Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Asia cup Final: ಪಾಕ್ vs ಶ್ರೀಲಂಕಾ, ಯಾರ ಮುಡಿಗೆ ಏಷ್ಯಾದ ಚಾಂಪಿಯನ್ ಪಟ್ಟ?: ಪಿಚ್ ರಿಪೋರ್ಟ್, ಸಂಭಾವ್ಯ ತಂಡ

Asia cup 2022: Sri Lanka vs Pakistan Final Match, Probable XI, Pitch Report & Sharjah Weather Forecast

ಏಷ್ಯಾ ಕಪ್ ಟೂರ್ನಿಯ ಅಂತಿಮ ಹಂತವನ್ನು ತಲುಪಿದ್ದು ಫೈನಲ್ ಪಂದ್ಯ ಮಾತ್ರವೇ ಬಾಕಿಯಿದೆ. ಪಾಕಿಸ್ತಾನ ಹಾಗೂ ಶ್ರೀಲಂಕಾ ತಂಡಗಳು ಫೈನಲ್ ಹಂತಕ್ಕೇರಿದ್ದು ಈ ಮುಖಾಮುಖಿಯಲ್ಲಿ ಯಾವ ತಂಡ ಯಾವ ರೀತಿಯ ಪ್ರದರ್ಶನ ನೀಡಲಿದೆ ಎಂಬುದು ಕುತೂಹಲ ಮೂಡಿಸಿದೆ. ಇನ್ನು ಶುಕ್ರವಾರ ನಡೆದ ಸೂಪರ್ 4 ಹಂತದ ಪಂದ್ಯದಲ್ಲಿ ಈ ಎರಡು ತಂಡಗಳೇ ಸ್ಪರ್ಧಿಸಿದ್ದು ಇದರಲ್ಲಿ ಶ್ರೀಲಂಕಾ ಅಮೋಘ ಗೆಲುವು ಸಾಧಿಸಿದೆ. ಹೀಗಾಗಿ ಪಾಕಿಸ್ತಾನ ತಂಡ ಒತ್ತಡದಲ್ಲಿರುವುದು ಸುಳ್ಳಲ್ಲ.

ಪಾಕಿಸ್ತಾನದ ಬ್ಯಾಟಿಂಗ್‌ನ ಪ್ರಮುಖ ಆಟಗಾರರು ಕೈಕೊಟ್ಟಿರುವುದು ಹಾಗೂ ಅಗ್ರ ಕ್ರಮಾಂಕ ವೈಫಲ್ಯ ಅನುಭವಿಸಿದರೆ ಕೆಳ ಕ್ರಮಾಂಕದ ಬೆಂಬಲ ದೊರೆಯದಿರುವುದು ಪಾಕಿಸ್ತಾನ ತಂಡಕ್ಕೆ ದೊಡ್ಡ ತಲೆನೋವಾಗಿದೆ. ಇತ್ತ ಶ್ರೀಲಂಕಾ ತಂಡದ ಬ್ಯಾಟಿಂಗ್ ವಿಭಾಗ ಕೂಡ ಸಮಸ್ಯೆಗಳನ್ನು ಎದುರಿಸುತ್ತಿದೆ. ಆದರೆ ಶ್ರೀಲಂಕಾದ ಬೌಲಿಂಗ್ ವಿಭಾಗ ಮಾತ್ರ ಅಮೋಘ ಪ್ರದರ್ಶನ ನೀಡುತ್ತಿರುವುದು ತಂಡದ ಆತ್ಮವಿಶ್ವಾಸ ಹೆಚ್ಚಿಸಿದೆ. ಇನ್ನು ಪಾಕಿಸ್ತಾನದ ವಿರುದ್ಧದ ಸೂಪರ್ 4 ಹಂತದಲ್ಲಿ ಸಾಧಿಸಿದ ಅಮೋಘ ಗೆಲುವು ತಂಡಕ್ಕೆ ಮತ್ತಷ್ಟು ಬಲ ನೀಡಲಿದೆ.

ಪಂದ್ಯದ ಮಾಹಿತಿ

ಪಂದ್ಯದ ಮಾಹಿತಿ

ಪಾಕಿಸ್ತಾನ ಹಾಗೂ ಶ್ರೀಲಂಕಾ ತಂಡಗಳು ಸೆಪ್ಟೆಂಬರ್ 11 ಭಾನುವಾರದಂದು ದುಬೈನ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿದೆ. ಭಾರತೀಯ ಕಾಲಮಾನ ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸ್ಟಾರ್‌ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪಂದ್ಯ ನೇರಪ್ರಸಾರವಾಗಲಿದ್ದು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದು.

ದುಲೀಪ್‌ ಟ್ರೋಫಿಯಲ್ಲಿ ದ್ವಿಶತಕ ಸಿಡಿಸಿದ ರಹಾನೆ, ಯಶಸ್ವಿ ಜೈಸ್ವಾಲ್!

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ

ದುಬೈ ಕ್ರಿಕೆಟ್ ಸ್ಟೇಡಿಯಮ್‌ನಲ್ಲಿ ಸಾಮಾನ್ಯವಾಗಿ 160-170ರಷ್ಟು ರನ್‌ಗಳಿಸಿದೆ ಸ್ಪರ್ಧಾತ್ಮಕ ಸ್ಕೋರ್ ಗಳಿಸಿದಂತಾಗುತ್ತದೆ. ಆದರೆ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭಾರತ 182 ರನ್‌ಗಳ ಗುರಿ ನೀಡಿಯೂ ಅದನ್ನು ರಕ್ಷಿಸಲು ವಿಫಲವಾಗಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಇನ್ನು ನೇರ ಬೌಂಡರಿಗಳು ಚಿಕ್ಕದಾಗಿದ್ದು ಅದರ ಲಾಭವನ್ನು ಬ್ಯಾಟರ್‌ಗಳು ಪಡೆದುಕೊಳ್ಳಬಹುದು. ಇನ್ನು ಸೀಮ್ ಹಾಗೂ ಬೌನ್ಸ್‌ಗೆ ಅನುಕೂಲವಾಗಲಿದ್ದು ಸ್ಪಿನ್ನರ್‌ಗಳಿಗೆ ಕಡಿಮೆ ನೆರವು ದೊರೆಯಲಿದೆ.
ಹವಾಮಾನ ವರದಿ: ಇನ್ನು ಪಂದ್ಯದ ಸಮಯದಲ್ಲಿ ಮಳೆಯಾಗುವ ಯಾವುದೇ ಸಂಭವವಿಲ್ಲ. 35 ಡಿಗ್ರಿ ಉಷ್ಣಾಂಶವಿರಲಿದ್ದು ಬೌಲಿಂಗ್ ನಡೆಸುವ ಸಂದರ್ಭದಲ್ಲಿ ಸವಾಲೆನಿಸಲಿದೆ.

ಇತ್ತಂಡಗಳ ಸಂಭಾವ್ಯ ಆಡುವ ಬಳಗ

ಇತ್ತಂಡಗಳ ಸಂಭಾವ್ಯ ಆಡುವ ಬಳಗ

ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಚರಿತ್ ಅಸಲಂಕ, ದನುಷ್ಕ ಗುಣತಿಲಕ, ದಸುನ್ ಶನಕಾ (ನಾಯಕ), ಭಾನುಕ ರಾಜಪಕ್ಸೆ, ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೇಶ್ ತೀಕ್ಷಣ, ಅಸಿತ ಫೆರ್ನಾಂಡೋ, ದಿಲ್ಶನ್ ಮಧುಶಂಕ

ಪಾಕಿಸ್ತಾನ: ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಫಖರ್ ಜಮಾನ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಆಸಿಫ್ ಅಲಿ, ಮೊಹಮ್ಮದ್ ನವಾಜ್, ಶದಾಬ್ ಖಾನ್, ಹಾರಿಸ್ ರೌಫ್, ಮೊಹಮ್ಮದ್ ಹಸ್ನೇನ್, ನಸೀಮ್ ಶಾ

ಸಂಪೂರ್ಣ ಸ್ಕ್ವಾಡ್ ಹೀಗಿದೆ

ಸಂಪೂರ್ಣ ಸ್ಕ್ವಾಡ್ ಹೀಗಿದೆ

ಶ್ರೀಲಂಕಾ: ದಸುನ್ ಶನಕಾ (ನಾಯಕ), ದನುಷ್ಕ ಗುಣತಿಲಕ, ಪಾತುಂ ನಿಸ್ಸಾಂಕ, ಕುಸಲ್ ಮೆಂಡಿಸ್, ಚರಿತ್ ಅಸಲಂಕ, ಭಾನುಕ ರಾಜಪಕ್ಸೆ, ಅಶೇನ್ ಬಂಡಾರ, ಧನಂಜಯ ಡಿ ಸಿಲ್ವ, ವನಿಂದು ಹಸರಂಗ, ಮಹೀಶ್ ತೀಕ್ಷಣ, ಜೆಫ್ರಿ ವಂಡರ್ಸೆ, ಪ್ರವೀಣ್ ಜಯವಿಕ್ರಮ, ಚಾಮಿಕ ಕರುಣಾರತ್ನೆ, ಡಿ.ಡಿ. ಚಂಡಿಮಲ್, ನುವಾನಿಡು ಫೆರ್ನಾಂಡೊ, ಅಸಿತ ಫೆರ್ನಾಂಡೊ, ಪ್ರಮೋದ್ ಮದುಶನ್, ನುವಾನ್ ತುಷಾರ

ಪಾಕಿಸ್ತಾನ: ಬಾಬರ್ ಅಜಮ್ (ನಾಯಕ), ಶಾದಾಬ್ ಖಾನ್, ಫಖರ್ ಜಮಾನ್, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ನಸೀಮ್ ಶಾ, ಶಹನವಾಜ್ ದಹಾನಿ, ಉಸ್ಮಾನ್ ಖಾದಿರ್, ಆಸಿಫ್ ಅಲಿ, ಮೊಹಮ್ಮದ್ ಹಸನೈನ್, ಹಸನ್ ಅಲಿ

Story first published: Saturday, September 10, 2022, 17:19 [IST]
Other articles published on Sep 10, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+