Asia Cup 2022 Super 4: ಪಾಕ್ ವಿರುದ್ಧ ಲಂಕಾಗೆ ಜಯ; ಭಾನುವಾರ ಲಂಕಾ vs ಪಾಕ್ ಫೈನಲ್ ಕದನ

ಇಂದು (ಸೆಪ್ಟೆಂಬರ್ 9) ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ ಮತ್ತು ಶ್ರೀಲಂಕಾ ತಂಡಗಳ ನಡುವಿನ ಸೂಪರ್ 4 ಅಂತಿಮ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಶ್ರೀಲಂಕಾ 5 ವಿಕೆಟ್‌ಗಳ ರೋಚಕ ಗೆಲುವನ್ನು ಸಾಧಿಸಿದೆ.
ಈಗಾಗಲೇ ಎರಡು ತಂಡಗಳು ಫೈನಲ್ ಪ್ರವೇಶಿಸಿರುವುದರಿಂದ ಇದು ಅನೌಪಚಾರಿಕ ಪಂದ್ಯವಾಗಿತ್ತು ಮತ್ತು ಅಭ್ಯಾಸ ಪಂದ್ಯದಂತಿದ್ದ ಇಲ್ಲಿ ಶ್ರೀಲಂಕಾ ತಂಡ ಪಾಕಿಸ್ತಾನವನ್ನು ಮಣಿಸಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ದಸುನ್ ಶನಕ ಫೀಲ್ಡಿಂಗ್ ಆಯ್ದುಕೊಳ್ಳುವುದರ ಮೂಲಕ ಪಾಕಿಸ್ತಾನ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 19.1 ಓವರ್‌ಗಳಲ್ಲಿ 10 ವಿಕೆಟ್ ನಷ್ಟಕ್ಕೆ 121 ರನ್ ಕಲೆ ಹಾಕಿದ್ದು, ಎದುರಾಳಿ ಶ್ರೀಲಂಕಾ ತಂಡಕ್ಕೆ ಗೆಲ್ಲಲು 122 ರನ್‌ಗಳ ಗುರಿಯನ್ನು ನೀಡಿತ್ತು.

ಶ್ರೀಲಂಕಾ ಬ್ಯಾಟಿಂಗ್
ಸಾಧಾರಣ ಗುರಿ ಬೆನ್ನತ್ತಿದ ಶ್ರೀಲಂಕಾ ತಂಡ ಕುಸಲ್ ಮೆಂಡಿಸ್ ಮತ್ತು ಗುಣತಿಲಕ ಅವರ ವಿಕೆಟ್ ಅನ್ನು ಬೇಗನೆ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಪಾತುಮ್ ನಿಸ್ಸಾಂಕ (55 ರನ್) ಅವರ ಆಕರ್ಷಕ ಬ್ಯಾಟಿಂಗ್ ಮತ್ತು ಮಧ್ಯಮ ಕ್ರಮಾಂಕದಲ್ಲಿ ಭಾನುಕ ರಾಜಪಕ್ಸ(24), ದಸುನ್ ಶನಕ (21) ಮತ್ತು ವನಿಂದು ಹಸರಂಗಾ (10) ಬ್ಯಾಟಿಂಗ್ ನೆರವಿನಿಂದ 17 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 124 ರನ್ ಗಳಿಸಿ 5 ವಿಕೆಟ್‌ಗಳ ಗೆಲುವಿನ ನಗೆ ಬೀರಿತು.
ಇನ್ನು ಬೌಲಿಂಗ್‌ನಲ್ಲಿ ಪಾಕಿಸ್ತಾನ ಪರ ಮೊಹಮ್ಮದ್ ಹಸ್ನೈನ್ 3 ಓವರ್‌ಗಳಲ್ಲಿ 21 ರನ್ ನೀಡಿ 2 ವಿಕೆಟ್ ಪಡೆದರು. ಹ್ಯಾರಿಸ್ ರೌಫ್ 3 ಓವರ್‌ಗಳಲ್ಲಿ 19 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ಉಸ್ಮಾನ್ ಖಾದಿರ್ 4 ಓವರ್‌ಗಳಲ್ಲಿ 34 ರನ್ ನೀಡಿ 1 ವಿಕೆಟ್ ಪಡೆದರು.

ಪಾಕಿಸ್ತಾನ ಬ್ಯಾಟಿಂಗ್ ಇನ್ನಿಂಗ್ಸ್
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಪರ ಆರಂಭಿಕರಾಗಿ ಮೊಹಮ್ಮದ್ ರಿಜ್ವಾನ್ ಮತ್ತು ನಾಯಕ ಬಾಬರ್ ಅಜಂ ಕಣಕ್ಕಿಳಿದರು. ಆದರೆ ತಂಡದ ಮೊತ್ತ 28 ರನ್‌ಗಳಾಗಿದ್ದಾಗ 14 ರನ್ ಗಳಿಸಿ ಆಡುತ್ತಿದ್ದ ಮೊಹಮ್ಮದ್ ರಿಜ್ವಾನ್ ಔಟಾದರು. ನಂತರ ಬಂದ ಫಖರ್ ಜಮಾನ್ 13 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.
ಇನ್ನು ನಾಯಕ ಬಾಬರ್ ಅಜಂ 30 ರನ್ ಗಳಿಸಿ ಆಡುತ್ತಿದ್ದಾಗ ವನಿಂದು ಹಸರಂಗಾ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆದರು. ಆಗ ತಂಡದ ಮೊತ್ತ 68 ಆಗಿತ್ತು. ಮಧ್ಯಮ ಕ್ರಮಾಂಕದಲ್ಲಿ ನವಾಜ್ 26 ರನ್ ಗಳಿಸಿದರು. ಉಳಿದಂತೆ ಕೆಳ ಕ್ರಮಾಂಕದಲ್ಲಿ ಯಾರೂ ಶ್ರೀಲಂಕಾ ಬೌಲರ್‌ಗಳನ್ನು ಎದುರಿಸಲಿಲ್ಲ.
ಶ್ರೀಲಂಕಾ ಬೌಲಿಂಗ್
ಇನ್ನು ಬೌಲಿಂಗ್‌ನಲ್ಲಿ ಶ್ರೀಲಂಕಾ ಪರ ವನಿಂದು ಹಸರಂಗಾ 4 ಓವರ್‌ಗಳಲ್ಲಿ 21 ರನ್ ನೀಡಿ 3 ವಿಕೆಟ್ ಪಡೆದರು. ಮಹೀಶ್ ತೀಕ್ಷಣ 4 ಓವರ್‌ಗಳಲ್ಲಿ 21 ರನ್ ನೀಡಿ 2 ವಿಕೆಟ್ ಪಡೆದರು. ಪ್ರಮೋದ್ ಮದುಶಣ 2.1 ಓವರ್‌ಗಳಲ್ಲಿ 21 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ಧನಂಜಯ ಡಿ ಸಿಲ್ವಾ, ಚಮಿಕಾ ಕರುಣಾರತ್ನೆ ತಲಾ ಒಂದೊಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications