ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs PAK Super 4: ಬೌಲರ್‌ಗಳೇ ವಿಲನ್ಸ್; ಭಾರತದ ವಿರುದ್ಧ ಪಾಕ್‌ಗೆ 5 ವಿಕೆಟ್‍ಗಳ ರೋಚಕ ಜಯ

Asia Cup 2022 Super 4: Pakistan beats India by 5 wickets in nail baiting thriller

ಇಂದು ( ಸೆಪ್ಟೆಂಬರ್ 4 ) ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಸೂಪರ್ 4 ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಪಾಕಿಸ್ತಾನ 5 ವಿಕೆಟ್‍ಗಳ ರೋಚಕ ಗೆಲುವನ್ನು ಸಾಧಿಸಿದೆ.

IND vs PAK: ಸೂಪರ್ 4 ಪಂದ್ಯದಿಂದ ಡಿಕೆ ಔಟ್; ಇದಕ್ಕಿಂತ ಅನ್ಯಾಯ ಮತ್ತೊಂದಿಲ್ಲ!IND vs PAK: ಸೂಪರ್ 4 ಪಂದ್ಯದಿಂದ ಡಿಕೆ ಔಟ್; ಇದಕ್ಕಿಂತ ಅನ್ಯಾಯ ಮತ್ತೊಂದಿಲ್ಲ!

ಪಂದ್ಯದಲ್ಲಿ ಟಾಸ್ ಸೋತು ಫೀಲ್ಡಿಂಗ್ ಆಯ್ದುಕೊಂಡಿದ್ದ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಟೀಮ್ ಇಂಡಿಯಾವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ವಿರಾಟ್ ಕೊಹ್ಲಿ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 181 ರನ್ ಕಲೆಹಾಕಿ ಪಾಕಿಸ್ತಾನ ತಂಡಕ್ಕೆ ಗೆಲ್ಲಲು 182 ರನ್‌ಗಳ ಗುರಿಯನ್ನು ನೀಡಿತ್ತು.

IND vs PAK: ಸೂಪರ್‌ 4ನಲ್ಲಿ ಜಡೇಜಾ ಬದಲು ಈತನಿಗೆ ಸ್ಥಾನ ನೀಡಿದ್ರೆ ಭಾರತಕ್ಕೆ ಹಿನ್ನಡೆ ಖಚಿತ!IND vs PAK: ಸೂಪರ್‌ 4ನಲ್ಲಿ ಜಡೇಜಾ ಬದಲು ಈತನಿಗೆ ಸ್ಥಾನ ನೀಡಿದ್ರೆ ಭಾರತಕ್ಕೆ ಹಿನ್ನಡೆ ಖಚಿತ!

ಅತ್ತ ಪಾಕಿಸ್ತಾನ ಮೊಹಮ್ಮದ್ ರಿಜ್ವಾನ್ ಹಾಗೂ ಮೊಹಮ್ಮದ್ ನವಾಜ್ ಅವರ ಆಕರ್ಷಕ ಬ್ಯಾಟಿಂಗ್ ನೆರವಿನಿಂದ 19.5 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 182 ರನ್ ಕಲೆಹಾಕಿದ್ದು 5 ವಿಕೆಟ್‍ಗಳ ರೋಚಕ ಗೆಲುವನ್ನು ಕಂಡಿದೆ.

ಪಾಕಿಸ್ತಾನದ ಪರ ಮೊಹಮ್ಮದ್ ರಿಜ್ವಾನ್, ನವಾಜ್ ಅಬ್ಬರ

ಪಾಕಿಸ್ತಾನದ ಪರ ಮೊಹಮ್ಮದ್ ರಿಜ್ವಾನ್, ನವಾಜ್ ಅಬ್ಬರ

ಟೀಮ್ ಇಂಡಿಯಾ ನೀಡಿದ ಸವಾಲಿನ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನದ ಪರ ಆರಂಭಿಕರಾಗಿ ಕಣಕ್ಕಿಳಿದ ಬಾಬರ್ ಅಜಮ್ 14 ರನ್ ಗಳಿಸಿ ಔಟ್ ಆದರೆ, ಮತ್ತೋರ್ವ ಆರಂಭಿಕ ಆಟಗಾರ ಮೊಹಮ್ಮದ್ ರಿಜ್ವಾನ್ 51 ಎಸೆತಗಳಲ್ಲಿ 71 ರನ್ ಕಲೆಹಾಕಿ ತಂಡದ ಪರ ಜವಾಬ್ದಾರಿಯುತ ಆಟವಾಡಿ ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಒಂದೆಡೆ ವಿಕೆಟ್ ಬೀಳುತ್ತಿದ್ದರೂ ಮತ್ತೊಂದೆಡೆ ಬ್ಯಾಟ್ ಬೀಸಿದ ಮೊಹಮ್ಮದ್ ರಿಜ್ವಾನ್ 16.5 ಓವರ್‌ಗಳವರೆಗೂ ಆಟವನ್ನಾಡಿದರು. ಇನ್ನುಳಿದಂತೆ ಫಖರ್ ಜಮಾನ್ 15, ಆಸಿಫ್ ಅಲಿ 16 ರನ್ ಕಲೆಹಾಕಿದರೆ, ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮೊಹಮ್ಮದ್ ನವಾಜ್ 20 ಎಸೆತಗಳಲ್ಲಿ 6 ಫೋರ್ ಮತ್ತು 2 ಸಿಕ್ಸರ್ ಸಹಿತ 42 ರನ್ ಚಚ್ಚಿದರು. ಅಂತಿಮ ಹಂತದಲ್ಲಿ ತಂಡಕ್ಕೆ ಆಸರೆಯಾದ ಖುಷ್ ದಿಲ್ ಶಾ ಅಜೇಯ 14 ಮತ್ತು ಪಾಕ್ ತಂಡಕ್ಕೆ ಗೆಲ್ಲಲು ಅಂತಿಮ 2 ಎಸೆತಗಳಲ್ಲಿ 2 ರನ್ ಬೇಕಿದ್ದಾಗ ಕಣಕ್ಕಿಳಿದ ಇಫ್ತಿಕರ್ ಅಹ್ಮದ್ 1 ಎಸೆತದಲ್ಲಿ 2 ರನ್ ಕಲೆ ಹಾಕಿದರು.

ವಿರಾಟ್ ಕೊಹ್ಲಿ ಅರ್ಧಶತಕ ವ್ಯರ್ಥ

ವಿರಾಟ್ ಕೊಹ್ಲಿ ಅರ್ಧಶತಕ ವ್ಯರ್ಥ

ಟೀಮ್ ಇಂಡಿಯಾದ ಬ್ಯಾಟಿಂಗ್‌ ವೇಳೆ ಒಂದೆಡೆ ತಂಡದ ಆಟಗಾರರ ವಿಕೆಟ್ ಉರುಳುತ್ತಿದ್ದರೆ, ಮತ್ತೊಂದೆಡೆ ಏಕಾಂಗಿ ಹೋರಾಟ ನಡೆಸಿದ ವಿರಾಟ್ ಕೊಹ್ಲಿ ಪಂದ್ಯದ ಅಂತಿಮ ಓವರ್ ವರೆಗೂ ಕಣದಲ್ಲಿದ್ದು, 44 ಎಸೆತಗಳಲ್ಲಿ 4 ಫೋರ್ ಮತ್ತು 1 ಸಿಕ್ಸರ್ ಸಹಿತ 60 ರನ್ ಬಾರಿಸಿ ಆಪದ್ಬಾಂಧವನಾದರು. ಈ ಮೂಲಕ ಮತ್ತೊಮ್ಮೆ ಪಾಕಿಸ್ತಾನದ ವಿರುದ್ಧ ವಿರಾಟ್ ಕೊಹ್ಲಿ ಉತ್ತಮ ಪ್ರದರ್ಶನ ನೀಡಿದರು. ಅಷ್ಟೇ ಅಲ್ಲದೆ ವಿರಾಟ್ ಕೊಹ್ಲಿ 32 ಟಿ 20 ಅರ್ಧಶತಕಗಳನ್ನು ಪೂರೈಸಿ ಭಾರತದ ಪರ ಅತಿ ಹೆಚ್ಚು ಟಿ ಟ್ವೆಂಟಿ ಅರ್ಧಶತಕ ಬಾರಿಸಿದ ಆಟಗಾರ ಎನಿಸಿಕೊಂಡರು. ಹೀಗೆ ನಿರ್ಣಾಯಕ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ ವಿರಾಟ್ ಕೊಹ್ಲಿ ಆಟ ಈ ಸೋಲಿನ ಮೂಲಕ ವ್ಯರ್ಥವಾಗಿದೆ.

ಪಂದ್ಯದಲ್ಲಿ ಬೌಲರ್‌ಗಳೇ ವಿಲನ್ಸ್

ಪಂದ್ಯದಲ್ಲಿ ಬೌಲರ್‌ಗಳೇ ವಿಲನ್ಸ್

ಟೀಮ್ ಇಂಡಿಯಾ ಪರ ಬೌಲಿಂಗ್ ಮಾಡಿದ ಆಟಗಾರರ ಪೈಕಿ ರವಿ ವಿಷ್ಣೋಯಿ ಮತ್ತು ಅರ್ಷದೀಪ್ ಸಿಂಗ್ ಹೊರತುಪಡಿಸಿ ಉಳಿದ ಯಾವುದೇ ಆಟಗಾರ ಕೂಡ ಉತ್ತಮ ಪ್ರದರ್ಶನ ನೀಡಲಿಲ್ಲ ಎಂದೇ ಹೇಳಬಹುದು. ರವಿ ಬಿಷ್ಣೋಯಿ 4 ಓವರ್ ಬೌಲಿಂಗ್ ಮಾಡಿ 26 ರನ್ ನೀಡಿ 1 ವಿಕೆಟ್ ಪಡೆದರು. ಇನ್ನುಳಿದಂತೆ 3.5 ಓವರ್ ಬೌಲಿಂಗ್ ಮಾಡಿದ ಅರ್ಷದೀಪ್ ಸಿಂಗ್ 27 ರನ್ ನೀಡಿ 1 ವಿಕೆಟ್ ಪಡೆದರು. ಯುಜುವೇಂದ್ರ ಚಾಹಲ್ 4 ಓವರ್ ಬೌಲಿಂಗ್ ಮಾಡಿ 43 ರನ್ ನೀಡಿ 1 ವಿಕೆಟ್ ಪಡೆದರು, ಹಾರ್ದಿಕ್ ಪಾಂಡ್ಯ 4 ಓವರ್ ಬೌಲಿಂಗ್ ಮಾಡಿ 44 ರನ್ ನೀಡಿ 1 ವಿಕೆಟ್ ಪಡೆದರು ಹಾಗೂ ಭುವನೇಶ್ವರ್ ಕುಮಾರ್ 4 ಓವರ್ ಬೌಲಿಂಗ್ ಮಾಡಿ 40 ರನ್ ನೀಡಿ 1 ವಿಕೆಟ್ ಪಡೆದರು. ಈ ಮೂಲಕ ಟೀಮ್ ಇಂಡಿಯಾದ ಈ ಮೂವರು ಬೌಲರ್‌ಗಳಾದ ಚಾಹಲ್, ಭುವನೇಶ್ವರ್ ಕುಮಾರ್ ಹಾಗೂ ಹಾರ್ದಿಕ್ ಪಾಂಡ್ಯ ತಮ್ಮೆಲ್ಲ ಸಂಪೂರ್ಣ 4 ಓವರ್ ಬೌಲಿಂಗ್ ಮಾಡಿ ಕೇವಲ 1 ವಿಕೆಟ್ ಪಡೆದು ಯಥೇಚ್ಚವಾಗಿ ರನ್ ಬಿಟ್ಟುಕೊಟ್ಟು ಪಂದ್ಯದಲ್ಲಿ ಖಳನಾಯಕರಾಗಿ ಪರಿಣಮಿಸಿದರು.

ಟೀಮ್ ಇಂಡಿಯಾ ಇನ್ನಿಂಗ್ಸ್

ಟೀಮ್ ಇಂಡಿಯಾ ಇನ್ನಿಂಗ್ಸ್

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಪವರ್ ಪ್ಲೇನಲ್ಲಿ 62 ರನ್ ಕಲೆ ಹಾಕುವುದರ ಮೂಲಕ ಉತ್ತಮ ಆರಂಭವನ್ನು ಕಟ್ಟಿದರು. ನಂತರ ರೋಹಿತ್ ಶರ್ಮಾ 16 ಎಸೆತಗಳಲ್ಲಿ 28 ರನ್ ಕಲೆಹಾಕಿ ಔಟ್ ಆದರೆ, ಕೆಎಲ್ ರಾಹುಲ್ 20 ಎಸೆತಗಳಲ್ಲಿ 28 ರನ್ ಕಲೆಹಾಕಿ ಔಟ್ ಆದರು. ಇನ್ನುಳಿದಂತೆ ಸೂರ್ಯಕುಮಾರ್ ಯಾದವ್ 13 ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, ರಿಷಭ್ ಪಂತ್ 14 ರನ್ ಕಲೆಹಾಕಿ ಔಟ್ ಆದರು ಹಾಗೂ ಕಳೆದ ಪಾಕ್ ವಿರುದ್ಧದ ಪಂದ್ಯದಲ್ಲಿ ಅಬ್ಬರಿಸಿದ್ದ ಹಾರ್ದಿಕ್ ಪಾಂಡ್ಯ 2 ಎಸೆತಗಳಲ್ಲಿ ಯಾವುದೇ ರನ್ ಗಳಿಸದೇ ಡಕ್ ಔಟ್ ಆದರು, ದೀಪಕ್ ಹೂಡಾ 14 ಎಸೆತಗಳಲ್ಲಿ 16 ರನ್ ಕಲೆಹಾಕಿ ಕಲೆ ಹಾಕಿದರೆ, ಅಂತಿಮ ಹಂತದವರೆಗೂ ಏಕಾಂಗಿ ಹೋರಾಟ ನಡೆಸಿದ ವಿರಾಟ್ ಕೊಹ್ಲಿ 44 ಎಸೆತಗಳಲ್ಲಿ 60 ರನ್ ಬಾರಿಸಿ ಆಪದ್ಬಾಂಧವನಾದರು. ಹಾಗೂ ರವಿ ಬಿಷ್ಣೋಯಿ ಕೊಹ್ಲಿ ಔಟ್ ಆದ ಬಳಿಕ ಕಣಕ್ಕೆ ಇಳಿದು 2 ಎಸೆತಗಳಲ್ಲಿ 2 ಬೌಂಡರಿ ಚಚ್ಚಿದರು ಹಾಗೂ ಭುವನೇಶ್ವರ್ ಕುಮಾರ್ ಯಾವುದೇ ಎಸೆತ ಎದುರಿಸದೇ ಅಜೇಯರಾಗಿ ಉಳಿದರು.

Story first published: Tuesday, September 6, 2022, 23:51 [IST]
Other articles published on Sep 6, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X