Asia Cup 2022 Super 4: ಗುರ್ಬಝ್ ಅಬ್ಬರ; ಶ್ರೀಲಂಕಾಗೆ ಕಠಿಣ ಗುರಿ ನೀಡಿದ ಅಫ್ಘಾನ್!

ಇಂದು ( ಸೆಪ್ಟೆಂಬರ್ 3 ) ಏಷ್ಯಾಕಪ್ ಟೂರ್ನಿಯ ಸೂಪರ್ 4 ಸುತ್ತಿನ ಪಂದ್ಯಗಳು ಆರಂಭವಾಗಿದ್ದು, ಪ್ರಥಮ ಪಂದ್ಯದಲ್ಲಿ ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಿವೆ. ಶಾರ್ಜಾ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ದಸುನ್ ಶನಕ ಫೀಲ್ಡಿಂಗ್ ಆಯ್ದುಕೊಳ್ಳುವುದರ ಮೂಲಕ ಅಫ್ಘಾನಿಸ್ತಾನ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು.
ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ರಹ್ಮಾನುಲ್ಲಾ ಗುರ್ಬಝ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 175 ರನ್ ಕಲೆಹಾಕಿದ್ದು, ಎದುರಾಳಿ ಶ್ರೀಲಂಕಾ ತಂಡಕ್ಕೆ ಗೆಲ್ಲಲು 176 ರನ್‌ಗಳ ಕಠಿಣ ಗುರಿಯನ್ನು ನೀಡಿದೆ.
ಇನ್ನು ಉಭಯ ತಂಡಗಳ ನಡುವೆ ಈ ಬಾರಿಯ ಏಷ್ಯಾಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಅಫ್ಘಾನಿಸ್ತಾನದ ಬೌಲಿಂಗ್ ದಾಳಿಗೆ ತತ್ತರಿಸಿ ಕೇವಲ 105 ರನ್‌ಗಳಿಗೆ ಆಲ್ ಔಟ್ ಆಗಿದ್ದ ಶ್ರೀಲಂಕಾ ಶ್ರೀಲಂಕಾ ಅಫ್ಘಾನಿಸ್ತಾನ ನೀಡಿರುವ ಇಷ್ಟು ದೊಡ್ಡ ಮೊತ್ತದ ಗುರಿಯನ್ನು ಬೆನ್ನತ್ತಿ ಜಯ ಸಾಧಿಸಲಿದೆಯಾ ಎಂಬ ಅನುಮಾನ ಮೂಡಿದೆ.
ಅಫ್ಘಾನಿಸ್ತಾನ ಇನ್ನಿಂಗ್ಸ್:
ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಆಫ್ಘಾನಿಸ್ತಾನ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಹಜರತುಲ್ಲಾ ಝಝೈ 13 ರನ್ ಕಲೆಹಾಕಿ ಔಟಾದರೆ ಮತ್ತೋರ್ವ ಆರಂಭಿಕ ಆಟಗಾರ ರಹ್ಮನುಲ್ಲ ಗುರ್ಬಜ್ 45 ಎಸೆತಗಳಲ್ಲಿ 4 ಫೋರ್ ಮತ್ತು 6 ಸಿಕ್ಸರ್ ಸಹಿತ 84 ರನ್ ಚಚ್ಚಿದರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಇಬ್ರಾಹಿಂ ಜದ್ರಾನ್ 40 ರನ್ ಗಳಿಸಿದರೆ, ನಜಿಬುಲ್ಲಾ ಜದ್ರಾನ್ 17, ನಾಯಕ ಮೊಹಮ್ಮದ್ ನಬಿ 1, ರಶೀದ್ ಖಾನ್ 9 ರನ್ ಕಲೆ ಹಾಕಿದರು ಹಾಗೂ ಕರೀಮ್ ಜಾನತ್ ಯಾವುದೇ ರನ್ ಗಳಿಸದೆ ಅಜೇಯರಾಗಿ ಉಳಿದರು.
ಶ್ರೀಲಂಕಾ ತಂಡದ ಪರ ದಿಲ್ಶಾನ್ ಮದುಶಂಕ 2 ವಿಕೆಟ್ ಪಡೆದರೆ ಮಹೀಶ್ ತೀಕ್ಷ್ಣಣ ಹಾಗೂ ಅಸಿತಾ ಫರ್ನಾಂಡೊ ತಲಾ ಒಂದೊಂದು ವಿಕೆಟ್ ಪಡೆದರು.
ಆಡುವ ಬಳಗಗಳು:
ಶ್ರೀಲಂಕಾ ಆಡುವ ಬಳಗ: ಪಾತುಮ್ ನಿಸ್ಸಾಂಕ, ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್), ಚರಿತ್ ಅಸಲಂಕ, ದನುಷ್ಕ ಗುಣತಿಲಕ, ಭಾನುಕ ರಾಜಪಕ್ಸೆ, ದಸುನ್ ಶನಕ (ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನ, ಮಹೇಶ್ ತೀಕ್ಷಣ, ಅಸಿತ ಫೆರ್ನಾಂಡೋ, ದಿಲ್ಶನ್ ಮಧುಶಂಕ
ಬೆಂಚ್: ದಿನೇಶ್ ಬಂಡಂವ ಡಿ, ಧನನರ ಜೆಫ್ ಡಿ ಪ್ರವೀಣ್ ಜಯವಿಕ್ರಮ, ನುವಾನಿಡು ಫೆರ್ನಾಂಡೋ, ಪ್ರಮೋದ್ ಮದುಶನ್, ಮತೀಶ ಪತಿರಣ, ನುವಾನ್ ತುಷಾರ
ಅಫ್ಘಾನಿಸ್ತಾನ ಆಡುವ ಬಳಗ: ಹಜರತುಲ್ಲಾ ಝಜೈ, ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ಮೊಹಮ್ಮದ್ ನಬಿ (ನಾಯಕ), ನಜೀಬುಲ್ಲಾ ಝದ್ರಾನ್, ಕರೀಂ ಜನತ್, ಸಮೀವುಲ್ಲಾ ಶಿನ್ವಾರಿ, ರಶೀದ್ ಖಾನ್, ನವೀನ್-ಉಲ್-ಹಕ್, ಮುಜೀಬ್ ಉರ್ ರಹಮಾನ್, ಫಜಲ್ಹಕ್ ಫಾರೂಖಿ, ಫಝಲ್ಹಕ್ ಫಾರೂಖಿ,
ಬೆಂಚ್: ಹಶ್ಮತಲ್ಲಾ ಶಾಹಿದಿ, ಅಫ್ಸಿರ್ ಜಾಝಾ, ಫರೀದ್ ಅಹ್ಮದ್ ಮಲಿಕ್, ಒತ್ಮಾನ್ ಘನಿ, ನೂರ್ ಅಹ್ಮದ್, ಅಜ್ಮತುಲ್ಲಾ ಮಿರ್ಜಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications