
ಕಳೆದ ಎರಡು ಬಾರಿಯ ರನ್ನರ್‌ಅಪ್ ತಂಡ ಬಾಂಗ್ಲಾ
ಬಾಂಗ್ಲಾದೇಶ ತಂಡ ಏಷ್ಯಾ ಕಪ್ ಟೂರ್ನಿಯಲ್ಲಿ ಕಳೆದ ಎರಡು ಆವೃತ್ತಿಗಳಲ್ಲಿ ಫೈನಲ್ ಹಂತಕ್ಕೇರಿದ ತಂಡ ಎಂಬುದು ಕುತೂಹಲಕಾರಿ ಅಂಶ. ಪಾಕಿಸ್ತಾನ ಹಾಗೂ ಶ್ರೀಲಂಕಾ ತಂಡಗಳಿಗಿಂತಲೂ ಉತ್ತಮ ಪ್ರದರ್ಶನ ನೀಡಿ ಕಳೆದ ಎರಡು ಆವೃತ್ತಿಗಳಲ್ಲಿ ಬಾಂಗ್ಲಾ ಪಡೆ ಈ ಸಾಧನೆ ಮಾಡಿತ್ತು. ಅದರಲ್ಲಿ ಒಂದು 2016ರಲ್ಲಿ ಟಿ20 ಮಾದರಿಯಲ್ಲಿ ನಡೆದಿತ್ತು ಎಂಬುದು ಮತ್ತೊಂದು ಅಂಶ. ಆದರೆ ಇತ್ತೀಚಿನ ದಿನಗಳಲ್ಲಿ ಚುಟುಕು ಕ್ರಿಕೆಟ್ ಮಾದರಿಯಲ್ಲಿ ಬಾಂಗ್ಲಾದೇಶದ ಪ್ರದರ್ಶನ ನೀರಸವಾಗಿದೆ.

ಸೋಲಿನ ಮೇಲೆ ಸೋಲು ಅನುಭವಿಸಿದೆ ಬಾಂಗ್ಲಾ
ಇನ್ನು ಚುಟುಕು ಕ್ರಿಕೆಟ್ ಮಾದರಿಯಲ್ಲಿ ಬಾಂಗ್ಲಾದೇಶದ ಕಳೆದ ವರ್ಷ ಟಿ20 ವಿಶ್ವಕಪ್‌ನ ಬಳಿಕ ನೀಡುತ್ತಿರುವ ಪ್ರದರ್ಶನ ಆಘಾತಕಾರಿಯಾಗಿದೆ. ಆಡಿರುವ 13 ಪಂದ್ಯಗಳ ಪೈಕಿ ಕೇವಲ ಎರಡು ಪಂದ್ಯಗಳಲ್ಲಿ ಮಾತ್ರವೇ ಬಾಂಗ್ಲಾದೇಶ ಗೆಲುವು ಸಾಧಿಸಲು ಯಶಸ್ವಿಯಾಗಿದೆ. ಇದೀಗ ಈ ಬಾರಿಯ ಏಷ್ಯಾ ಕಪ್‌ನ ಸೂಪರ್ 4 ಹಂತಕ್ಕೇರಬೇಕಾದರೆ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಬೇಕಿದೆ. ಮತ್ತೊಂದೆಡೆ ಅಫ್ಘಾನಿಸ್ತಾನ ತಂಡ ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಭರ್ಜರಿಯಾಗಿ ಸೋಲಿಸಿದ್ದು ಟೂರ್ನಿಯಲ್ಲಿ ಇತರ ಬಲಿಷ್ಠ ತಂಡಗಳಿಗೂ ಆಘಾತ ನೀಡುವ ಆತ್ಮವಿಶ್ವಾಸದಲ್ಲಿದೆ.

ಅಫ್ಘನ್, ಭಾರತ ತಂಡಗಳಿಗೆ ಗೆಲುವು
ಇನ್ನು ಈ ಬಾರಿಯ ಏಷ್ಯಾ ಕಪ್‌ನಲ್ಲಿ ಎರಡು ಪಂದ್ಯಗಳು ಮಾತ್ರವೇ ಮುಕ್ತಾಯವಾಗಿದ್ದು ಇದರಲ್ಲಿ ಮೊದಲ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಅಫ್ಘಾನಿಸ್ತಾನ ಅಮೋಘ 8 ವಿಕೆಟ್‌ಗಳ ಅಂತರದಿಂದ ಗೆದ್ದು ಬೀಗುವಲ್ಲಿ ಯಶಸ್ವಿಯಾಗಿತ್ತು. ಅದಾದ ಬಳಿಕ ಭಾನುವಾರ ಪಾಕಿಸ್ತಾನ ಹಾಗೂ ಭಾರತದ ವಿರುದ್ಧದ ಕದನದಲ್ಲಿ ಭಾರತ ಬದ್ಧ ಎದುರಾಳಿ ಪಾಕ್ ತಂಡವನ್ನು ರೋಚಕವಾಗಿ ಸೆಣೆಸಾಡಿ 5 ವಿಕೆಟ್‌ಗಳ ಅಂತರದಿಂದ ಗೆದ್ದು ಬೀಗಿದೆ.

ಇತ್ತಂಡಗಳ ಸ್ಕ್ವಾಡ್ ಹೀಗಿದೆ
ಬಾಂಗ್ಲಾದೇಶ: ಮೊಹಮ್ಮದ್ ನಯಿಮ್, ಅನಾಮುಲ್ ಹಕ್, ಶಕೀಬ್ ಅಲ್ ಹಸನ್ (ನಾಯಕ), ಅಫೀಫ್ ಹೊಸೈನ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮಹಮ್ಮದುಲ್ಲಾ, ಸಬ್ಬೀರ್ ರೆಹಮಾನ್, ಮಹೇದಿ ಹಸನ್, ಮೊಹಮ್ಮದ್ ಸೈಫುದ್ದೀನ್, ನಸುಮ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಮೊಸದ್ದೆಕ್ ಹೊಸೈನ್, ತಸ್ಕಿನ್ ಅಹ್ಮದ್, ಮೆಹಿದಿ ಹಸನ್ ಮಿರಾಜ್, ಎಬಾಡೋತ್ ಹೊಸೈನ್, ಪರ್ವೇಜ್ ಹೊಸೈನ್ ಎಮಾನ್.
ಅಫ್ಘಾನಿಸ್ತಾನ: ಹಜರತುಲ್ಲಾ ಝಜೈ, ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಜದ್ರಾನ್, ನಜಿಬುಲ್ಲಾ ಜದ್ರಾನ್, ಕರೀಂ ಜನತ್, ಮೊಹಮ್ಮದ್ ನಬಿ (ನಾಯಕ), ರಶೀದ್ ಖಾನ್, ಅಜ್ಮತುಲ್ಲಾ ಒಮರ್ಜಾಯ್, ನವೀನ್-ಉಲ್-ಹಕ್, ಮುಜೀಬ್ ಉರ್ ರೆಹಮಾನ್, ಫಜಲ್ಹಕ್ ಫಾರೂಕಿ, ಸಮೀವುಲ್ಲಾ ಶಿನ್ವಾರಿ, ಹಶ್ಮತುಲ್ಲಾ ಶಾಹಿದಿ, ಅಫ್ಸರ್ ಝಜೈ, ಫರೀದ್ ಅಹ್ಮದ್ ಮಲಿಕ್, ಉಸ್ಮಾನ್ ಘನಿ, ನೂರ್ ಅಹ್ಮದ್


Click it and Unblock the Notifications
