesday, August 23, 2022, 16:03 [IST]
Other articles published on Aug 23, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X