ಏಷ್ಯಾ ಕಪ್: ಮತ್ತೆ ಭಾರತ ಪಾಕ್ ಮುಖಾಮುಖಿ: ರೋಚಕ ಕದನಕ್ಕೆ ಇತ್ತಂಡಗಳು ಸಜ್ಜು!

ಏಷ್ಯಾಕಪ್‌ನ ಸೂಪರ್ 4 ಹಂತದ ಪಂದ್ಯಗಳು ಆರಂಭವಾಗಿದ್ದು ಇಂದು ಎರಡನೇ ಪಂದ್ಯ ನಡೆಯಲಿದೆ. ಈ ಕದನದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗುತ್ತಿರುವುದು ಅಭಿಮಾನಿಗಳ ಕುತೂಹಲ ಹೆಚ್ಚಿಸಿದೆ. ಲೀಗ್‌ಹಂತದಲ್ಲಿ ನಡೆದ ಪೈಪೋಟಿಯ ಕದನದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಲು ಯಶಸ್ವಿಯಾಗಿತ್ತು.
ಕಳೆದ ಮುಖಾಮುಖಿಯಲ್ಲಿ ಭಾರತ ಪಾಕಿಸ್ತಾನದ ವಿರುದ್ಧ ಅದ್ಭುತ ಬೌಲಿಂಗ್ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿತ್ತು. ನಂತರ ಬ್ಯಾಟಿಂಗ್‌ನಲ್ಲಿಯೂ ಮೇಲುಗೈ ಸಾಧಿಸಿದ ಪರಿಣಾಮವಾಗಿ ಐದು ವಿಕೆಟ್‌ಗಳ ಅಂತರದ ರೋಚಕ ಗೆಲುವು ಭಾರತ ತಂಡದ್ದಾಗಿತ್ತು. ಹಾರ್ದಿಕ್ ಪಾಂಡ್ಯ ಅವರ ಆಲ್‌ರೌಂಡರ್ ಆಟ, ಭುವನೇಶ್ವರ್ ಕುಮಾರ್ ಅವರ ಅಮೋಘ ಬೌಲಿಂಗ್ ದಾಳಿ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿತ್ತು ಎಂಬುದು ಗಮನಾರ್ಹ.

ಫಾರ್ಮ್ ಕಂಡುಕೊಳ್ಳಬೇಕಿದೆ ಆರಂಭಿಕರು
ಇನ್ನು ನಿರ್ಣಾಯಕ ಹಂತದಲ್ಲಿ ಭಾರತ ತಂಡದ ಅಗ್ರ ಕ್ರಮಾಂಕದ ಆಟಗಾರರು ಫಾರ್ಮ್ ಕಂಡುಕೊಳ್ಳಬೇಕಾದ ಅಗತ್ಯವಿದೆ. ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಲೀಗ್ ಹಂತದ ಎರಡು ಪಂದ್ಯಗಳಲ್ಲಿಯೂ ಉತ್ತಮ ಪ್ರದರ್ಶನ ನೀಡಲು ವಿಫಲವಾಗಿದ್ದಾರೆ. ಇದು ಭಾರತ ತಂಡಕ್ಕೆ ಹಿನ್ನಡೆಯುಂಟು ಮಾಡುವ ಸಾಧ್ಯತೆಯಿದೆ. ಮಧ್ಯಮ ಕ್ರಮಾಂಕ ಬಲಿಷ್ಠವಿರುವ ಕಾರಣ ಅಗ್ರ ಕ್ರಮಾಂಕದ ವೈಫಲ್ಯ ತಂಡದ ಫಲಿತಾಂಶದ ಮೇಲೆ ಈ ಹಂತದವರೆಗೆ ಪರಿಣಾಮ ಬೀರಿಲ್ಲ. ರೋಹಿತ್ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲು ವಿಫಲವಾಗುತ್ತಿದ್ದರು ರಾಹುಲ್ ಬ್ಯಾಟ್‌ನಿಂದ ಸರಾಗವಾಗಿ ರನ್ ಹರಿದುಬರುತ್ತಿಲ್ಲ. ಇದು ಮ್ಯಾನೇಜ್‌ಮೆಂಟ್‌ನ ಚಿಂತೆ ಹೆಚ್ಚಿಸಿದೆ.

ಟೂರ್ನಿಯಿಂದ ಹೊರಬಿದ್ದ ಜಡೇಜಾ
ಈ ಮಧ್ಯೆ ಭಾರತ ತಂಡಕ್ಕೆ ದೊಡ್ಡ ಹಿನ್ನಡೆಯೊಂದು ಉಂಟಾಗಿದೆ. ತಂಡದ ಪ್ರಮುಖ ಆಲ್‌ರೌಡರ್ ರವೀಂದ್ರ ಜಡೇಜಾ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದು ಟೂರ್ನಿಯ ಉಳಿದ ಪಂದ್ಯಗಳಿಂದ ಹೊಬಿದ್ದಿದ್ದಾರೆ. ಲೀಗ್ ಹಂತದ ಮೊದಲ ಪಂದ್ಯ ಪಾಕಿಸ್ತಾನದ ವಿರುದ್ಧ ರವೀಂದ್ರ ಜಡೇಜಾ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಅದ್ಭುತ ಪ್ರದರ್ಶನ ನೀಡಿದ್ದರು. ಇದೀಗ ಭಾರತ ತಂಡ ಪ್ರಮುಖ ಆಲ್‌ರೌಂಡರ್‌ಅನ್ನು ಕಳೆದುಕೊಂಡಿರುವ ಕಾರಣ ತಂಡದ ಸಮತೋಲನವನ್ನು ಉಳಿಸಿಕೊಳ್ಳಲು ಯಾವ ಆಟಗಾರನಿಗೆ ಅವಕಾಶ ನೀಡುತ್ತದ ಎಂಬುದು ಕುತೂಹಲ ಮೂಡಿಸಿದೆ.

ಹಾಂಕಾಂಗ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿರುವ ಪಾಕಿಸ್ತಾನ
ಇನ್ನು ಪಾಕಿಸ್ತಾನ ತಂಡ ಲೀಗ್ ಹಂತದ ಮೊದಲಕ ಪಂದ್ಯವನ್ನು ಭಾರತದ ವಿರುದ್ಧ ಸೋಲು ಅನುಭವಿಸಿದ ಬಳಿಕ ಹಾಂಕಾಂಗ್ ವಿರುದ್ಧದ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದೆ. ಮೊದಲಿಗೆ ಬ್ಯಾಟಿಂಗ್‌ನಲ್ಲಿ 193 ರನ್‌ಗಳನ್ನು ಗಳಿಸಿದ ಪಾಕಿಸ್ತಾನ ತಂಡ ನಂತರ ಬೌಲಿಂಗ್‌ನಲ್ಲಿ ದೊಡ್ಡ ಆಘಾತವನ್ನೇ ನೀಡಿತ್ತು. ಸ್ಪಿನ್ನರ್ ಶದಬ್ ಖಾನ್ ಅವರ ದಾಳಿಯಿಂದಾಗಿ ಹಾಂಕಾಂಗ್ ತಂಡ ಕೇವಲ 38 ರನ್‌ಗಳಿಗೆ ಆಲೌಟ್ ಆಗುವ ಮೂಲಕ ತನ್ನ ಹೋರಾಟವನ್ನು ಅಂತ್ಯಗೊಳಿಸಿತು. ಈ ಪ್ರದರ್ಶನದಿಂದಾಗಿ ಪಾಕಿಸ್ತಾನದ ಬೌಲಿಂಗ್ ಪಡೆಯ ಆತ್ಮವಿಶ್ವಾಸ ಸಹಜವಾಗಿಯೇ ಮತ್ತಷ್ಟು ಹೆಚ್ಚಾಗಿರುವುದರಲ್ಲಿ ಅನುಮಾನವಿಲ್ಲ.

ಇತ್ತಂಡಗಳ ಸ್ಕ್ವಾಡ್ ಹೀಗಿದೆ
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ರಿಷಬ್ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅರ್ಶ್ದೀಪ್ ಸಿಂಗ್, ರವಿ ಬಿಷ್ಣೋಯ್, ದಿನೇಶ್ ಕಾರ್ತಿಕ್, ಅವೇಶ್ ಖಾನ್, ದೀಪಕ್ ಹೂಡಾ
ಪಾಕಿಸ್ತಾನ ತಂಡ: ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಫಖರ್ ಜಮಾನ್, ಖುಷ್ದಿಲ್ ಶಾ, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಆಸಿಫ್ ಅಲಿ, ಮೊಹಮ್ಮದ್ ನವಾಜ್, ಹಾರಿಸ್ ರೌಫ್, ನಸೀಮ್ ಶಾ, ಹಸನ್ ಅಲಿ, ಉಸ್ಮಾನ್ ಖಾದಿರ್, ಮೊಹಮ್ಮದ್ ಹಸ್ನೈನ್, ಹೈದರ್ ಅಲಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications