Asia Cup 2022: ಕೊಹ್ಲಿ ಅರ್ಧಶತಕ, ಸೂರ್ಯಕುಮಾರ್ ಅಬ್ಬರ: ಹಾಂಗ್‌ಕಾಂಗ್‌ಗೆ ಕಠಿಣ ಗುರಿ

Virat Kohliಯ ಈ ನಡೆ ನನಗೆ ಬಹಳ ಖುಷಿ ಕೊಡ್ತು ಎಂದ SuryaKumar Yadav | *Cricket | OneIndia Kannada

ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಬಾರಿಯ ಏಷ್ಯಾಕಪ್ ಟೂರ್ನಿಯ ನಾಲ್ಕನೇ ಪಂದ್ಯದಲ್ಲಿ ಭಾರತ ಮತ್ತು ಹಾಂಕಾಂಗ್ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ಪಂದ್ಯದಲ್ಲಿ ಟಾಸ್ ಗೆದ್ದ ಹಾಂಕಾಂಗ್ ಫೀಲ್ಡಿಂಗ್ ಆಯ್ದುಕೊಂಡು ಟೀಮ್ ಇಂಡಿಯಾವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿರುವ ಟೀಂ ಇಂಡಿಯಾ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 92 ರನ್ ಕಲೆಹಾಕಿದ್ದು ಹಾಂಕಾಂಗ್ ತಂಡಕ್ಕೆ ಗೆಲ್ಲಲು 193 ರನ್‌ಗಳ ಕಠಿಣ ಗುರಿ ನೀಡಿದೆ.

ಟೀಮ್ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮ 21 ರನ್ ಕಲೆಹಾಕಿದರೆ, ಕೆಎಲ್ ರಾಹುಲ್ 36 ರನ್ ಬಾರಿಸಿದರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ನಿಧಾನಗತಿಯಲ್ಲಿ ಬ್ಯಾಟ್ ಬೀಸಿದ ವಿರಾಟ್ ಕೊಹ್ಲಿ 44 ಎಸೆತಗಳಲ್ಲಿ ಅಜೇಯ 59 ರನ್ ಬಾರಿಸಿದರು ಹಾಗೂ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಬೌಂಡರಿ ಮೇಲೆ ಬೌಂಡರಿ ಚಚ್ಚಿ ಅಬ್ಬರಿಸಿದ ಸೂರ್ಯಕುಮಾರ್ ಯಾದವ್ 26 ಎಸೆತಗಳಲ್ಲಿ ಅಜೇಯ 68 ರನ್ ಬಾರಿಸಿದರು. ಸೂರ್ಯಕುಮಾರ್ ಯಾದವ್ 6 ಬೌಂಡರಿ ಮತ್ತು 6 ಸಿಕ್ಸರ್ ಸಿಡಿಸಿ ಅಬ್ಬರಿಸಿ ನಿಧಾನಗತಿಯಲ್ಲಿ ಸಾಗುತ್ತಿದ್ದ ಟೀಮ್ ಇಂಡಿಯಾದ ರನ್ ವೇಗವನ್ನು ಹೆಚ್ಚಿಸಿ ಬೃಹತ್ ಮೊತ್ತ ಕಲೆಹಾಕುವಲ್ಲಿ ನೆರವಾದರು.

ಆತ ನಮಗೆ ಮುಖ್ಯ: ಹಾಂಗ್‌ಕಾಂಗ್ ವಿರುದ್ಧ ಪಾಂಡ್ಯಾ ಬದಲು ಪಂತ್ ಕಣಕ್ಕಿಳಿದದ್ದೇಕೆ ಎಂದು ತಿಳಿಸಿದ ರೋಹಿತ್!ಆತ ನಮಗೆ ಮುಖ್ಯ: ಹಾಂಗ್‌ಕಾಂಗ್ ವಿರುದ್ಧ ಪಾಂಡ್ಯಾ ಬದಲು ಪಂತ್ ಕಣಕ್ಕಿಳಿದದ್ದೇಕೆ ಎಂದು ತಿಳಿಸಿದ ರೋಹಿತ್!

31ನೇ ಅರ್ಧಶತಕ ದಾಖಲಿಸಿದ ವಿರಾಟ್ ಕೊಹ್ಲಿ

31ನೇ ಅರ್ಧಶತಕ ದಾಖಲಿಸಿದ ವಿರಾಟ್ ಕೊಹ್ಲಿ

ಪಂದ್ಯದ ಐದನೇ ಓವರ್‌ನಲ್ಲಿ ನಾಯಕ ರೋಹಿತ್ ಶರ್ಮಾ ವಿಕೆಟ್ ಬೀಳುತ್ತಿದ್ದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ 44 ಎಸೆತಗಳಲ್ಲಿ ಅಜೇಯ 59 ರನ್ ಬಾರಿಸಿದ್ದಾರೆ. ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಕೇವಲ ಒಂದೇ ಒಂದು ಫೋರ್ ಬಾರಿಸಿದರು ಹಾಗೂ 3 ಸಿಕ್ಸರ್ ಕೂಡ ಸಿಡಿಸಿದರು. ವಿರಾಟ್ ಕೊಹ್ಲಿ ಈ ಮೂಲಕ ತಮ್ಮ ಟಿ ಟ್ವೆಂಟಿ ಕ್ರಿಕೆಟ್ ವೃತ್ತಿಜೀವನದ 31 ಅರ್ಧಶತಕಗಳನ್ನು ಪೂರೈಸಿದ್ದಾರೆ. ವಿರಾಟ್ ಕೊಹ್ಲಿ ಅರ್ಧಶತಕ ಬಾರಿಸಿ ಟಿ ಟ್ವೆಂಟಿ ಫಾರ್ಮ್ ಕಂಡುಕೊಳ್ಳುವ ಭರವಸೆ ಮೂಡಿಸಿದ್ದರೂ ಸಹ ಕೆಲ ನೆಟ್ಟಿಗರು ಇದು ಸ್ಲೋ ಇನಿಂಗ್ಸ್ ಎಂದು ಕೊಹ್ಲಿಯ ಕಾಲೆಳೆದಿದ್ದಾರೆ.

ಅಬ್ಬರಿಸಿದ ಸೂರ್ಯಕುಮಾರ್ ಯಾದವ್

ಅಬ್ಬರಿಸಿದ ಸೂರ್ಯಕುಮಾರ್ ಯಾದವ್

ಕೆಎಲ್ ರಾಹುಲ್ ಪಂದ್ಯದ 13ನೇ ಓವರ್‌ನ ಅಂತಿಮ ಎಸೆತದಲ್ಲಿ ವಿಕೆಟ್ ಒಪ್ಪಿಸಿದ ನಂತರ ಕಣಕ್ಕಿಳಿದ ಸೂರ್ಯಕುಮಾರ್ ಯಾದವ್ 26 ಎಸೆತಗಳಲ್ಲಿ ಅಜೇಯ 68 ರನ್ ಚಚ್ಚಿ ಅಬ್ಬರಿಸಿದರು. 6 ಬೌಂಡರಿ ಮತ್ತು 6 ಸಿಕ್ಸರ್ ಸಿಡಿಸಿದ ಸೂರ್ಯಕುಮಾರ್ ಯಾದವ್ 261.54 ಸ್ಟ್ರೈಕ್ ರೇಟ್ ಜತೆಗೆ ಬ್ಯಾಟ್ ಬೀಸಿ ತಂಡದ ಮೊತ್ತ ಹೆಚ್ಚಾಗುವಂತೆ ಮಾಡಿದರು. ಒಂದುವೇಳೆ ಸೂರ್ಯಕುಮಾರ್ ಯಾದವ್ ಈ ರೀತಿ ಬ್ಯಾಟ್ ಬೀಸದೆ ಇದ್ದಿದ್ದರೆ ಟೀಮ್ ಇಂಡಿಯಾ ಇಷ್ಟು ದೊಡ್ಡ ಮೊತ್ತವನ್ನು ಕಲೆ ಹಾಕುತ್ತಿರಲಿಲ್ಲ ಎನ್ನಬಹುದು.

ಆಡುವ ಬಳಗಗಳು

ಆಡುವ ಬಳಗಗಳು

ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ದಿನೇಶ್ ಕಾರ್ತಿಕ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್ ಮತ್ತು ಅರ್ಷದೀಪ್ ಸಿಂಗ್

ಬೆಂಚ್ ದೀಪಕ್ ಹೂಡಾ, ರವಿಚಂದ್ರನ್ ಅಶ್ವಿನ್, ರವಿ ಬಿಷ್ಣೋಯ್, ಹಾರ್ದಿಕ್ ಪಾಂಡ್ಯ

ಹಾಂಗ್ ಕಾಂಗ್ ಆಡುವ ಬಳಗ: ನಿಜಾಕತ್ ಖಾನ್ ( ನಾಯಕ ) ಯಾಸಿಮ್ ಮುರ್ತಾಜಾ, ಬಾಬರ್ ಹಯಾತ್, ಕಿಂಚಿತ್ ಷಾ, ಐಜಾಜ್ ಖಾನ್, ಸ್ಕಾಟ್ ಮೆಕೆಚ್ನಿ (ವಿಕೆಟ್ ಕೀಪರ್), ಜೀಶನ್ ಅಲಿ, ಹರೂನ್ ಅರ್ಷದ್, ಎಹ್ಸಾನ್ ಖಾನ್, ಆಯುಷ್ ಶುಕ್ಲಾ, ಮೊಹಮ್ಮದ್ ಘಜನ್ಫರ್

ಬೆಂಚ್ ಅತೀಕ್ ಇಕ್ಬಾಲ್, ಮೊಹಮ್ಮದ್ ಹುಹ್ಸಾಯ್ ಅಫ್ತಾನಾ ವಹೀದ್, ರಾವ್, ಅಹಾನ್ ತ್ರಿವೇದಿ

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Wednesday, August 31, 2022, 21:23 [IST]
Other articles published on Aug 31, 2022

Latest Videos

  + More
  POLLS
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Yes No
  Settings X