ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಆ ಒಂದು ಕ್ರಮಾಂಕಕ್ಕೆ ಶೀಘ್ರದಲ್ಲೇ ಪರಿಹಾರ ಕಂಡುಕೊಳ್ಳಿ: ಟೀಮ್ ಇಂಡಿಯಾಗೆ ಸಬಾ ಕರೀಮ್ ಸಲಹೆ

Asia Cup 2022: Saba Karim statement on team Indias No. 4 order said need to sort out
Asia Cupನಲ್ಲಿ ಈ ಬಾರಿ ಈ ಆಟಗಾರರೇ ಮಿಂಚೋದು | *Cricket | OneIndia Kannada

ಏಷ್ಯಾ ಕಪ್ ಟೂರ್ನಿಯ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಅದಕ್ಕೂ ಮುನ್ನ ಭಾರತ ತಂಡ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿದ್ದರೂ ಈ ಸರಣಿಯಲ್ಲಿ ಏಕದಿನ ಪಂದ್ಯಗಳನ್ನು ಮಾತ್ರವೇ ಆಡಲಿದೆ. ಈ ಹಿನ್ನೆಲೆಯಲ್ಲಿ ಭಾರತದ ಮಾಜಿ ವಿಕೆಟ್ ಕೀಪರ್ ಸಬಾ ಕರೀಮ್ ಪ್ರತಿಕ್ರಿಯೆ ನೀಡಿದ್ದು ಟೀಮ್ ಇಂಡಿಯಾ ಎದುರಿಸುತ್ತಿರುವ ಒಂದು ಗೊಂದಲಕ್ಕೆ ಸಾಧ್ಯವಾದಷ್ಟು ಬೇಗ ಪರಿಹಾರವನ್ನು ಕಂಡುಕೊಳ್ಳಬೇಕು ಎಂದಿದ್ದಾರೆ.

ಟೀಮ್ ಇಂಡಿಯಾದ ನಾಲ್ಕನೇ ಕ್ರಮಾಂಕದ ಗೊಂದಲದ ಬಗ್ಗೆ ಸಬಾ ಕರೀಮ್ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ತಮ್ಮ ಬ್ಯಾಟಿಂಗ್ ಕ್ರಮಾಂಕಕ್ಕೆ ಪೂರಕವಾಗುವಂತೆ ಹೊಂದಾಣಿಕೆಯಾಗುವ ನಾಲ್ಕನೇ ಕ್ರಮಾಂಕದ ಬ್ಯಾಟರ್‌ಅನ್ನು ಭಾರತ ತಂಡ ಹೊಂದಬೇಕಿದೆ ಎಂದಿದ್ದಾರೆ ಮಾಜಿ ವಿಕೆಟ್ ಕೀಪರ್ ಬ್ಯಾಟರ್ ಸಬಾ ಕರೀಮ್.

ಭಾರತ ವಿರುದ್ಧದ ಏಕದಿನ ಸರಣಿಗೆ ಜಿಂಬಾಬ್ವೆ ತಂಡ ಪ್ರಕಟ: ರೇಗಿಸ್ ಚಕಬ್ವಾ ನಾಯಕಭಾರತ ವಿರುದ್ಧದ ಏಕದಿನ ಸರಣಿಗೆ ಜಿಂಬಾಬ್ವೆ ತಂಡ ಪ್ರಕಟ: ರೇಗಿಸ್ ಚಕಬ್ವಾ ನಾಯಕ

"ನಾಲ್ಕನೇ ಕ್ರಮಾಂಕ ಭಾರತಕ್ಕೆ ಸವಾಲಾಗಬಹುದು"

ಇತ್ತೀಚೆಗೆ ರಿಷಭ್ ಪಂತ್ ಅವರನ್ನು ನಾಲ್ಕನೇ ಕ್ರಮಾಂಕದಲ್ಲಿ ಆಡಿಸಿತ್ತು ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್. ಅಲ್ಲದೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಪಂತ್ ಶರಂಭಿಕನಾಗಿಯೂ ಕಣಕ್ಕಿಳಿದಿದ್ದರು. ಹೋಗಾಗಿ ನಾಲ್ಕನೇ ಕ್ರಮಾಂಕದಲ್ಲಿ ಯಾವ ಆಟಗಾರನನ್ನು ಕಣಕ್ಕಿಳಿಲು ಭಾರತ ತಂಡ ಬಯಸುತ್ತದೆ ಎಂಬುದು ಕುತೂಹಲ ಮೂಡಿಸಿದೆ. "ಖಂಡಿತವಾಗಿಯೂ ಭಾರತ ತಂಡ ನಾಲ್ಕನೇ ಕ್ರಮಾಂಕದ ಬಗೆಗಿನ ಗೊಂದಲವನ್ನು ಶೀಘ್ರದಲ್ಲಿ ಪರಿಹರಿಸಿಕೊಳ್ಳಬೇಕಿದೆ. ಈ ಕ್ರಮಾಂಕವನ್ನು ಓರ್ವ ನಿಗದಿತ ಆಟಗಾರನಿಗೆ ನೀಡಬೇಕಿದೆ" ಎಂದಿದ್ದಾರೆ ಸಬಾ ಕರೀಮ್.

4ನೇ ಕ್ರಮಾಂಕಕ್ಕೆ ಸೂರ್ಯಕುಮಾರ್ ಬೆಸ್ಟ್ ಎಂದ ಸಬಾ

4ನೇ ಕ್ರಮಾಂಕಕ್ಕೆ ಸೂರ್ಯಕುಮಾರ್ ಬೆಸ್ಟ್ ಎಂದ ಸಬಾ

ಇನ್ನು ಈ ಸಂದರ್ಭದಲ್ಲಿ ಟೀಮ್ ಇಂಡಿಯಾ ಟಿ20 ತಂಡದ ನಾಲ್ಕನೇ ಕ್ರಮಾಂಕಕ್ಕೆ ಸೂರ್ಯಕುಮಾರ್ ಯಾದವ್ ಅತ್ಯುತ್ತಮ ಆಯ್ಕೆ ಎಂದಿದ್ದಾರೆ ಸಬಾ ಕರೀಮ್. ಇನ್ನು ಮ್ಯಾನೇಜ್‌ಮೆಂಟ್ ರಿಷಭ್ ಪಂತ್ ಹಾಗೂ ದಿನೇಶ್ ಕಾರ್ತಿಕ್ ಅವರನ್ನು ಈ ಕ್ರಮಂಕಕ್ಕೆ ಆಯ್ಕೆ ಮಾಡಿಕೊಳ್ಳಬಹುದು. ಈ ಇಬ್ಬರನ್ನು ಆಯ್ಕೆ ಮಾಡದಿದ್ದಲ್ಲಿ ಸೂರ್ಯಕುಮಾರ್ ಯಾದವ್ ಸೂಕ್ತ ಆಟಗಾರನಾಗುತ್ತಾರೆ. ಅದು ಅವರ ಅತ್ಯುತ್ತಮ ಕ್ರಮಾಂಕವಾಗಿದೆ ಎಂದಿದ್ದಾರೆ ಸಬಾ ಕರೀಮ್.

ಭಾರತ ವಿರುದ್ಧದ ಏಕದಿನ ಸರಣಿಗೆ ಜಿಂಬಾಬ್ವೆ ತಂಡ ಪ್ರಕಟ: ರೇಗಿಸ್ ಚಕಬ್ವಾ ನಾಯಕ

ಕೊಹ್ಲಿ, ಕೆಎಲ್ ರಾಹುಲ್ ಕಮ್‌ಬ್ಯಾಕ್

ಕೊಹ್ಲಿ, ಕೆಎಲ್ ರಾಹುಲ್ ಕಮ್‌ಬ್ಯಾಕ್

ಏಷ್ಯಾ ಕಪ್‌ನ ತಂಡಕ್ಕೆ ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಕಮ್‌ಬ್ಯಾಕ್ ಮಾಡಿದ್ದಾರೆ. ರಾಹುಲ್ ಆರಂಭಿಕನಾಗಿ ಕಣಕ್ಕಿಳಿಯುವ ಸಾಧ್ಯತೆಯಿದ್ದು ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಇನ್ನು ಅನುಭವಿ ದಿನೇಶ್ ಕಾರ್ತಿಕ್‌ಗೆ ಫಿನಿಷರ್ ಆಗಿ ತಂಡದಲ್ಲಿ ಸ್ಥಾನವನ್ನು ನೀಡಲಾಗಿದ್ದು ಏಷ್ಯಾಕಪ್‌ನಲ್ಲಿಯೂ ಈ ನಿರ್ಧಾರವನ್ನು ಮುಂದುವರಿಸಲಾಗುತ್ತದೆಯೇ ಎಂಬುದು ಕುತೂಹಲ ಮೂಡಿಸಿದೆ.

ಟಿ20 ವಿಶ್ವಕಪ್ 2022: ಇದೇ ನೋಡಿ ಸೆಮಿಫೈನಲ್ ಹಂತಕ್ಕೇರುವ ನಾಲ್ಕು ಸಂಭಾವ್ಯ ತಂಡಗಳು!

5 ಬೌಲರ್‌ಗಳು ಹಾಗೂ ಹಾರ್ದಿಕ್ ಪಾಂಡ್ಯ

5 ಬೌಲರ್‌ಗಳು ಹಾಗೂ ಹಾರ್ದಿಕ್ ಪಾಂಡ್ಯ

ಇನ್ನು ಭಾರತದ ಬೌಲಿಂಗ್ ವಿಭಾಗದ ಬಗ್ಗೆ ಮಾತನಾಡಿರುವ ಸಬಾ ಕರೀಮ್ ಟೀಮ್ ಇಂಡಿಯಾ ಐವರು ಬೌಲರ್‌ಗಳು ಹಾಗೂ ಆರನೇ ಬೌಲರ್ ಆಗಿ ಹಾರ್ದಿಕ್ ಪಾಂಡ್ಯ ಅವರೊಂದಿಗೆ ಅದ್ಭುತವಾಗಿ ಪ್ರದರ್ಶನ ನೀಡುತ್ತಾ ಬಂದಿದೆ. ಈ ಸಂಯೋಜನೆಯನ್ನೇ ಬಳಸಿಕೊಳ್ಳುವುದು ಉತ್ತಮ ಎಂದಿದ್ದಾರೆ. ಆದರೆ ದಿನೇಶ್ ಕಾರ್ತಿಕ್ ಅವರನ್ನು ತಂಡದಲ್ಲಿ ಆಡಸಬೇಕೆಂದಿದ್ದರೆ ಈ ಸಂಯೋಜನೆಯೊಂದಿಗೆ ರಾಜಿ ಮಾಡಿಕೊಳ್ಳಬೇಕಾಗುತ್ತದೆ. ನಾಲ್ವರು ಬೌಲರ್‌ಗಳ ಜೊತೆಗೆ ಹಾರ್ದಿಕ್ ಪಾಂಡ್ಯ ಐದನೇ ಬೌಲರ್ ಆಗಿ ಕಣಕ್ಕಿಳಿಯಬೇಕಾಗುತ್ತದೆ ಎಂದಿದ್ದಾರೆ ಸಾಬಾ ಕರೀಮ್.

ಏಷ್ಯಾಕಪ್ ಟೂರ್ನಿಗೆ ಪ್ರಕಟವಾದ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಯುಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್

Story first published: Friday, August 12, 2022, 14:56 [IST]
Other articles published on Aug 12, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X