Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಏಷ್ಯಾ ಕಪ್‌ನಲ್ಲಿ ರೋಹಿತ್ ಶರ್ಮಾಗೆ ಆರಂಭಿಕನಾಗಿ ರಾಹುಲ್ ಸಾಥ್ ನೀಡಲ್ಲ ಎಂದ ಮಾಜಿ ಕ್ರಿಕೆಟಿಗ

Asia Cup 2022: Saba Karim said Rohit and Kohli likely to open in india vs Pakistan match

ಏಷ್ಯಾ ಕಪ್‌ಗೆ ಕ್ಷಣಗಣನೆ ಆರಂಭವಾಗಿದೆ. ಎಲ್ಲಾ ತಂಡಗಳು ಕುಡ ಅಂತಿಮ ಹಂತದ ಸಿದ್ಧತೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ಭಾರತ ತಂಡದ ಆರಂಭಿಕ ಸ್ಥಾನದ ಬಗ್ಗೆ ಮಾಜಿ ಕ್ರಿಕೆಟಿಗ ಸಬಾ ಕರೀಮ್ ಕುತೂಹಲಕಾರಿ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಈ ಟೂರ್ನಿಯಲ್ಲಿ ಭಾರತದ ಪರವಾಗಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಜೋಡಿ ಬದಲಿಗೆ ಕೊಹ್ಲಿ ರೋಹಿತ್ ಜೋಡಿ ಕಣಕ್ಕಿಳಿಯಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಕೆಎಲ್ ರಾಹುಲ್ ಗಾಯದ ಕಾರಣ ಸುದೀರ್ಘ ಕಾಲ ಭಾರತ ತಂಡದಿಂದ ಹೊರಗುಳಿದಿದ್ದರು. ಕಳೆದ ಜಿಂಬಾಬ್ವೆ ಪ್ರವಾಸದಲ್ಲಿ ಭಾರತ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ ರಾಹುಲ್ ಉತ್ತಮ ಪ್ರದರ್ಶನ ನೀಡಲು ವಿಫಲವಾಗಿದ್ದರು. ಎರಡು ಇನ್ನಿಂಗ್ಸ್‌ನಲ್ಲಿ ರಾಹುಲ್ 1 ಹಾಗೂ 30 ರನ್‌ಗಳನ್ನು ಗಳಿಸಲಷ್ಟೇ ಶಕ್ತವಾಗಿದ್ದರು. ಹೀಗಾಗಿ ರಾಹುಲ್ ಫಾರ್ಮ್ ಬಗ್ಗೆ ಕೂಡ ಈತ ಕಳವಳ ಮೂಡಿಸಿದೆ.

ಈ ಹಿನ್ನೆಲೆಯಲ್ಲಿ ಭಾರತ ತಮಡದ ಆರಂಭಿಕ ಸ್ಥಾನದ ಬಗ್ಗೆ ಮಾಜಿ ಕ್ರಿಕೆಟಿಗ ಸಬಾ ಕರೀಮ್ ಮಾತನಾಡಿದ್ದಾರೆ. ವಿರಾಟ್ ಕೊಹ್ಲಿ ಜೊತೆಗೆ ರೋಹಿತ್ ಶರ್ಮಾ ಆರಂಭಿಕನಾಗಿ ಕಣಕ್ಕಿಳಿಯುವುದು ಲಭ್ಯ ಆಯ್ಕೆಯಾಗಿದೆ. ಇದು ಸಾಧ್ಯವಾದರೆ ದಿನೇಶ್ ಕಾರ್ತಿಕ್ ಅವರನ್ನು ಆಡುವ ಬಳಗದಲ್ಲಿ ಸೇರಿಸಿಕೊಳ್ಳಲು ಸಾಧ್ಯವಾಗಲಿದೆ" ಎಂದಿದ್ದಾರೆ ಸಬಾ ಕರೀಮ್. ಕೆಎಲ್ ರಾಹುಲ್ ಫಾರ್ಮ್ ಬಗ್ಗೆ ಮಾತನಾಡಿರುವ ಅವರು ಕೆಎಲ್ ರಾಹುಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡಿದ್ದಾರೆ. ಆದರೆ ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಅವರು ಫಾರ್ಮ್ ಕಂಡುಕೊಳ್ಳಲು ಸಾಧ್ಯವಾಗಲಿಲ್ಲ. ಹಾಗಾಗಿ ಅವರಿಗೆ ಸ್ವಲ್ಪ ಸಮಯಾವಕಾಶ ಬೇಕಾಗಬಹುದು. ಹೀಗಾಗಿ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಆರಂಭಿಕನಾಗಿ ಕಣಕ್ಕಿಳಿಯುವುದು ಸೂಕ್ತ ಎಂದಿದ್ದಾರೆ ಸಬಾ ಕರೀಮ್.

ಏಷ್ಯಾ ಕಪ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳ ಮುಖಾಮುಖಿ ಈಗ ಎಲ್ಲರ ಕುತೂಹಲದ ಕೇಂದ್ರವಾಗಿದೆ. ಮುಂದಿನ ಭಾನುವಾರ ನಡೆಯಲಿರುವ ಈ ಪಂದ್ಯವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾಯುತ್ತಿದ್ದಾರೆ. ಕಳೆದ ವರ್ಷ ವಿಶ್ವಕಪ್‌ನಲ್ಲಿ ಭಾರತಕ್ಕೆ ಪಾಕಿಸ್ತಾನ ಸೋಲುಣಿಸಿರುವ ಹಿನ್ನೆಲೆಯಲ್ಲಿ ಈ ಬಾರಿ ಯಾವ ರೀತಿಯ ಪ್ರದರ್ಶನಗಳು ಎರಡೂ ತಂಡಗಳು ನೀಡಬಹುದು ಎಂಬುದು ಎಲ್ಲರ ಕುತೂಹಲ.

ಏಷ್ಯಾ ಕಪ್ ಟೂರ್ನಿ ಆಗಸ್ಟ್ 27ರಂದು ನಡೆಯಲಿದ್ದು ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನದ ವಿರುದ್ಧದ ಪಂದ್ಯದ ಮೂಲಕ ಚಾಲನೆ ದೊರೆಯಲಿದೆ. ಟೂರ್ನಿಯ ಎರಡನೇ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಮಡಗಳು ಮುಖಾಮುಖಿಯಾಗಲಿದ್ದು ಈ ಪಂದ್ಯ ಭಾನುವಾರ ನಡೆಯಲಿದೆ. ಬದ್ಧ ಎದುರಾಳಿಗಳ ಈ ಕದನ ಈಗ ಸಾಕಷ್ಟು ಕುತೂಹಲ ಮೂಡಿಸಿದ್ದು ಕ್ರಿಕೆಟ್ ಅಭಿಮಾನಿಗಳು ಕುತೂಹಲದಿಂದ ಎದುರು ನೋಡುತ್ತಿದ್ದಾರೆ.

ಭಾರತ ಹಾಗೂ ಪಾಕಿಸ್ತಾನ ಸ್ಕ್ವಾಡ್

ಭಾರತ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್,

ಪಾಕಿಸ್ತಾನ್: ಬಾಬರ್ ಅಜಮ್ (ನಾಯಕ), ಶಾದಾಬ್ ಖಾನ್, ಆಸಿಫ್ ಅಲಿ, ಫಖರ್ ಜಮಾನ್, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ಶಹನವಾಜ್ ದಹಾನಿ, ಉಸ್ಮಾನ್ ಖಾದಿರ್, ಮೊಹಮ್ಮದ್ ಹಸ್ನೈನ್

Story first published: Friday, August 26, 2022, 9:52 [IST]
Other articles published on Aug 26, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+