IND vs PAK: ಎಲ್ಲಾ ಕೈಕೊಟ್ಟಾಗ ಆತ ಕೈಹಿಡಿದ; ಸೋತರೂ ತಂಡದ ಉತ್ತಮ ಆಟಗಾರನನ್ನು ಹೊಗಳಿದ ರೋಹಿತ್!

ನಿನ್ನೆಯಷ್ಟೆ ( ಸೆಪ್ಟೆಂಬರ್ 4 ) ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಬಾರಿಯ ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದ ದ್ವಿತೀಯ ಪಂದ್ಯ ಜರುಗಿತು. ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ನಡೆದ ಈ ಹಣಾಹಣಿಯಲ್ಲಿ ಟೀಮ್ ಇಂಡಿಯಾ ವಿರುದ್ಧ ಪಾಕಿಸ್ತಾನ 5 ವಿಕೆಟ್‍ಗಳ ರೋಚಕ ಜಯವನ್ನು ಸಾಧಿಸಿತು.
ಪಂದ್ಯದಲ್ಲಿ ಟಾಸ್ ಗೆದ್ದಿದ್ದ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಫೀಲಿಂಗ್ ಆಯ್ದುಕೊಳ್ಳುವುದರ ಮೂಲಕ ಮೊದಲು ಟೀಮ್ ಇಂಡಿಯಾವನ್ನು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 181 ರನ್ ಕಲೆಹಾಕಿ ಪಾಕಿಸ್ತಾನ ತಂಡಕ್ಕೆ ಗೆಲ್ಲಲು 182 ರನ್‌ಗಳ ಸವಾಲಿನ ಗುರಿಯನ್ನು ನೀಡಿತ್ತು. ಅತ್ತ ಈ ಗುರಿಯನ್ನು ಬೆನ್ನಟ್ಟಿದ ಪಾಕಿಸ್ತಾನ ಮೊಹಮ್ಮದ್ ರಿಜ್ವಾನ್ ಹಾಗೂ ಮೊಹಮ್ಮದ್ ನವಾಜ್ ಅವರ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ 19.5 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 182 ರನ್ ಕಲೆಹಾಕಿ ಗೆಲುವಿನ ನಗೆ ಬೀರಿತು.
ಸವಾಲಿನ ಮೊತ್ತ ಕಲೆಹಾಕಿದ ಹೊರತಾಗಿಯೂ ಟೀಮ್ ಇಂಡಿಯಾ ಬೌಲಿಂಗ್ ವಿಭಾಗ ವಿಫಲಗೊಂಡ ಕಾರಣದಿಂದಾಗಿ ಭಾರತ ಸೋಲನ್ನು ಅನುಭವಿಸಬೇಕಾಯಿತು. ಇನ್ನು ಪಾಕಿಸ್ತಾನ ಟಿ ಟ್ವೆಂಟಿ ಕ್ರಿಕೆಟ್ ಇತಿಹಾಸದಲ್ಲಿಯೇ ಭಾರತದ ವಿರುದ್ಧ ಚೇಸ್ ಮಾಡಿ ಗೆದ್ದ ಅತಿ ಹೆಚ್ಚು ರನ್ ಮೊತ್ತ ಕೂಡ ಇದಾಗಿತ್ತು. ಹೀಗೆ ಪಾಕಿಸ್ತಾನದ ವಿರುದ್ಧ ಬೃಹತ್ ಮೊತ್ತ ಕಲೆಹಾಕಿದ ಹೊರತಾಗಿಯೂ ಸೋಲನ್ನು ಅನುಭವಿಸಿದ ನಂತರ ಪಂದ್ಯದ ಕುರಿತಾಗಿ ಮಾತನಾಡಿದ ರೋಹಿತ್ ಶರ್ಮಾ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪ್ರದರ್ಶನದ ಬಗ್ಗೆಯೂ ಕೂಡ ತಮ್ಮ ಅಭಿಪ್ರಾಯವನ್ನು ಕೆಳಕಂಡಂತೆ ತಿಳಿಸಿದರು.

ಎಲ್ಲಾ ಔಟ್ ಆಗುತ್ತಿದ್ದಾಗ ಆತ ಚೆನ್ನಾಗಿ ಆಡಿದ
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಆಟಗಾರರು ಒಂದೆಡೆ ವಿಕೆಟ್ ಕಳೆದುಕೊಳ್ಳುತ್ತಿದ್ದರೆ ಮತ್ತೊಂದೆಡೆ ನೆಲಕಚ್ಚಿ ನಿಂತು ಉತ್ತಮ ಬ್ಯಾಟಿಂಗ್ ಪ್ರದರ್ಶನ ಮಾಡಿದ ವಿರಾಟ್ ಕೊಹ್ಲಿಯನ್ನು ರೋಹಿತ್ ಶರ್ಮಾ ಪಂದ್ಯ ಮುಗಿದ ನಂತರ ಹೊಗಳಿದ್ದಾರೆ. ವಿರಾಟ್ ಕೊಹ್ಲಿಯ ಈ ಆಟ ಅತ್ಯುತ್ತಮವಾಗಿತ್ತು, ತಂಡದ ಆಟಗಾರರು ಒಂದೆಡೆ ವಿಕೆಟ್ ಕಳೆದುಕೊಳ್ಳುತ್ತಿದ್ದರೆ ಮತ್ತೊಂದೆಡೆ ರನ್ ಕಲೆಹಾಕುವಂತ ಆಟಗಾರನ ಅಗತ್ಯವಿತ್ತು, ಆ ಕೆಲಸವನ್ನು ವಿರಾಟ್ ಕೊಹ್ಲಿ ಮಾಡಿದರು ಹಾಗೂ ವಿರಾಟ್ ಕೊಹ್ಲಿ ಕಲೆಹಾಕಿದ ರನ್ ತಂಡಕ್ಕೆ ಅತ್ಯಮೂಲ್ಯವಾಗಿತ್ತು ಎಂದು ರೋಹಿತ್ ಶರ್ಮಾ ಕೊಹ್ಲಿ ಪ್ರದರ್ಶನವನ್ನು ಹಾಡಿ ಹೊಗಳಿದ್ದಾರೆ.

ಆಪತ್ಬಾಂಧವನಾದ ಕೊಹ್ಲಿ, ಆದರೆ ಅರ್ಧಶತಕ ವ್ಯರ್ಥ
ಇನ್ನು ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ 44 ಎಸೆತಗಳಲ್ಲಿ 60 ರನ್ ಕಲೆ ಹಾಕಿದರು. ಈ ಮೂಲಕ ವಿರಾಟ್ ಕೊಹ್ಲಿ ತಮ್ಮ ಟಿ ಟ್ವೆಂಟಿ ಕ್ರಿಕೆಟ್ ವೃತ್ತಿಜೀವನದ 32ನೇ ಅರ್ಧ ಶತಕವನ್ನು ದಾಖಲಿಸಿದರು. ವಿರಾಟ್ ಕೊಹ್ಲಿಗೂ ಮುನ್ನ ಬಂದ ಹಾಗೂ ನಂತರದಲ್ಲಿ ಕಣಕ್ಕಿಳಿದ ಆಟಗಾರರು ಔಟ್ ಆಗಿ ಪೆವಿಲಿಯನ್ ಸೇರಿಕೊಂಡರೆ ಕೊಹ್ಲಿ ಮಾತ್ರ ಅಂತಿಮ ಓವರ್‌ವರೆಗೂ ಏಕಾಂಗಿ ಹೋರಾಟ ನಡೆಸಿ ತಂಡ ಪಾಕಿಸ್ತಾನಕ್ಕೆ ಬೃಹತ್ ಗುರಿ ನೀಡುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಒಂದುವೇಳೆ ವಿರಾಟ್ ಕೊಹ್ಲಿಯೂ ಸಹ ಈ ಪಂದ್ಯದಲ್ಲಿ ವಿಫಲರಾಗಿದ್ದಾರೆ ಟೀಮ್ ಇಂಡಿಯಾ ಅಲ್ಪ ಮೊತ್ತಕ್ಕೆ ಕುಸಿಯುತ್ತಿದ್ದಂತೂ ಖಚಿತ.

ಆಡುವ ಬಳಗಗಳು
ಭಾರತ ಆಡುವ ಬಳಗ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಾಹಲ್, ಅರ್ಷ್ದೀಪ್ ಸಿಂಗ್
ಬೆಂಚ್: ದಿನೇಶ್ ಕಾರ್ತಿಕ್, ಅವೇಶ್ ಖಾನ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್
ಪಾಕಿಸ್ತಾನದ ಆಡುವ ಬಳಗ: ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಫಖರ್ ಜಮಾನ್, ಖುಶ್ದಿಲ್ ಶಾ, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಆಸಿಫ್ ಅಲಿ, ಮೊಹಮ್ಮದ್ ನವಾಜ್, ಹಾರಿಸ್ ರೌಫ್, ಮೊಹಮ್ಮದ್ ಹಸ್ನೇನ್, ನಸೀಮ್ ಶಾ
ಬೆಂಚ್: ಉಸ್ಮಾನ್ ಖಾದಿರ್, ಹೈದರ್ ಅಲಿ, ಹಸನ್ ಅಲಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications