IND vs PAK: ಸೂಪರ್ 4 ಪಂದ್ಯದಲ್ಲಿ ಕೊಹ್ಲಿ ಅರ್ಧಶತಕ; ಪಾಕಿಸ್ತಾನಕ್ಕೆ ಸವಾಲಿನ ಗುರಿ ನೀಡಿದ ಭಾರತ

ಇಂದು ( ಸೆಪ್ಟೆಂಬರ್ 4 ) ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸೂಪರ್ 4 ಸುತ್ತಿನ ಎರಡನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಫೀಲ್ಡಿಂಗ್ ಆಯ್ದುಕೊಳ್ಳುವುದರ ಮೂಲಕ ಭಾರತ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 181 ರನ್ ಕಲೆ ಹಾಕಿದ್ದು ಎದುರಾಳಿ ಪಾಕಿಸ್ತಾನ ತಂಡಕ್ಕೆ 182 ಗೆಲ್ಲಲು ರನ್‌ಗಳ ಗುರಿಯನ್ನು ನೀಡಿದೆ.
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಪವರ್ ಪ್ಲೇನಲ್ಲಿ 62 ರನ್ ಕಲೆ ಹಾಕುವುದರ ಮೂಲಕ ಉತ್ತಮ ಆರಂಭವನ್ನು ಕಟ್ಟಿದರು. ನಂತರ ರೋಹಿತ್ ಶರ್ಮಾ 16 ಎಸೆತಗಳಲ್ಲಿ 28 ರನ್ ಕಲೆಹಾಕಿ ಔಟ್ ಆದರೆ, ಕೆಎಲ್ ರಾಹುಲ್ 20 ಎಸೆತಗಳಲ್ಲಿ 28 ರನ್ ಕಲೆಹಾಕಿ ಔಟ್ ಆದರು. ಇನ್ನುಳಿದಂತೆ ಸೂರ್ಯಕುಮಾರ್ ಯಾದವ್ 13 ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, ರಿಷಭ್ ಪಂತ್ 14 ರನ್ ಕಲೆಹಾಕಿ ಔಟ್ ಆದರು ಹಾಗೂ ಕಳೆದ ಪಾಕ್ ವಿರುದ್ಧದ ಪಂದ್ಯದಲ್ಲಿ ಅಬ್ಬರಿಸಿದ್ದ ಹಾರ್ದಿಕ್ ಪಾಂಡ್ಯ 2 ಎಸೆತಗಳಲ್ಲಿ ಯಾವುದೇ ರನ್ ಗಳಿಸದೇ ಡಕ್ ಔಟ್ ಆದರು, ದೀಪಕ್ ಹೂಡಾ 14 ಎಸೆತಗಳಲ್ಲಿ 16 ರನ್ ಕಲೆಹಾಕಿ ಕಲೆ ಹಾಕಿದರೆ, ಅಂತಿಮ ಹಂತದವರೆಗೂ ಏಕಾಂಗಿ ಹೋರಾಟ ನಡೆಸಿದ ವಿರಾಟ್ ಕೊಹ್ಲಿ 44 ಎಸೆತಗಳಲ್ಲಿ 60 ರನ್ ಬಾರಿಸಿ ಆಪದ್ಬಾಂಧವನಾದರು. ಹಾಗೂ ರವಿ ಬಿಷ್ಣೋಯಿ ಕೊಹ್ಲಿ ಔಟ್ ಆದ ಬಳಿಕ ಕಣಕ್ಕೆ ಇಳಿದು 2 ಎಸೆತಗಳಲ್ಲಿ 2 ಬೌಂಡರಿ ಚಚ್ಚಿದರು ಹಾಗೂ ಭುವನೇಶ್ವರ್ ಕುಮಾರ್ ಯಾವುದೇ ಎಸೆತ ಎದುರಿಸದೇ ಅಜೇಯರಾಗಿ ಉಳಿದರು.

ಕಿಂಗ್ ಕೊಹ್ಲಿ ಕಮ್ ಬ್ಯಾಕ್
ಒಂದೆಡೆ ಟೀಮ್ ಇಂಡಿಯಾದ ವಿಕೆಟ್ ಉರುಳುತ್ತಿದ್ದರೆ, ಮತ್ತೊಂದೆಡೆ ಏಕಾಂಗಿ ಹೋರಾಟ ನಡೆಸಿದ ವಿರಾಟ್ ಕೊಹ್ಲಿ ಪಂದ್ಯದ ಅಂತಿಮ ಓವರ್ ವರೆಗೂ ಕಣದಲ್ಲಿದ್ದು, 44 ಎಸೆತಗಳಲ್ಲಿ 4 ಫೋರ್ ಮತ್ತು 1 ಸಿಕ್ಸರ್ ಸಹಿತ 60 ರನ್ ಬಾರಿಸಿ ಆಪದ್ಬಾಂಧವನಾದರು. ಈ ಮೂಲಕ ಮತ್ತೊಮ್ಮೆ ಪಾಕಿಸ್ತಾನದ ವಿರುದ್ಧ ವಿರಾಟ್ ಕೊಹ್ಲಿ ಉತ್ತಮ ಪ್ರದರ್ಶನ ನೀಡಿದರು. ಅಷ್ಟೇ ಅಲ್ಲದೆ ವಿರಾಟ್ ಕೊಹ್ಲಿ 32 ಟಿ 20 ಅರ್ಧಶತಕಗಳನ್ನು ಪೂರೈಸಿ ಭಾರತದ ಪರ ಅತಿ ಹೆಚ್ಚು ಟಿ ಟ್ವೆಂಟಿ ಅರ್ಧಶತಕ ಬಾರಿಸಿದ ಆಟಗಾರ ಎನಿಸಿಕೊಂಡರು.

ಪಾಕಿಸ್ತಾನ ಬೌಲಿಂಗ್
ಇನ್ನು ಪಾಕಿಸ್ತಾನದ ಪರ ಬೌಲಿಂಗ್ ಮಾಡಿದ ಎಲ್ಲಾ ಬೌಲರ್‌ಗಳೂ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಶದಾಬ್ ಖಾನ್ 2 ವಿಕೆಟ್ ಪಡೆದರೆ, ನಸೀಮ್ ಶಾ, ಮಹಮ್ಮದ್ ಹಸ್ನೈನ್, ಹ್ಯಾರಿಸ್ ರೌಫ್ ಹಾಗೂ ಮೊಹಮ್ಮದ್ ನವಾಜ್ ತಲಾ ಒಂದೊಂದು ವಿಕೆಟ್ ಪಡೆದರು.

ಆಡುವ ಬಳಗಗಳು
ಭಾರತ ಆಡುವ ಬಳಗ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಾಹಲ್, ಅರ್ಷ್ದೀಪ್ ಸಿಂಗ್
ಬೆಂಚ್: ದಿನೇಶ್ ಕಾರ್ತಿಕ್, ಅವೇಶ್ ಖಾನ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್
ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಫಖರ್ ಜಮಾನ್, ಖುಶ್ದಿಲ್ ಶಾ, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಆಸಿಫ್ ಅಲಿ, ಮೊಹಮ್ಮದ್ ನವಾಜ್, ಹಾರಿಸ್ ರೌಫ್, ಮೊಹಮ್ಮದ್ ಹಸ್ನೇನ್, ನಸೀಮ್ ಶಾ
ಬೆಂಚ್: ಉಸ್ಮಾನ್ ಖಾದಿರ್, ಹೈದರ್ ಅಲಿ, ಹಸನ್ ಅಲಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications