ಪಾಕಿಸ್ತಾನದ ವಿರುದ್ಧ ಅಬ್ಬರಿಸಲು ಆತ ಸಿದ್ಧ: ಕನ್ನಡಿಗನ ಮೇಲೆ ಕಿವೀಸ್ ಮಾಜಿ ಸ್ಟಾರ್ ಕ್ರಿಕೆಟಿಗನ ವಿಶ್ವಾಸ

ಪ್ರತಿಷ್ಠಿತ ಏಷ್ಯಾ ಕಪ್ ಟೂರ್ನಿಯ ಆರಂಭಕ್ಕೆ ಇನ್ನು ಕೇವಲ ಮೂರು ದಿನಗಳು ಮಾತ್ರವೇ ಬಾಕಿಯಿದೆ. ಶನಿವಾರ ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ ತಂಡಗಳ ನಡುವಿನ ಮುಖಾಮುಖಿಯೊಂದಿಗೆ ಸರಣಿ ಆರಂಭವಾಗಲಿದ್ದು ಭಾರತ ತಂಡ ಮುಂದಿನ ಭಾನುವಾರ ಪಾಕಿಸ್ತಾನದ ವಿರುದ್ಧದ ಪಂದ್ಯದ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಈ ಕದನದ ಮೇಲೆ ಎಲ್ಲರ ದೃಷ್ಟಿಯಿದ್ದು ಅಭಿಮಾನಿಗಳು ಕುತೂಹಲದಿಂದ ಈ ಪಂದ್ಯವನ್ನು ಎದುರು ನೋಡುತ್ತಿದ್ದಾರೆ.
ಅಭಿಮಾನಿಗಳು ಮಾತ್ರವಲ್ಲದೆ ಕ್ರಿಕೆಟ್ ವಿಶ್ಲೇಷಕರು ಕೂಡ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯವನ್ನು ಸಾಕಷ್ಟು ಕುತೂಹಲದಿಂದ ಕಾಯುತ್ತಿದ್ದಾರೆ. ಇದಕ್ಕೆ ಅವರು ನೀಡುತ್ತಿರುವ ಪ್ರತಿಕ್ರಿಯೆಗಳೇ ಸಾಕ್ಷಿಯಾಗಿದೆ. ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಮಾಜಿ ಆಟಗಾರ, ಆಲ್‌ರೌಂಡರ್ ಸ್ಕಾಟ್ ಸ್ಟೈರಿಸ್ ಈ ವಿಚಾರವಾಗಿ ಪ್ರತಿಕ್ರಿಯಿಸಿದ್ದು ಈ ಪಂದ್ಯದಲ್ಲಿ ಆರಂಭಿಕ ಆಟಗಾರ ಕೆಎಲ್ ರಾಹುಲ್ ಮಿಂಚಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಕೆಎಲ್ ರಾಹುಲ್ ಬಗ್ಗೆ ಚಿಂತಿತನಾಗಿಲ್ಲ
ನ್ಯೂಜಿಲೆಂಡ್ ಕ್ರಿಕೆಟ್‌ನ ಮಾಜಿ ಆಲ್‌ರೌಂಡರ್ ಸ್ಕ್ವಾಟ್ ಸ್ಟೈರಿಸ್ ಕೆಎಲ್ ರಾಹುಲ್ ಅವರ ಕಮ್‌ಬ್ಯಾಕ್‌ನ ಫಾರ್ಮ್ ಆತಂಕಪಡುವಂತದ್ದೇನಿಲ್ಲ ಎಂದಿದ್ದಾರೆ. ಮೈದಾನದಲ್ಲಿ ಹೆಚ್ಚು ಹೊತ್ತು ಕಾಲ ಕಳೆದಂತೆ ಅವರಿಂದ ಸರಾಗವಾಗಿ ರನ್ ಹರಿದುಬರಲಿದೆ ಎಂದಿದ್ದಾರೆ. "ಕೆಎಲ್ ರಾಹುಲ್ ವಿಚಾರವಾಗಿ ಆತಂಕಪಡುವಂತದ್ದೇನೂ ಇಲ್ಲ. ಅವರು ಕಮ್‌ಬ್ಯಾಕ್ ಬಳಿಕ ಕೇವಲ 5-10 ಎಸೆತಗಳನ್ನಷ್ಟೇ ಎದುರಿಸಿದ್ದರೆ ಆತಂಕವಾಗುತ್ತಿತ್ತು. ಕಳೆದ ಪಂದ್ಯಗಳಲ್ಲಿ ಅವರು 46 ಎಸೆತಗಳನ್ನು ಎದುರಿಸಿದ್ದಾರೆ. ಇದರರ್ಥ ಅವರು ಸಾಕಷ್ಟು ಕಾಲವನ್ನು ಅಂಗಳದ ಮಧ್ಯೆ ಕಳೆದಿದ್ದಾರೆ. ಈ ಅವಧಿ ಅವರಿಗೆ ನೆಟ್ಸ್‌ನಲ್ಲಿ ನಿಡಿದಕ್ಕಿಂತ ಹೆಚ್ಚಿನ ಆತ್ಮವಿಶ್ವಾಸವನ್ನು ನೀಡುತ್ತದೆ. ಹೀಗಾಗಿ ಆತ ಪಾಕಿಸ್ತಾನದ ವಿರುದ್ಧ ಪಂದ್ಯಕ್ಕೆ ಸಿದ್ಧವಾಗಿದ್ದಾರೆ ಎಂದು ಭಾವಿಸುತ್ತೇನೆ" ಎಂದಿದ್ದಾರೆ ಕೆಎಲ್ ರಾಹುಲ್.

ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಕಮ್‌ಬ್ಯಾಕ್ ಮಾಡಿದ ರಾಹುಲ್
ಅನುಭವಿ ಆಟಗಾರ ಕೆಎಲ್ ರಾಹುಲ್ ಕಳೆದ ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಭಾರತ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ. ಗಾಯದಿಂದಾಗಿ ಕಳೆದ ಎರಡು ತಿಂಗಳಿನಿಂದ ರಾಹುಲ್ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರವುಳಿದಿದ್ದರು. ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಅವರು ಜಿಂಬಾಬ್ವೆ ಸರಣಿಯಲ್ಲಿ ಭಾರತ ತಂಡದ ನಾಯಕತ್ವವನ್ನು ವಹಿಸಿಕೊಂಡು ಮುನ್ನಡೆಸಿದ್ದರು. ಎರಡು ಇನ್ನಿಂಗ್ಸ್‌ನಲ್ಲಿ ರಾಹುಲ್ ಬ್ಯಾಟಿಂಗ್ ನಡೆಸಿದ್ದರಾದರೂ ದೊಡ್ಡ ಮಟ್ಟದ ಯಶಸ್ಸು ಸಾಧ್ಯವಾಗಿರಲಿಲ್ಲ. ಆದರೆ ಈ ಸರಣಿಯಲ್ಲಿ ಭಾರತ ವೈಟ್‌ವಾಶ್ ಮಾಡಿ ಸರಣಿಯನ್ನು ವಶಕ್ಕೆ ಪಡೆದುಕೊಂಡಿದೆ.

ರೋಹಿತ್ ಶರ್ಮಾ ನೇತೃತ್ವದಲ್ಲಿ ಕಣಕ್ಕಿಳಿಯಲಿದೆ ಭಾರತ
ಇನ್ನು ಈ ಬಾರಿಯ ಏಷ್ಯಾ ಕಪ್ ಸರಣಿಯಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು ಟೂರ್ನಿ ಗೆಲ್ಲುವ ಫೇವರೀಟ್ ತಂಡ ಎನಿಸಿದೆ. ಅನುಭವಿ ಆಟಗಾರ ವಿರಾಟ್ ಕೊಹ್ಲಿ ಈ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದು ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಯೂಜಿ ಚಾಹಲ್ ಆರ್ ಅಶ್ವಿನ್ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿರುವ ಪ್ರಮುಖ ಆಟಗಾರರಾಗಿದ್ದಾರೆ.
ಏಷ್ಯಾಕಪ್ ಟೂರ್ನಿಗೆ ಪ್ರಕಟವಾದ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಯುಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಆವೇಶ್ ಖಾನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications