ಏಷ್ಯಾ ಕಪ್: ಶ್ರೀಲಂಕಾಗೆ ಬಾಂಗ್ಲಾದೇಶ ಸವಾಲು: ಪೈಪೋಟಿಯಲ್ಲಿ ಮೇಲುಗೈ ಸಾಧಿಸುವವರು ಯಾರು?

ಶ್ರೀಲಂಕಾ ಹಾಗೂ ಬಾಂಗ್ಲಾದೇಶ ತಂಡಗಳು ಇಂದು ಮೈದಾನದಲ್ಲಿ ಪರಸ್ಪರ ಮುಖಾಮುಖಿಯಾಗಲು ಸಜ್ಜಾಗಿದೆ. ಪಂದ್ಯಕ್ಕೂ ಮುನ್ನವೇ ಸಾಕಷ್ಟು ಮಾತಿನ ಪೈಪೋಟಿ ನಡೆದಿದ್ದು ಅಂಗಳದಲ್ಲಿ ಮೇಲುಗೈ ಸಾಧಿಸವರು ಯಾರು ಎಂಬುದು ಈಗ ಕುತೂಹಲ ಕೆರಳಿಸಿದೆ. ಬಾಂಗ್ಲಾದೇಶ ಬಲಿಷ್ಠ ಪೈಪೋಟಿ ನೀಡುವ ತಂಡವಲ್ಲ ಎಂದಿರುವ ಶ್ರೀಲಂಕಾ ನಾಯಕನ ಹೇಳಿಕೆಗೆ ಬಾಂಗ್ಲಾದೇಶದ ಕಡೆಯಿಂದ ಕಟು ಪ್ರತಿಕ್ರಿಯೆಗಳು ಬರುತ್ತಿದ್ದು ಮೈದಾನದ ಕದನದ ಬಗ್ಗೆ ಕುತೂಹಲ ಹೆಚ್ಚಿಸಿದೆ
ಇನ್ನು ಇಂದಿನ ಈ ಪಂದ್ಯ ಎರಡು ತಂಡಗಳಿಗೂ ಗೆಲ್ಲಲೇ ಬೇಕಾದ ಪಂದ್ಯವಾಗಿದ್ದು ಗೆದ್ದ ತಂಡ ಮಾತ್ರವೇ ಟೂರ್ನಿಯ ಮುಂದಿನ ಹಂತಕ್ಕೇರಲಿದೆ. ಎರಡು ತಂಡಗಳು ಕೂಡ ಅಫ್ಘಾನಿಸ್ತಾನದ ವಿರುದ್ಧ ಲೀಗ್ ಹಂತದ ಪಂದ್ಯದಲ್ಲಿ ಸೋಲು ಅನುಭವಿಸಿದ ಕಾರಣ ಮಾಡು ಇಲ್ಲವೇ ಮಡಿ ಪರಿಸ್ಥಿತಿಗೆ ಬಂದಿದೆ. ಈ ಟೂರ್ನಿಯಲ್ಲಿ ಎರಡು ತಂಡಗಳು ಕೂಡ ತಮ್ಮ ಸಾಮರ್ಥ್ಯಕ್ಕೆ ತಕ್ಕ ಪ್ರದರ್ಶನ ನೀಡಲು ವಿಫಲವಾಗಿದ್ದು ಸಾಕಷ್ಟು ಟೀಕೆಗೆ ಗುರಿಯಾಗಿದೆ. ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಿದ ತಂಡ ಸೂಪರ್ 4 ಹಂತದಲ್ಲಿ ಅವಕಾಶವನ್ನು ಪಡೆಯಲಿದೆ.

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ
ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದ್ದು ಸ್ಪೋಟಕ ಬ್ಯಾಟಿಂಗ್‌ಗೆ ಹೆಚ್ಚು ಬೆಂಬಲಿಸುವುದಿಲ್ಲ ಎಂಬುದು ಗಮನಾರ್ಹ. 160-170 ರನ್‌ಗಳನ್ನು ಗಳಿಸಿದರೆ ನಿಯಂತ್ರಿಸುವ ಅವಕಾಶವಿದೆ. ವೇಗಿಗಳಿಗೆ ಪಿಚ್‌ನಿಂದ ಉತ್ತಮ ಬೆಂಬಲ ದೊರೆಯಲಿದ್ದು ಸ್ಪಿನ್ ಬೌಲಿಂಗ್‌ಗೆ ಹೆಚ್ಚಿನ ನೆರವ ದೊರೆಯಲಾರದು.
ಹವಾಮಾನ ವರದಿ: ಮಳೆಯಾಗುವ ಯಾವುದೇ ಸಾಧ್ಯತೆಯಿಲ್ಲ. ಪಂದ್ಯದ ಅವಧಿಯಲ್ಲಿ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್‌ನ ಸನಿಹದಲ್ಲಿರಲಿದೆ. 45 ಶೇಕಡಾದಷ್ಟು ಶುಷ್ಕತೆಯಿರಲಿದ್ದು ಗಂಟೆಗೆ 13 ಕಿ. ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಇತ್ತಂಡಗಳ ಸಂಭಾವ್ಯ ಆಡುವ ಬಳಗ
ಶ್ರೀಲಂಕಾ ಸಂಭಾವ್ಯ ಆಡುವ ಬಳಗ: ದನುಷ್ಕ ಗುಣತಿಲಕ, ಪಾತುಮ್ ನಿಸ್ಸಾಂಕ, ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್), ಚರಿತ್ ಅಸಲಂಕಾ, ಭಾನುಕ ರಾಜಪಕ್ಸೆ, ದಸುನ್ ಶನಕ ©, ವನಿಂದು ಹಸರಂಗ, ಚಾಮಿಕಾ ಕರುಣಾರತ್ನೆ, ಮಹೇಶ್ ತೀಕ್ಷಣ, ದಿಲ್ಶನ್ ಮಧುಶಂಕ, ಮಥೀಶ ಪತಿರಣ
ಬಾಂಗ್ಲಾದೇಶ ಸಂಭಾವ್ಯ XI: ಮೊಹಮ್ಮದ್ ನಯಿಮ್, ಅನಾಮುಲ್ ಹಕ್, ಶಕೀಬ್ ಅಲ್ ಹಸನ್ (ನಾಯಕ), ಅಫೀಫ್ ಹೊಸೈನ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮೊಸದ್ದೆಕ್ ಹೊಸೈನ್, ಮಹಮ್ಮದುಲ್ಲಾ, ಮಹೇದಿ ಹಸನ್, ಮೊಹಮ್ಮದ್ ಸೈಫುದ್ದೀನ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್
ಭಾರತ ವಿರುದ್ಧದ ಟಿ20 ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟ: ತಂಡದಲ್ಲಿಲ್ಲ ಸ್ಟಾರ್ ಆಟಗಾರನಿಗೆ ಸ್ಥಾನ!

ಇತ್ತಂಡಗಳ ಸಂಪೂರ್ಣ ಸ್ಕ್ವಾಡ್
ಶ್ರೀಲಂಕಾ: ದಾಸುನ್ ಶನಕ (ನಾಯಕ), ದನುಷ್ಕ ಗುಣತಿಲಕ, ಪಾತುಂ ನಿಸ್ಸಾಂಕ, ಕುಸಲ್ ಮೆಂಡಿಸ್, ಚರಿತ್ ಅಸಲಂಕ, ಭಾನುಕಾ ರಾಜಪಕ್ಸೆ, ಅಶೆನ್ ಬಂಡಾರ, ಧನಂಜಯ ಡಿ ಸಿಲ್ವಾ, ವನಿಂದು ಹಸರಂಗ, ಮಹೇಶ್ ತೀಕ್ಷಣ, ಜೆಫ್ರಿ ವಾಂಡರ್ಸೆ, ಪ್ರವೀಣ್ ಜಯವಿಕ್ರಮ, ಚಾಮಿಕ ಕರುಣರತ್ನ, ದಿಲ್ಶನ್ ಮಧುಶಂಕ, ಮಥೀಶ ಪತಿರಣ, ನುವಾನಿಡು ಫೆರ್ನಾಂಡೊ, ನುವಾನ್ ತುಸಾರ, ದಿನೇಶ್ ಚಾಂಡಿಮಲ್
ಬಾಂಗ್ಲಾದೇಶ: ಶಾಕಿಬ್ ಅಲ್ ಹಸನ್ (ನಾಯಕ), ಅನಾಮುಲ್ ಹಕ್, ಮುಶ್ಫಿಕರ್ ರಹೀಮ್, ಅಫೀಫ್ ಹೊಸೈನ್, ಮೊಸದ್ದೆಕ್ ಹೊಸೈನ್, ಮಹಮ್ಮದುಲ್ಲಾ, ಮಹೇದಿ ಹಸನ್, ಮೊಹಮ್ಮದ್ ಸೈಫುದ್ದೀನ್, ಮುಸ್ತಾಫಿಜುರ್ ರೆಹಮಾನ್, ನಸುಮ್ ಅಹ್ಮದ್, ಸಬ್ಬಿರ್ ರೆಹಮಾನ್, ಮೆಹಿದಿ ಹಸನ್ ಮಿರಾಜ್, ತಸ್ಕಿನ್ ಅಹ್ಮದ್, ಎಬಾಡೋಟ್ ಹೊಸೈನ್, ಪರ್ವೇಜ್ ಹೊಸೈನ್ ಎಮನ್, ಮೊಹಮ್ಮದ್ ನಯಿಮ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications