Asia Cup 2022: ಬಾಂಗ್ಲಾದೇಶ ವಿರುದ್ಧ ಟಾಸ್ ಗೆದ್ದ ಶ್ರೀಲಂಕಾ, ಲೈವ್ ಸ್ಕೋರ್

ಸದ್ಯ ಯುಎಇಯಲ್ಲಿ ನಡೆಯುತ್ತಿರುವ 2022ರ ಹದಿನೈದನೇ ಆವೃತ್ತಿಯ ಏಷ್ಯಾಕಪ್ ಟೂರ್ನಿಯ ಬಿ ಗುಂಪಿನ ಹಣಾಹಣಿಯಲ್ಲಿ ಇಂದು (ಗುರುವಾರ, ಆಗಸ್ಟ್ 1) ಶ್ರೀಲಂಕಾ ಮತ್ತು ಬಾಂಗ್ಲಾದೇಶ ತಂಡಗಳು ಪರಸ್ಪರ ಸೆಣಸಾಡುತ್ತಿವೆ.
ಉಭಯ ತಂಡಗಳು ತಮ್ಮ ಆರಂಭಿಕ ಹಣಾಹಣಿಯಲ್ಲಿ ಅಫ್ಘಾನಿಸ್ತಾನ ವಿರುದ್ಧ ಸೋಲನ್ನು ಕಂಡಿದ್ದು, ಇದೀಗ ತಮ್ಮ ಮೊದಲ ಗೆಲುವು ಕಾಣಲು ಎದುರು ನೋಡುತ್ತಿದ್ದು, ಇಂದಿನ ಹಣಾಹಣಿಯ ವಿಜೇತರು ಸೂಪರ್ 4 ಹಂತದಲ್ಲೂ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲಿದ್ದಾರೆ.
ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಫೀಲ್ಡಿಂಗ್ ಮಾಡುವ ಆಯ್ಕೆಯನ್ನು ಮಾಡಿಕೊಂಡಿದ್ದು, ತನ್ನ ಎದುರಾಳಿ ಬಾಂಗ್ಲಾದೇಶವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.
ಶ್ರೀಲಂಕಾ ಮತ್ತು ಬಾಂಗ್ಲಾದೇಶ ತಂಡಗಳ ಆಡುವ 11ರ ಬಳಗ
ಶ್ರೀಲಂಕಾ: ದನುಷ್ಕ ಗುಣತಿಲಕ, ಪಾತುಮ್ ನಿಸ್ಸಾಂಕ, ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್), ಚರಿತ್ ಅಸಲಂಕಾ, ಭಾನುಕಾ ರಾಜಪಕ್ಸೆ, ದಸುನ್ ಶನಕ (ನಾಯಕ), ವನಿಂದು ಹಸರಂಗಾ, ಚಮಿಕಾ ಕರುಣಾರತ್ನೆ, ಮಹೀಶ್ ತೀಕ್ಷಣ, ದಿಲ್ಶನ್ ಮಧುಶಂಕ, ಮತೀಶ ಪತಿರಣ.
ಬಾಂಗ್ಲಾದೇಶ: ಮೊಹಮ್ಮದ್ ನಯಿಮ್, ಅನಾಮುಲ್ ಹಕ್, ಶಾಕಿಬ್ ಅಲ್ ಹಸನ್ (ನಾಯಕ), ಅಫೀಫ್ ಹೊಸೈನ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮೊಸದ್ದೆಕ್ ಹೊಸೈನ್, ಮಹಮ್ಮದುಲ್ಲಾ, ಮಹೇದಿ ಹಸನ್, ಮೊಹಮ್ಮದ್ ಸೈಫುದ್ದೀನ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್.
ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿರುವುದರಿಂದ, ಸ್ಪೋಟಕ ಬ್ಯಾಟಿಂಗ್‌ಗೆ ಹೆಚ್ಚು ಬೆಂಬಲಿಸುವುದಿಲ್ಲ ಎಂಬುದು ಗಮನಾರ್ಹ. 160-170 ರನ್‌ಗಳನ್ನು ಗಳಿಸಿದರೆ ನಿಯಂತ್ರಿಸುವ ಅವಕಾಶವಿದೆ. ವೇಗಿಗಳಿಗೆ ಪಿಚ್‌ನಿಂದ ಉತ್ತಮ ಬೆಂಬಲ ದೊರೆಯಲಿದ್ದು, ಸ್ಪಿನ್ ಬೌಲಿಂಗ್‌ಗೆ ಹೆಚ್ಚಿನ ನೆರವು ದೊರೆಯುವುದಿಲ್ಲ.
ಹವಾಮಾನ ವರದಿ:
ಮಳೆಯಾಗುವ ಯಾವುದೇ ಸಾಧ್ಯತೆಯಿಲ್ಲ. ಪಂದ್ಯದ ಅವಧಿಯಲ್ಲಿ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್‌ನ ಸನಿಹದಲ್ಲಿರಲಿದೆ. 45 ಶೇಕಡಾದಷ್ಟು ಶುಷ್ಕತೆಯಿರಲಿದ್ದು ಗಂಟೆಗೆ 13 ಕಿ. ಮೀ ವೇಗದಲ್ಲಿ ಗಾಳಿ ಬೀಸಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications