ಮುಂದಿನ ತಿಂಗಳು ನಡೆಯಲಿದೆ ಭಾರತ vs ಪಾಕಿಸ್ತಾನ ಪಂದ್ಯ; ಈ ಮಹತ್ವದ ಪಂದ್ಯದ ದಿನಾಂಕ ಔಟ್

ಬದ್ಧ ವೈರಿಗಳ ಕಾಳಗ ಎಂದೇ ಹೆಸರನ್ನು ಹೊಂದಿರುವ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯಗಳ ಕುರಿತು ಕ್ರಿಕೆಟ್ ಅಭಿಮಾನಿಗಳಲ್ಲಿ ಇರುವಷ್ಟು ಕ್ರೇಜ್ ಇತರೆ ಯಾವುದೇ ತಂಡಗಳ ನಡುವಿನ ಪಂದ್ಯಗಳ ಮೇಲೂ ಕೂಡ ಇಲ್ಲ ಎಂದು ಹೇಳಿದರೆ ತಪ್ಪಾಗಲಾರದು. ಇತ್ತಂಡಗಳ ನಡುವೆ ಪಂದ್ಯ ನಡೆಯುತ್ತದೆ ಎಂದರೆ ತಿಂಗಳು ಕಳೆಯುವ ಮುನ್ನವೇ ಅದರ ಕುರಿತಾದ ಚರ್ಚೆಗಳು ಮತ್ತು ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡತೊಡಗುತ್ತವೆ. ಅಷ್ಟು ಮಾತ್ರವಲ್ಲದೆ ಹಲವು ದಿನಗಳ ಮುನ್ನವೇ ಇತ್ತಂಡಗಳ ನಡುವಿನ ಪಂದ್ಯದ ಟಿಕೆಟ್‌ಗಳು ಸೋಲ್ಡ್ ಔಟ್ ಆಗಿ ಬಿಡುತ್ತದೆ.
ಇನ್ನು ಇತರೆ ತಂಡಗಳ ಹಾಗೆ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಸಾಮಾನ್ಯ ಸರಣಿಗಳು ಆಯೋಜನೆಯಾಗುವುದಿಲ್ಲ, ಬದಲಾಗಿ ಐಸಿಸಿ ಲೀಗ್‌ಗಳಲ್ಲಿ ಮಾತ್ರ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಹೌದು, ರಾಜಕೀಯ ಮತ್ತು ಸುರಕ್ಷತೆಯ ಕಾರಣದಿಂದಾಗಿ ಭಾರತ ಪಾಕಿಸ್ತಾನ ಪ್ರವಾಸ ಕೈಗೊಳ್ಳುವುದನ್ನು ಹಾಗೂ ಪಾಕಿಸ್ತಾನ ಭಾರತ ಪ್ರವಾಸವನ್ನು ಕೈಗೊಳ್ಳುವುದನ್ನು ನಿಷೇಧಿಸಲಾಗಿದೆ.
ಈ ಮೂಲಕ ಇತ್ತಂಡಗಳ ನಡುವೆ ನಡೆಯುವ ಪಂದ್ಯಗಳ ಸಂಖ್ಯೆ ಕಡಿಮೆಯಾಗಿದ್ದು, ಕ್ರೇಜ್ ದುಪ್ಪಟ್ಟಾಗಿದೆ. ಕೊನೆಯದಾಗಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಕಳೆದ ವರ್ಷ ಯುಎಇಯಲ್ಲಿ ನಡೆದಿದ್ದ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಪಂದ್ಯವೊಂದರಲ್ಲಿ ಮುಖಾಮುಖಿಯಾಗಿದ್ದವು. ಇದಾದ ಬಳಿಕ ಇದೀಗ ಮತ್ತೊಮ್ಮೆ ಭಾರತ ಮತ್ತು ಪಾಕಿಸ್ತಾನ ತಂಡಗಳ ಸೆಣಸಾಟಕ್ಕೆ ವೇದಿಕೆ ಸಜ್ಜಾಗಿದ್ದು, ಮುಂದಿನ ತಿಂಗಳು ಈ ಮಹತ್ವದ ಪಂದ್ಯ ನಡೆಯಲಿದೆ. ಈ ಕುರಿತಾದ ಮತ್ತಷ್ಟು ಮಾಹಿತಿ ಮುಂದಿದೆ ಓದಿ..

ಪಂದ್ಯದ ದಿನಾಂಕ
ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಂದಿನ ತಿಂಗಳು ಶ್ರೀಲಂಕಾ ನೆಲದಲ್ಲಿ ನಡೆಯಲಿರುವ ಪ್ರತಿಷ್ಠಿತ ಏಷ್ಯಾಕಪ್ ಟೂರ್ನಿಯಲ್ಲಿ ಮುಖಾಮುಖಿಯಾಗಲಿವೆ. ಇತ್ತಂಡಗಳ ನಡುವಿನ ಈ ಪಂದ್ಯ ಆಗಸ್ಟ್ 28ರಂದು ನಡೆಯಲಿದೆ. ಟೂರ್ನಿಯು ಆಗಸ್ಟ್ 27ರಂದು ಅಧಿಕೃತವಾಗಿ ಆರಂಭವಾಗಲಿದ್ದು, 21ರಿಂದ ಕ್ವಾಲಿಫೈಯರ್ ಸುತ್ತು ಆರಂಭವಾಗಲಿದೆ. ಈ ಮೂಲಕ ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೂ ಮುನ್ನ ಭಾರತ ಮತ್ತು ಪಾಕಿಸ್ತಾನ ಕಣಕ್ಕಿಳಿಯಲಿವೆ.

ಯಾವ ತಂಡಗಳು ಭಾಗವಹಿಸಲಿವೆ?
ಶ್ರೀಲಂಕಾದಲ್ಲಿ ನಡೆಯಲಿರುವ ಈ ಬಾರಿಯ ಏಷ್ಯಾಕಪ್ ಟೂರ್ನಿ ಆಗಸ್ಟ್ 27ರಿಂದ ಆರಂಭವಾಗಲಿದ್ದು, ಭಾರತ, ಶ್ರೀಲಂಕಾ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ತಂಡಗಳು ಈಗಾಗಲೇ ಟೂರ್ನಿಯಲ್ಲಿ ತಮ್ಮ ಸ್ಥಾನಗಳನ್ನು ಗಿಟ್ಟಿಸಿಕೊಂಡಿವೆ. ಇನ್ನು ಆಗಸ್ಟ್ 21ರಿಂದ ಕ್ವಾಲಿಫೈಯರ್ ಸುತ್ತಿನ ಪಂದ್ಯಗಳು ನಡೆಯಲಿದ್ದು, ಈ ಸುತ್ತಿನಲ್ಲಿ ಯುಎಇ, ನೇಪಾಳ, ಹಾಂಗ್‌ಕಾಂಗ್ ಮತ್ತು ಒಮನ್ ಸೇರಿದಂತೆ ಇತರೆ ತಂಡಗಳು ಕಣಕ್ಕಿಳಿಯಲಿವೆ ಎಂದು ವರದಿ ತಿಳಿಸಿದೆ.

ಏಷ್ಯಾಕಪ್ ಮುಖಾಮುಖಿಯಲ್ಲಿ ಯಾರು ಬಲಿಷ್ಠರು?
1984ರಲ್ಲಿ ಆರಂಭವಾದ ಏಷ್ಯಾಕಪ್ ಟೂರ್ನಿಗಳಲ್ಲಿ ಒಟ್ಟು 14 ಬಾರಿ ಟೀಮ್ ಇಂಡಿಯಾ ಮತ್ತು ಪಾಕಿಸ್ತಾನ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ಈ ಪೈಕಿ ಟೀಮ್ ಇಂಡಿಯಾ 8 ಪಂದ್ಯಗಳಲ್ಲಿ ಗೆದ್ದಿದ್ದರೆ, ಪಾಕಿಸ್ತಾನ 5 ಪಂದ್ಯಗಳಲ್ಲಿ ಜಯ ಸಾಧಿಸಿದೆ ಹಾಗೂ ಉಳಿದೊಂದು ಪಂದ್ಯ ಯಾವುದೇ ಫಲಿತಾಂಶವಿಲ್ಲದೇ ಅಂತ್ಯಗೊಂಡಿದೆ. ಈ ಮೂಲಕ ಇತ್ತಂಡಗಳ ನಡುವಿನ ಏಷ್ಯಾಕಪ್ ಮುಖಾಮುಖಿಯಲ್ಲಿಯೂ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಮೇಲುಗೈ ಸಾಧಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications