ಏಷ್ಯಾ ಕಪ್ 2022: ಈ ಮೂವರು ಭಾರತೀಯರು ಏಷ್ಯಾ ಕಪ್‌ನಲ್ಲಿ ಮಿಂಚಲೇಬೇಕು

ಏಷ್ಯಾಕಪ್ ಟೂರ್ನಿಗೆ ಭಾರತ ತಂಡ ಸಿದ್ಧವಾಗಿದ್ದು ಅಫ್ಘಾನಿಸ್ತಾನ ಹಾಗೂ ಶ್ರೀಲಂಕಾ ವಿರುದ್ಧ ಶನಿವಾರ ಪಂದ್ಯ ಆರಂಭವಾಗುವ ಮೂಲಕ ಟೂರ್ನಿಗೆ ಚಾಲನೆ ದೊರೆಯಲಿದೆ. ಭಾರತ ತನ್ನ ಅಭಿಯಾನವನ್ನು ಆಗಸ್ಟ್ 28ರಿಂದ ಆರಂಭಿಸಲಿದ್ದು ಬದ್ಧ ಎದುರಾಳಿ ಪಾಕಿಸ್ತಾನ ತಂಡದ ವಿರುದ್ಧ ಮೊದಲ ಪಂದ್ಯವನ್ನು ಆಡಲಿದೆ. ಈ ಕದನದ ಮೇಲೆ ಈಗ ಎಲ್ಲರ ಗಮನ ನೆಟ್ಟಿದೆ.
ಆರು ತಂಡಗಳು ಭಾಗಿಯಾಗುತ್ತಿರುವ ಈ ಏಷ್ಯಾ ಕಪ್ ಟೂರ್ನಿ ಈ ಬಾರಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಉತ್ತಮ ತಯಾರಿಯಾಗಲಿದ್ದಾರೆ. ಕಳೆದ ವರ್ಷ ಟಿ20 ವಿಶ್ವಕಪ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿ ಮುಖಭಂಗಕ್ಕೆ ಒಳಗಾಗಿದ್ದ ಭಾರತ ಈ ಬಾರಿಯ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನಿಡುವ ನಿಟ್ಟಿನಲ್ಲಿ ಸಂಪೂರ್ಣ ಸಿದ್ಧತೆ ಮಾಡಿಕೊಳ್ಳುತ್ತಿದ್ದು ಏಷ್ಯಾ ಕಪ್ ಮೂಲಕ ತನ್ನ ಸಿದ್ಧತೆಯನ್ನು ಪರೀಕ್ಷಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ.
ಇನ್ನು ಭಾರತ ತಂಡದ ಕೆಲ ಆಟಗರರಿಗೆ ತಮ್ಮ ಫಾರ್ಮ್‌ಅನ್ನು ಸಾಬೀತುಪಡಿಸಲು ಈ ಟೂರ್ನಿ ಅತ್ಯುತ್ತಮ ಅವಕಾಶವಾಗಿದೆ. ಅದರಲ್ಲೂ ಭಾರತ ತಂಡದ ಈ ಮೂವರು ಆಟಗಾರರು ತಮ್ಮ ಪ್ರದರ್ಶನವನ್ನು ನೀಡಲೇಬೇಕಾದ ಅನಿವಾರ್ಯತೆಯಲ್ಲಿದ್ದಾರೆ.

ಮಾಜಿ ನಾಯಕ ವಿರಾಟ್ ಕೊಹ್ಲಿ
ಭಾರತ ತಂಡದ ಮಾಜಿ ಆಟಗಾರ ವಿರಾಟ್ ಕೊಹ್ಲಿ ಕಳೆದ ಕೆಲ ಸಮಯ್ಳಿಮದ ಅತ್ಯಂತ ಕಠಿಣ ಸಂದರ್ಭವನ್ನು ಎದುರಿಸುತ್ತಿದ್ದಾರೆ. ಅತ್ಯಂತ ಕಳಪೆ ಫಾರ್ಮ್‌ನಲ್ಲಿರುವ ವಿರಾಟ್ ಕೊಹ್ಲಿ ರನ್‌ಗಳಿಸಲು ಅಕ್ಷರಶಃ ಪರದಾಡುತ್ತಿದ್ದಾರೆ. ಹಾಗಿದ್ದರೂ ವಿರಾಟ್ ಕೊಹ್ಲಿ ಮೇಲೆ ಭಾರತ ತಂಡದ ಮ್ಯಾನೇಜ್‌ಮೆಂಟ್ ವಿಶ್ವಾಸವನ್ನಿಟ್ಟಿದ್ದು ಏಷ್ಯಾ ಕಪ್‌ನಲ್ಲಿ ಭಾಗಿಯಾಗುವ ತಂಡದಲ್ಲಿ ಸ್ಥಾನವನ್ನು ನೀಡಿದ್ದಾರೆ. ಇಂಗ್ಲೆಂಡ್ ವಿರುದ್ಧದ ಸರಣಿಯ ಬಳಿಕ ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದುಕೊಂಡಿದ್ದು ಏಷ್ಯಾ ಕಪ್ ಮೂಲಕ ಮತ್ತೆ ತಂಡಕ್ಕೆ ವಾಪಾಸಾಗುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರು ಮತ್ತೆ ಫಾರ್ಮ್ ಕಂಡುಕೊಳ್ಳಬೇಕಿದೆ. ಏಷ್ಯಾ ಕಪ್ ದೃಷ್ಟಿಯಿಂದ ಮಾತ್ರವಲ್ಲದೆ ವುಇಶ್ವಕಪ್ ದೃಏಷ್ಟಿಯಿಂದಲೂ ವಿರಾಟ್ ಕೊಹ್ಲಿ ಈ ಟೂರ್ನಿಯಲ್ಲಿ ರನ್‌ಗಳಿಸುವುದು ಭಾರತ ತಂಡಕ್ಕೆ ಬಹಳ ಪ್ರಮುಖವಾಗಿದೆ.

ಹಿರಿಯ ಆಟಗಾರ ದಿನೇಶ್ ಕಾರ್ತಿಕ್
ದಿನೇಶ್ ಕಾರ್ತಿಕ್ ಐಪಿಎಲ್ 2022ರ ಆವೃತ್ತಿಯಲ್ಲಿ ಅಮೋಘ ಪ್ರದರ್ಶನವನ್ನು ನೀಡಿದ್ದಾರೆ. ಆರ್‌ಸಿಬಿ ತಂಡ ಸಂಕಷ್ಟದಲ್ಲಿದ್ದಾಗಲೆಲ್ಲಾ ಡಿಕೆ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ ತಂಡಕ್ಕೆ ನೆರವಾಗಿದ್ದಾರೆ. ಈ ಪ್ರದರ್ಶನದ ಕಾರಣದಿಂದಾಗಿಯೇ ಡಿಕೆ ಭಾರತ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದು ಭಾರತದ ಪರವಾಗಿಯೂ ಅದ್ಭುತ ಫಾರ್ಮ್ ಮುಂದುವರಿಸಿದ್ದಾರೆ. ಏಷ್ಯಾ ಕಪ್‌ನ ತಂಡದಲ್ಲಿಯೂ ಡಿಕೆ ಸ್ಥಾನವನ್ನು ಪಡೆದುಕೊಂಡಿದ್ದು ಅವರ ಮೇಲೆ ಸಾಕಷ್ಟು ನಿರೀಕ್ಷೆಯಿದೆ. ಫಿನಿಷರ್ ಆಗಿ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿರುವ ದಿನೇಶ್ ಕಾರ್ತಿಕ್ ಏಷ್ಯಾ ಕಪ್ ಟೂರ್ನಿಯಲ್ಲಿಯೂ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸುವ ಅನಿವಾರ್ಯತೆಯಿದೆ.

ಆಲ್‌ರೌಂಡರ್ ರವೀಂದ್ರ ಜಡೇಜಾ
ಆಲ್‌ರೌಂಡರ್ ರವೀಂದ್ರ ಜಡೇಜಾ ಅವರ ಆಲ್‌ರೌಂಡರ್ ಸಾಮರ್ಥ್ಯ ಅಂತಾರಾಷ್ಟ್ರೀಯ ಚುಟುಕು ಕ್ರಿಕೆಟ್ ಮಾದರಿಯಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ವ್ಯಕ್ತವಾಗಬೇಕಿದೆ. ಇತ್ತೀಚಿನ ದಿನಗಳಲ್ಲಿ ರವೀಂದ್ರ ಜಡೇಜಾ ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು ತಂಡಕ್ಕೆ ನೆರವಾಗುತ್ತಿದ್ದಾರೆ. ಆದರೆ ಬೌಲಿಂಗ್‌ನಲ್ಲಿಯೂ ರವೀಂದ್ರ ಜಡೇಜಾ ಪರಿಣಾಮಕಾರಿಯಾಗಿ ಪ್ರದರ್ಶನವನ್ನು ನೀಡಿ ತಂಡಕ್ಕೆ ನೆರವಾಗಬೇಕಿದೆ. ನಿರ್ಣಾಯಕ ಸಂದರ್ಭದಲ್ಲಿ ವಿಕೆಟ್ ಪಡೆಯುವ ಜೊತೆಗೆ ರನ್ ನಿಯಂತ್ರಣದಲ್ಲಿಯೂ ಕೊಡುಗೆ ನೀಡಬೇಕಿದೆ.
ಏಷ್ಯಾಕಪ್ ಟೂರ್ನಿಗೆ ಪ್ರಕಟವಾದ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಯುಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಆವೇಶ್ ಖಾನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications