Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Asia Cup 2022 Super 4: ಪಾಕಿಸ್ತಾನಕ್ಕೆ ಸಾಧಾರಣ ಗುರಿ ನೀಡಿದ ಅಫ್ಘಾನಿಸ್ತಾನ

Asia Cup 2022 Super 4: Pakistan Needs 130 Runs To Win Against Afghanistan

ಇಂದು (ಸೆಪ್ಟೆಂಬರ್ 7) ಶಾರ್ಜಾ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ನಡೆಯುತ್ತಿರುವ ಸೂಪರ್ 4 ಸುತ್ತಿನ ನಾಲ್ಕನೇ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ.

ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ನಾಯಕ ಬಾಬರ್ ಅಜಂ ಫೀಲ್ಡಿಂಗ್ ಆಯ್ದುಕೊಳ್ಳುವುದರ ಮೂಲಕ ಅಫ್ಘಾನಿಸ್ತಾನ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 129 ರನ್ ಕಲೆ ಹಾಕಿದ್ದು, ಎದುರಾಳಿ ಪಾಕಿಸ್ತಾನ ತಂಡಕ್ಕೆ ಗೆಲ್ಲಲು 130 ರನ್‌ಗಳ ಗುರಿಯನ್ನು ನೀಡಿದೆ.

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ಆರಂಭಿಕರಾಗಿ ಹಜರತುಲ್ಲಾ ಝಜೈ ಮತ್ತು ರಹಮಾನುಲ್ಲಾ ಗುರ್ಬಾಜ್ ಕಣಕ್ಕಿಳಿದರು. ಆದರೆ ತಂಡದ ಮೊತ್ತ 36 ರನ್‌ಗಳಾಗಿದ್ದಾಗ ರಹಮಾನುಲ್ಲಾ ಗುರ್ಬಾಜ್ 17 ರನ್ ಗಳಿಸಿ ಔಟಾದರು. ಇನ್ನು ಹಜರತುಲ್ಲಾ ಝಜೈ 21 ರನ್ ಗಳಿಸಿದರು. ಇನ್ನು ಇಬ್ರಾಹಿಂ ಝದ್ರಾನ್ 35 ರನ್ ಗಳಿಸಿ ಅಫ್ಘಾನಿಸ್ತಾನ ಪರ ಗರಿಷ್ಠ ಸ್ಕೋರರ್ ಎನಿಸಿದರು.

ಇನ್ನು ನಾಯಕ ಮೊಹಮ್ಮದ್ ನಬಿ ಸೊನ್ನೆ ಔಟಾದರೆ, ಆಲ್‌ರೌಂಡರ್ ರಶೀದ್ ಖಾನ್ 18 ರನ್ ಗಳಿಸಿ ತಂಡದ ಮೊತ್ತ 120 ರನ್‌ಗಳ ಗಡಿ ದಾಟಿಸಿದರು.

ಇನ್ನು ಬೌಲಿಂಗ್‌ನಲ್ಲಿ ಪಾಕಿಸ್ತಾನ ತಂಡದ ಪರ ಹ್ಯರಿಸ್ ರೌಫ್ 4 ಓವರ್‌ಗಳಲ್ಲಿ 26 ರನ್ ನೀಡಿ ಪ್ರಮುಖ 2 ವಿಕೆಟ್ ಗಳಿಸಿದರು. ಇನ್ನುಳಿದಂತೆ ಶಾದಾಬ್ ಖಾನ್, ಮೊಹಮ್ಮದ್ ನವಾಜ್, ನಸೀಮ್ ಶಾ ಮತ್ತು ಮೊಹಮ್ಮದ್ ಹಸ್ನೇನ್ ತಲಾ ಒಂದೊಂದು ವಿಕೆಟ್ ಪಡೆದರು.

ಏಷ್ಯಾ ಕಪ್ ಸೂಪರ್-4ರ ಪಾಕಿಸ್ತಾನ ತಂಡದ ಆಡುವ 11ರ ಬಳಗ
ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಫಖರ್ ಜಮಾನ್, ಖುಶ್ದಿಲ್ ಶಾ, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಆಸಿಫ್ ಅಲಿ, ಮೊಹಮ್ಮದ್ ನವಾಜ್, ಹ್ಯಾರಿಸ್ ರೌಫ್, ನಸೀಮ್ ಶಾ ಮತ್ತು ಮೊಹಮ್ಮದ್ ಹಸ್ನೇನ್.

ಏಷ್ಯಾ ಕಪ್ ಸೂಪರ್-4ರ ಅಫ್ಘಾನಿಸ್ತಾನ ತಂಡದ ಆಡುವ 11ರ ಬಳಗ
ಹಜರತುಲ್ಲಾ ಝಜೈ, ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ಕರೀಮ್ ಜನತ್, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ (ನಾಯಕ), ರಶೀದ್ ಖಾನ್, ಅಜ್ಮತುಲ್ಲಾ ಒಮರ್ಜೈ, ಮುಜೀಬ್ ಉರ್ ರಹಮಾನ್, ಫರೀದ್ ಅಹ್ಮದ್, ಫಜಲ್ಹಕ್ ಫಾರೂಕಿ.

Story first published: Wednesday, September 7, 2022, 21:24 [IST]
Other articles published on Sep 7, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+