ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಏಷ್ಯಾ ಕಪ್‌ 2022: ಪ್ರತಿಷ್ಠಿತ ಟೂರ್ನಿಯಲ್ಲಿ ಕಣಕ್ಕಿಳಿಯಲಿರುವ ಭಾರತದ ಸಂಭಾವ್ಯ ತಂಡ ಹೀಗಿದೆ!

Asia cup 2022: Team India predicted 15 men squad for Asia cup 2022

ಏಷ್ಯಾಕಪ್ ಟೂರ್ನಿಯ ಆರಂಭಕ್ಕೆ ದಿನಗಣನೆ ಆರಂಭವಾಗಿದ್ದು ಈ ಟೂರ್ನಿಯಲ್ಲಿ ಭಾಗವಹಿಸುವ ಭಾರತ ತಂಡದಲ್ಲಿ ಯಾರೆಲ್ಲಾ ಸ್ಥಾನ ಪಡೆಯಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಇತ್ತೀಚಿನ ಸರಣಿಗಳಲ್ಲಿ ಭಾರತ ತಂಡದಲ್ಲಿ ಸಾಕಷ್ಟು ಪ್ರಯೋಗಗಳನ್ನು ಮಾಡಲಾಗಿದ್ದು ಇವುಗಳ ಪ್ರದರ್ಶನದ ಆಧಾರದಲ್ಲಿ ತಂಡದ ಆಯ್ಕೆ ನಡೆಯಲಿದೆ.

ಟಿ20 ವಿಶ್ವಕಪ್‌ಗೆ ಕೂಡ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಏಷ್ಯಾಕಪ್‌ನ್ಲಲಿ ಭಾಗವಹಿಸುವ ಆಟಗಾರರು ಯಾರ್ಯಾರು ಎಂಬುದು ತೋವ್ರ ಕುತೂಹಲ ಮೂಡಿಸಿದೆ. ಸಾಕಷ್ಟು ಪ್ರತಿಭಾವಂತರು ಪೈಪೋಟಿ ನಡೆಸುತ್ತಿರುವ ಕಾರಣ ಯಾರಿಗೆಲ್ಲಾ ಅವಕಾಶ ದೊರೆಯಲಿದೆ. ಯಾರು ಟಿಕೆಟ್ ಕೈತಪ್ಪಿ ನಿರಾಸೆ ಅನುಭವಿಸಲಿದ್ದಾರೆ ಎಂಬುದು ಕೂಡ ಪ್ರಶ್ನೆಯಾಗಿದೆ. ಸೋಮವಾರ ಬಿಸಿಸಿಐ ಏಷ್ಯಾಕಪ್‌ನಲ್ಲಿ ಭಾಗವಹಿಸಲಿರುವ ಭಾರತ ತಂಡವನ್ನು ಅಧಿಕೃತವಾಗಿ ಘೋಷಣೆ ಮಾಡಲಿದೆ. ಈ ಸಂದರ್ಭದಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆಯಲಿರುವ ಸಂಭಾವ್ಯ ಆಟಗಾರರು ಯಾರು ಎಂಬುದರ ಮಾಹಿತಿ ಇಲ್ಲಿದೆ.

CWG 2022: ಕ್ರಿಕೆಟ್‌ನಲ್ಲಿ ಸೆಮಿಫೈನಲ್ ಪ್ರವೇಶಿಸಿದ ಭಾರತ; ಪಂದ್ಯ ಯಾರ ವಿರುದ್ಧ, ಯಾವಾಗ?CWG 2022: ಕ್ರಿಕೆಟ್‌ನಲ್ಲಿ ಸೆಮಿಫೈನಲ್ ಪ್ರವೇಶಿಸಿದ ಭಾರತ; ಪಂದ್ಯ ಯಾರ ವಿರುದ್ಧ, ಯಾವಾಗ?

ತಂಡಕ್ಕೆ ಮರಳಲಿದ್ದಾರೆ ಇಬ್ಬರು ಪ್ರಮುಖ ಆಟಗಾರರು

ತಂಡಕ್ಕೆ ಮರಳಲಿದ್ದಾರೆ ಇಬ್ಬರು ಪ್ರಮುಖ ಆಟಗಾರರು

ನಾಯಕ ರೋಹಿತ್ ಶರ್ಮಾ ಸೇರಿದಂತೆ ಎಲ್ಲರೂ ಮುಂದಿನ ಏಷ್ಯಾಕಪ್‌ಗೆ ಆಡಲು ಸಮರ್ಥರಾಗಿದ್ದಾರೆ ಎಂಬುದು ಸದ್ಯದ ಮಟ್ಟಿಗೆ ಸಮಾಧಾನಕರ ಸಂಗತಿ. ಗಾಯದಿಂದಾಗಿ ತಂಡದಿಂದ ಹೊರಗುಳಿದಿದ್ದ ಕೆಎಲ್ ರಾಹುಲ್ ಕೂಡ ಸಂಪೂರ್ಣವಾಗಿ ಫಿಟ್ ಆಗಿದ್ದಯ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ಇನ್ನು ಗಾಯಗೊಂಡು ಸುದೀರ್ಘ ಕಾಲ ವಿಶ್ರಾಂತಿಯಲ್ಲಿದ್ದ ಆಲ್‌ರೌಂಡರ್ ದೀಪಕ್ ಚಾಹರ್ ಕೂಡ ಫಟ್ ಆಗಿದ್ದು ಈ ತಂಡದಲ್ಲಿ ಸ್ಥಾನ ಗಿಟ್ಟಿಉಸಿಕೊಳ್ಳುವ ನಿರೀಕ್ಷೆಯಿದೆ.

ಈ ಆಟಗಾರರ ಸ್ಥಾನ ಭದ್ರ

ಈ ಆಟಗಾರರ ಸ್ಥಾನ ಭದ್ರ

ನಾಯಕ ರೋಹಿತ್ ಶರ್ಮಾ, ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಅಗ್ರ ಮೂರು ಸ್ಥಾನದಲ್ಲಿ ಸ್ಥಾನ ಪಡೆಯುವುದರಲ್ಲಿ ಅನುಮಾನವಿಲ್ಲ. ಬಳಿಕ ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ ಮತ್ತು ದಿನೇಶ್ ಕಾರ್ತಿಕ್ ಕೂಡ ತಮ್ಮ ಸ್ಥಾನವನ್ನು ಆಡುವ ಬಳಗದಲ್ಲಿ ಭದ್ರಪಡಿಸಿಕೊಂಡಿದ್ದಾರೆ. ಇನ್ನು ರಿಷಬ್ ಪಂತ್ ಹಾಗೂ ರವೀಂದ್ರ ಜಡೇಜಾ ಕೂಡ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವುದು ಬಹುತೇಕ ನಿಶ್ಚಿತ.

ಬೌಲಿಂಗ್ ವಿಭಾಗದಲ್ಲಿ ಯಾರು?

ಬೌಲಿಂಗ್ ವಿಭಾಗದಲ್ಲಿ ಯಾರು?

ಇನ್ನು ಬೌಲಿಂಗ್‌ ವಿಭಾಗದಲ್ಲಿ ಅನುಭವಿ ಆಟಗಾರ ಜಸ್ಪ್ರೀತ್ ಬೂಮ್ರಾ, ಭುವನೇಶ್ವರ್ ಕುಮಾರ್ ಹಾಗೂ ಯುಜುವೇಂದ್ರ ಚಾಹಲ್ ಆಡುವ ಬಳಗದಲ್ಲಿ ಸ್ಥಾನ ಪಡೆಯುವುದು ಖಚಿತ. ಇನ್ನು ಯುವ ಬೌಲರ್ ಅರ್ಷ್‌ದೀಪ್ ಸಿಂಗ್ ಹಾಗೂ ಹರ್ಷಲ್ ಪಟೇಲ್ ಕೂಡ ಅಂತಿಮ 15ರ ಬಳಗದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಿದೆ. ಇನ್ನು ಗಾಯಗೊಂಡಿರುವ ರಾಹುಲ್ ಚಾಹರ್, ಮೊಹಮ್ಮದ್ ಶಮಿ ಹಾಗೂ ಆರ್ ಅಶ್ವಿನ್ ಮಧ್ಯೆ ಯಾರೆಲ್ಲಾ ಸ್ಥಾನ ಕಂಡುಕೊಳ್ಳಬಹುದು ಎಮಬುದು ಕುತೂಹಲ ಮೂಡಿಸಿದೆ.

ಸಂಭಾವ್ಯ ಆಡುವ ಬಳಗ

ಸಂಭಾವ್ಯ ಆಡುವ ಬಳಗ

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಯುಜುವೇಂದ್ರ ಚಾಹಲ್, ಅರ್ಷದೀಪ್ ಸಿಂಗ್, ದೀಪಕ್ ಹೂಡಾ, ಹರ್ಷಲ್ ಪಟೇಲ್, ದೀಪಕ್ ಚಾಹರ್, ಮೊಹಮ್ಮದ್ ಶಮಿ /ಆರ್ ಅಶ್ವಿನ್

Story first published: Friday, August 5, 2022, 17:33 [IST]
Other articles published on Aug 5, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X